ಕಣ್ಣುಗಳಲಿ ಮುಚ್ಚಿಡಲಾಗುತ್ತಿಲ್ಲ ಒಲವ

ಕಣ್ಣುಗಳಲಿ ಮುಚ್ಚಿಡಲಾಗುತ್ತಿಲ್ಲ ಒಲವ

ಕವಿತೆ ನಾಗರಾಜಹರಪನಹಳ್ಳಿ ಪ್ರತಿಕ್ಷಣದ ಉಸಿರುನನ್ನೆದೆಯಲ್ಲಿ ಬಿಸಿರಕ್ತವಾಗಿದೆಕೈ ಬೆರಳ ಸ್ಪರ್ಶಹಾಡಿದ ರಾಗ ಅನುರಣಿಸುತ್ತಿದೆಕಣ್ಣುಗಳಲ್ಲಿ ಮುಚ್ಚಿಡಲಾಗುತ್ತಿಲ್ಲಒಲವ ಒಳಹರಿವು ……..** ಹಗಲು ರಾತ್ರಿಗಳನ್ನುಂಡು ನಿಶಬ್ದವಾಗಿಮಲಗಿರುವ ಬೆಟ್ಟಸಾಲುಗಳೇಬಯಲು ಕಣಿವೆ ಮುದ್ದಿಸಿ ಸಾಗುವಮಂಜು ಮೋಡಗಳೇಆಕೆಗೆಮುಗಿಲ ಸಂದೇಶವ ಅನುವಾದಿಸಿ ಬಿಡಿ ಈಗೀಗಪ್ರತಿ ಮಾತು ಒಲವಿನ ಸಂದೇಶಹೊತ್ತು ತರುತ್ತಿದೆಬದುಕು ಹಿತವೆನಿಸುತ್ತಿದೆಹಕ್ಕಿಯ ಇಂಚರಮಳೆಯ ಧ್ಯಾನಕ್ಕೂಹೊಸ ಅರ್ಥವ್ಯಾಪ್ತಿ ದಕ್ಕುತ್ತಿದೆ…….** ನಿನ್ನ ಬೆರಳಸ್ಪರ್ಶದಿಂದಕವಿತೆಗೆ ಹೊಸಅರ್ಥ ದಕ್ಕಿತುನಿನ್ನ ಹೆರಳಪರಿಮಳ ನನ್ನೆದೆಯಲ್ಲಿಹೊಸ ತರಂಗಗಳಅಲೆ ಎಬ್ಬಿಸಿತು

ಅರಮನೆ

ಕವಿತೆ ಕೃಷ್ಣಮೂರ್ತಿ ಕುಲಕರ್ಣಿ. ಅರಮನೆಗಳು ಎಂದರೆಹಾಗೇಯೆ ಸ್ವಾಮಿ,ಒಂದಿಲ್ಲ‌ ಒಂದುದಿನಅವು ತಮ್ಮದಿಮಾಕು ದೌಲತ್ತುಕಳೆದುಕೊಳ್ಳುತ್ತವೆ!ಬದುಕಿನಲ್ಲಿ ಬರುವಸುಖ ದುಃಖಗಳಂತೆ,ದುಃಖದ ನೋವಿಗೆ ನರಳದೆ,ಸುಖದ ಸಡಗರಕ್ಕೆ ಹಿಗ್ಗದೆ,ಅಲ್ಲಿರುವ ಬಾಗಿಲು ಕಿಟಕಿಗೋಡೆಯಲಿ ಹೂತಿರುವ ಗೂಟಗಳು ಮಾತ್ರ ನಿರಂಬಳವಾಗಿಉಳಿಯಲು ಸಾಧ್ಯ,ಅಲ್ಲಿಯೇ ಹುಟ್ಟಿಬೆಳೆದಇರುವೆಗಳು ಸಾಗಿಹೋಗುತ್ತವೆ,ಅರಮನೆ ಇರುವ ಮನೆಯಲ್ಲ,ಅದೊಂದು ಸ್ಮಾರಕ ಎಂಬುದು ಅವುಗಳ ಗಮನಕ್ಕೆ ಬಂದಿರಬೇಕು,ತಾವು ಕಟ್ಟುವ ಗೂಡಿಗೆಗೆದ್ದಿಲೊ ಹಾವೋ ಬರುವಹಾಗೆ,ದುಃಸ್ವಪ್ನ ಕಂಡಿರಲೂಬೇಕು,ವಿಶಾಲವಾದ ಸೌಧ ಕಟ್ಟಿದವರು,ವಿಶಾಲ ಮನೋಭಾವ ಬೆಳೆಸಲಿಲ್ಲ,ಅರಮನೆಯ ಅಂಗಳದಲ್ಲಿ,ಭಿನ್ನತೆಯ ಕರ್ಕಿ ಆಳಕ್ಕೆಬೇರುಗಳ ಇಳಿಬಿಟ್ಟು ದಟ್ಟವಾಗದಿದ್ದರೂ,ದಿಟ್ಟವಾಗಿಯೇ ಹಬ್ಬಿಹರಡಿದ್ದು,ಕಟ್ಟಿದವರ ಗಮನಕ್ಕೆ ಬರಲೇಇಲ್ಲ,ಸಂಕುಚಿತ ಮನೋಭಾವಗಳಸಂತೆ ಜರುಗಿದಾಗ,ಅರಮನೆ ಆಡಂಬರ‌ ಕಳೆದುಕೊಂಡು ಬರಡಾಯಿತು,ಏಕಾಂಗಿ ಸ್ಮಾರಕದ ಸುತ್ತಲೂ,ಬೀಸುವ […]

