ಕೆಂಪು ಐರಾವತ

ಕೆಂಪು ಐರಾವತ

ಕವಿತೆ ಡಾ.ಪ್ರೇಮಲತ ಬಿ.  ರೆಕ್ಕೆಬಿಚ್ಚಿ ಉಡ್ಡಯನಗೈಯ್ಯುವ ಮುನ್ನವೇ ಹಿಡಿಯಬೇಕೆಂದು ಓಡಿದೆ ಒರೆಸುತ್ತ ಹಣೆಯ ಮೇಲಿನ ಬೆವರು ಒಡಲ ತುಂಬುತ್ತ, ಹರಟೆಯೊಡೆಯುತ್ತ ಪುಕ್ಕವರಡಿ ವಿರಮಿಸಿ ನಿಂತಿತ್ತು ದೇದೀಪ್ಯಮಾನವಾದ  ಕೆಂಪು ಐರಾವತ ಏನೋ ಸಂಕಟ, ಬಿಟ್ಟು ಹೊರಟ ತವಕ ನನ್ನದಲ್ಲದ ಊರ, ಮೂರ್ತವಲ್ಲದ ಭಾವ ದಿನಕೊಂದು ಕೊನೆಕಟ್ಟಿ ಗಟ್ಟಿಯಾಗಿರದ ಅಳ್ಳಕ   ಒಂದೇ ಗಂಟೆ ಊರ ತಲುಪಲು ಒಂದೆರಡೇ ದಿನದ ಗಡುವು ಮತ್ತೆ ಮರಳಲು ನಿಟ್ಟುಸಿರಿಟ್ಟೆ ನಕ್ಕು..” ಎಲ್ಲ ಮರುಳು” ಯಾರೋ ಬಂದರು, ಯಾರೋ ಇಳಿದರು ಕಣ್ಣ ಮುಚ್ಚಿ ಕಿಟಗಿಗೊರಗಿ ಗುನುಗಿ […]

ಮಾತು – ಮಳೆ ಹಾಡು

ಕವಿತೆ ಬಾಲಕೃಷ್ಣ ದೇವನಮನೆ ಚಿತ್ರ ಕಟ್ಟಿದ ಚೌಕಟ್ಟು      ಮಾತು ಮಳೆಯಂತೆ      ಧೋ… ಎಂದು ಸುರಿಯುತ್ತಿರುತ್ತದೆ ನಿಲ್ಲುವುದಿಲ್ಲ      ಒಮ್ಮೊಮ್ಮೆ ಮಳೆ ನಿಂತರೂ      ಮಾತು ನಿಲ್ಲುವುದಿಲ್ಲ…      ಮೌನವೂ ಮಾತಾದಂತೆ      ಮಳೆ ನಿಂತ ಮೇಲಿನ ಮರದ ಹನಿಯಂತೆ…      ಚೌಕಟ್ಟಿನೊಳಗೆ ಮಾತು ಮಳೆ ಹಾಡು. ದೃಶ್ಯ ಒಂದು      ಆಕಸ್ಮಿಕದ ಭೇಟಿ      ಎಷ್ಟೋ ಕಾಲದ ಮೇಲೆ      ಮರು ಮಿಳಿತವಾದ ಗೆಳೆತನ      ಮುಗಿಯುತ್ತಿಲ್ಲ ಕ್ಷೇಮ ಕುಶಲೋಪರಿ      ಕೂಡಿ ಆಡಿದ […]

ಬಾಯಿಬಡುಕ ಸಾಮಾಜಿಕ ಮಾಧ್ಯಮಗಳು

ಲೇಖನ ನೂತನ ದೋಶೆಟ್ಟಿ            ಭಾರತದಲ್ಲಿ ಅಸಹನೆ ಹೆಚ್ಚುತ್ತಿದೆ ಎನ್ನುವ ಮಾತು ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಕೇಳಿಬರುತ್ತಿರುವುದಷ್ಟೇ ಅಲ್ಲ ;ಅದನ್ನು ಪುಷ್ಟೀಕರಿಸುವ ಅನೇಕ ಸಂಗತಿಗಳು ಮೇಲಿಂದ ಮೇಲೆ ನಡೆಯುತ್ತಿವೆ. ಮೊದ ಮೊದಲು ಇಂತಹ ಘಟನೆಗಳು ನಡೆದಾಗ  ಆಘಾತವಾಗುತ್ತಿತ್ತು , ವೇದನೆಯಾಗುತ್ತಿತ್ತು . ಕೆಲ ಸಮಯದ ನಂತರ ಅದರಲ್ಲಿ ಕ್ರೂರತೆಯ ಛಾಯೆ ಇಣುಕಿದಾಗ ಕಳವಳವಾಗುತ್ತಿತ್ತು ;ಆಶ್ಚರ್ಯವೂ ಆಗುತ್ತಿತ್ತು. ಈಗ ಗೊಂದಲವಾಗುತ್ತಿದೆ ;ಯಾವುದು, ಯಾರಿಗೆ, ಯಾಕಾಗಿ ಅಸಹನೆಯಾಗುತ್ತದೆ ಎನ್ನುವುದನ್ನು ತಿಳಿಯಲಾಗದೆ ! ಅಭಿಪ್ರಾಯ ಬೇಧಗಳ ಹಿನ್ನೆಲೆಯಲ್ಲಿ ಕಳೆದ ಮೂರು-ನಾಲ್ಕು ವರ್ಷಗಳಲ್ಲಿ […]

