ಗಝಲ್
ಮರುಳಸಿದ್ದಪ್ಪ ದೊಡ್ಡಮನಿ
ನಿನ್ನ ನೆನಪು ಮರೆಯಲು ಮದಿರೆಯ ಸಂಗ ಮಾಡಿದ್ದೆ ಸಖಿ
ವ್ಯಸನ ತೊರೆಯಲು ಸುರೆಯ ಹಂಗ ಬಿಡದಾಗಿದೆ ಸಖಿ
ಮಧುವಿನ ದಾಸನಾಗಿ ದಾಸ್ಯದಿ ಬದುಕ ನೂಕುತಿರುವೆ
ತುಟಿಯಂಚಿಗಿಟ್ಟ ಬಟ್ಟಲಿನಲ್ಲಿ ನೀನು ಕಾಣುತಿರುವೆ ಮರೆಯದಾಗಿದೆ ಸಖಿ
ನೀರವ ಮೌನದ ಕತ್ತಲೆಯಲಿ ಸಿಗಬಹದೆಂದು ಹುಡುಕಿರುವೆ
ಶರಾಬಿನ ಸಿಸೆಯೊಳಗೂ ನಿನ್ನದೆ ಬಿಂಬವ ಕಾಣುತಿದೆ ಸಖಿ
ಮರೆಯಲಾಗದ ಹವ್ಯಾಸ ನನ್ನನು ಬೆಂಬಿಡದೆ ಕಾಡಿದೆ
ಅವಳನು ಮರೆಯುವ ಮಾತಾಡಿಮಿಣುಕು ದೀಪದ ಮುಂದೆ ಕುಳಿತಿದ್ದೆ ಸಖಿ
ಸುರಪಾನದ ಸುಖದಲಿ ತೇಲಾಡಿ ನೊಂದ ಮರುಳನು ಮರುಗುತಿರುವನು
ಆದದ್ದೇಲ್ಲ ಮರೆತು ಹೊಸಬಾಳ್ವೆಗೆ ಹೊಂದಿ ನಡೆಯ ಬೇಕೆಂದಿದ್ದೆ ಸಖಿ
***********