ಗಝಲ್

ಗಝಲ್ ಅನ್ನಪೂರ್ಣಾ ಬೆಜಪ್ಪೆ ಇದ್ದರೂ ನೋವುಗಳು ಹಲವಾರು ನಗುತಿರು ಸಖೀಬಿದ್ದರೂ ಧೃತಿಗೆಡದೆ ಪುಟಿದೆದ್ದು ಸಾಗುತಿರು ಸಖೀ ವಿಶಾಲ ಜಗವಿದು ಅವಕಾಶಗಳಿಗಹುದೇನು ಕೊರತೆವಿಷಮ ಭಾವಗಳಳಿಸಿ ಹೊಸತನಕೆ ತೆರೆಯುತಿರು ಸಖೀ ಮುಂದೆ ಸರಿದಂತೆಲ್ಲ ಜಗ್ಗಲೆತ್ನಿಸುವ ಮನವೆ ಬಹುವಿಲ್ಲಿಹಿಂದೆ ಜಾರದಂತೆ ಸಮಸ್ಥಿತಿಯ ಕಾಯುತಿರು ಸಖೀ ಸೋಲು ಬಂತೆನಲು ಕೊರಗಿ ಹತಾಶೆ ತೋರುವುದೇಕೆಗೆಲುವು ಪಡೆಯುವ ತನಕವೂ ಬಿಡದೆ ಓಡುತಿರು ಸಖೀ ಕ್ಲೇಶ ಕಳೆಯಲು ಅನುವಿಗೆ ವಿಶ್ವಾಸವೇ ಬಲವಲ್ಲವೇನುತೋಷಕಾಗಿ ಕರ್ಮ ಸಾಧನೆಯ ಕಡೆ ನಡೆಯುತಿರು ಸಖೀ ********

