ಪುಸ್ತಕ ವಿಮರ್ಶೆ
ಮೂರು ದಾರಿಗಳು ಯಶವಂತ ಚಿತ್ತಾಲ ಮೂರು ದಾರಿಗಳು ಕಾದಂಬರಿ ಯಶವಂತ ಚಿತ್ತಾಲ ಸಾಹಿತ್ಯ ಭಂಡಾರ ಮೂರು ದಾರಿಗಳು ಯಶವಂತ ಚಿತ್ತಾಲರ ಮೊದಲ ಕಾದಂಬರಿ.ಭೀತಿ, ಪ್ರೀತಿ ಮತ್ತು ಭಂಡಾಯ ( ಆತ್ಮನಾಶ) ; ಇವು ಈ ಕೃತಿಯಲ್ಲಿ ಉದ್ಭವಿಸಿದ ಒಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ಮೂರು ವ್ಯಕ್ತಿತ್ವಗಳು ಕಂಡುಕೊಳ್ಳುವ ದಾರಿಗಳು. ಹನೇಹಳ್ಳಿ, ಸಾಣಿಕಟ್ಟಾ, ಗೋಕರ್ಣ ಮತ್ತು ಕುಮಟಾದ ಸುತ್ತಲಿನ ಪರಿಸರದ ಚಿತ್ರಣ, ಭಾಷೆ ಈ ಕಾದಂಬರಿಯಲ್ಲಿ ಸಮೃದ್ಧವಾಗಿ ಮೂಡಿಬಂದಿದೆ. ವಿಶ್ವನಾಥ ಶಾನಭಾಗರು ಸಾಣೇಕಟ್ಟೆಯ ಧಕ್ಕೆಯಿಂದ ಕುಮಟೆಯ ಕಡೆಗೆ ಹೋಗುವ ಬೋಟಿಯನ್ನು […]
ಕಾವ್ಯಯಾನ
ನೆನಪಿಗೆ ಅಂಜನಾ ಹೆಗಡೆ ಎಲ್ಲ ಮರೆತೆನೆಂದು ಮೈಮರೆತರೂ ಆಗೊಮ್ಮೆ ಈಗೊಮ್ಮೆ ನೆನಪಾಗುವ ಮುಖಗಳಿಗೆ ಮುಖಕೊಟ್ಟು ಮುಂದಕ್ಕೋಡುವಾಗ ಮೈಯೆಲ್ಲ ಮುಳ್ಳು! ನನ್ನದೇ ನೆರಳು ಅಪರಿಚಿತ ಬೆನ್ನಿಗಂಟಿದ ಹಸ್ತಗಳು ಹತ್ತಾರು ದೃಷ್ಟಿಗಳು ಎಲ್ಲ ಅಸ್ಪಷ್ಟ! ಹಳೆಯದನ್ನೆಲ್ಲ ಹರಿದು ಹರಿದು ಹಂಚಿದಂತೆ ಕಾಲಿಗಡರಿದ ಕಲ್ಲು ಕತೆ ಹೇಳುತ್ತಲೇ ಮಣ್ಣಾಗಿ ಹೋದದ್ದು ಅದೇ ವರುಷ ಮಳೆ ಧಾರಾಕಾರ ಸುರಿದದ್ದು ಎಲ್ಲ ಇತಿಹಾಸವೇ ಇರಬೇಕು ಮುಖಗಳೆಲ್ಲ ಕತೆಗಳು ಈಗ! ದೃಷ್ಟಿಗಳೆಲ್ಲ ಬರಿದೇ ನೋಟಗಳು! ಮಣ್ಣಿದ್ದಲ್ಲಿ ಮರ ಮರದ ತುಂಬೆಲ್ಲ ಹೂವು ಹಣ್ಣು ಮಳೆ ಮಾತ್ರ […]
ವಿದಾಯ
ಚಂದ್ರಕಾಂತ ಕುಸನೂರು ಖ್ಯಾತ ಸಾಹಿತಿ, ಚಿತ್ರ ಕಲಾವಿದ ಮತ್ತು ಹೈಕು ಗಾರುಡಿಗ ಚಂದ್ರಕಾಂತ ಕುಸನೂರು..! ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಇಂದು ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯದಲ್ಲಿ ಅಸಂಗತ ನಾಟಕ ಮತ್ತು ಜಪಾನಿ ಮಾದರಿಯ ಹೈಕುಗಳನ್ನು ಪರಿಚಯಿಸಿದ್ದರು ಅವರು. ಹೈಕು ಮಾದರಿಯ ಕವಿತೆಗಳನ್ನು ಸಹ ಕನ್ನಡಕ್ಕೆ ಪರಿಚಯಿಸಿದ್ದರು… ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಕಲಬುರಗಿ […]
ಪ್ರಸ್ತುತ
ಕೋರೋನದ ತಲ್ಲಣಗಳು ಎನ್ . ಶೈಲಜಾ ಹಾಸನ, ಕೋರೋನದ ತಲ್ಲಣಗಳು ಸರಾಗವಾಗಿ ಹರಿಯುತ್ತಿದ್ದ ಬದುಕಿನ ಬಂಡಿ ಕನಸಿನಲ್ಲಿಯೂ ನೆನೆಸದಂತೆ ನಿಂತು ಬಿಟ್ಟಿತು.ಅದೇನಾಗಿ ಹೋಯಿತೋ,ಕಂಡರಿಯದ ವೈರಾಣವೊಂದು ಇಡಿ ಪ್ರಪಂಚವನ್ನೆ ತಲ್ಲಣಗೊಳಿಸಿಬಿಟ್ಟಿದೆ. ದೂರದ ಅದ್ಯಾವುದೋ ದೇಶದಲ್ಲಿ ಅದೆಷ್ಟೋ ಪ್ರಾಣಗಳನ್ನು ತೆಗೆಯುತ್ತಿದೆ , ಅದೆಷ್ಟೋ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ ಅಂತೆ ಅಂತ ದೃಶ್ಯ ಮಾಧ್ಯಮಗಳಲ್ಲಿ ನೋಡುತ್ತಾ ಅಯ್ಯೋ ಪಾಪ ಅಂತ ಕನಿಕರ ಪಡುತ್ತಿರುವಾಗಲೆ ದಿಢೀರನೆ ನಮ್ಮ ದೇಶಕ್ಕೂ ಆ ಕ್ಷುದ್ರ ವೈರಸ್ ಬಂದು ಅಪ್ಪಳಿಸಿದೆ ಅಂತ ಗೊತ್ತಾದಾಗ ದಿಗಿಲು […]
ಕಾವ್ಯಯಾನ
ಮಣ್ಣಲಿ ಅವಿತ ಜೀವ ಟಿ.ಪಿ. ಉಮೇಶ್ ಬದುಕ ಸಂಪಾದನೆಗೆ ಹೋದ ಜೀವ ಬರಲಿಲ್ಲ ಮರಳಿ ಬೀದಿಯಲಿ ಅಲೆದು ತಿರುವಿನಲಿ ಕಳೆದು ಕಛೇರಿ ಕರ್ಮಗಳ ಫೈಲುಗಳಲಿ ಹೊರಳಿ ದಿನಸಿ ತರಕಾರಿ ಹಣ್ಣಿನಂಗಡಿಯಲಿ ಉರುಳಿ ಲೈಬ್ರರಿ ಸಿನೆಮಾ ಪಾರ್ಕು ಪಾರ್ಟಿಗಳ ಸಂಧಿಸಿ ನೋವಿನ ಮನೆಗೆ ಪ್ರೀತಿಯ ತರಲೋದ ಜೀವ ಮತ್ತೆ ಮರಳಿ ಬರಲಿಲ್ಲ ಜೀವ ಬರುವಾಗ ವಿಷದ ಮಳೆ ಬಂತಂತೆ ದಾರಿ ಅಲ್ಲಲ್ಲೆ ಹುಗಿದು ಹೋಯ್ತಂತೆ ಗಿಡ ಮರ ಪಶು ಪಕ್ಷಿ ಎಲ್ಲ ಉದುರಿ ಕರಗಿದುವಂತೆ ಜೀವವೂ ನೀರು ಆಹಾರವಿರದೆ […]
ಕಾವ್ಯಯಾನ
