ಹರಿಯೇ ಪ್ರೇಮಗಂಗೆ…. ವಿನುತಾ ಹಂಚಿನಮನಿ ಅಂದು ನೀನೂರಿದ ಪ್ರೀತಿಯ ಬೀಜಚೆಂದದಿ ಬೇರೂರಿ ಮನದಲಿ ಬೆಳೆದಿತ್ತುಕೊಂದು ಹಾಕಿದರೂ ನೀ ಕೈಯಾರೆ ಕಿತ್ತುಮತ್ತೆ…

ವ್ಯಾಲೆಂಟನ್ಸ ಡೇ ಹನಿಗಳು ನಾಗರಾಜ್ ಹರಪನಹಳ್ಳಿ ೧-ಅವಳ ಎದೆ ಬಗೆದುನೋಡಿಅಲ್ಲಿ ಸಿಗುವುದು ಇನಿಇನಿ ಎಂದರೆ ಬೇರಾರೂ ಅಲ್ಲಅದು ಇಬ್ಬನಿಯ ಹನಿ…

ದಾರಾವಾಹಿ- ಅದ್ಯಾಯ-03 ಮುತ್ತಯ್ಯ ಕೊಡುವ ಅರ್ಧ ಸಂಬಳ ಗೋಪಾಲನ ಸಂಸಾರ ನಿರ್ವಹಣೆಗೆ ಸಾಕಾಗುತ್ತಿರಲಿಲ್ಲ. ಅವನು ತನ್ನ ಗುಡಿಸಲನ್ನು ಬಾಡಿಗೆದಾರರಿಗೆ ಪುಕ್ಕಟೆ ನೀಡಿದ್ದೇನೆಂದು ಕಣ್ಣುಕಟ್ಟಿಗೆ ಹೇಳುತ್ತಿದ್ದ. ಆದರೆ ಅದರ ಬಾಡಿಗೆಯನ್ನು ಗೋಪಾಲ ದಂಪತಿಯ ದುಡಿಮೆಯಿಂದಲೇ ಸೂಕ್ಷ್ಮವಾಗಿ ವಸೂಲಿ ಮಾಡುತ್ತಿದ್ದ. ಈ ಸಂಗತಿಯನ್ನು ಅ‍ರಿತಿದ್ದ ಗೋಪಾಲನೂ ಅವನ ತೋಟದ ಕೆಲಸಕ್ಕೆ ನಿತ್ಯ ಹೋಗುವುದನ್ನು ನಿಲ್ಲಿಸಿಬಿಟ್ಟ. ವಾರದಲ್ಲಿ ಎರಡು, ಮೂರು ದಿನ ಮಾತ್ರ ದುಡಿಯುತ್ತ ಉಳಿದ ದಿನಗಳಲ್ಲಿ ಹೊರಗಡೆ ಹೆಚ್ಚಿಗೆ ಸಂಬಳಕ್ಕೆ ಹೋಗುತ್ತಿದ್ದ. ಆದರೆ ಅದು ಮುತ್ತಯ್ಯನಿಗೆ ಹಿಡಿಸುತ್ತಿರಲಿಲ್ಲ. ಅವನು ಆಗಾಗಗೋಪಾಲನ ಗುಡಿಸಲಿನೆದುರು ಬಂದು,‘ಏನಲೇ ಗೋಪಾಲ, ನೀನು ವಾರ ಪೂರ್ತಿ ಕೆಲಸಕ್ಕೆ ಯಾಕೆ ಬರುವುದಿಲ್ಲ ಮಾರಾಯಾ, ಹೊರಗೆ ದುಡಿಯುವುದಕ್ಕಾ ನಿನಗೆ ಮನೆ ಕೊಟ್ಟಿರುವುದು…?’ ಎಂದು ಗದರಿಸುತ್ತಿದ್ದ. ಆಗೆಲ್ಲ ಗೋಪಾಲನೂ,‘ಅಯ್ಯೋ ಹಾಗೆಲ್ಲ ಭಾವಿಸಬೇಡಿ ಧಣಿ, ನಿಮ್ಮಲ್ಲಿಯೇ ದುಡಿಯಲಿಕ್ಕೆ ಬಂದವರಲ್ಲವ ನಾವು. ಆದರೂ ಕೆಲವೊಮ್ಮೆ ನಿಮ್ಮ ತೋಟದಲ್ಲೂ ಕೆಲಸ ಕಮ್ಮಿ ಇರುತ್ತದಲ್ಲ ಆವಾಗ ಸಂಜೀವ ಶೆಟ್ಟರೋ ಡ್ಯಾನಿ ಪರ್ಬುಗಳೋ ತಮ್ಮ ಹೊಲ, ತೋಟಗಳ ಅಗತ್ಯದ ಕೆಲಸಕ್ಕೆ ಕರೆಯುತ್ತಾರೆ. ಹೋಗಿ ಮಾಡಿಕೊಟ್ಟು ಬರುತ್ತೇನಷ್ಟೆ. ಅವರೂ ನನ್ನ ಕಷ್ಟದ ಕಾಲದಲ್ಲಿ ಸಹಾಯ ಮಾಡುತ್ತಾರೆ. ಇಲ್ಲಿ ನಾನಿಲ್ಲದಿದ್ದರೂ ರಾಧಾ ಬರುತ್ತಾಳಲ್ಲ ಧಣಿ…!’ ಎಂದು ಅವನನ್ನು ಪುಸಲಾಯಿಸುತ್ತಿದ್ದ. ರಾಧಾಳ ಹೆಸರೆತ್ತುತ್ತಲೇ ಮುತ್ತಯ್ಯ ಮೃದುವಾಗುತ್ತಿದ್ದ. ಅವಳ ಸೌಂದರ್ಯಕ್ಕೆ ಅವನು ಯಾವತ್ತೋ ಮನ ಸೋತಿದ್ದ. ಎರಡು ಮಕ್ಕಳ ತಾಯಿಯಾಗಿ ಬಡತನದ ಬೇಗೆಯಲ್ಲಿ ಬೇಯುತ್ತಿದ್ದರೂ ಅವಳ ಮೋಹಕ ಚೆಲುವಿನ್ನೂ ಮಾಸಿರಲಿಲ್ಲ. ಹಾಲು ಬೆಳದಿಂಗಳಿನಂಥ ಅವಳ ರೂಪವು ಅವನನ್ನು ಹುಚ್ಚೆಬ್ಬಿಸುತ್ತಿತ್ತು.    ಹಾಗಾಗಿಗೋಪಾಲ ಬೆಳಿಗ್ಗೆ ಮನೆಯಿಂದ ಹೊರಡುವ ತನಕ ಅವನ ಸುಳಿವಿರುತ್ತಿರಲಿಲ್ಲ. ಅವನು ಸೈಕಲ್ ಹತ್ತಿ ‘ಹೋಗಿ ಬರುತ್ತೇನೆ ಮಾರಾಯ್ತೀ!’ ಎಂದು ಹೆಂಡತಿ ಮಕ್ಕಳಿಗೆ ಬೆಲ್ ಹೊಡೆದ ಸೂಚನೆ ದೊರೆತ ಕೂಡಲೇ ಮುತ್ತಯ್ಯನ ಸವಾರಿಯು ಗೋಪಾಲನ ಗುಡಿಸಲ ಮುಂದೆ ಪ್ರಕಟವಾಗುತ್ತಿತ್ತು. ಇವತ್ತೂ ಅದೇ ಚಪಲದಿಂದ ಬಂದಿದ್ದ. ಆದರೆ ಅಲ್ಲಿನ ದೃಶ್ಯವೊಂದು ಅವನ  ಮನಸ್ಸನ್ನು ಕೆಡಿಸಿಬಿಟ್ಟಿತು.  ‘ರಾಧಾ, ಹೇ, ರಾಧಾ ಎಲ್ಲಿದ್ದಿ ಮಾರಾಯ್ತೀ…! ಸ್ವಲ್ಪ ಹೊರಗೆ ಬಾ! ಇಲ್ಲಿ ನೋಡಿಲ್ಲಿ ನಿನ್ನ ಮಕ್ಕಳ ಅವಸ್ಥೆ! ಥೂ! ಹೊರಗೆಲ್ಲಾ ಹೇಸಿಗೆ ಮಾಡಿಟ್ಟಿದ್ದಾರೆ. ಏನಿದು ತೋಟದೊಳಗೆಲ್ಲಾ, ಭಾಷೆ ಬೇಡವಾ ನಿಮಗೆ! ಅವುಗಳನ್ನು ಕಕ್ಕಸಿನಲ್ಲಿ ಕೂರಿಸಲೇನು ದಾಡಿ ನಿಂಗೆ!’ ಎಂದು ಜೋರಾಗಿ ಸಿಡುಕಿದ. ರಾಧಾ ಅನ್ನಕ್ಕೆ ನೀರಿಡುತ್ತಿದ್ದವಳು ಮುತ್ತಯ್ಯನ ಒರಟು ಧ್ವನಿ ಕೇಳಿ ಆತಂಕದಿಂದ ಹೊರಗೆ ಬಂದಳು. ಮಕ್ಕಳಿಬ್ಬರೂ ತೋಟದ ಮೂಲೆಯಲ್ಲಿ ಕುಳಿತು ಪಂಚಾತಿಕೆ ಹೊಡೆಯುತ್ತ ಸಂಡಾಸು ಮಾಡುತ್ತಿದ್ದರು. ಆದರೆ ಮುತ್ತಯ್ಯನ ಕೆಕ್ಕರು ದೃಷ್ಟಿಗೆ ಹೆದರಿ ರಪ್ಪನೆದ್ದು ಅಪರಾಧಿಗಳಂತೆ ನಿಂತಿದ್ದರು. ರಾಧಾಳಿಗೆ ನಾಚಿಕೆಯಾಯಿತು. ಅವರತ್ತ ಹೋಗಿ ಕಿವಿ ಹಿಂಡಿ ಎಳೆದೊಯ್ದು ಒಳಗೆ ಬಿಟ್ಟು, ಆತುರಾತುರವಾಗಿ ಹೊರಗೆ ಬಂದು, ‘ತಪ್ಪಾಯ್ತು ಧಣಿ… ಮಕ್ಕಳು ಯಾವತ್ತೂ ಹೀಗೆ ಮಾಡಿದವರಲ್ಲ. ಇವತ್ತೇನಾಯಿತೋ?’ ಎಂದು ಸಂಕೋಚದಿಂದ ಹಿಡಿಯಾಗಿ ಕ್ಷಮೆಯಾಚಿಸಿದಳು. ಮುತ್ತಯ್ಯ ಅಷ್ಟಕ್ಕೇ ಮೆತ್ತಗಾದ. ‘ಹ್ಞೂಂ ಪರ್ವಾಗಿಲ್ಲ, ಬಿಡು. ಇನ್ನು ಮುಂದೆ ಅವು ಹಾಗೆ ಮಾಡದಂತೆ ನೋಡಿಕೋ. ಅವನೆಲ್ಲಿ ಹೋದ ಗೋಪಾಲ…? ತೋಟದ ಮಡಲು, ಕಾಯಿ ತಪ್ಪರಿಗೆಗಳನ್ನೆಲ್ಲಾ ಹೆಕ್ಕಿ ಮನೆಯತ್ತ ತಂದು ಹಾಕು ಅಂತ ಮೊನ್ನೆಯಿಂದ ಬೊಬ್ಬೆ ಹೊಡೆಯುತ್ತಿದ್ದೇನೆ. ಅವನಿಗದು ನಾಟುವುದೇ ಇಲ್ಲವಲ್ಲಾ! ಒಂದೋ ನೀನು ಹೆಕ್ಕಿ ಹಾಕು. ಇಲ್ಲಾ ಅವನು ಬಂದ ಕೂಡಲೇ ರಾಶಿ ಹಾಕಿಸು. ತೋಟ ನೋಡಲೇ ಬೇಸರವಾಗುತ್ತದೆ!’ ಎಂದು ಹೇಳುವಾಗ ಅವನ ದೃಷ್ಟಿ ಅವಳ ಎದೆಯ ಮೇಲೆ ನೆಟ್ಟಿತ್ತು. ಅಷ್ಟರಲ್ಲಿ ಮಕ್ಕಳಿಬ್ಬರೂ ಆಡಲು ತೋಟದತ್ತ ಓಡಿದರು.    ಅದನ್ನು ಕಂಡ ಮುತ್ತಯ್ಯ ಮೀಸೆಯಡಿಯಲ್ಲೇ ನಕ್ಕ. ರಾಧಾಳನ್ನು ಅನುಭವಿಸುವ ಬಯಕೆ ಮತ್ತೆ ಅವನಲ್ಲಿ ಹೆಡೆಯೆತ್ತಿತು. ಅವನ ಮುಖಭಾವವನ್ನು ಗಮನಿಸಿದ ರಾಧಾಳಿಗೆ ಭಯ, ಮುಜುಗರ ಒಟ್ಟೊಟ್ಟಿಗಾಯಿತು. ತಲೆತಗ್ಗಿಸಿ ಎದೆಯ ಭಾಗವನ್ನು ಸೆರಗಿನಿಂದ ಮತ್ತಷ್ಟು ಮುಚ್ಚಿಕೊಳ್ಳುತ್ತ, ‘ಆಯ್ತು ಧಣಿ. ಅವರು ಬಂದ ಕೂಡಲೇ ಹೇಳುತ್ತೇನೆ. ನನಗೆ ಮನೆ ಕೆಲಸವೇ ತುಂಬಾ ಇದೆ’  ಎಂದು ಹೇಳಿ ರುಮ್ಮನೆ ಒಳಗೆ ಹೋದಳು. ಬಳುಕುತ್ತ ಕಣ್ಮರೆಯಾದ ಅವಳ ಮೈಮಾಟವನ್ನು ಕಂಡ ಮುತ್ತಯ್ಯ ಉನ್ಮತ್ತನಾಗಿ, ‘ಆಯ್ತು… ಪರ್ವಾಗಿಲ್ಲ. ನೀನೇನೂ ಮಾಡಬೇಡ. ನಿನ್ನ ಕಷ್ಟ ನನಗಿಲ್ಲಿ ‘ಎದ್ದು’ ಕಾಣುತ್ತಿದೆ!’ ಎಂದು ಆಸೆಯಿಂದ ಹೇಳಿದವನು ಸ್ವಲ್ಪಹೊತ್ತು ಅಲ್ಲೇ ಅಂಗಳದಲ್ಲಿ ಸುತ್ತಾಡುತ್ತ ಯೋಚಿಸಿದ. ಥೂ! ಈದೇವರು ಬಡ ಹೆಂಗಸರಿಗೇ ಯಾಕೆ ನಮ್ಮಂಥ ಗಂಡಸರನ್ನು ಹುಚ್ಚೆಬ್ಬಿಸುವ ರೂಪ, ಲಾವಣ್ಯವನ್ನು ಕೊಡುತ್ತಾನೋ? ಇವರ ವನಪು ವೈಯ್ಯಾರಗಳೆಲ್ಲ ನಮ್ಮ ತಲೆ ಹಾಳು ಮಾಡಿ ಬಿಡುತ್ತವೆ ಕರ್ಮದ್ದು. ನನ್ನವಳೂ ಒಬ್ಬಳಿದ್ದಾಳೆ. ಆದರೆ ಪ್ರಯೋಜನವೇನುಬಂತು? ದರಿದ್ರವಳಿಗೆ ಯಾವಾಗಲೂ ಒಂದಲ್ಲಾ ಒಂದು ಕಾಯಿಲೆ! ಮೈಬಗ್ಗಿಸಿ ದುಡಿಯದೆ ಕೂತುಂಡು ಆನೆಮರಿಯಂತಾಗಿದ್ದಾಳೆ ಲೌಡಿ. ಅಂಥವಳ ಜೊತೆ ಏಗುವುದೋ ಬಿಡುವುದೋ ದೇವರಿಗೇ ಗೊತ್ತು!    