‘ಎಳೆ ಹಸಿರು ನೆನಪು ..’

‘ಎಳೆ ಹಸಿರು ನೆನಪು ..’

ಲಹರಿ ವಸುಂಧರಾ ಕದಲೂರು    ಆಗೆಲ್ಲಾ ಮೂರ್ನಾಲ್ಕು ವರ್ಷಗಳಿಗೊಮ್ಮೆ ಮನೆಯ ಸಾಮಾಗ್ರಿಗಳನ್ನು ಗಂಟುಮೂಟೆ ಕಟ್ಟಿಕೊಂಡು ನಮ್ಮ ಕುಟುಂಬ ಊರಿಂದೂರಿಗೆ ಪ್ರಯಾಣಿಸುತ್ತಿತ್ತು. ನಾನು ಸಣ್ಣವಳಿದ್ದಾಗಿನ ವಿಷಯವಿದು. ಈ ಸಂಚಾರದ ನಿರಂತರತೆಗೆ ನಮ್ಮಪ್ಪ ಸರಕಾರಿ ನೌಕರರಾಗಿದ್ದು ಹಾಗೂ ವರ್ಗಾವಣೆಯನ್ನು ಅವರು ಸಹಜವಾಗಿ ಸ್ವೀಕರಿಸುತ್ತಿದ್ದದ್ದು ಪ್ರಮುಖವಾಗಿತ್ತು ಎನ್ನುವುದು ನನಗೀಗ ಅರ್ಥವಾಗುತ್ತಿದೆ.          ಹೀಗೆ ಪದೇ ಪದೇ ವರ್ಗವಾಗುತ್ತಿದ್ದರಿಂದ ನನ್ನ ಶಾಲಾ ಶಿಕ್ಷಣ ಮೈಸೂರು, ಹಾಸನ ಜಿಲ್ಲೆಗಳ ಹಲವು ಹಳ್ಳಿಗಳ ಸರಕಾರಿ ಶಾಲೆಗಳಲ್ಲಿ ನಡೆಯಿತು. ಮತ್ತೆ ಮತ್ತೆ  ಹೊಸ […]

ಬೇಲಿ

ಅನುವಾದಿತ ಕವಿತೆ ಕನ್ನಡ ಮೂಲ: ಸುನೀತ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಬೇಲಿ ಬೇಲಿ ಹಾಕಲೇಬೇಕೆಂಬುದು ಬಹುದಿನದ ಕನಸು ಹಾಗೆ,ಹೀಗೆ  ಬೇಕಾದ ಸರಕು ಜೋಡಣೆ, ಭರದ ಸಿದ್ಧತೆ ನಮ್ಮದೇ ಭದ್ರತೆಯ ಕೋಟೆಗೆ ಅದೆಂತ ಉತ್ಸಾಹ ಸಂಧಿ,ಗೊಂಧಿಗಳಲೂ ಹಾವು,ಜಂತೂ ನುಸುಳದಂತೆ ಗಿಡ ನೆಟ್ಟು ಬೇಲಿಯಲೂ ಹೂಗಳ ನಿರೀಕ್ಷೆ. ಕನಸಿನಂತೆ ಮೊಗ್ಗು  ಬಿರಿದೇ ಇಲ್ಲವೆಂದಲ್ಲ ಅವು ಆರಂಭ ಶೂರತ್ವ ಗಿಡವಿರಬೇಕು ಅರಳಿ ಉದುರಿದ ಬೀಜ ಚಿಗುರಲೇಕೋ ಆಕಳಿಸಿ ಎದುರಿದ್ದ ಬೇಲಿಯಲಿ ನಳ ನಳಿಸಿದ ನೀಲಿ ಹೂವಲಿ ಬಿದ್ದ ಕಣ್ಣ ಕೀಳಲಾಗದೆ ಝೇಂಕರಿಸುವ […]

ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ ಬೇಕಾದ್ದೆಲ್ಲವೂ ದೊರೆಯುತ್ತಿರುವಾಗ ಗೆಲುವಿಗೆ ಮಾತ್ರ ಇನ್ನಿಲ್ಲದ ಪರಿಶ್ರಮ ಏಕೆ ಪಡಬೇಕು ಎಂದು ಪ್ರಶ್ನಿಸುತ್ತೇವೆ. ‘ಕೆಲಸಕ್ಕೆ ಕರೆಯಬೇಡ್ರಿ ಊಟಕ್ಕೆ ಮರೆಯಬೇಡ್ರಿ.’ ಅನ್ನೋ ಜಾಯಮಾನದವರನ್ನು ಕಂಡರೆ ಯಶಸ್ಸು ಹತ್ತಿರವೂ ಸುಳಿಯುವುದಿಲ್ಲ. ಶ್ರಮವಿಲ್ಲದೇ ಏನೆಲ್ಲವೂ ತಮ್ಮ ಪಾದದ ಕೆಳಗೆ ಬಿದ್ದಿರಬೇಕೆಂಬುದು ನಮ್ಮಲ್ಲಿ ಬಹುತೇಕ ಜನರ ಅಭಿಪ್ರಾಯ. ವ್ಯಕ್ತಿತ್ವ ವಿಕಾಸದಲ್ಲಂತೂ ಪರಿಶ್ರಮ ಮೂಲ ವಸ್ತುವಿನಂತೆ ಕಾರ‍್ಯ ನಿರ‍್ವಹಿಸುತ್ತದೆ. ಶ್ರಮದ ಬೀಜಕ್ಕೆ ಅಗಾಧ […]

ವಾರದ ಕವಿತೆ

ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ ನರಳಿ ಅನಾಮತ್ತಾಗಿ ಹರಡಿಬೆದರುಬೊಂಬೆಗಳಾಗಿ ನಿಲ್ಲುತ್ತವೆ ಭಾವಗಳು !!ದಿಕ್ಕೆಟ್ಟು, ಸೋತು ಹೆಜ್ಜೆ ಮೂಡಿಸಲಾಗದ ಕೊರಗು ತುಂಬಿ ನಿಂತಈ ಭಾವಗಳ ತಬ್ಬಿದರೆಬರೀ ನಿಟ್ಟುಸಿರ ಮೇಳಗಳು !!ಧೂಳು ಹೊದ್ದು ಮಸುಕಾದ ಗೋಡೆಗಂಟಿದ ನಮ್ಮೀವಿವಾಹದ ಜೋಡಿ ಪಟದಿಂದ ಒಳಗೊಳಗೇ ನಕ್ಕು ಸೂಸುವ ಹಳವಂಡಗಳು!ಜೇಡ ನೇಯ್ದ ಬಲೆಯೊಳಗೆ ಬಿದ್ದು ಹೊರಳಾಡುವ ಪಟದ ಬಗ್ಗೆ ನಮಗೇಕೆ ಚಿಂತೆ?ಬದುಕೇ ಚೌಕಟ್ಟು ಮೀರಿ ಮೂರಾಬಟ್ಟೆಯಾದ ಮೇಲೆ ಇನ್ನೇನಂತೆ […]

ನಾನು ದೀಪ ಹಚ್ಚಿಕೊಂಡರೂ ಬೆಳಕು ಎಲ್ಲರಿಗೂ ಕಾಣಿಸಬೇಕು `ಈಗ ಅಕ್ಷರಸ್ಥರನ್ನು, ಶ್ರೀಮಂತರನ್ನು ನಂಬಿಸುವ- ಒಲಿಸಿಕೊಳ್ಳುವ ಸಿದ್ಧಾಂತ ಹೆಚ್ಚಾಗಿದೆ…’ ಗಣೇಶ್ ಹೆಗಡೆ ಹೊಸ್ಮನೆ   ಗಣೇಶ್ ಹೆಗಡೆ ಹೊಸ್ಮನೆ  ಶಿರಸಿ ತಾಲೂಕು ಜಾನ್ಮನೆಯವರು. ವೃತ್ತಿಯಿಂದ ಕೃಷಿಕ. ಯಾರೂ ನೆಡದ ಮರ ಇವರ ಮೊದಲ ಕವಿತಾ ಸಂಕಲನ. ಇದಕ್ಕೆ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿ, ಪುತ್ತೂರು ಕನ್ನಡ ಸಂಘದ ಉಗ್ರಾಣ ಪ್ರಶಸ್ತಿ ಲಭಿಸಿವೆ. ನಂತರ ಹರಿದು ಕೂಡುವ ಕಡಲು (ಗಜಲ್) ಸಂಕಲನವನ್ನು ಲಡಾಯಿ ಪ್ರಕಾಶನ ಪ್ರಕಟಿಸಿತು. ಕಾರವಾರ ಆಕಾಶವಾಣಿ, ಧಾರವಾಡ […]