ಗಝಲ್ ತೇಜಾವತಿ ಹೆಚ್. ಡಿ ಭಾರತಾಂಬೆಯ ಮಡಿಲಲ್ಲಿ ತ್ರಿವರ್ಣಗುಡಿಯು ರಾರಾಜಿಸುತ್ತಿದೆ ವೀರ ತ್ರಿರಂಗವೂ ತನ್ನದೇ ವಿಶೇಷತೆಯ ತಿಳಿಸಿ ಹೇಳುತ್ತಿದೆ ವೀರ ಮಹಾಸಾಗರ ಅರಬ್ಬೀ ಕೊಲ್ಲಿ ಹಿಮಾಲಯದವರೆಗೆ ಗಡಿ ಚಾಚಿ ಹರಡಿದೆ ಅಡಿಯಿಂದ ಮುಡಿಯವರೆಗು ವಿವಿಧತೆಯಲಿ ಏಕತೆಯ ತೋರುತ್ತಿದೆ ವೀರ ದೀಪಾವಳಿ ಕ್ರಿಸ್ಮಸ್ ಮೊಹರಂ ರಂಜಾನ್ ಹಬ್ಬಗಳೆಲ್ಲವ ಆಚರಿಸುತ್ತಿದೆ ಜಾತಿ – ಮತ ಬೇಧವಿರದೆ ಸರ್ವಧರ್ಮ ಸಹಿಷ್ಣುತೆ ಭ್ರಾತೃತ್ವ ಸಾರುತ್ತಿದೆ ವೀರ ಶಿಲಾಶಾಸನ ವೀರಗಲ್ಲು ಮಾಸ್ತಿಗಲ್ಲುಗಳು ಎಲ್ಲೆಂದರಲ್ಲಿ ಕಾಣಿಸುತ್ತವೆ ಪ್ರತಿಯೊಂದರಲ್ಲೂ ಹರಿದ ಪ್ರೇಮ, ತ್ಯಾಗ ನೆತ್ತರಿನ ಕತೆಯನ್ನು ನೆನಪಿಸುತ್ತಿದೆ […]
ನೆನಪು
ದಾವಣಗೆರೆಯ ಕಪ್ಪು ಗುಲಾಬಿ ಮಲ್ಲಿಕಾರ್ಜುನ ಕಡಕೋಳ ಕಣ್ಮರೆಯಾದ ದಾವಣಗೆರೆಯ ಕಪ್ಪು ಗುಲಾಬಿ ಆ ಪುಟ್ಟ ಕಂದನಿಗೆ ಎರಡು ವರ್ಷವೂ ತುಂಬಿರಲಿಲ್ಲ. ಮೊಲೆಹಾಲು ಕುಡಿಯುವ ಆ ಹಸುಳೆಯ ತಂದೆ ಜೈಲು ಸೇರಬೇಕಾದ ದುಃಸ್ಥಿತಿ. ಅವರೇನು ಕಳ್ತನ, ದರೋಡೆ ಮಾಡಿ ಜೈಲು ಸೇರಿದ್ದಲ್ಲ. ಮಿಲ್ಲುಗಳಲ್ಲಿ ದುಡಿಯುವ ಕೂಲಿ ಕಾರ್ಮಿಕರ ಪರವಾಗಿ ಹೋರಾಟ ಮಾಡಿ ಕಾರಾಗೃಹ ಸೇರಬೇಕಾಯ್ತು. ದಿಟ್ಟ ಹೋರಾಟಕ್ಕೆ ಸಿಕ್ಕ ಕೆಟ್ಟ ಪ್ರತಿಫಲ ಎಂಬಂತೆ ಒಂದಲ್ಲ ಎರಡು ಬಾರಿ, ಒಟ್ಟು ಹದಿನಾಲ್ಕು ವರುಷ ಈ ತಂದೆ ಜೈಲು ಪಾಲಾದರು. ತಂದೆಯ […]
ಕಾವ್ಯಯಾನ
ನಿಝಾ಼ರ್ ಖಬ್ಬಾನಿ ಅವರ ಪ್ರೇಮ ಕವಿತೆಗಳು ೧) ನಾನು ನಿನ್ನ ಬಗ್ಗೆ ಅವರಿಗೆ ಹೇಳಿರಲಿಲ್ಲ ಅವರು ನನ್ನ ಕಣ್ಣುಗಳಲ್ಲಿ ಮೀಯುವ ನಿನ್ನ ಕಂಡರು ನಾನು ನಿನ್ನ ಬಗ್ಗೆ ಅವರಿಗೆ ಹೇಳಿರಲಿಲ್ಲ ಆದರೆ ನಾನು ಬರೆದ ಪದಗಳಲ್ಲಿ ನಿನ್ನನ್ನು ಕಂಡರು ಪ್ರೇಮದ ಪರಿಮಳವನ್ನು ಮುಚ್ಚಿಡಲಾಗದು ೨) ನಾನು ನನ್ನ ಪ್ರೇಮಿಯ ಹೆಸರನ್ನು ಗಾಳಿಯ ಮೇಲೆ ಬರೆದೆ ನಾನು ನನ್ನ ಪ್ರೇಮಿಯ ಹೆಸರನ್ನು ನೀರಿನ ಮೇಲೆ ಬರೆದೆ ಆದರೆ ಗಾಳಿ ಒಬ್ಬ ಕೆಟ್ಟ ಕೇಳುಗ ನೀರು ಹೆಸರನ್ನು ನೆನಪಿಡುವುದಿಲ್ಲ ೩) […]
