ಸಂತಾಪ

ಕನ್ನಡದ ಪ್ರಮುಖ ಕಥೆಗಾರ್ತಿ ಶಾಂತಾದೇವಿ ಕಣವಿಯವರು

ಕನ್ನಡ ನಾಡಿನ ಪ್ರಮುಖ ಕಥೆಗಾರ್ತಿ,ಶುದ್ಧ ಕನ್ನಡ ಜನಪದ ಹೃದಯ ಶ್ರೀಮಂತಿಕೆಯ ಸಹಕಾರ ಮೂರ್ತಿ,
ಲೇಖಕಿ,⁣ಹಿರಿಯ ಕವಿ, ವಾತ್ಸಲ್ಯಮಯಿ, ಸಮರಸವೇ ಜೀವನ ಎಂದು ಬಾಳು ಬದುಕಿದ ಕವಯಿತ್ರಿ.
ಉತ್ತರ ಕರ್ನಾಟಕದ ದೇಸಿ ಸೊಬಗು, ಧ್ವನಿಪೂರ್ಣ ಭಾಷೆ, ತಂತ್ರಗಾರಿಕೆ, ಕಸರತ್ತಿಲ್ಲದ ಬರವಣಿಗೆ ವೈಶಿಷ್ಟ್ಯ ಸಾಕ್ಷಿಕರಿಸಿದ್ದ ಸಾಹಿತಿ ಶಾಂತಾದೇವಿ ಕಣವಿಯವರು.ಹಾಗಾಗಿ ಕನ್ನಡ ಸಾಹಿತ್ಯ ಲೋಕದ ಅನುಪಮ ದಂಪತಿಗಳಲ್ಲಿ ಪ್ರಮುಖವಾಗಿ ಬಂದು ನಿಲ್ಲುವ ಹೆಸರು ಶಾಂತಾದೇವಿ ಕಣವಿ ಮತ್ತು ಚನ್ನವೀರ ಕಣವಿಯವರು ಬಂಧುಗಳೆ.

