ಅಮ್ಮಂದಿರ ದಿನದ ವಿಶೇಷ- ಬರಹ

ಅಮ್ಮಂದಿರ ದಿನದ ವಿಶೇಷ- ಬರಹ

ಅಮ್ಮನದಿನ          ಎನ್.ಶೈಲಜಾ ಹಾಸನ   ಕಳೆದ ವರ್ಷವಷ್ಟೆ ಅಮ್ಮನ ದಿನ ಆಚರಿಸಿದೆವು.ಈ ವರ್ಷವೂ ಅಮ್ಮಂದಿರ ದಿನ ಬಂದಿದೆ. ಅಮ್ಮನಿಗಾಗಿ ಒಂದು ದಿನವೇ ಎಂದು ಹುಬ್ಬೇರಿಸುವವರ ನಡುವೆಯೂ ಅಮ್ಮನನ್ನು ನೆನೆಸಿಕೊಂಡು ಅಮ್ಮನಿಗಾಗಿ ಉಡುಗರೆ ನೀಡಿ ಅಮ್ಮನ ಮೊಗದಲ್ಲಿ ಸಂತಸ ತುಂಬಿzವರು, ಅಮ್ಮನ ದಿನ ಮಾತ್ರವೇ ನೆನಸಿಕೊಂಡು ಅಮ್ಮನ ದಿನ ಆಚರಿಸಿದವರೂ, ತಮ್ಮ ಜಂಜಾಟದ ನಡುವೆ ಅಮ್ಮನನ್ನೆ ಮರೆತವರೂ, ಈ ಅಮ್ಮಂದಿರ ದಿನದ ಆಚರಣೆಗಳೆÉಲ್ಲ ನಮ್ಮ ಸಂಸ್ಕ್ರತಿ ಅಲ್ಲ, ನಾವೂ ದಿನವೂ ಅಮ್ಮನನ್ನು ಜೊತೆಯಲ್ಲಿಯೇ […]

ಅಮ್ಮಾ ಎಂಬ ಬೆಳದಿಂಗಳು

ಅಮ್ಮಾ ಎಂಬ ಬೆಳದಿಂಗಳು ನಾಗರೇಖಾ ಗಾಂವಕರ ಅಮ್ಮಾ! ಅಂದ ಕೂಡಲೇ ಅದೇನೋ ಮಧುರವಾದ ಭಾವ ಎದಗೂಡಲ್ಲಿ ಚಕ್ಕನೇ ಸುಳಿದಂತಾಗುತ್ತದೆ. ಆಪ್ತವಾದ ಹೃದಯವೊಂದರ ಬಡಿತ ದೂರದಲ್ಲಿದ್ದರೂ ನಮ್ಮ ಹತ್ತಿರವೇ ಸುಳಿದಾಡುತ್ತಿದೆ ಎಂಬಂತೆ ಭಾಸವಾಗುತ್ತದೆ. ಮಗಳಿಗೆ ಇಷ್ಟವೇನು? ಕಷ್ಟವೇನು ಎಂಬುದನ್ನು ನನ್ನಮ್ಮ ಅರಿತುಕೊಂಡಿದ್ದಳೇ? ಕೆಲವೊಮ್ಮೆ ಅನ್ನಿಸುತ್ತಿತ್ತು. ಅಮ್ಮನಾಗುವುದೆಂದರೆ ಆ ಪರಿಯ ಜವಾಬ್ದಾರಿಯೇ!  ನನ್ನಮ್ಮನೇಕೆ ಸಣ್ಣದಕ್ಕೂ ರೇಗುತ್ತಾರೆ? ಯಾಕೆ ನನ್ನ ಹುಟ್ಟಿಸಿಕೊಳ್ಳಬೇಕಿತ್ತು. ಬೈಯುವುದಾದರೂ ಏಕೆ? ಅಮ್ಮ ಬೈದಾಗ ತಂದೆ ಬೆಂಬಲಿಸುತ್ತಿದ್ದರೂ ಅಮ್ಮ ಅದಕ್ಕೂ ಹುಸಿಮುನಿಸು ತೋರುತ್ತಿದ್ದಾಗ  ಅಮ್ಮ ! ನಿನಗೆ ಹೊಟ್ಟೆ […]