ಮುಚ್ಚಿದ ಬಾಗಿಲು-ತೆರೆಯದ ಕಿಟಕಿ
ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-4 ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು ಎಂದಿಗೂ ತೆರೆಯದಿರಲಿ! ರಾತ್ರಿ ಮುಚ್ಚಿದ ಬಾಗಿಲನ್ನು ಬೆಳಂಬೆಳಿಗ್ಗೆ ತೆಗೆದು, ಕಸ ಗುಡಿಸಿ ಮನೆಯ ಮುಂದೆ ನೀರು ಚಿಮುಕಿಸಿ, ರಂಗೋಲಿ ಹಾಕುವುದೆಂದರೆ ನನಗೆ ಒಂದು ಬಗೆಯ ಸಂಭ್ರಮ. ಅಂಗಳದಲ್ಲಿ ಮೊಗ್ಗು ಬಿರಿದು ಹೂವಾಗುವ ಚೆಂದ, ಚಿಲಿಪಿಲಿ ಕೂಗುತ್ತ ಹಕ್ಕಿಗಳು ಹಾರಾಡುವ ಸಡಗರ, ಮೂಡಣ ರಂಗಾಗಿಸಿ ಬರುವ ನೇಸರನ ಅಂದ…ಎಲ್ಲವುಗಳ ಮೇಲೆ ಕಿರುನೋಟ ಬೀರುವ, ತಂಗಾಳಿಗೆ ಮೈಮನ […]
ನಿಮ್ಮೊಂದಿಗೆ
ಪ್ರಿಯ ಬರಹಗಾರರಿಗೆ ಪ್ರಿಯರೆ ಆರಂಭದ ಅಡಚಣೆಗಳನ್ನು ದಾಟಿಸಂಗಾತಿ ಬ್ಲಾಗ್ ಐದನೆ ತಿಂಗಳನ್ನು ಪೂರೈಸುತ್ತಿದೆ.ಈ ನಿಟ್ಟಿನಲ್ಲಿ ಬರಹಗಾರರಿಗೆ ಕೆಲವು ಮಾತುಗಳನ್ನುಹೇಳಲೇ ಬೇಕಿದೆ.ಮೊದಲನೆಯದಾಗಿ ಇದುವರೆಗಿನ ನಿಮ್ಮಸಹಕಾರಕ್ಕೆ ದನ್ಯವಾದಗಳು. ಮುಂದೆಯೂತಮ್ಮ ಸಲಹೆ-ಸಹಕಾರಗಳು ಹೀಗೆ ಮುಂದುವರೆಯಲೆಂದು ಬಯಸುತ್ತೇನೆ ದಯಮಾಡಿ ನಿಮ್ಮಬರಹಗಳನ್ನುತಪ್ಪಿರದೆ ಟೈಪ್ ಮಾಡಿ ಕಳಿಸಿ,ಇನ್ನು ಬರಹಗಳಪಿಡಿಎಫ್ ಮತ್ತು ಪೋಟೊಪ್ರತಿಗಳನ್ನು ಕಳಿಸಬೇಡಿ. ಈಗಾಗಲೇ ಫೇಸ್ಬುಕ್ಕಿನಲ್ಲಿ ಹಾಕಿದಬರಹಗಳನ್ನು ಕಳಿಸದೆ,ನಿಮ್ಮಹೊಸ ಬರಹಗಳನ್ನು ಕಳಿಸಿ,ಆದಷ್ಟು ಗುಣ ಮಟ್ಟದ ಬರಹಗಳನ್ನು ಕಳಿಸಿಒಂದು ಬರಹಕ್ಕು ಮತ್ತೊಂದು ಬರಹಕ್ಕು ಕನಿಷ್ಠ ಒಂದುವಾರ ಅಂತರವಿರಲಿ.ಬರಹದ ಗುಣಮಟ್ಟದ ಬಗ್ಗೆ ನೀವೇ ಮೌಲ್ಯಮಾಪನ ಮಾಡಿಕೊಂಡು ಪ್ರಕಟಿಸಬಹುದಾದದ್ದು ಅನಿಸಿದರೆ […]