ಯುಗ ಯುಗಾದಿ ಕಳೆದರೂ..!

ಯುಗ ಯುಗಾದಿ ಕಳೆದರೂ..!

ಯುಗಾದಿ ವಿಶೇಷ ಬರಹ ಯುಗ ಯುಗಾದಿ ಕಳೆದರೂ..! ಯುಗ ಯುಗಾದಿ ಕಳೆದರೂ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ.                     ಹೊಂಗೆ ಹೂವ ತೊಂಗಳಲಿ,                     ಭೃಂಗದ ಸಂಗೀತ ಕೇಳಿ                     ಮತ್ತೆ ಕೇಳ ಬರುತಿದೆ.                     ಬೇವಿನ ಕಹಿ ಬಾಳಿನಲಿ                     ಹೂವಿನ ನಸುಗಂಪು ಸೂಸಿ                     ಜೀವಕಳೆಯ ತರುತಿದೆ. ವರುಷಕೊಂದು ಹೊಸತು ಜನ್ಮ, ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ. ಒಂದೇ ಒಂದು […]

ಗಜಲ್

ಗಜಲ್ ಅಶೋಕ ಬಾಬು ಟೇಕಲ್ ಹಾಲುಂಡ ಹಸುಳೆಯೇ ಹದ್ದಂತೆ ಕುಕ್ಕಿ ಕುಕ್ಕಿ ತಿನ್ನುತ್ತಿದೆ ಈಗಹೊತ್ತೊತ್ತಿಗೂ ಮಡಿಲೇರಿದ ಕೂಸೇ ಕಾಳ ಸರ್ಪದಂತೆ ಬುಸುಗುಟ್ಟುತ್ತಿದೆ ಈಗ ನಿತ್ರಾಣಗೊಂಡು ಪಾತಾಳ ತುಳಿದಾಗ ಕೈ ಹಿಡಿದು ಮೇಲೆತ್ತಿದ್ದೆಕೃತಜ್ಞತೆಯ ಮರೆತು ನೇಣು ಕುಣಿಕೆ ಹುರಿಗೊಳಿಸುತ್ತಿದೆ ಈಗ ಮಾನವೀಯತೆ ಮುಂದೆ ಮಿಕ್ಕೆಲ್ಲವೂ ಗೌಣವೆಂದೇ ಭಾವಿಸಿದ್ದೆಅದೇ ಮಾನವೀಯತೆಗೆ ಚಟ್ಟ ಕಟ್ಟಿ ಬೀದಿಗಿಟ್ಟು ಹರಾಜಾಕುತ್ತಿದೆ ಈಗ ಊರಿಗೆ ಊರೇ ಅಪಸ್ವರದ ಕೊಳಲು ನುಡಿಸುತಿತ್ತು ಅಲ್ಲಿ !ಬುದ್ಧ ಸಾಗಿ ಬಂದ ಹಾದಿಯೂ ಮುಳ್ಳುಗಳನು ಮೊಳೆಸುತ್ತಿದೆ ಈಗ ಈಚಲು ಮರದ ನೆರಳು […]

ಒಳಿತಿನ ಉಣಿಸಿನ ಕಥೆಗಳು…

ಪುಸ್ತಕ ಸಂಗಾತಿ ಒಳಿತಿನ ಉಣಿಸಿನ ಕಥೆಗಳು… “ಚಮತ್ಕಾರಿ ಚಾಕಲೇಟ” “ಚಮತ್ಕಾರಿ ಚಾಕಲೇಟ” ಮಕ್ಕಳ ಕಥಾಸಂಲನ.ಲೇಖಕರು: ಸೋಮು ಕುದರಿಹಾಳ.ಬೆಲೆ:100ರೂ.ಪ್ರಕಟಣೆ:2020.ಪ್ರಕಾಶಕರು: ತುಂಗಾ ಪ್ರಕಾಶನ ಚಂದಾಪುರ. ಗಂಗಾವತಿ.9035981798 ಸೋಮು ಕುದರಿಹಾಳ ಮಕ್ಕಳ ಪ್ರೀತಿಯ ಶಿಕ್ಷಕರಾಗಿ ನಮಗೆಲ್ಲಾ ಪರಿಚಿತರು. ಅವರನ್ನು ನಾನಿನ್ನೂ ಮುಖತಹ ಭೆಟ್ಟ ಆಗಿಲ್ಲವಾದರೂ ಅವರ ಬರಹ, ಅವರು ಶಾಲೆಯಲ್ಲಿ ನಡೆಸುತ್ತಿರುವ ಪ್ರಯೋಗಗಳು. ಒಂದು ಪುಟ್ಟ ಸರಕಾರಿ ಶಾಲೆಯನ್ನು ಮಕ್ಕಳ ಎಲ್ಲ ಒಳಿತಿನ ಕಡೆಗೆ ಅಣಿಗೊಳಿಸುತ್ತಿರುವ ರೀತಿ ಎಲ್ಲ ಗಮನಿಸುತ್ತ ಅವರ ಸ್ನೇಹದ ವರ್ತುಲದಲ್ಲಿ ನಾನೂ ಸೇರಿ ಹೋಗಿದ್ದೇನೆ. ಅವರು ಈಗ […]

