ಅರ್ಪಣಾ ಮೂರ್ತಿ
ಪ್ರಸ್ತುತ ಪರಿಸ್ಥಿತಿಯಲ್ಲಿ ಶೈಕ್ಷಣಿಕ ವರ್ಷದ ಆರಂಭವೇ ಗೊಂದಲಗಳಿಂದ ಕೂಡಿರುವ ಈ ಸಂದರ್ಭದಲ್ಲಿ, ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಇದಾಗಲೇ ಕಂಡುಕೊಂಡಿರುವ ಶಿಕ್ಷಣದ ಪರ್ಯಾಯ ಮಾರ್ಗದ ಹೆಸರೇ ಈ ಆನ್ಲೈನ್ ಶಿಕ್ಷಣ, ಈ ಪರ್ಯಾಯ ಮಾರ್ಗದ ಶಿಕ್ಷಣಕ್ಕೆ ಸರ್ಕಾರವು ಸಹ ಸಮ್ಮತಿಯ ಮುದ್ರೆ ಒತ್ತಿದೆ. ಈಗಿರುವ ಪ್ರಶ್ನೆಯೆಂದರೆ ಈ ಆನ್ಲೈನ್ ಶಿಕ್ಷಣ ಎಷ್ಟು ಪರಿಣಾಮಾತ್ಮಕವಾಗಿದೆ, ಮಕ್ಕಳ ಕಲಿಕೆಯ ಮಟ್ಟಕ್ಕೆ ಅದೆಷ್ಟು ಪೂರಕವಾಗಿದೆ ಅನ್ನುವುದು. ಮೊದಲಿಗೆ ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದರ ಕುರಿತು ಹೇಳೋದಾದ್ರೆ ಒಂದರಿಂದ ಐದನೆಯ ತರಗತಿಯವರೆಗೂ ಮಕ್ಕಳು ಸಂಪೂರ್ಣವಾಗಿ ಶಿಕ್ಷಕರ ಮೇಲೆ ಅವಲಂಬಿತವಾಗಿರುವಂತವರು, ಎದುರು ನಿಂತು ತರಗತಿಯಲ್ಲಿ ಬೋಧನೆ ಮಾಡುವುದಕ್ಕೂ ಮೊಬೈಲ್ ಅಥವಾ ಲ್ಯಾಪ್ಟಾಪ್ ಮೂಲಕ ಪಾಠ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ, ಹಾಗೆಯೇ ಸುಮಾರು ಎರಡರಿಂದ ಮೂರುಗಂಟೆಗಳ ಕಾಲ ಮೊಬೈಲ್ ಪರದೆಯನ್ನ ನೋಡುವ ಪುಟ್ಟ ಮಕ್ಕಳ ಕಣ್ಣುಗಳು ಮುಂದೊಂದು ದಿನ ಹಾನಿಗೊಳಗಾಗುವುದರಲ್ಲಿ ಸಂಶಯವೇ ಇಲ್ಲ, ಇದರ ಜೊತೆಗೆ ಮಕ್ಕಳ ಮೆದುಳಿನ ವಿಕಸನದ ಮೇಲೆ ಪರಿಣಾಮ ಉಂಟಾಗಬಹುದು, ನರಗಳ ಸಮಸ್ಯೆ ಉಂಟಾಗಬಹುದು, ಪುಟ್ಟ ಮಕ್ಕಳಿಗೆ ಯಾವುದೇ ಕಾರಣಕ್ಕೂ ಆನ್ಲೈನ್ ಶಿಕ್ಷಣ ಸೂಕ್ತವಲ್ಲ, ಇನ್ನು ಈ ಚಿಕ್ಕ ಮಕ್ಕಳನ್ನು ಹೊರತು ಪಡಿಸಿ ಪ್ರೌಡ ಮಕ್ಕಳ ಕುರಿತು ಹೇಳುವುದಾದರೆ ಪರಿಣಾಮಗಳಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ, ಹಾಗಾದರೆ ಕಾಲೇಜು ಮಕ್ಕಳಿಗೆ ಆನ್ಲೈನ್ ಶಿಕ್ಷಣ ಪೂರಕತೆ ಒದಗಿಸಬಹುದಾ ಅಂತ ನೋಡೋದಾದ್ರೆ ಸುಮಾರು ಅರ್ಧದಷ್ಟು ವಿದ್ಯಾರ್ಥಿಗಳು ಹಳ್ಳಿಗಾಡಿಗೆ ಸೇರಿದವರು, ಮೊದಲ ಸಮಸ್ಯೆಯೇ ಎಲ್ಲರೂ ಮೊಬೈಲ್ ಫೋನ್ಗಳನ್ನ ಹೊಂದುವಂತದ್ದು, ಈ ಕರೋನಾ ಕಾಲದಲ್ಲಿ ಈಗಾಗಲೇ ಹಳ್ಳಿಗಾಡಿನ ಜನ ಅತಿ ಕ್ಲಿಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಮಕ್ಕಳಿಗೆ ಮೊಬೈಲ್ ಒದಗಿಸೋದು ಕಷ್ಟದ ವಿಷಯ, ಮನೆಯಲ್ಲಿ ಓದುತ್ತಿರುವ ಎರಡು ಮೂರು ಮಕ್ಕಳಿರುವ ಸಂದರ್ಭದಲ್ಲಿ ಎಲ್ಲರಿಗೂ ಮೊಬೈಲ್ ಕೊಡಿಸುವುದು ಆಗದ ವಿಷಯ, ಒಂದೊಮ್ಮೆ ಕೊಡಿಸಿದರೂ ಸಹ ಹಳ್ಳಿಗಳಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ನೆಟ್ವರ್ಕ್ ಅದೆಷ್ಟು ಸುಲಭವಾಗಿ ಸಿಗುತ್ತದೆ ಎನ್ನುವುದು ಹಳ್ಳಿಯ ವಾಸಿಗಳಿಗಷ್ಟೇ ಗೊತ್ತು, ನೆಟ್ವರ್ಕ್ ಕಾರಣದಿಂದಾಗಿ ಶೇಕಡಾ ಅರ್ಧದಷ್ಟು ಮಕ್ಕಳಿಗೆ ಹೆಚ್ಚಿನ ಮಾಹಿತಿ ತಲುಪಲಾರದು ಹಾಗೂ ಹಾಜರಾತಿ ಕೂಡ ನಿರೀಕ್ಷಿಸಲಾಗದು, ಒಂದೊಮ್ಮೆ ನೆಟ್ವರ್ಕ್ ದೊರೆಯುವ ಸ್ಥಳವಾದರೂ ಕೂಡ ದಿನಕ್ಕೆ ಮೂರರಿಂದ ನಾಲ್ಕು ತರಗತಿಗಳಿಗೆ ಸರಿಯಾಗುವಷ್ಟು ಮೊಬೈಲ್ ಡೇಟಾ ಹಾಕಿಸುವಷ್ಟು ಪೋಷಕರು ಶಕ್ತರಿದ್ದಾರಾ ಎನ್ನುವುದು ಯೋಚಿಸಬೇಕಾದ ವಿಷಯ, ಆನ್ಲೈನ್ ಶಿಕ್ಷಣ ಎನ್ನುವುದು ನಗರವಾಸಿಗಳ ಹಾಗೂ ಉಳ್ಳವರ ಮಕ್ಕಳಿಗಷ್ಟೇ ಒಂದಿಷ್ಟು ಉತ್ತಮ ಅನಿಸಬಹುದಾದರೂ ಹಳ್ಳಿಗಾಡಿನ ಮಕ್ಕಳು ಈ ಶಿಕ್ಷಣದಿಂದ ವಂಚಿತರಾಗುವುದೇ ಹೆಚ್ಚು, ವೈಜ್ಞಾನಿಕ ತಳಹದಿಯ ಮೇಲೆ ಹೇಳುವುದಾದರೆ ಸಣ್ಣ ಮಕ್ಕಳಿಗೆ ಆರೋಗ್ಯದ ದೃಷ್ಟಿಯಿಂದ ಆನ್ಲೈನ್ ಶಿಕ್ಷಣ ಮಾರಕವೇ ಹೊರತು ಪೂರಕವಲ್ಲ, ಕಾಲೇಜು ಹಂತದ ಮಕ್ಕಳ ಆನ್ಲೈನ್ ಶಿಕ್ಷಣದ ಕುರಿತು ಹೇಳುವುದಾದರೆ ಇದು ನಗರವಾಸಿ ಜನ ಹಾಗೂ ಉಳ್ಳವರಿಗಷ್ಟೆ ಒಂದಿಷ್ಟು ಪೂರಕವಾಗಬಹುದು ಹೊರತು ಹಳ್ಳಿಗಾಡಿನ ಜನರಿಗೆ ಆರ್ಥಿಕ ಹೊರೆಯಷ್ಟೆ.. ಒಟ್ಟಾರೆಯಾಗಿ ಸರ್ಕಾರಿ ಶಾಲಾಕಾಲೇಜಿನ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಎನ್ನುವುದು ಹೊರೆಯಾಗದಿರಲಿ.
*********
Yes mam., You are absolutely correct. This online education is of no use to pupil living rural areas. I think the ministers have to wait till the eradication of corona or till they find any vaccines against it. After that they to take classes atleast one or two months and complete their syllabus and then conduct examination. This is the true solution.
We are not saying to promote without exams. Don’t make us victims to corona . please