ಜನನ/ಜೀವನ : ವಿಜಾಪುರದಲ್ಲಿ 12-01-1933 ರಂದು
ಸಿದ್ಧಬಸಪ್ಪ ಮತ್ತು ಭಾಗೀರಥಿದೇವಿ ದಂಪತಿಗಳ ಮಗಳಾಗಿ
ಶಾಂತಾದೇವಿಯರು ಜನಿಸಿದರು. ಇವರ ಶಿಕ್ಷಣ ಪ್ರಾಥಮಿಕ ವಿದ್ಯಾಭ್ಯಾಸ ವಿಜಾಪುರದಲ್ಲಿ, ಮಾಧ್ಯಮಿಕ ವಿದ್ಯಾಭ್ಯಾಸ ರೋಣ ಹಾಗೂ ರಾಣಿ ಬೆನ್ನೂರು, ಬೈಲಹೊಂಗಲಗಳಲ್ಲಿ ಆಗಿರುತ್ತಿದೆ.
ಶಾಂತಾದೇವಿಯವರಿಗೆ ಮನೆಯಲ್ಲಿದ್ದ ಸಾಂಸ್ಕೃತಿಕ ವಾತಾವರಣದಿಂದ ಸಹಜವಾಗೆಂಬಂತೆ ಸಾಹಿತ್ಯದ ಹುಚ್ಚು ಹೆಚ್ಚತೊಡಗಿತ್ತು. ಹಾಗಾಗಿ
ಸಾಹಿತ್ಯದ ಹೆಚ್ಚಿನ ಒಲವು ಇದ್ದ ಕಾರಣದಿಂದ.
ಮನೆಯಲ್ಲಿ ಇಂಗ್ಲಿಷ್, ಕನ್ನಡ ಪುಸ್ತಕಗಳ ದೊಡ್ಡ ಭಂಡಾರವನ್ನೇ ಹೊಂದಿದ್ದರು ಮತ್ತು ಶಾಂತಾದೇವಿ ಅವರಿಗೆ ತಂದೆಯಿಂದಲೇ ‘ಜೇನ್ ಆಸ್ಟಿನ್’ಳ ಕಾದಂಬರಿ ಕುರಿತು ಓದು – ಬರವಣಿಗೆಯ ಪರಿಚಯ ಬಹಳ ಆಗಿತ್ತು ಹಾಗೂ ಸಾಹಿತ್ಯ ಮತ್ತು ಅಧ್ಯಾತ್ಮ ಕೃತಿಗಳಿಗೆ ಮೊದಲ ಪ್ರಾಶಸ್ತ್ಯ ನೀಡುವ ಜೊತೆಗೆ ಹಿರಿಯ ಸಾಹಿತಿಗಳ ಮಾರ್ಗದರ್ಶನ ಸಹ ಇವರಿಗೆ ಲಭಿಸಿತು. ಹೀಗಾಗಿ ಸಾಹಿತ್ಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನಾ ಸೇವೆ ಮಾಡಲು ಉತ್ತೇಜನ ಪಡೆದರು ಎನ್ನಬಹುದು. ಇದಲ್ಲದೆ ಚಿಕ್ಕವರಿದ್ದಾಗ ತಂದೆ ತಾಯಿಯರಂತೆ ಭಾವಗೀತೆಗಳನ್ನು ಹಾಡುತ್ತಿದ್ದರು. ಧಾರವಾಡಕ್ಕೆ ಬಂದ ಮೇಲೆ ಆಕಾಶವಾಣಿಯಲ್ಲಿಯೂ ಹಾಡಿದರು. “ಭಾವಗೀತೆಯನ್ನು ಹಾಡಿದರೂ ಭಾವಜೀವಿಯಲ್ಲ ನಾನು ಎನ್ನುತ್ತಿದ್ದರು. ಹೀಗಾಗಿ ಕಥೆ ಬರೆಯುವುದನ್ನು ರೂಢಿಸಿಕೊಂಡೆ” ಎಂಬುದು ಅವರ ಸ್ವಯಂ ನುಡಿಯಾಗಿತ್ತು.ಇದೆ ಸಮಯದಲ್ಲಿ
ಚನ್ನವೀರ ಕಣವಿಯವರೊಡನೆ ಮದುವೆ ನಿಶ್ಚಯ. ಓದಿಗೆ ವಿರಾಮ ನೀಡಿದರು.1952ರಲ್ಲಿ
ಮದುವೆಯಾದ ನಂತರ ಪ್ರೇರಣೆ-ಬರವಣಿಗೆ. ಶಾಂತಾದೇವಿಯವರು ಬರೆದ ಹಲವಾರು ಕಥೆಗಳು ಪ್ರಕಟಿತ. ಓದುಗರಿಂದ ಪ್ರಶಂಸೆ, ಕಥೆಗಾರ್ತಿಯ ಉದಯ. ಉತ್ತರ ಕರ್ನಾಟಕದ ದೇಸಿ ಸೊಬಗು, ಧ್ವನಿಪೂರ್ಣ ಭಾಷೆ, ತಂತ್ರಗಾರಿಕೆ, ಕಸರತ್ತಿಲ್ಲದ ಬರವಣಿಯಲ್ಲಿ ವೈಶಿಷ್ಟ್ಯಕಾಣುತ್ತೇವೆ. ಹಾಗೆ
ಜಿ.ಬಿ. ಜೋಶಿಯವರ ಮನೋಹರ ಗ್ರಂಥಮಾಲೆಯ ‘ನಡೆದು ಬಂದ ದಾರಿ’ ಸಂಪುಟಕ್ಕಾಗಿ ಕೀರ್ತಿನಾಥ ಕುರ್ತಕೋಟಿಯವರು ಶಾಂತಾದೇವಿ ಅವರನ್ನು ಕಥೆ ಕೇಳಿದರು. ‘ಮಂಜು ಕರಗಿತು’ ಎಂದು ಕಥೆ ಕಳಿಸಿದರು. ದೊಡ್ಡ ದೊಡ್ಡ ಲೇಖಕರ ಜೊತೆಗೆ ತಮ್ಮ ಫೋಟೊ ಸಮೇತ ಕಥೆ ಪ್ರಕಟಗೊಂಡಾಗ ಶಾಂತಾದೇವಿ ಅವರಿಗೆ ಆದ ಆನಂದಕ್ಕೆ ಲಕ್ಕವಿಲ್ಲ. ಇದು ಅವರ ಪ್ರಥಮ ಹೆಜ್ಜೆ. ಅದೇ ಕಥೆಯನ್ನು ಮೈಸೂರು ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಡಾ.ಎನ್. ನಾಗಪ್ಪ ಅವರು ಹಿಂದಿಯಲ್ಲಿ ‘ಹಿಮ್ ಚಲ್ ಗಯಾ’ ಎಂದು ಅನುವಾದಿಸಿದ್ದು ಕೊಲ್ಕತ್ತದ ‘ಅಣಿಮಾ’ ಪತ್ರಿಕೆಯ ಪ್ರೇಮಾಂಕ ಎಂಬ ವಿಶೇಷ ಸಂಚಿಕೆಯಲ್ಲಿ ಫೋಟೊ ಸಹಿತ ಪ್ರಕಟಗೊಂಡಿತ್ತು. ಹೀಗೆ ಪ್ರಥಮ ಹೆಜ್ಜೆಯಲ್ಲೇ ಅವರ ಸಾಹಿತ್ಯ ಸೇವೆ ವಿಶಾಲವ್ಯಾಪ್ತಿ ಹರಡಿತ್ತು ಎಂದರೆ ತಪ್ಪಾಗಲಾರದು.