ನವಿರು ಹಾಸ್ಯದೊಳಗೆ ಚುಚ್ಚುವ ಮೊನಚಿದೆ ಹಿಂದೊಮ್ಮೆ ಪ್ರಮಿಳಾ ರಾಜ್ಯವೊಂದಿತ್ತಂತೆ. ಅಲ್ಲಿ ಮಹಿಳೆಯರೇ ರಾಣಿಯರು, ಅಧಿಕಾರದಲ್ಲಿರುವವರು ಎಲ್ಲಾ. ಅಲ್ಲಿ ಗಂಡಸರಿಗೆ ಪ್ರವೇಶವೇ ಇರಲಿಲ್ಲವಂತೆ. ಸಂತಾನ ಬೇಕಾದ ಸ್ತ್ರೀಯರೂ ರಾಜ್ಯದ ಹೊರಗೆ ಹೋಗಿ ಪಡೆಯಬೇಕಾಗಿತ್ತಂತೆ. ಒಂದುವೇಳೆ ಗಂಡು ಸಂತಾನವನ್ನು ಪಡೆದರೆ ಆ ಮಗುವನ್ನು ಅಲ್ಲಿಯೇ ಬಿಟ್ಟು ಬಿಡುವುದು ಅನಿವಾರ್ಯವಾಗಿತ್ತಂತೆ. ಆದರೆ ಹೆಣ್ಣು ಮಗುವಾಗಿದ್ದರೆ ಮಾತ್ರ ತಮ್ಮ ರಾಜ್ಯಕ್ಕೆ ಕರೆದೊಯ್ಯಬಹುದಿತ್ತಂತೆ. ಅಂತಹುದ್ದೊಂದು ಪ್ರಮಿಳಾ ರಾಜ್ಯವಿದ್ದರೆ  ನಾನೂ ಅಲ್ಲಿಯೇ ಹೋಗಿ ಇರಬಹುದಾಗಿತ್ತು ಎಂದು ಎಷ್ಟೋ ಸಲ ಅಂದುಕೊಳ್ಳುತ್ತಿರುತ್ತೇನೆ. ಎಷ್ಟೊಂದು ಕೆಲಸಗಳು. ಮುಗಿಯದ, ಮುಗಿಯಲೊಲ್ಲದ […]

ಮಾತು ಅರಳುವ ಹೊತ್ತು ನಗುವಿನೊಂದಿಗೆ ಜನ್ಮತಳೆದ ಸಂಬಂಧಗಳ ಭವಿಷ್ಯವನ್ನು ಮಾತು ನಿರ್ಣಯಿಸುತ್ತದೆ. ಮಾತು ಸರಾಗವೆನ್ನಿಸದ ಹೊರತು ಸಂಬಂಧಗಳನ್ನು ಸರಳವಾಗಿಸಿ ಸುಂದರಗೊಳಿಸಲಾಗದು. ಬದುಕಿನ ಸೂಕ್ಷ್ಮಗಳೆಲ್ಲವನ್ನೂ ತನ್ನೆಲ್ಲ ಚಾಣಾಕ್ಷತೆಯನ್ನು ಉಪಯೋಗಿಸಿ ಕಾಪಾಡಿಕೊಳ್ಳುವ ಮಾತು, ಅಗತ್ಯ ಬಿದ್ದಾಗಲೆಲ್ಲ ಸಂಬಂಧಗಳಿಗೊಂದು ಜೀವಂತಿಕೆಯನ್ನೂ ಒದಗಿಸುತ್ತದೆ. ಮಾತುಗಳೇ ಇಲ್ಲದ ಸಂಬಂಧವೊಂದು ಎಲ್ಲಿಯವರೆಗೆ ಜೀವಂತವಾಗಿ ಉಳಿದೀತು; ಎಲ್ಲ ನಕಾರಾತ್ಮಕತೆಯ ಪರಿಹಾರವೆನ್ನುವಂತೆ ಹೃದಯಕ್ಕಿಳಿವ ಮಾತು ಮಾತ್ರವೇ ಸಂಬಂಧಗಳನ್ನೆಲ್ಲ ಸಹೃದಯತೆಯ ಸೆರಗಿನಲ್ಲಿ ಬಚ್ಚಿಟ್ಟು ಸಾಕಿ ಸಲಹೀತು!           ಕಾಲಕಾಲಕ್ಕೆ ತಕ್ಕಂತೆ ಸಂಬಂಧಗಳ ಮೌಲ್ಯದ ಪರಿಕಲ್ಪನೆ ಬದಲಾಗುತ್ತಾ ಹೋದರೂ ಮಾತು ಮಾತ್ರ […]

