ಕಾವ್ಯ ಸಂಗಾತಿ
ಗೊರೂರು ಅನಂತರಾಜು
ಹನಿಗವನಗಳು


1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು ನಾಡನ್ನು
ಎಂದವರು
ಕಟ್ಟಿಕೊಂಡರು
ಸ್ವಂತಕ್ಕೆ ಗೂಡನ್ನು
——————————————————
ಗೊರೂರು ಅನಂತರಾಜು

ಗೊರೂರು ಅನಂತರಾಜು