ಕವಿತೆ ಮತ್ತೆ ಯುಗಾದಿ ಹೊಸ ವರ್ಷವ ಸ್ವಾಗತಿಸುತ ಬಂದಿದೆ ಯುಗಾದಿಯುಗ ಯುಗಗಳ ಹೊಸ ಪಲ್ಲವಿಯನು ಹಾಡಿ. ಮಾರನ ಹೂ ಬಾಣದ ಜುಮ್ಮೆನ್ನುವ ಅಮಲುಪ್ರತಿ ಹೃದಯದ ಮೇಲೆರಗಿದೆ ಮೈಗಂಧದ ಘಮಲು. ಎಲೆಯುದುರುವ ಕಾಡಲ್ಲಿ ಚಿಗುರಿನ ದನಿ ಹಾಡುಪ್ರತಿ ಗಿಡಗಳು ಹಸಿರುಟ್ಟಿವೆ ಹೂ ಬಟ್ಟೆಯ ನೋಡು. ಹೂ ಹೂಗಳ ಕೇಸರದಲಿ ದುಂಬಿಯ ಹೂ ಮುತ್ತುಗಿಡ ಮರಗಳು ಅನುಭವಿಸಿವೆ ಪ್ರಣಯದ ನಶೆ ಮತ್ತು! ಒಣ ಶಿಶಿರವು ಚೇತರಿಸದು ಹೂ ಚೈತ್ರದ ಹೊರತುವನಮಾಲಿಯ ಅಡಿ ಅಡಿಯಲು ಮಧು ಮಾಸದ ಗುರುತು. ಪ್ರತಿ ಕಾಡಲು […]

ಯುಗಾದಿ ವಿಶೇಷ ಬರಹ ಯುಗಾದಿಯೆಂಬ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಹೇಳುವುದು ಪ್ರಮುಖವಾಗಿ ಭಾಷೆ,  ಆಚರಣೆ-ಸಂಪ್ರದಾಯಗಳು, ಉಡುಗೆ-ತೊಡುಗೆ, ಆಹಾರ ಮೊದಲಾದವುಗಳಿಗೆ ಸಂಬಂಧಿಸಿದಂತೆ . ಇಲ್ಲಿನ  ವೈವಿಧ್ಯತೆ ಎಷ್ಟೆಂದರೆ  ರಾಜ್ಯ ರಾಜ್ಯಗಳ ನಡುವಿನ ಮಾತಿರಲಿ, ಅಕ್ಕಪಕ್ಕದ ತಾಲೂಕುಗಳಲ್ಲಿ, ಊರುಗಳಲ್ಲೇ ಭಿನ್ನತೆಯನ್ನು ಕಾಣಬಹುದು.   ಆದರೆ ಕಳೆದ 2 ದಶಕಗಳಿಂದ ಇಂಥ ಪ್ರಾದೇಶಿಕ ಭಿನ್ನತೆಗಳು ಬದಲಾಗುತ್ತಿವೆ  ಅಥವಾ  ಕೆಲವು  ಇಲ್ಲವಾಗಿವೆ. ಇದಕ್ಕೆ ಬಹುಮುಖ್ಯ ಕಾರಣ ದೊಡ್ಡ ಪಟ್ಟಣ ಹಾಗೂ ಶಹರಗಳಿಗೆ ಉದ್ಯೋಗ ಹಾಗೂ  ಜೀವನ ನಿರ್ವಹಣೆಯ ದಾರಿಗಳನ್ನು ಅರಸುತ್ತ […]