ಆದರೆ ಮನೆ ಕೆಲಸದ ನಾಗವೇಣಿ ಕೆಳ ಜಾತಿಯವಳಾದರೂ ಎಷ್ಟೊಂದು ಪಸಂದಾಗಿದ್ದಾಳೆ. ನಾನೂ ಉಪ್ಪು ಹುಳಿ ಖಾರ ತಿನ್ನುವವನಲ್ಲವಾ! ಅದಕ್ಕೇ ಆವತ್ತೊಮ್ಮೆ ಆಗುವುದಾಗಲಿ ಎಂದುಕೊಂಡು ಅವಳನ್ನು ಬಾಚಿ ತಬ್ಬಿ ಕೊಂಡದ್ದು. ಅವಳು ರಂಪ ಮಾಡಿಬಿಡುತ್ತಾಳೇನೋ ಎಂದು ಭಾವಿಸಿದ್ದೆ. ಆದರೆ ನಡೆದದ್ದು ಬೇರೆಯೇ. ಮೊದಲಿಗೆ ಬೆಚ್ಚಿಬಿದ್ದು ದಿಟ್ಟಿಸಿದವಳು ತಕ್ಷಣ ಮೆದುವಾಗಿ ನಗುತ್ತ ತೋಳ ತೆಕ್ಕೆಗೆ ಬಿದ್ದುಬಿಟ್ಟಳು. ಆವತ್ತಿನಿಂದ ಒಂದಿಷ್ಟು ಸುಖ ಅವಳಿಂದ ಸಿಗದಿರುತ್ತಿದ್ದರೆ ಈ ಕಾಡುಹಂದಿಯನ್ನು ಕಟ್ಟಿಕೊಂಡು ನಾನೇನು ಮಾಡಬೇಕಿತ್ತೋ. ಆದರೆ ಆ ನಾಗಿಯ ಗಂಡ ಕುಡ್ಚೇಲ ಮಣಿಯಾಣಿಯ ದುಡ್ಡಿನ ಪೀಡನೆ ನೆನೆದರೆ ಮಾತ್ರ ಅವಳನ್ನೂ ಮುಟ್ಟುವುದು ಬೇಡ ಅಂತನ್ನಿಸುತ್ತದೆ! ಎಂದು ತಲೆಕೊಡವಿಕೊಂಡ. ಬಳಿಕ ಮತ್ತೆ, ಈ ರಾಧಾ ಸಖತ್ ಆಗಿದ್ದಾಳೆ. ನಾಗಿಯಷ್ಟು ಚಾಲಾಕಿನವಳೂ ಅಲ್ಲ. ಗೋಪಾಲನೂ ದುರಾಸೆಯ ಮನುಷ್ಯನಲ್ಲ. ಅವಕಾಶ ಸಿಕ್ಕಿದರೆ ಇವಳನ್ನೇ ಒಲಿಸಿಕೊಂಡು ಪರ್ಮನೆಂಟಾಗಿ ಇಟ್ಟುಕೊಳ್ಳಬೇಕು! ಎಂಬ ಯೋಚನೆಯಲ್ಲಿ ತೇಲಾಡುತ್ತ ಮೆತ್ತಗೆ ರಾಧಾಳ ಮನೆಯೊಳಗೆ ಅಡಿಯಿಟ್ಟ.    ಅಷ್ಟರವರೆಗೆ…

