ಕಸಾಪಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ?

ಚರ್ಚೆ

Kannada Sahitya Parishat - Wikipedia

.

ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷದ ಹಾದಿ ಸವೆಸಿ ಮೇಲೆ ನಾಲ್ಕು ವರ್ಷಗಳಾಗಿವೆ.‌ ಮತ್ತೊಂದು  ಚುನಾವಣೆ ಎದುರಿಸಿ, ಕಸಾಪ ಅಧ್ಯಕ್ಷ ಗದ್ದುಗೆ ಏರಲು ಹಲವಾರು ಕಸರತ್ತುಗಳು ನಡೆದಿವೆ. ಕಸಾಪ ಅಧ್ಯಕ್ಷರ  ಅವಧಿ ಐದು ವರ್ಷ ಎಂದೂ ಬೈ ಲಾದಲ್ಲಿ (ಠರಾವು)ತಿದ್ದುಪಡಿಯಾಗಿ, ಅದಕ್ಕೆ ಕಸಾಪ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮುದ್ರೆ ಸಹ ಬಿದ್ದಿದೆ. ಚಾಮರಾಜನಗರದಲ್ಲಿ  ೨೦೧೯ ರಲ್ಲಿ ನಡೆದ ರಾಜ್ಯ ಕಸಾಪ ಸರ್ವಸದಸ್ಯರ ಸಭೆಯಲ್ಲಿ ಅಧ್ಯಕ್ಷರ ಅವಧಿ ಐದು ವರ್ಷ ಎಂದು ಅನುಮೋದನೆ ಸಹ ಸಿಕ್ಕಿದೆ. ಅದರ ಫಲ ಮುಂದೆ ಕಸಾಪ ಅಧ್ಯಕ್ಷರಾಗಿ ಗೆದ್ದು ಬರುವವರು ಉಣ್ಣಲಿದ್ದಾರೆ‌ .ಈಗ  ಕಸಾಪ ಅಧ್ಯಕ್ಷರಾಗಿ ಸಾಹಿತ್ಯದ ರಥ ಎಳೆಯಲು ಕೆಲವರು  ಬಹಿರಂಗ ವಾಗಿ, ಕೆಲವರು ಅಪ್ತರಲ್ಲಿ  ಚುನಾವಣೆಗೆ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸುತ್ತಿದ್ದಾರೆ‌ . ಇದು ಸಹಜ. ಪ್ರಜಾಪ್ರಭುತ್ವದ ದಾರಿಯಲ್ಲಿ ಎಲ್ಲವೂ ಸಾಗಿದೆ. ಪ್ರಶ್ನೆ ಏನಪ ಅಂದರ ಕಸಾಪ ೧೦೪ ವರ್ಷದ ತನ್ನ ಅವಧಿಯಲ್ಲಿ ಒಮ್ಮೆಯೂ ಮಹಿಳಾ ಅಧ್ಯಕ್ಷೆಯನ್ನು ಕಂಡಿಲ್ಲ.‌ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಅರ್ಹರಾದ ಮಹಿಳೆಯರು , ಮಹಿಳಾ ಸಾಹಿತಿಗಳ ದೊಡ್ಡ ಪಡೆ ನಮ್ಮಲ್ಲಿದೆ. ಕರ್ನಾಟಕ ಲೇಖಕಿಯರ ಸಂಘವೂ ಇದೆ. ಆದರೆ ಅವರು ಚುನಾವಣೆಗೆ ಸ್ಪರ್ಧಿಸಲು ಮನಸು ಮಾಡಿದಂತಿಲ್ಲ.‌ ಯಾಕೆ ಮನಸು ಮಾಡಲಿಲ್ಲ ಎಂಬ ಪ್ರಶ್ನೆ ಗಿಂತ , ಮುಂದೆ ಅವರು ಸ್ಪರ್ಧಿಸಲಿ ಎಂಬುವ ಪುರುಷ ಮನಸುಗಳು  ಸಹ ಇವೆ.‌ಹಣ ,ಜಾತಿ ರಾಜಕೀಯ, ರಾಜಕೀಯದ ಪರೋಕ್ಷ ಬೆಂಬಲ ಇವೆಲ್ಲವನ್ನೂ ಪಕ್ಕಕ್ಕೆ ಇಟ್ಟು , ಸ್ಪರ್ಧಿಸಲು ಅವಕಾಶವಿದೆ. ಅತ್ಯಂತ ಪ್ರಖರ ವೈಚಾರಿಕತೆ ಇರುವ ಮಹಿಳಾ ಬರಹಗಾರರು ಇದ್ದಾರೆ.‌ಹಾಗಾಗಿ ಮಹಿಳೆಯೊಬ್ಬರು ಮುಂಬರುವ ಕಸಾಪ ಅಧ್ಯಕ್ಷ ಗಾದಿಗೆ ಸ್ಪರ್ಧಿಸಬೇಕಿದೆ.‌ಇದು ಸಾಹಿತ್ಯ ಸಂಗಾತಿ ಕನ್ನಡ ವೆಬ್ನ ಆಶಯ.