ಕಾವ್ಯಯಾನ

ಕ್ವಾರೆಂಟೈನ್ ಹಾಯ್ಕುಗಳು. ಪ್ರಮೀಳಾ ಎಸ್.ಪಿ. ಕರೊನಾಕ್ಕೆ ಕಾರಣವಂತೆ ಶಾಂಗ್ಲಿ ಮತ್ತವಳ ಬಾವಲಿ ನರಳುತ್ತಿರೋದು ಮಾತ್ರ ಇಟಲಿಯ ಇಲಿ. ಸತ್ತರಂತೆ ಅಮೆರಿಕಾದಲ್ಲಿ ಅಷ್ಟೊಂದು ಜನ. “ಹೊಯ್” ! ಟೀವಿಯಲ್ಲಿ ಮಾರಾಯ… ಎಂದು ಅಡ್ಡಾಡಿದರು ನಮ್ಮೂರ ಜನ . ಸುರರೇ ಕುಡಿಯುತ್ತಿದ್ದರು ಎಂಬ ನೆಪ ಕುಡುಕರದ್ದು ಕೇಳದಿದ್ದರೂ ನೀಡಿದವರು ಹೇಳಲಾರದ ನೆಪ ‘ಗಲ್ಲ’ದ್ದು. ಕಂಠ ಪೂರ್ತಿ ಕುಡಿದು ಅಪ್ಪ ಅಮ್ಮನಾದರು ಬೆತ್ತಲು ಕಣ್ಣು ಬಿಟ್ಟ ಮಗುವಿನ ಮನದಲ್ಲೀಗ ಕತ್ತಲು. ಕೇಳುವರೆಲ್ಲ ತೆರೆಯಲೆಂದು ಅವರವರ ಆದಾಯದ ಬಾಗಿಲು ತೆರೆಯಿರಿ ಎಂದು ಕೇಳುವುದೇ […]

ಕಾವ್ಯಯಾನ

ಹೆಣ್ಣಿನಂತರಾಳ ವಾಣಿ ಮಹೇಶ್ ಮಮತೆಯ ಮಡಿಲಲ್ಲಿ ಮಮತೆಯ ಕಾಣದೆ ಮರುಗುವುದ ಕಲಿತೆ ಮರುಳ ಮನಸು ಅರಿಯದೆಲೆ ಆಸೆಗಳು ಕಂಗಳ ತುಂಬಿವೆ / ಕೊರಳುಬ್ಬಿ ಕಂಗಳ ಕಂಬನಿ ಜಾರಲು.. ಹೆದರಿ ಅಲ್ಲೇ ಅವಿತು ತನ್ನಿರವ ಸೂಚಿಸಿದೆ / ಪ್ರೇಮಮಯಿ ಮಾತೆ ತನ್ನಿರವ ಮರೆತಳು ನಾ ಬರೆದ ರಾಗಕೆ ಸ್ವರವೇ ಇಲ್ಲವಾಗಿಸಿಹಳು ತಂತಿ ಕಡಿದು ಜೀವವೀಣೆ ಜೀವಚ್ಛವವಾಗಿದೆ/ ರಾಗಾಲಾಪಗಳು ಶೋಕದಿ ಬಿಕ್ಕುತಿವೆ ಬಯಸಿದ ಮಮತೆ ದೂರ ಸಾಗಿ ಹೋಗಿದೆ.. ಕಾಣದಾ ಲೋಕಕೆ ನೆನಪು ಹಚ್ಚ ಹಸಿರಾಗಿ ಬೊಬ್ಬಿಡುತಿದೆ / ಮೌನ […]