ಅಲೀಕತ್ತು

ಅಲೀಕತ್ತು ಕಥೆ ಕೆ. ಎ. ಎಂ. ಅನ್ಸಾರಿ “ನಮ್ಮ ಮಗಳು ಆಮಿನಾ ಳಿಗೆ ವಯಸ್ಸು ಹನ್ನೆರಡು ಆಯಿತಲ್ಲವೇ…? ಇನ್ನು ಒಂದೆರಡು ವರ್ಷ ಆದ್ರೆ ಮದುವೆ ಗಂಡು ಹುಡುಕಬೇಕು… ಅದಕ್ಕಿಂತ ಮೊದಲು ಅವಳಿಗೆ ಅಲೀಕತ್ತು ತೊಡಿಸಬೇಕಲ್ಲಾ…” ಪೋಕರ್ ಹಾಜಿ ಮಡದಿ ಪಾತುವಿನಲ್ಲಿ ಹೇಳುವುದು  ಆಮಿನಾಳಿಗೆ ಕೇಳಿಸುತ್ತಿತ್ತು ಅಲೀಕತ್ತು ಎಂಬ ಪದ ಕೇಳುತ್ತಿದ್ದಂತೆಯೇ ಅಪ್ಪನ ಮಂಚದ ಕೆಳಗೆ ಮಲಗಿದ್ದ ಅಮಿನಾ ನಾಚಿ ನೀರಾದಳು… ಅವಳಿಗೆ ಬಂಗಾರವೆಂದರೆ ಪ್ರಾಣ. ಆಮಿನಾ ಕೇಳಿಸಿಕೊಂಡವಳಂತೆ ನಟಿಸಲಿಲ್ಲ.. ಅವಳಷ್ಟಕ್ಕೆ ಚಾಪೆಯಲ್ಲಿ ಹೊರಳಾಡುತ್ತಿದ್ದಳು… … ರಾತ್ರಿ ಸುಮಾರು […]

ನಾಯಿ ಮತ್ತು ಬಿಸ್ಕತ್ತು

ಕಿರು ಕಥೆ ನಾಗರಾಜ ಹರಪನಹಳ್ಳಿ ಆತ ದಂಡೆಗೆ ಬಂದು ಕುಳಿತ. ಎಲ್ಲಾ ಕಡೆ ಬಂಧನಗಳಿಂದ ಬಿಗಿದ‌ ಜಗತ್ತು ಸಾಕೆನಿಸಿತ್ತು.‌ ರಸ್ತೆಗಳೆಲ್ಲೆ ಮಕಾಡೆ ಮಲಗಿದ್ದವು. ಜನರ ಸುಳಿವಿಲ್ಲ.‌ಮುಚ್ಚಿದ  ಹೋಟೆಲ್ಲು, ಲಾಡ್ಜು, ಅಂಗಡಿ ಬಾಗಿಲು. ಗೂಡಂಗಡಿಗಳು ಬಲವಾದ ಹಗ್ಗಗಳಿಂದ ಬಂಧಿಸಲ್ಪಟ್ಟಿದ್ದವು.‌‌ ಇಡೀ ನಗರ ಸತ್ತು ಹೋಗಿತ್ತು. ಬಿಕೊ ಅನ್ನುತ್ತಿದ್ದ ಬಸ್ ಸ್ಟ್ಯಾಂಡ್. ‌ಬಿಕ್ಷುಕುರ ಸುಳಿವು ಸಹ ಇಲ್ಲ.ಮನುಷ್ಯರ ಸುಳಿವಿಲ್ಲ. ಪ್ರತಿ ಸರ್ಕಲ್ ‌ನಲ್ಲಿ ಸುರಿವ ಉರಿ ಬಿಸಿಲಲ್ಲಿ ಖಾಲಿ ರಸ್ತೆಗಳನ್ನು ಪೊಲೀಸರು ಕಾಯುತ್ತಿದ್ದರು. ಭೀತಿ ಮತ್ತು ಭಯ ಸ್ಪರ್ಧೆಗೆ ಬಿದ್ದಂತೆ […]

ಕಾಫೀನೊ -ಚಹಾನೊ

ಚರ್ಚೆ ರಾಮಸ್ವಾಮಿ ಡಿ.ಎಸ್. ಕಾಫಿ ಮೇಲೋ ಚಹಾ ಮೇಲೋ ಎಂದು ಕುಸ್ತಿ ಆಡುತ್ತಿರುವವರ ಫೇಸ್ಬುಕ್ ಪೇಜುಗಳನ್ನು ಬ್ರೌಸ್ ಮಾಡುತ್ತ ಇರುವಾಗ ಗಂಡು ಹೆಚ್ಚೋ ಹೆಣ್ಣು ಹೆಚ್ಚೋ ಎಂಬ ಹೈಸ್ಕೂಲ್ ದಿನಗಳ ಡಿಬೆಟ್ ವಿಷಯಗಳೇ ನೆನಪಾದುವು. ಕಾಫಿ, ಚಹಾ, ಹೆಣ್ಣು, ಗಂಡು, ಸಾಹುಕಾರಿಕೆ, ಬಡತನ, ಜಾತಿ, ಧರ್ಮ ಅಂತೆಲ್ಲ ನಾವು ಗುದ್ದಾಟ ಮಾಡಿದರೂ ಯಾರಿಗೆ ಯಾವುದು ಮುಖ್ಯ ಅನ್ನಿಸುತ್ತದೋ ಅದನ್ನು ಅವರವರು ಅನುಸರಿಸುತ್ತಾರೆ. ಯಾರೋ ಹೇಳಿದರೆಂದು ಕಾಫಿ ಟೀ ಬಿಟ್ಟು ಈಗ ಎಲ್ಲರ ಮನೆಯಲ್ಲೂ ಅಮೃತ ಬಳ್ಳಿ ಕಷಾಯ […]