ಯುಗಾದಿ ವಿಶೇಷ ಬರಹ ಕೊನೆಗೂ ಸಿಕ್ಕ ಸದ್ಗುರು 1993 – 94 ರ ಮಾತದು. ನಾವಾಗ ಖಾಸಗಿ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಾಗ ವಿಜ್ಞಾನ ವಿಷಯ ಬೋಧಿಸಲು ಹೊಸ ಶಿಕ್ಷಕರೊಬ್ಬರ ಆಗಮನವಾಯಿತು. ಹಳ್ಳಿ ಶಾಲೆ. ಹಳ್ಳಿ ಹುಡುಗರಾಗಿದ್ದ ನಮಗೆ ಅವರ ಮಾತು – ಕತೆ, ರೀತಿ – ನೀತಿ & ಎಲ್ಲಕ್ಕೂ ಮಿಗಿಲಾಗಿ ಅವರ ಸ್ಟೈಲ್ ಅತ್ಯಾಕರ್ಷಿಸಿತು. ಮೊದಲ ನೋಟದಲ್ಲೇ ವಿದ್ಯಾರ್ಥಿಗಳ ಮನ ಗೆದ್ದ ಅವರು ನಮ್ಮ ಪಾಲಿಗೆ ಸ್ಟೂಡೆಂಟ್ ಐಕಾನ್ ಎನಿಸಿದರು.  ಅವರು ಪಾಠ ಹೇಳುತ್ತಿದ್ದ […]

ಯುಗಾದಿ ವಿಶೇಷ ಬರಹ ಯುಗಾದಿ ಯುಗಾದಿ        ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಒಂದು ಅತ್ಯುನ್ನತ ಸಾಂಸ್ಕೃತಿಕ ಮಹತ್ವವಿದೆ. ಆದುದರಿಂದಲೇ ಭಾರತೀಯರು ತಮ್ಮ ಹೊಸವರುಷದ ದಿನವೂ ಯುಗಾದಿಯ ದಿನದಿಂದಲೇ ಆರಂಭವಾಗುತ್ತದೆ ಎಂದು ನಂಬುತ್ತಾರೆ. ಗ್ರಾಮೀಣರ ಆಡುಮಾತಿನ ಲ್ಲಿ ಹೇಳುವುದಾದರೆ ಯುಗಾದಿಯು ‘ಉಗಾದಿ’ ಎನಿಸಿಕೊಳ್ಳುತ್ತದೆ. ಯುಗಾದಿ ಹಬ್ಬ ಶಿಶಿರ ಋತು ಕಳೆದು ವಸಂತನಾಗಮನದ ಮೊದಲ ಹಬ್ಬ. ಇದು ಭಾರತೀಯರ ಪಾಲಿಗೆ ನವಮನ್ವಂತರ, ಅಲ್ಲದೆ ಇದು ಭಾರತೀಯರಾದ ನಮ್ಮ ಪಾಲಿಗೆ ಹೊಸ ವರುಷದ ಮೊದಲ ದಿನ.     […]

ಯುಗಾದಿ ವಿಶೇಷ ಬರಹ ಯುಗಾದಿಯ ಸವಿ ಅಲ್ರಿ..ನನಗೊಂದು ಹೊಸ ಸೀರಿಬೇಕು.ಯಾಕಂದ್ರ ಹೊಸ ವರ್ಷದ ಸಂಭ್ರಮಕ ಎಲ್ಲವೂ ಹೊಸದಾಗಿರಬೇಕು ಅನ್ನು ತ್ತಿದ್ದರು ಅವನೇನು ತಲಿ ಕೆಡಸಿಕೊಂಡಿರಲಿಲ್ಲ. ಅಲ್ಲೆ ಕಪಾ ಟ ತುಂಬ ಇರೋ ಸಾರಿ ಮೊದಲ ಉಟ್ಟ ಹರಿ,ಆ ಮ್ಯಾಲೆ ಹೊಸಾದು ತಗೊಳಾಕಂತ. ಸುಮ್ಮನ ಯಾಕ ಖರ್ಚು ಎಷ್ಟ ರ ಜಿಪುಣ‌ ಅದಿರಿ ನೀವು? ನಾ ಎನಾರ ಬಂಗಾರ ಕೇಳಿನೇ ನು? ಅದನಂತೂ ಹಾಕ್ಕೊಂಡು ಅಡ್ಡಾಡೋ ಯೋಗ ಇಲ್ಲ ನನಗ.ಬರಿ ಸೀರಿವಳಗಾದ್ರೂ ಖುಷಿ ಪಡೋಣ‌ ಅಂದ್ರ ಅದಕೂ ಹಿಂಗ […]