ಕಾವ್ಯವಾಗಿ ಕರಗುತ್ತೇನೆ

ಕವಿತೆ ಪೂಜಾ ನಾರಾಯಣ ನಾಯಕ ನಾನರಿಯಲಾಗದ  ಶೂಲೆಗಳೇ ಆಪ್ತವಾಗಿ ನನ್ನನ್ನು ಬಿಗಿದಪ್ಪಿಕೊಂಡಾಗ ಬದುಕು ಬರಡಾಗಿ ಬೆಂಬಿಡದೆ ಕಾಡಿದಾಗ ನನಗನಿಸುತ್ತದೆ, ನಾನೊಮ್ಮೆ ಜ್ವಾಲಾಮುಖಿಯಂತೆ ಭುಗಿಲೇಳಬೇಕು! ಕಳೆದುಕೊಂಡ ಮಧುರವಾದ ಪ್ರೇಮ ನೆನಪಿನಾಳದಲಿ ಪುಟಿದೆದ್ದು ಕೂತಾಗ ನನ್ನ ನಿಟ್ಟುಸಿರಿನಲೂ ಮಿಣುಕು ಹುಳುವಂತೆ ಮಿನುಗ ತೊಡಗಿದಾಗ ನನಗನಿಸುತ್ತದೆ, ನಾನೊಮ್ಮೆ ಅಗ್ನಿ ಪರ್ವತದಂತೆ ಧಗಧಗಿಸಿ ಉರಿಯಬೇಕು! ಕಗ್ಗತ್ತಲ ವೇಳೆಯಲಿ ನಿಶ್ಯಬ್ದ ನೂರಾರು ಬಯಕೆಗಳ ಹೊತ್ತ ದೂರ ದೂರ ನೇರ ಹಾದಿಗಳಲಿ ನೀರವತೆಯೇ ಮುಗುಳ್ನಕ್ಕಾಗ ನನಗನಿಸುತ್ತದೆ, ನಾನೊಮ್ಮೆ ಶಿವನಂತೆ ರುದ್ರವಾಗಿ ನರ್ತಿಸಬೇಕು! ಏಕಾಂತದಲಿ ಮರೀಚಿಕೆಯಂತ ಕನಸುಗಳು […]

ಗಝಲ್

ಗಝಲ್ ಎ.ಹೇಮಗಂಗಾ ಕಡುಗಪ್ಪು ಕುರುಳ ನಡುವೆ ಮೊಗ ಚಂದಿರನಂತೆ ಹೊಳೆದಿದೆ ಗೆಳತಿಬಿರಿದ ಅಧರಗಳ ನಡುವೆ ಮಿಂಚು ನಗು ಹೊರಹೊಮ್ಮಿದೆ ಗೆಳತಿ ಅಪೂರ್ವ ಸೌಂದರ್ಯ ಬಣ್ಣಿಸಲು ಕವಿಯಾಗುವನು ನಿನ್ನ ನಲ್ಲಸೆಳೆವ ಕಾಡಿಗೆ ಕಂಗಳ ಮೇಲಿನ ಹುಬ್ಬು ಕಬ್ಬಿನಂತೆ ಬಾಗಿದೆ ಗೆಳತಿ ಆಗಸದತ್ತ ದಿಟ್ಟಿ ನೆಟ್ಟ ನೋಟದಿ ಅದಾವ ಭಾವ ತುಂಬಿದೆಯೋವಿಚಲಿತಳಾಗದೇ ನೀ ಕುಳಿತ ಭಂಗಿ ಮೋಹಕವಾಗಿ ಕಂಡಿದೆ ಗೆಳತಿ ನಿನ್ನವನ ಚರಣಕೆ ಸಮರ್ಪಿಸಲು ಹೂಗಳ ಗುಚ್ಛ ಹಿಡಿದಿಹೆ ಏನು?ಇಹದ ಅರಿವಿಲ್ಲದೇ ನಗುತಿಹ ಅಭಿಸಾರಿಕೆ ನೀನಾದಂತಿದೆ ಗೆಳತಿ ತುಸು ಹೊತ್ತು […]

‘ಎಳೆ ಹಸಿರು ನೆನಪು ..’