ಕಾವ್ಯಯಾನ

ಅಂತಃಶುದ್ಧಿಯ ಸಮಯ…!! ಅರ್ಚನಾ ಹೆಚ್ ಜಾತಿ ಧರ್ಮಗಳ ಸುಳಿಯಲರಳಿದ ಕುಸುಮಗಳಿಂದು‌ ಶಿವಪೂಜೆಗೊದಗದೆ ಬರಿದೆ ಬಾಡಿದ ಬೆರಗು..!! ಹೆತ್ತ ಮಡಿಲಲಿ ಮತ್ತೆ ಕೂಸುಗಳು..! ಬದುಕಿದರೂ ಸತ್ತರೂ ಅವಳೊಡಲೇ ಗಮ್ಯ.. ಮಣ್ಣಾಗಬಾರದವುದೆಂಬುದೊಂದೇ ತಾಯಿ ಹರಕೆ..!! ನಾನು ನನ್ನಂದೆಂಬ ತುಂಬು ಗರ್ವದಲಿದ್ದೆ..!!?? ಮತ್ತೆ ಮೇಲಿಹನಾಗ್ರಹ..! ಕಣ್ಣೆವೆಯಿಕ್ಕದೆ ದಿಟ್ಟಿಸಿ ನೋಡು..! ಸ್ವಾರ್ಥ ದುರಾಗ್ರಹದ ಪೀಡೆಯೊಳಾಡಿದ ಮರುಳ ಮಾನವರಿಗಿದೇಟು! ರಣತಂತ್ರ!! ವಿಕೃತ ಮನಸ್ಥಿತಿಗಳಾಟ! ವಿಶ್ವವ್ಯಾಪಿ ಬೀಸಿ ಚಾಟಿಯೇಟು..!! ಧನವೋ! ಋಣವೋ!?? ಶಕ್ತಿಯಾಟದಲಿ ಸತ್ತವರ ಲೆಕ್ಕಗಳು ಸರ್ವವ್ಯಾಪಿ! ಮೃತ್ಯು ಕಡುಕೋಪಿ..!! ಮಾತೃಭೂಮಿಯ ಸೊಗಡು ಭಕ್ತಿ ಮರೆತವಗೆ […]

ಕಥಾಯಾನ

 ಒಂದು ಹನಿ ನೀರಿನ ಕಥೆ ಜ್ಯೋತಿ ಬಾಳಿಗಾ ಸದಾಶಿವ ರಾಯರಿಗೆ ಆರೋಗ್ಯದಲ್ಲಿ ತೊಂದರೆ ಆಗಿ ಆಸ್ಪತ್ರೆಗೆ ಸೇರಿಸಿದ್ದಾರಂತೆ. ಹಳ್ಳಿಯಿಂದ ನಿನ್ನ ಮಾವನ ಪೋನು ಬಂದಿತ್ತು ಸಚಿನ್. ರಾಯರು ಹೇಗಿದ್ದಾರೆ ಅಂತ ಒಮ್ಮೆ ನೋಡಿಕೊಂಡು ಬರೋಣ ಅಂದರೆ ಅಷ್ಟು ದೂರ ಪ್ರಯಾಣ ನನ್ನಿಂದ ಸಾಧ್ಯವಿಲ್ಲ ಮಗನೇ….ನಿನ್ನ ವಿದ್ಯಾಭ್ಯಾಸಕ್ಕೆ ತುಂಬಾ ಸಹಾಯ ಮಾಡಿದ್ದಾರೆ ರಾಯರು. ನೀನಾದರೂ ಅವರ ಬಗ್ಗೆ ವಿಚಾರಿಸಿಕೊಂಡು ಬಾ ಎಂದು ಅಪ್ಪಾಜಿ ಹೇಳಿದಾಗ,ಆಸ್ಪತ್ರೆ ಎಂದರೆ ಮಾರು ದೂರ ಓಡುವ ನನಗೆ ಏನು ಮಾಡುವುದೆಂದು ತಿಳಿಯದೇ ಹುಂಗುಟ್ಟಿದೆ. ಊರಿಗೆ […]