ಸಾಹಿತ್ಯ ಸೇವೆ : ಸಾಮಾನ್ಯ ಮಹಿಳೆಯರ ಬದುಕನ್ನು ಕಥೆಗಳಲ್ಲಿ ಅನಾವರಣಗೊಳಿಸುತ್ತ, ಉತ್ತರ ಕರ್ನಾಟಕದ ಆಡುಭಾಷೆಯನ್ನು ಹಿಡಿದಿಟ್ಟವರು ಶಾಂತಾದೇವಿ ಕಣವಿರವರು.ಹಿಂದೆ ಮಹಿಳಾ ಸಾಹಿತ್ಯ ಎಂದು ಪ್ರತ್ಯೇಕಿಸುತ್ತಿದ್ದರು. ಈಗ ಪುರುಷರ ಸಮಾನವಾಗಿ ಲೇಖಕಿಯರು ಬರೆಯುತ್ತಿದ್ದಾರೆ. ಹೀಗಾಗಿ ಮಹಿಳಾ ಸಾಹಿತ್ಯ ಎನ್ನಬೇಕಿಲ್ಲ. ಜೊತೆಗೆ ಪ್ರತ್ಯೇಕವಾಗಿ ನೋಡಬೇಕಾದ ಅಗತ್ಯವಿಲ್ಲ ಎಂಬುದು ಶಾಂತಾದೇವಿ ಅವರ ಖಚಿತ ದೃಡ ನಿಲುವಾಗಿತ್ತು.ಸಾಹಿತ್ಯ ಕ್ಷೇತ್ರದಲ್ಲಿ
ಶಾಂತಾದೇವಿ ಅವರ ಮೊದಲ ಕಥಾ ಸಂಕಲನ ‘ಸಂಜೆಮಲ್ಲಿಗೆ’ 1967ರಲ್ಲಿ ಪ್ರಕಟವಾಯಿತು. ಆಮೇಲೆ ‘ಬಯಲು ಆಲಯ’, ‘ಮರುವಿಚಾರ’, ‘ಜಾತ್ರೆ ಮುಗಿದಿತ್ತು’, ‘ಕಳಚಿ ಬಿದ್ದ ಪೈಜಣ’, ‘ನೀಲಿಮಾ ತೀರ’, ‘ಗಾಂಧಿ ಮಗಳು’ ಹಾಗೂ ‘ಈಚಿನ ಕಥೆಗಳು’ ಸಂಕಲನ ಪ್ರಕಟಗೊಂಡವು. ಸಮಗ್ರ ಕಥೆಗಳು ‘ಕಥಾಮಂಜರಿ’ (2002) ಹಾಗೂ ‘ಇನ್ನೊಂದು ಸಂಪುಟ’ (2005) ಎರಡು ಸಂಪುಟಗಳಲ್ಲಿ ಪ್ರಕಟಗೊಂಡವು. ಧಾರವಾಡ ಆಕಾಶವಾಣಿಯಲ್ಲಿ ಅವರ ಕಥೆ, ರೂಪಕ, ಕಿರುನಾಟಕ, ಹಾಸ್ಯ, ಕಥೆಗಳು ಪ್ರಸಾರಗೊಂಡವು. ಜೊತೆಗೆ ಹರಟೆಗಳ ಸಂಕಲನ ‘ಅಜಗಜಾಂತರ’ ಪ್ರಕಟಗೊಂಡಿತು. ನಿಜಗುಣ ಶಿವಯೋಗಿ ಮಕ್ಕಳ ಪುಸ್ತಕವಾಗಿ ಪ್ರಕಟಿತಗೊಂಡಿತು.
ಹಾಗಾಗಿ ಅವರ ಕಥೆಗಳಲ್ಲಿ ತುಂಬ ಇಷ್ಟವಾದ ಕಥೆಗಳು, ಅವರು ಬರಹದಲ್ಲೂ ಕೂಡ ಕಾಣಬಹುದಾಗಿದೆ, ಪ್ರತಿ ಪಾತ್ರ, ಹಳ್ಳಿಯ ಹೆಣ್ಣು ಮಕ್ಕಳ ನೈಜ ಮುಗ್ಧತೆ, ಕಷ್ಟ, ಸಂಕಷ್ಟ, ಹೆಚ್ಚು ಕನಸಿರದ ಇದ್ದೊಂದು ಕನಸೂ ಕೈಗೂಡದ, ಈಗಲೂ ಜೀವಂತ ಪ್ರಸ್ತುತ ಅನ್ನುವ ಕಥೆಗಳಾಗಿವೆ ಜೊತೆಗೆ ಹಲವಾರು ಕಥೆಗಳು ಹಿಂದಿ, ಇಂಗ್ಲಿಷ್, ಮಲೆಯಾಳಂಗಳಿಗೆ ಭಾಷಾಂತರಗೊಂಡಿವೆ.
ಪ್ರಮುಖ ಕೃತಿಗಳು ಹೀಗಿವೆ :
ಕಥಾಸಂಕಲನ – ಸಂಜೆಮಲ್ಲಿಗೆ,ಬಯಲು—ಆಲಯ,
ಮರುವಿಚಾರ,ಜಾತ್ರೆ ಮುಗಿದಿತ್ತು,ಕಳಚಿ ಬಿದ್ದ ಪೈಜಣ,
ನೀಲಿ ಮಾ ತೀರ,ಗಾಂಧೀ ಮಗಳು.
ಲಲಿತ ಪ್ರಬಂಧ – ಅಜಗಜಾಂತರ,ಮಕ್ಕಳ ಸಾಹಿತ್ಯ
ನಿಜಗುಣಿ ಶಿವಯೋಗಿ.
ಸಂಪಾದನೆ – ಪ್ರಶಾಂತ ಎನ್ನುವ ಕೃತಿಗಳು ನಾಡಿಗೆ ಅರ್ಪಣೆ ಮಾಡಿದ್ದಾರೆ.