ಲಹರಿ ವಸುಂಧರಾ ಕದಲೂರು    ಆಗೆಲ್ಲಾ ಮೂರ್ನಾಲ್ಕು ವರ್ಷಗಳಿಗೊಮ್ಮೆ ಮನೆಯ ಸಾಮಾಗ್ರಿಗಳನ್ನು ಗಂಟುಮೂಟೆ ಕಟ್ಟಿಕೊಂಡು ನಮ್ಮ ಕುಟುಂಬ ಊರಿಂದೂರಿಗೆ ಪ್ರಯಾಣಿಸುತ್ತಿತ್ತು. ನಾನು ಸಣ್ಣವಳಿದ್ದಾಗಿನ ವಿಷಯವಿದು. ಈ ಸಂಚಾರದ ನಿರಂತರತೆಗೆ ನಮ್ಮಪ್ಪ ಸರಕಾರಿ ನೌಕರರಾಗಿದ್ದು ಹಾಗೂ ವರ್ಗಾವಣೆಯನ್ನು ಅವರು ಸಹಜವಾಗಿ ಸ್ವೀಕರಿಸುತ್ತಿದ್ದದ್ದು ಪ್ರಮುಖವಾಗಿತ್ತು ಎನ್ನುವುದು ನನಗೀಗ ಅರ್ಥವಾಗುತ್ತಿದೆ.          ಹೀಗೆ ಪದೇ ಪದೇ ವರ್ಗವಾಗುತ್ತಿದ್ದರಿಂದ ನನ್ನ ಶಾಲಾ ಶಿಕ್ಷಣ ಮೈಸೂರು, ಹಾಸನ ಜಿಲ್ಲೆಗಳ ಹಲವು ಹಳ್ಳಿಗಳ ಸರಕಾರಿ ಶಾಲೆಗಳಲ್ಲಿ ನಡೆಯಿತು. ಮತ್ತೆ ಮತ್ತೆ  ಹೊಸ […]

ಬೇಲಿ

ಅನುವಾದಿತ ಕವಿತೆ ಕನ್ನಡ ಮೂಲ: ಸುನೀತ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಬೇಲಿ ಬೇಲಿ ಹಾಕಲೇಬೇಕೆಂಬುದು ಬಹುದಿನದ ಕನಸು ಹಾಗೆ,ಹೀಗೆ  ಬೇಕಾದ ಸರಕು ಜೋಡಣೆ, ಭರದ ಸಿದ್ಧತೆ ನಮ್ಮದೇ ಭದ್ರತೆಯ ಕೋಟೆಗೆ ಅದೆಂತ ಉತ್ಸಾಹ ಸಂಧಿ,ಗೊಂಧಿಗಳಲೂ ಹಾವು,ಜಂತೂ ನುಸುಳದಂತೆ ಗಿಡ ನೆಟ್ಟು ಬೇಲಿಯಲೂ ಹೂಗಳ ನಿರೀಕ್ಷೆ. ಕನಸಿನಂತೆ ಮೊಗ್ಗು  ಬಿರಿದೇ ಇಲ್ಲವೆಂದಲ್ಲ ಅವು ಆರಂಭ ಶೂರತ್ವ ಗಿಡವಿರಬೇಕು ಅರಳಿ ಉದುರಿದ ಬೀಜ ಚಿಗುರಲೇಕೋ ಆಕಳಿಸಿ ಎದುರಿದ್ದ ಬೇಲಿಯಲಿ ನಳ ನಳಿಸಿದ ನೀಲಿ ಹೂವಲಿ ಬಿದ್ದ ಕಣ್ಣ ಕೀಳಲಾಗದೆ ಝೇಂಕರಿಸುವ […]

