ಪ್ರಶಸ್ತಿ-ಪುರಸ್ಕಾರ

ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ -2019

ಡಾ. ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ -2019

ಕನ್ನಡದ ಸಣ್ಣ ಕತೆಗಾರರಿಗೆ ಉತ್ತೇಜನ ನೀಡಲು ಪ್ರತಿ ವರ್ಷ ನೀಡುತ್ತಿರುವ ಡಾ . ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ 2019 ರ ಪ್ರಶಸ್ತಿ ಚನ್ನಪ್ಪ ಕಟ್ಟಿ ಅವರ ” ಏಕತಾರಿ ” ಕಥಾ ಸಂಕಲನಕ್ಕೆ ಸಂದಿದೆ .

ಡಾ. ಎಸ್ ಜಿ ಸಿದ್ದರಾಮಯ್ಯ , ಅರುಣ್ ಜೋಳದ ಕೂಡ್ಲಗಿ ಮತ್ತು ವಿನಯಾ ವಕ್ಕುಂದ ಅವರುಗಳಿದ್ದ ಸಮಿತಿ ಈ ಕಥಾಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ .

ಚನ್ನಪ್ಪ ಕಟ್ಟಿಯವರ ಕಥಾ ಸಂಕಲನದ ಎಲ್ಲಾ ಕಥೆಗಳು ನೆಲದ ಬೇರುಗಳನ್ನು ಹೀರಿಕೊಂಡು ಬದುಕಿನ ಸ್ಥಿತ್ಯಂತರಗಳನ್ನು ಸೂಕ್ಶ್ಮವಾಗಿ ಕಟ್ಟಿ ಕಲಾ ಕೃತಿಯ ಅನುಭವ ನೀಡುತ್ತಾ ಬದಲಾದ ಕಾಲಘಟ್ಟಗಳ ಮನುಷ್ಯ ಸಂಬಂಧಗಳ ನಾಡಿ ಮಿಡಿತವನ್ನು ನೀಡುತ್ತವೆ . ಈ ಕಾರಣಕ್ಕಾಗಿ “ಏಕತಾರಿ”ಕಥಾ ಸಂಕಲನವನ್ನು ಸಮಿತಿ ಒಮ್ಮತದಿಂದ ಆಯ್ಕೆ ಮಾಡಿದೆ .

ಡಾ.ಬೆಸಗರಹಳ್ಳಿ ರಾಮಣ್ಣ ಟ್ರಸ್ಟ್

***********************************

Leave a Reply

Back To Top