ಪುಸ್ತಕಸಂಗಾತಿ
ಒಂದು ಮರ ನೂರು ಸ್ವರ
ಭಾರತೀಯ ಸಣ್ಣಕಥೆಗಳು
ಎನ್ ಎಸ್ ಶಾರದಾಪ್ರಸಾದ್
ಸಂಚಯ ಪ್ರಕಾಶನ
ಈ ಪುಸ್ತಕ ಮುದ್ರಣದ ಹಂತದಲ್ಲಿದ್ದಾಗ ಶಾರದಾಪ್ರಸಾದರು ತೀರಿಕೊಂಡಿದ್ದು ದುಃಖದ ವಿಷಯ. ಅವರು ತಮ್ಮ ಬರವಣಿಗೆಯ ಬದುಕಿನುದ್ದಕ್ಕೂ ಆಯ್ದು ಪೋಣಿಸಿದ ಕಥೆಗಳಿವು. 1981 ರಿಂದ 2014 ರ ತನಕದ ಅವರ ಎಲ್ಲಾ ಅನುವಾದಿತ ಚೆಂದದ ಕತೆಗಳು ಇಲ್ಲಿವೆ.
ರಾಜಾಜಿ (ಚಕ್ರವರ್ತಿ ರಾಜಗೋಪಾಲಾಚಾರಿ) ಅವರ, ಲೋಕನಾಯಕ ಜಯಪ್ರಕಾಶ ನಾರಾಯಣ್ ಅವರ ಅಪರೂಪದ ಕತೆಗಳೂ ಇಲ್ಲಿವೆ. ಒಟ್ಟೂ 51 ಕತೆಗಳು ಇಲ್ಲಿ ಕನ್ನಡಿಸಿವೆ.ಅಷ್ಟೇನೂ ಪರಿಚಿತರಲ್ಲದವರ ಕತೆಗಳೂ ಇಲ್ಲಿವೆ.
ಕಳೆದ ಶತಮಾನದ ಭಾರತೀಯ ಬದುಕಿನ ವಿವರಗಳನ್ನು, ಸಾಂಸ್ಕೃತಿಕ ಪಲ್ಲಟಗಳನ್ನು, ನೋವು- ನಲಿವು, ಹತಾಶೆ, ಸಾವು, ಯಶಸ್ಸು… ಹೀಗೆ ಆಯಾ ಪ್ರದೇಶದ, ಭಾಷೆಯ ಆವರಣದಲ್ಲಿ ಮೈಪಡೆದ ಮನುಷ್ಯ ಜಗತ್ತಿನ ಚಿತ್ರಣ ಈ ಕೃತಿಯಲ್ಲಿದೆ.
ಇಲ್ಲಿನ ಕತೆಗಳ ಆಯ್ಕೆಯ ಹಿಂದೆ ಶಾರದಾಪ್ರಸಾದರ ಸೂಕ್ಷ್ಮತೆ ಮತ್ತು ಭಾವುಕತೆ ಎದ್ದು ಕಾಣುತ್ತದೆ.ಯಾವ ಸಾಹಿತ್ಯ ಫ್ಯಾಷನ್ನುಗಳಿಂದ ಪ್ರಭಾವಿತರಾಗದ ಅವರ ಆಯ್ಕೆ, ತಮ್ಮ ಮನಸ್ಸಿಗೆ ತಟ್ಟಿದ ಕಥೆಗಳನ್ನು ಅವರು ಕನ್ನಡಿಗರ ಓದಿಗೆ ಬಡಿಸಿದ್ದಾರೆ. ಇವು ಅಂತಃಕರಣದ ಕತೆಗಳು.
ವೈವಿಧ್ಯಮಯ ಕಥೆಗಳಿಗಾಗಿ ಒಮ್ಮೆ ಓದಲೇಬೇಕಾದ ಕೃತಿಯಿದು.
********
ಡಾ.ಅಜಿತ ಹರೀಶಿ
ಸಂಕ್ಷಿಪ್ತವಾಗಿ ಪುಸ್ತಕ ಪರಿಚಯ ಚೆನ್ನಾಗಿದೆ ಅಭಿನಂದನೆಗಳು