ಪರಿಶ್ರಮದಿಂದ ಗೆಲುವನ್ನು ಕೊಳ್ಳಬಹುದು ಇಂದಿನ ದಾವಂತದ ಬದುಕಿನಲ್ಲಿ ಎಲ್ಲ ಸುಖಗಳೂ ನಮ್ಮೆಡೆ ತಾವೇ ಬರಲಿ ಎಂದು ಆಶಿಸುತ್ತೇವೆ. ಬೆರಳ ತುದಿಯಲ್ಲಿ ಬೇಕಾದ್ದೆಲ್ಲವೂ ದೊರೆಯುತ್ತಿರುವಾಗ ಗೆಲುವಿಗೆ ಮಾತ್ರ ಇನ್ನಿಲ್ಲದ ಪರಿಶ್ರಮ ಏಕೆ ಪಡಬೇಕು ಎಂದು ಪ್ರಶ್ನಿಸುತ್ತೇವೆ. ‘ಕೆಲಸಕ್ಕೆ ಕರೆಯಬೇಡ್ರಿ ಊಟಕ್ಕೆ ಮರೆಯಬೇಡ್ರಿ.’ ಅನ್ನೋ ಜಾಯಮಾನದವರನ್ನು ಕಂಡರೆ ಯಶಸ್ಸು ಹತ್ತಿರವೂ ಸುಳಿಯುವುದಿಲ್ಲ. ಶ್ರಮವಿಲ್ಲದೇ ಏನೆಲ್ಲವೂ ತಮ್ಮ ಪಾದದ ಕೆಳಗೆ ಬಿದ್ದಿರಬೇಕೆಂಬುದು ನಮ್ಮಲ್ಲಿ ಬಹುತೇಕ ಜನರ ಅಭಿಪ್ರಾಯ. ವ್ಯಕ್ತಿತ್ವ ವಿಕಾಸದಲ್ಲಂತೂ ಪರಿಶ್ರಮ ಮೂಲ ವಸ್ತುವಿನಂತೆ ಕಾರ‍್ಯ ನಿರ‍್ವಹಿಸುತ್ತದೆ. ಶ್ರಮದ ಬೀಜಕ್ಕೆ ಅಗಾಧ […]

ವಾರದ ಕವಿತೆ

ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ ನರಳಿ ಅನಾಮತ್ತಾಗಿ ಹರಡಿಬೆದರುಬೊಂಬೆಗಳಾಗಿ ನಿಲ್ಲುತ್ತವೆ ಭಾವಗಳು !!ದಿಕ್ಕೆಟ್ಟು, ಸೋತು ಹೆಜ್ಜೆ ಮೂಡಿಸಲಾಗದ ಕೊರಗು ತುಂಬಿ ನಿಂತಈ ಭಾವಗಳ ತಬ್ಬಿದರೆಬರೀ ನಿಟ್ಟುಸಿರ ಮೇಳಗಳು !!ಧೂಳು ಹೊದ್ದು ಮಸುಕಾದ ಗೋಡೆಗಂಟಿದ ನಮ್ಮೀವಿವಾಹದ ಜೋಡಿ ಪಟದಿಂದ ಒಳಗೊಳಗೇ ನಕ್ಕು ಸೂಸುವ ಹಳವಂಡಗಳು!ಜೇಡ ನೇಯ್ದ ಬಲೆಯೊಳಗೆ ಬಿದ್ದು ಹೊರಳಾಡುವ ಪಟದ ಬಗ್ಗೆ ನಮಗೇಕೆ ಚಿಂತೆ?ಬದುಕೇ ಚೌಕಟ್ಟು ಮೀರಿ ಮೂರಾಬಟ್ಟೆಯಾದ ಮೇಲೆ ಇನ್ನೇನಂತೆ […]

ನಾನು ದೀಪ ಹಚ್ಚಿಕೊಂಡರೂ ಬೆಳಕು ಎಲ್ಲರಿಗೂ ಕಾಣಿಸಬೇಕು `ಈಗ ಅಕ್ಷರಸ್ಥರನ್ನು, ಶ್ರೀಮಂತರನ್ನು ನಂಬಿಸುವ- ಒಲಿಸಿಕೊಳ್ಳುವ ಸಿದ್ಧಾಂತ ಹೆಚ್ಚಾಗಿದೆ…’ ಗಣೇಶ್ ಹೆಗಡೆ ಹೊಸ್ಮನೆ   ಗಣೇಶ್ ಹೆಗಡೆ ಹೊಸ್ಮನೆ  ಶಿರಸಿ ತಾಲೂಕು ಜಾನ್ಮನೆಯವರು. ವೃತ್ತಿಯಿಂದ ಕೃಷಿಕ. ಯಾರೂ ನೆಡದ ಮರ ಇವರ ಮೊದಲ ಕವಿತಾ ಸಂಕಲನ. ಇದಕ್ಕೆ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿ, ಪುತ್ತೂರು ಕನ್ನಡ ಸಂಘದ ಉಗ್ರಾಣ ಪ್ರಶಸ್ತಿ ಲಭಿಸಿವೆ. ನಂತರ ಹರಿದು ಕೂಡುವ ಕಡಲು (ಗಜಲ್) ಸಂಕಲನವನ್ನು ಲಡಾಯಿ ಪ್ರಕಾಶನ ಪ್ರಕಟಿಸಿತು. ಕಾರವಾರ ಆಕಾಶವಾಣಿ, ಧಾರವಾಡ […]

Back To Top