ಕಥಾಯಾನ

ಸುನಂದಾಬಾಯಿ ಕೊಡ ಮಲ್ಲಿಕಾರ್ಜುನ ಕಡಕೋಳ ಸುತ್ತ ನಾಕಿಪ್ಪತ್ತು ಹಳ್ಳಿಗಳಲ್ಲಿ ಅವರ  ಬಡತನ ಪ್ರಸಿದ್ದವಾಗಿತ್ತು.  ತಲೆಮಾರುಗಳಿಂದ ಶೀಲವಂತರ  ಸುನಂದಾಬಾಯಿ ಭಗವಂತ್ರಾಯ  ದಂಪತಿಗಳು ಪಡೆದುಕೊಂಡ  ಆಸ್ತಿಯೆಂದರೆ ಕಿತ್ತುತಿನ್ನುವ ಬಡತನ.  ಅದನ್ನೇ ಹಾಸುಂಡು ಬೀಸಿ  ಒಗೆಯುವಂತಿತ್ತು. ಅವರೂರು  ಮಾತ್ರವಲ್ಲ. ಸುತ್ತ ಹತ್ತಾರು ಹಳ್ಳಿಯ ಮಂದಿ ಘೋರ ಬಡತನದ ಬಗ್ಗೆ  ಮಾತಾಡುವಾಗ ಶೀಲವಂತರ ಭಗಂತ್ರಾಯರ ಬಡತನ ಉಲ್ಲೇಖಿಸದೇ ಇರಲಿಕ್ಕೆ  ಸಾಧ್ಯವಿರುತ್ತಿರಲಿಲ್ಲ.   ಅವರು ಉಪವಾಸದ ದಿನಗಳನ್ನು  ನೆನಪಿಡುತ್ತಿರಲಿಲ್ಲ., ಅಂಬಲಿ ಕುಡಿದ  ದಿನಗಳನ್ನು ನೆನಪಿಡುತ್ತಿದ್ದರು. ಈ  ದಿನಗಳೇ ಅಪರೂಪ. ಸಜ್ಜೆ ಹಿಟ್ಟಿನ  ಗಂಜಿಗೆ ರುಚಿ ಬರಲೆಂದು ಸೇರಿಸಲು  ” ಉಪ್ಪಿಗೂ ” ಅವರಲ್ಲಿ ಬಡತನವಿತ್ತು.  ಅಂತೆಯೇ ಉಪವಾಸದ ದಿನಗಳೇ  ಹೇರಳ. ಗಂಜಿ ಕುಡಿದ ದಿನಗಳೇ ವಿರಳ. ಸುನಂದಾಬಾಯಿಗೆ ಜಾಂಬಳ ಬಣ್ಣದ  ಒಂದೇ ಒಂದು ಸೀರೆ ಇತ್ತು. ಮೈ ಮೇಲಿನ  ಆ ಒಂದು ಸೀರೆಯನ್ನು ಜಳಕ  ಮಾಡುವಾಗ ಅರ್ಧರ್ಧ ತೋಯಿಸುತ್ತಾ ಒಣಗಿಸಿಕೊಳ್ಳುತ್ತಿದ್ದಳು. ಅಷ್ಟಕ್ಕೂ ಆಕೆ ಹೊಲಕ್ಕೆ ಹೋದಾಗ ನಿರ್ಜನ ಕರ್ಮನಹಳ್ಳದಲ್ಲಿ ಜಳಕ ಮಾಡುತ್ತಿದ್ದಳು. ಕೂಲಿನಾಲಿ ಮಾಡುವಾಗ ಸೀರೆ, ಗಿಡಗಂಟಿಗಳಿಗೆ ತಾಗದಂತೆ ಮತ್ತು ಕುಂತೇಳುವಾಗ  ಜಿಗಿಸತ್ತ ಸೀರೆ ಟಸಕ್ಕನೆ ಹರಿದು  ಹೋಗದಂತೆ ಕಟ್ಟೆಚ್ಚರ ವಹಿಸುತ್ತಿದ್ದಳು. […]

ಕಾವ್ಯಯಾನ

ಗಝಲ್ ವೆಂಕಟೇಶ ಚಾಗಿ ಆಕಾಶವನು ಮುಟ್ಟುವೆನು ಒಂದು ದಿನ ಚಿಂತಿಸದಿರು ಅಪ್ಪ ನೆಲದ ಮೇಲಿನ ಡೊಂಬರಾಟದ ಬದುಕಿಗೆ ಚಿಂತಿಸದಿರು ಅಪ್ಪ || ನಿನ್ನ ಬಲವನೆಲ್ಲ ಸೇರಿಸಿ ಆಕಾಶಕ್ಕೊಮ್ಮೆ ಚಿಮ್ಮಿ ಬಿಡು ನಿನ್ನ ನನಸುಗಳ ಹೊತ್ತು ತರುವೆ ನೋಡುತಿರು ಅಪ್ಪ || ಹಸಿವಿನ ಆಟವನು ನೋಡಲು ನೆರೆಯುವರು ನಾಟಕದ ಮಂದಿ ನಿನ್ನಾಟದ ಗತ್ತು ಗಮ್ಮತ್ತುಗಳ ತೋರಿಸುವುದ ಮರೆಯದಿರು ಅಪ್ಪ || ಚಂದ್ರಮನ ತೋರಿಸಿ ಅಮ್ಮ ತುತ್ತು ಉಣಿಸುವಳು ಅಷ್ಟೇ ತುತ್ತುಗಳ ಕೂಡಿಡಲು ನನ್ನ ಎಂದಿಗೂ ಕಡೆಗಣಿಸದಿರು ಅಪ್ಪ || […]