ಪೇಟಿಮಾಂತ್ರಿಕ ಬೆಳಗಾವಿಯಲ್ಲಿರುವ ಪಂಡಿತ್ ರಾಮಭಾವು ಬಿಜಾಪುರೆ ಅವರನ್ನು ಕಾಣಬೇಕೆಂದು ನನಗೆ ಅನಿಸಿತು. ಮಿತ್ರರಾದ ಕುಸಗಲ್ಲರಿಗೆ ವಿಷಯ ತಿಳಿಸಲು `ನಾವು ಇದೇ ಊರಾಗಿದ್ರೂ ಅವರ ಮನೀಗ್ ಹೋಗಿಲ್ಲ, ಬರ್ರಿ ಸರ’ ಎಂದು ಕರೆದೊಯ್ಯಲು ಒಪ್ಪಿದರು. ಮುಸ್ಸಂಜೆ ಹೊತ್ತಿಗೆ ಶ್ರೀ ಕುಸುಗಲ್ಲ, ಅವರ ಮಗಳು ಕವಿತಾ, ಸ್ನೇಹಿತ ಡಾ. ಕೋಲ್ಕಾರ ಅವರೊಡನೆ ಬಿಜಾಪುರೆ ಅವರಲ್ಲಿಗೆ ಹೊರಟೆ. ಹಳೇ ಬೆಳಗಾವಿಯ ಬೀದಿಗಳು. ಪಶ್ಚಿಮಘಟ್ಟದ ಜಿರ್ರೋ ಮಳೆಧಾರೆ. ಕಚಿಪಿಚಿ ಕೆಸರು. ಹಸುರು ಕಕ್ಕುವ ಗಿಡಮರಪೊದೆ. ಮನೆಯ ಛಾವಣಿ ಕಾಂಪೌಂಡು ಗೋಡೆಗಳು ಹಸಿರು ಸ್ವೆಟರುಟ್ಟಂತೆ […]

ಕೂರಿಗಿ ತಾಳು

ಪುಸ್ತಕ ಪರಿಚಯ ಕವಿತೆ ಭಾಷೆಯ ಉಪಯೋಗದ ಒಂದು ಕಲೆ. ಭಾಷೆಯ ಉಪಯೋಗದಲ್ಲಿ ಭಾಷೆಯ ಅರ್ಥದೊಂದಿಗೆ ಅಥವಾ ಅರ್ಥದ ಬದಲು ಸೌಂದರ್ಯ ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು.ಕಾವ್ಯವೆನ್ನುವುದು ಹುಡುಕಾಟವಲ್ಲ, ಅದೊಂದು ಮಿಡುಕಾಟ. ಕಾವ್ಯದಲ್ಲಿ ಮನರಂಜನೆ, ಶ್ರೀಮಂತಿಕೆ ಮತ್ತು ಉದಾತ್ತತೆ ಇರಬೇಕು. ಅದನ್ನು ಓದಿದವರು ಮೊದಲಿಗಿಂತ ಬೇರೆಯದ್ದೇ ವ್ಯಕ್ತಿತ್ವ ಹೊಂದಿದವರಾಗಿರಬೇಕು. ಅಂತಹ   ಕಾವ್ಯ ಶ್ರೇಷ್ಠ ಕಾವ್ಯ ಎನಿಸಿಕೊಳ್ಳುತ್ತದೆ .  ಕಾವ್ಯದಲ್ಲಿ ಭಾವದ ಅತೀ ಸಾಮಾನ್ಯತೆ ಇದ್ದರೆ ಅದು ಕಾವ್ಯದ ದೋಷ. ಇದರ ಸೀಮೋಲ್ಲಂಘನ ಮಾಡಬೇಕು. ಅಂತೆಯೇ ಕಾವ್ಯದಲ್ಲಿ ಅಲಂಕಾರ […]

Back To Top