ಅಂಕಣ ಬರಹ ಊರೊಳಗೆ ಪಂಥ ರಣದೊಳಗೆ ಓಟವೆ ವಚನಕಾರರಲ್ಲಿ ಎಂಟು ಜನ ಮಾರಿತಂದೆ ಹೆಸರಿನವರು ಇದ್ದಾರೆ. ಅವರಲ್ಲಿ ಅರಿವಿನ ಮಾರಿತಂದೆಯೂ…

ಭಾವದಲೆಯಲಿ ಪ್ರೇಮರಾಗ ಅನಿತಾ ಪಿ. ಪೂಜಾರಿ ತಾಕೊಡೆ ಒಲವೇ ಹೀಗೆ ತರವೇಮೀಟು ಪ್ರೇಮ ಭಾವಗಳಾ… ಬಾನಲ್ಲಿ ನೋಡು ಮೇಘಗಳಾಬಾರೋ ಮಳೆಯಾಗುವಾ….…

ಪ್ರೀತಿಯ ಪಿಸುಮಾತು ಸರಿತಾ ಮಧು ಹೇಳಿಬಿಡಲೇನು ಮನದ ಇಂಗಿತವಸುತ್ತು ಬಳಸುವುದೇನು ನಿನ್ನೊಡನೆ ಬೆನ್ನಿಗಾತು ಕುಳಿತು ಪಿಸುಗುಟ್ಟುವಚಡಪಡಿಕೆ , ಬಚ್ಚಿಟ್ಟ ಮಾತುಗಳಿವುಉಳಿದ…

ಓ…ಪ್ರೇಮವೇ. ಶಿವಲೀಲಾ ಹುಣಸಗಿ ನಿನ್ನೆದೆಯ ಕುಲುಮೆಯಲಿ ಬೆಂದದ್ದೆ ಬಂತುಬಚ್ಚಿಟ್ಟ ಪ್ರೇಮವನೀಗ ಖಗಗಳು ಬಿಚ್ಚಿಟ್ಟುಬಾನಲಿ ಕಾಮನಬಿಲ್ಲು ಮೂಡಿದಂತಾತುಪ್ರೇಮದ ತಂಗಾಳಿಗೆ ಹೃದಯ ಸಿಕ್ಕು.ಕಂಗಳ…

ಪ್ರೇಮ ಪತ್ರ ಸ್ಮಿತಾ ರಾಘವೇಂದ್ರ ಕಣ್ಣಿಗೊಂದು ಕನ್ನಡಕ ಏರಿಸಿಕೊಂಡುಅದರ ಪ್ರೇಮ್ ಹಿಡಿದುಮೇಲೆ ಕೆಳಗೆ ಮಾಡುತ್ತಹಳೆಯ ಟ್ರಂಕಿನ ಬಂಗಾರದಭದ್ರತೆಯಿಂದ ಹೊರಬಂದಓಲೆ. ಕೊರಳ…

ಹೇಗೆ ಪ್ರೀತಿಸಲಿ? ಬೆಂಶ್ರೀ ರವೀಂದ್ರ ಹುಡುಗಿ ಕೇಳಿದಳುಹೂವು ಬಿರಿಯುವ ಸದ್ದುನಿನಗೆ ಕೇಳಿಸಿತೇನು ಹುಡುಗ‘ಇಲ್ಲವಲ್ಲ ಹುಡುಗಿ’ಹಾಗಾದರೆ ಹೇಳುಹೇಗೆ ಪ್ರೀತಿಸಲಿ ನಿನ್ನ! ತುಂಬು…

ಅಮೂರ್ತ ಮಮತಾ ಶಂಕರ್ ಅವನೆಂದೂ ನನ್ನೊಂದಿಗೆ ಮಾತಾಡಿ ನನ್ನ ಸುತ್ತ ತಿರುಗಿಪ್ರೇಮಗೀಮ ಎಂದು ಹಾಡಿ ಕುಣಿಯುತ ಕಥೆಯಾಗಲಿಲ್ಲಆದರೆ ಮೌನ ವೀಣೆಯ…