ಯುಗಾದಿ ವಿಶೇಷ ಬರಹ ಕಹಿ ಜಾಸ್ತಿ ತಿಂದ್ರೆ ವರ್ಷ ಪೂರ್ತಿ ಸಿಹಿಯಂತೆ  ನಮ್ಮ ಹಿಂದೂ ಸಂಸ್ಕೃತಿಯ ಪ್ರಕಾರ ವರ್ಷದ ಆರಂಭ ಯುಗಾದಿ. ಸಂವತ್ಸರವೊಂದು ಮುಗಿದು ಮತ್ತೊಂದು ಸಂವತ್ಸರಕ್ಕೆ ಕಾಲಿಡುವ ಸಮಯ ಅರವತ್ತು ಸಂವತ್ಸರಗಳ  ಈ ಚಕ್ರದಲ್ಲಿ ಈಗ ನಾವು ೩೫ ರ ಪ್ಲವ ನಾಮ ಸಂವತ್ಸರದಲ್ಲಿ ಇದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯ ಆಚರಣೆ ಬಂದಮೇಲೆ ತಿಥಿ ನಕ್ಷತ್ರ ಸಂವತ್ಸರಗಳ ಲೆಕ್ಕಾಚಾರ ಅಷ್ಟಾಗಿ ನಮ್ಮ ದೈನಂದಿನ ಬದುಕಿನಲ್ಲಿ ಉಳಿದುಕೊಂಡಿಲ್ಲ.  ಅದರಲ್ಲಿ ಯುಗಾದಿಯ ಆಚರಣೆ ಸ್ವಲ್ಪ ಮುಂಚೂಣಿಯಲ್ಲಿದೆ ಅನ್ನಬಹುದೇನೋ. ಯಾಕೆಂದರೆ ನಾವು […]

ಯುಗಾದಿ ವಿಶೇಷ ಬರಹ ಹೊಸ ವರುಷವು ಬರಲಿ, ಸುಖ ಸಾವಿರ ತರಲಿ… ಅದೇನೋ ಬೇರೆ ಎಲ್ಲಾ ಹಬ್ಬಗಳಿಗಿರುವ ಒಂದು ಆಕರ್ಷಣೆ, ಆಚರಣೆ ಯುಗಾದಿ ಹಬ್ಬಕ್ಕಿಲ್ಲ. ಹಿಂದೂ ಚಾಂದ್ರಮಾನ ಪಂಚಾಗದ ಪ್ರಕಾರ ಚೈತ್ರ ಶುದ್ಧ ಪಾಡ್ಯಮಿಯನ್ನು ಯುಗಾದಿ ಹಬ್ಬವೆಂದು, ವರ್ಷದ ಮೊದಲ ದಿನವೆಂದು ಆಚರಿಸುತ್ತೇವೆ. ಸೌರಮಾನದವರು ಪ್ರತಿವರ್ಷ ಏಪ್ರಿಲ್‌ 14ರಂದು ಯುಗಾದಿಯನ್ನು ಆಚರಿಸುತ್ತಾರೆ. ಒಟ್ಟಿನಲ್ಲಿ ಮಾರ್ಚ್‌ ತಿಂಗಳ ಕೊನೆಯಿಂದ ಏಪ್ರಿಲ್‌ ನಡುವಿನೊಳಗೆ ಹೊಸವರ್ಷದ ಆರಂಭವಾಗುವುದು ಆಚರಣೆಯಲ್ಲಿದೆ. ಚಿಕ್ಕಂದಿನಿಂದಲೂ ಈ ಹಬ್ಬದ ಬಗ್ಗೆ ವಿಶೇಷವಾದ ಆಸಕ್ತಿಯೇನೂ ಇರಲಿಲ್ಲ. ಮನೆಯ ಬಾಗಿಲಿಗೆ […]

Back To Top