ಲಹರಿ

ಮತ್ತೊಮ್ಮೆ ನಿನ್ನ ಭೇಟಿಯಾಗುವೆ. ಅಮೃತಾ ಪ್ರೀತಮ್ ಶೀಲಾ ಭಂಡಾರ್ಕರ್ मैं तैनू फ़िर मिलांगी. ಅಮೃತಾ ಪ್ರೀತಂ ತಾನು ಸಾಯುವ ಮೊದಲು ಇಮ್ರೋಜ್‍ನಿಗಾಗಿ ಪಂಜಾಬಿಯಲ್ಲೊಂದು ಕವಿತೆ ಬರೆದಳು. ಪ್ರತಿಯೊಂದು ಶಬ್ದವೂ ಪ್ರೀತಿಯನ್ನು ತುಂಬಿಸಿಕೊಂಡು ಕವಿತೆಯಾಗಿತ್ತು. ಅಮೃತಾ ಒಂದು ವಿಶಿಷ್ಟ ವ್ಯಕ್ತಿತ್ವ. ಹದಿನಾರನೆ ವಯಸ್ಸಿನಲ್ಲೇ ಮನೆಯವರು ನಿಶ್ಚಯಿಸಿ ಪ್ರೀತಮ್ ಸಿಂಗ್ ಜತೆ ಮದುವೆ ಮಾಡಿದ್ದರೂ ಆ ಮದುವೆ ಊರ್ಜಿತವಾಗಲಿಲ್ಲ. ನಂತರದ ದಿನಗಳಲ್ಲಿ ಬರವಣಿಗೆಯಲ್ಲಿ ತನ್ನನ್ನು ವಿಶೇಷವಾಗಿ ಈ ಜಗತ್ತಿಗೆ ಪರಿಚಯಿಸಿಕೊಂಡ ಅಮೃತಾ ಲಾಹೋರ್ ವಿಭಜನೆಯ ಸಮಯದಲ್ಲಿ ಆ ಕಾಲದ […]

ಕಾವ್ಯಯಾನ

ಗಝಲ್ ಪ್ರತಿಮಾ ಕೋಮಾರ ಕಹಿಯೂರಲ್ಲೊಂದು ಸಿಹಿ ಗಿಡವ ನೆಡುವ ಸಹಕರಿಸು ಬಂದು ನೆಟ್ಟ ಗಿಡಕೆ ಜೀವ ಜಲ ಕೊಟ್ಟು ಪೊರೆಯುವ ಸಹಕರಿ‌‌ಸು ಬಂದು ಬಾಗಿ ಬಸವಳಿದು ಉರುಳಿದ ಜೀವಕೆ ಸಾಂತ್ವನವೇ ಮದ್ದು ಮಾನವತೆಯ ನೆಲೆಯಲ್ಲಿ ಮಮತೆಯನು ಹನಿಸುವ ಸಹಕರಿಸು ಬಂದು ಕೋಟೆಗಳ  ಕಟ್ಟಿ ಹಕ್ಕಿಯೆಂದಾದರೂ ತನ್ನ ಬಂಧಿಸಿಕೊಂಡೀತೇ? ಮನಗಳ ನಡುವೆ ಹಬ್ಬಿರುವ ಬೇಲಿಯನು ಕಡಿಯುವ ಸಹಕರಿಸು ಬಂದು ಸ್ವಾಥ೯ದ ಮಾರುಕಟ್ಟೆಯಲ್ಲಿ ಬಿಕರಿಯಾಗುವವು ಬರೀ ಸ್ವಾಥ೯ಗಳೇ ನಿಸ್ವಾಥ೯ತೆಯ ದೀಪ ಹಚ್ಚಿ ಬದುಕ ಬೆಳಗುವ ಸಹಕರಿಸು ಬಂದು ಗಂಧಕ್ಕೆ ಮುಚ್ಚಿ,ಬಿಚ್ಚಿ,ಬೊಬ್ಬೆ ಹೊಡೆವ […]

Back To Top