ಯಾಕೆ ಮಹಿಳೆ ಬೇಕು?

ಕಸಾಪ ಅಧ್ಯಕ್ಷ ಹುದ್ದೆಗೆ ಮಹಿಳೆ;  ಪುರುಷರಷ್ಟೇ ಅರ್ಹಳು.

ಇದು ಕರ್ನಾಟಕ.‌ ಮಹಿಳಾ ಸಮಾನತೆಯನ್ನು ೧೨ ನೇ ಶತಮಾನದಲ್ಲಿ ಸಾಧಿಸಿದ ನೆಲ. ಪುರುಷರಷ್ಟೇ , ಸಮರ್ಥ ಆಡಳಿತ ನೀಡುವ ಹಾಗೂ ಪಾರದರ್ಶಕ ಆಡಳಿತ ನೀಡಲು ಮಹಿಳೆಯರಿಗೂ ಸಾಧ್ಯವಿದೆ.‌ ಆಡಳಿತ ಮಾಡುವ ಛಾತಿ ಇದೆ.‌ಸಮ್ಮೇಳನ ನಡೆಸುವ ಚಾಕಚಕ್ಯತೆ ಇದೆ.‌ಒಮ್ಮೆ ಕಣಕ್ಕೆ ಇಳಿದರೆ, ಚುನಾವಣಾ ವಾತಾವರಣ ಬದಲಾಗಿ ಮಹಿಳೆಯನ್ನೇ  ಅವಿರೋಧವಾಗಿ ಆಯ್ಕೆ ಮಾಡುವ ಸನ್ನಿವೇಶ ಸೃಷ್ಟಿಯಾಗಬಹುದು.ಸಾಹಿತ್ಯ ಸಮ್ಮೇಳನದಲ್ಲಿ ಪುರುಷ ಪ್ರಾಬಲ್ಯವನ್ನು ತಪ್ಪಿಸಬಹುದು. ಅಲ್ಲದೆ ಇಚ್ಛಾ ಶಕ್ತಿಯಿಂದ ಸಮ್ಮೇಳನದ ನಿರ್ಣಯಗಳನ್ನು ಜಾರಿ ಮಾಡಿಸಬಹುದು . ಮುಖ್ಯಮಂತ್ರಿಗಳ ಕಿವಿಹಿಂಡಿ ಕನ್ನಡದಲ್ಲಿ ಆಡಳಿತವನ್ನು ಇನ್ನೂ ಪರಿಣಾಮಕಾರಿ ಮಾಡಬಹದು.ಕಾರಣ ಮಹಿಳೆಗೆ ತಾಯ್ತನದ ಗುಣವಿರುತ್ತದೆ‌ .ಹಾಗಾಗಿ ಈ ಸಲ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ಸಾಹಿತಿ ಸ್ಪರ್ಧಿಸುವುದು ಔಚಿತ್ಯಪೂರ್ಣ. ಅಲ್ಲದೇ ಇದು ಲಿಂಗ ಸಮಾನತೆಯ ಪ್ರಶ್ನೆಯೂ ಆಗಿದೆ.ಕಸಾಪವನ್ನು ಇನ್ನೂ ಎಷ್ಟು ದಿನ ಪುರುಷಪ್ರಧಾನ ವ್ಯವಸ್ಥೆಯಲ್ಲಿ ನಡೆಸುವುದು?.

ಈ ಸಲ ಮಹಿಳಾ ಸಾಹಿತಿಗಳು ಸಭೆ ಸೇರಿ ಒಂದು ನಿರ್ಧಾರಕ್ಕೆ ಬರಲಿ. ‌ನಮ್ಮಲ್ಲಿ ಹಿರಿಯರಾದ ವೀಣಾ ಶಾಂತೇಶ್ವರ, ಸುಕನ್ಯಾ ಮಾರುತಿ, ಬಿ.ಟಿ.ಜಾನ್ಹವಿ, ಬಿ.ಟಿ.ಲಲಿತಾ ನಾಯಕ, ವಸುಂದರಾ ಭೂಪತಿ, ಸುನಂದಾ‌ಕಡಮೆ, ಸಾರಾ ಅಬೂಬಕರ್,‌ಮಹಿಳಾ  ವಿ.ವಿ.ಕುಲಪತಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸಬಿಹಾ ಭೂಮಿಗೌಡ, ಕನ್ನಡ ಹಂಪಿ ವಿವಿ ನಿಕಟಪೂರ್ವ ಕುಲಪತಿ‌ ಮಲ್ಲಿಕಾ‌ ಘಂಟಿ, ಭಾನು‌ ಮುಷ್ತಾಕ, ಡಾ.ಎಚ್.ಎಸ್.ಅನುಪಮಾ, ವೈದೇಹಿ, ಡಾ.ಮೀನಾಕ್ಷಿ  ಬಾಳಿ, ಗುಲ್ಬರ್ಗಾದ ಹೋರಾಟಗಾರ್ತಿ ನೀಲಾ,  ದು.ಸರಸ್ವತಿ , ಪ್ರತಿಭಾ ನಂದಕುಮಾರ್…ಹೀಗೆ  ದೊಡ್ಡ ಮಹಿಳಾ ಪಡೆಯೇ ಕರ್ನಾಟಕದಲ್ಲಿ ಇದೆ. ಇವರಲ್ಲಿ ಯಾರಾದರೂ ಒಬ್ಬರೂ ಕಸಾಪ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಬೇಕು. ಕನ್ನಡಿಗರಾದ ನಾವು ಅವರ ಚುನಾವಣಾ ವೆಚ್ಚ ಭರಿಸೋಣ.  ಪಾರದರ್ಶಕವಾಗಿ ಕಸಾಪ ಸದಸ್ಯರ ಮತ ಕೇಳೋಣ.‌ ಇದು‌ ಮಹಿಳಾ ಸಮಾನತೆಯ ಹಕ್ಕಿನ ಪ್ರಶ್ನೆ .‌ಬಾಯ್ಮತಲ್ಲಿ  ಮಹಿಳಾ ಪ್ರಾತಿನಿಧ್ಯ ಎಂಬುದಕ್ಕಿಂತ ಅದು ಕಸಾಪ ಅಧ್ಯಕ್ಷ ಸ್ಥಾನದಿಂದ ಅನುಷ್ಠಾನವಾಗಲಿ. ಕನ್ನಡಿಗರ ಪ್ರಾತಿನಿಧಿಕ ಕನ್ನಡ ಸಾಹಿತ್ಯ ಪರಿಷತ್ತಗೆ  ಮಹಿಳೆ ಅಧ್ಯಕ್ಷೆಯಾಗಿ ೫ ವರ್ಷ ಕನ್ನಡಿಗರ ಕಷ್ಟ ಸುಖಗಳಿಗೆ ಸ್ಪಂದಿಸಲಿ.‌ ಸರ್ಕಾರಕ್ಕೆ  ಕನ್ನಡ ಭಾಷೆ, ಆಡಳಿತ, ಶಿಕ್ಷಣದ ವಿಷಯದಲ್ಲಿ ಮಹತ್ವದ ಮಾರ್ಗದರ್ಶನ ಮಾಡುವಂತಾಗಲಿ.‌ ಈ ಎಲ್ಲಾ ದೃಷ್ಟಿಯಿಂದ  ರಾಜ್ಯ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ, ಮಹಿಳಾ ಸಾಹಿತಿ ಸ್ಪರ್ಧಿಸಬೇಕೆಂದು ನನ್ನ  ಹಾಗೂ ಸಾಹಿತ್ಯ ಸಂಗಾತಿಯ ಆಶಯವಾಗಿದೆ. ಈ ಸಂಬಂಧ ಮುಕ್ತ ಚರ್ಚೆಗೆ ಸಾಹಿತ್ಯ ಸಂಗಾತಿ ವೇದಿಕೆ ಒದಗಿಸುತ್ತದೆ.

….

World Kannada Meet is useless, says Baraguru Ramachandrappa


*************************

ನಾಗರಾಜ ಹರಪನಹಳ್ಳಿ


ಈ ಅಭಿಯಾನದಲ್ಲಿ ತಾವೂ ಪಾಲ್ಗೊಳ್ಳಬಹುದು. ನಿಮ್ಮಅಭಿಪ್ರಾಯಗಳನ್ನುನಮಗೆಬರೆಯಿರಿ

10 thoughts on “ಕಸಾಪಗೆ ಮಹಿಳಾ ಅಧ್ಯಕ್ಷರು ಯಾಕಿಲ್ಲ?