ಸಂಧ ಪ್ರಶಸ್ತಿ /ಗೌರವಗಳು :
ಶಾಂತಾದೇವಿ ಕಣವಿ ಅವರ ‘ಬಯಲು-ಆಲಯ’ ಕಥಾಸಂಕಲನಕ್ಕೆ 1974ರ ಸಾಹಿತ್ಯ ಅಕಾಡಮಿ ಬಹುಮಾನ. 1987ರಲ್ಲಿ ಅಕಾಡಮಿ ಪ್ರಶಸ್ತಿ ಪುರಸ್ಕಾರ, ದಾನಚಿಂತಾಮಣಿ ಅತ್ತಿಮಬ್ಬೆ ಪುರಸ್ಕಾರವೂ ಸೇರಿದಂತೆ ಇನ್ನೂ ಇವರ ಸಾಹಿತ್ಯ ಸೇವೆಗೆ ಅನೇಕ ಗೌರವ ಸನ್ಮಾನಗಳು ದೊರಕಿವೆ.

ಕೊನೆಯದಾಗಿ : ಶಾಂತದೇವಿಯವರ ಸಾಹಿತ್ಯದಲ್ಲಿ ಪ್ರಖರವಾಗಿ ಗುರುತಿಸಿಕೊಳ್ಳಬಹುದಾದ ಮೌಲ್ಯಾಧಾರಿತ ವೈಜ್ಞಾನಿಕ ವೈಚಾರಿಕ ಚಿಂತನೆಗಳ ವಿಚಾರಗಳು ಅವರ ಕೃತಿಗಳಲ್ಲಿ ನಾವೆಲ್ಲರೂ ಕಾಣಬಹುದಾಗಿದೆ.ಹೀಗಾಗಿ ಅವರ ಕೃತಿಗಳು ಇಂದಿನ ಸಮಾಜಕ್ಕೆ ಅತಿ ಅವಶ್ಯ ಹಾಗೂ ಮಾರ್ಗದರ್ಶನವಾಗಿವೆ.

ಭಕ್ತಿಯ ನಮನ : ಕನ್ನಡ ಸಾಹಿತ್ಯ ಲೋಕಕ್ಕೆ ಶಾಂತಾದೇವಿ ಕಣವಿಯವರು ಬಹು ದೊಡ್ಡ ಶಕ್ತಿಯಾಗಿದ್ದರು.ಶಾಂತಾದೇವಿ ಕಣವಿಯವರ ಅಗಲಿಕೆ ದುಃಖ ತಂದಿದೆ. ಈ ದುಃಖವನ್ನು ತಾಳಿಕೊಳ್ಳುವ ಶಕ್ತಿ ಹಿರಿಯ ಸಾಹಿತಿ ಚೇತನರಾದ ಚನ್ನವೀರ ಕಣವಿಯವರಿಗೂ ಮತ್ತು ಕುಟುಂಬಕ್ಕೆ ಬರಲಿ. ಅಗಲಿದ ಮಹಾನ್ ಚೇತನಕ್ಕೆ ಅಂತರಾಳದ ಭಕ್ತಿಯ ನಮನಗಳು ಸಲ್ಲಿಸುತ್ತೇವೆ.

********

ಸಂಗಮೇಶ ಎನ್ ಜವಾದಿ

Leave a Reply

Back To Top