  1. ನಿಜ ಈ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನವಾಗಬೇಕು

  2. ನಿಜ…ಇಂಥಹ ವಿಷಯ ಚರ್ಚೆಯಷ್ಟೇ ಅಲ್ಲದೇ ಅದರ ಫಲವು ಸಿಗಬೇಕು. ಬಾಯಿ ಮಾತಿನ ಸಮಾನತೆಗೆ ಕಡಿವಾಣ ಹಾಕಿ ಕ.ಸಾ.ಪ ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯರು ಆಯ್ಕೆ ಆಗುವಂತಾಗಬೇಕು

  3. ಖಂಡಿತವಾಗಿ ಮಹಿಳೆಯರು ಮುಂದೆ ಬಂದು ಪರಿಷತ್ತಿನ ಅಧಿಕಾರ ವಹಿಸಿಕೊಳ್ಳಬೇಕು.ಇದರಿಂದ ಸಾಹಿತ್ಯ ಕ್ಷೇತ್ರದ ಹೊಲಸು ರಾಜಕಾರಣ ನಿಲ್ಲಬಹುದು.ಹರಪನಹಳ್ಳಿಯವರು ಹೇಳಿದಂತೆ ಮಹಿಳಾ ಲೇಖಕಿಯರ ದೊಡ್ಡ ಪಡೆಯೇ ಇದೆ.ರಾಜ್ಯ ಮಟ್ಟದಲ್ಲಿ ಅಷ್ಟೇ ಅಲ್ಲ ಜಿಲ್ಲಾ ಮಟ್ಟದಲ್ಲಿ ಕೂಡ ಬದಲಾವಣೆ ಆಗಬೇಕು.ರಾಜಕೀಯಕ್ಕಿಂತ ಸಾಹಿತ್ಯದ ರಾಜಕಾರಣ ಗಬ್ಬೆದ್ದು ಹೋಗಿದೆ. ಸಮ್ಮೇಳನದಲ್ಲಿ ಅರ್ಹ ಪ್ರತಿಭಾವಂತ ಕವಿಗಳಿಗೆ ಪ್ರಾತಿನಿಧ್ಯ ಸಿಗಬಹುದು. ಈ ಅಭಿಯಾನ ಆರಂಭಿಸಿದ ಸಂಗಾತಿಗೆ ಧನ್ಯವಾದಗಳು..
    ನಾಗರಾಜ ಹರಪನಹಳ್ಳಿ ಅವರ ವಿಚಾರ ನೈಜತೆಯಿಂದ ಕೂಡಿದೆ.

  4. ಸರ್
    ಇದುವರೆಗೂ ಮಹಿಳಾ ಅಧ್ಯಕ್ಷರಾಗಿಲ್ಲ ಅಂತ ಕಿರೀಟವೊಂದನ್ನು ತಟ್ಟೆಯಲ್ಲಿ ಇಟ್ಟು ಕೊಡುತ್ತೇವೆ. ಎಂಬ ಅಹಮಿಕೆಯಿಂದೇನಲ್ಲ. ಸಂಚಿ ಹೊನ್ನಮ್ಮನಾದಿಯಾಗಿ ಇಂದಿನ ಯುವಜನರವರೆಗೂ ಕನ್ನಡ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆ ಕಡಿಮೆಯೇನಲ್ಲ. ಈ ದೃಷ್ಟಿಯಿಂದ ಅದು ಮಹಿಳೆಯರಿಗೆ ದಕ್ಕಬೇಕಾದ ಸ್ಥಾನ.

  5. ನಿಜವಾದರೂ ಮೇಲ್ನೋಟಕ್ಕೆ ಎಲ್ಲ ಸುಲಭ ಅನ್ನಿಸಿದರೂ ಒಳಮರ್ಮಗಳಿಗೆ ಮಹಿಳೆ ಬಲಿಯಾಗುವ ಸಂದರ್ಭಗಳೆ ಹೆಚ್ವು.ಸಮಾನತೆಯ ಡಂಗುರ ಸಾರುವವರು,ಯೋಗ್ಯತೆ ಇರುವ ಮಹಿಳೆಯರಿಗೆ ಗದ್ದುಗೆ ಬಿಟ್ಟುಕೊಡಲು ಸಮಾನ ಮನಸ್ಕರು ಬೇಕು.ಅದರಲ್ಲೂ ಮಹಿಳೆಯರು ಅಷ್ಟು ದಿಟ್ಟತನದಿಂದ ಮುಂದೆಬರುವ ವಾತಾವರಣ ನಿರ್ಮಾಣವಾಗಬೇಕು.ಚರ್ಚೆ ಉತ್ತಮ ಆಶಯ ಒಳಗೊಂಡಿದೆ……

  6. ಏಕಕಾಲದಲ್ಲಿ ಸಾಮಾಜಿಕ ಆಡಳಿತಾತ್ಮಕ ಕೌಟುಂಬಿಕ ಸಾಹಿತ್ಯ ಕ ಜವಾಬ್ದಾರಿ ಕೆಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗುವುದು ಮಹಿಳೆಗೆ ಮಾತ್ರ……ಆ ಪ್ರತಿಭೆ ಡಾ.ವಸುಂಧರಾ ಭೂಪತಿಯವರಿಗಿದೆ ಎನ್ನುವುದು ನನ್ನ ಅನಿಸಿಕೆ…

Leave a Reply

Back To Top