ನಾಡಿ ಮಿಡಿತದ ದಾರಿ

ಪುಸ್ತಕಪರಿಚಯ ಪುಸ್ತಕ : ನಾಡಿ ಮಿಡಿತದ ದಾರಿ 🩺(ವೈದ್ಯಲೋಕದ ಅನುಭವ ಕಥನಗಳು) ಲೇಖಕರು: ಡಾ|| ಶಿವಾನಂದ ಕುಬಸದಪ್ರಕಾಶನ: ನೀಲಿಮಾ ಪ್ರಕಾಶನಬೆಂಗಳೂರುಪುಟಗಳು: 160ಬೆಲೆ: ರೂ. 130/-ಪ್ರಕಟಿತ ವರ್ಷ: 2019ಲೇಖಕರ ದೂರವಾಣಿ: 9448012767 ವೃತ್ತಿಯಿಂದ ಪರಿಣತ ಶಸ್ತ್ರ ಚಿಕಿತ್ಸಕರಾಗಿ, ಜನಾನುರಾಗಿ ವೈದ್ಯರಾಗಿ, ವಿವಿಧ ವ್ಯಾಧಿಗಳ ಕುರಿತು ಜನತೆಗೆ ಮಾಹಿತಿ ನೀಡುವ ವಕ್ತಾರರಾಗಿ, ಗ್ರಾಮೀಣರ ಮೂಡನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಮನೋಭಾವ ಮೂಡಿಸುವ ಆಪ್ತ ಬಂಧುವಾಗಿ, ರೋಗಿಗಳ ಸೇವೆಯಲ್ಲಿ ದೇವರನ್ನು ಕಾಣುವ ಕಾಯಕ ಯೋಗಿಯಾಗಿ, ಸೃಜನಶೀಲ ಕವಿ, ಲೇಖಕರಾಗಿ ಒಂದು ಪ್ರದೇಶದ ಒಂದು […]

ಮಾರುವವಳು

ಕವಿತೆ ಮಾಂತೇಶ ಬಂಜೇನಹಳ್ಳಿ ಮೂರನೇ ತಿರುವಿನ ಬಾನೆತ್ತರದ ದೀಪದ ಕಂಬದ ಅಡಿ ನಿಂತ ಆಗಸದಗಲ ಛತ್ರಿಯ ಕೆಳ ಮಲ್ಲಿಗೆ ತುರುಬಿನ ಎಳವೆ ಮಲ್ಲೆಗೆ, ರಾಶಿಯೋಪಾದಿ ಕೋರೈಸುವ ಹೂಗಳ ಸ್ಪರ್ಶ ಗೆಳೆತನ. ಉದುರಿದ ದಿನಗಳು ಈಗೀಗ ಒಗ್ಗುತ್ತಿವೆ, ಬಿರಿದ ಚೆಂಗುಲಾಬಿ ಮುಡಿದು, ಸೂರ್ಯನಿಳಿವ ಹೊತ್ತಿಗೆ ಮುದುಡಿದ ದೇಹ, ಕತ್ತಲೆಯಾಗುತ್ತಲೇ ಹೊರಡುವ ತರಾತುರಿ.. ಒಣಗಿ ಮಬ್ಬೇರಿದ ಕಂದು ಹೂಗಳ ನೆತ್ತಿಯಿಂದೆ ಸುತ್ತಿದಾಕೆ, ತಾನು ಒಪ್ಪದ ವರನ ವರಿಸದ್ದಕ್ಕೆ, ಹಿಂದೆ ಬಿದ್ದವರ ಸಲಹಲು, ಭವಿಷ್ಯ ಪಕ್ಕಕ್ಕೆ ಎತ್ತಿಟ್ಟವಳು. ಈಗೀಗ ಮುಂಜಾನೆ ಅರಳಿ, […]

ಪ್ರೀತಿ ಮತ್ತು ಪ್ರೀತಿ ಮಾತ್ರ

ಪ್ರೀತಿ ಮತ್ತು ಪ್ರೀತಿ ಮಾತ್ರಲೇಖಕರು – ಜ್ಯೋತಿ ಗುರು ಪ್ರಸಾದ್ ಆರಂಭದ ಲೇಖನದಲ್ಲಿ ಪರಿಸರ ಹೋರಾಟಗಾತಿಯಾದ ದಿವಂಗತ ಕುಸುಮಾ ಸೊರಬ ಅವರ ಬಗ್ಗೆ ತಿಳಿಸುತ್ತಾ ಲೇಖಕಿಯು ಅವರ ಈ ಮಾತುಗಳನ್ನುಉಲ್ಲೇಖಿಸುತ್ತಾರೆ ಗಮನಿಸಿ – ” ಗಿಡ ಬೆಳೆಸಿದೆವನಿಗೆ ನರಕವಿಲ್ಲ” ಎಂಬ ಅಂಶ ಗರುಡ ಪುರಾಣದಿಂದಲೇ ಆರಂಭವಾಗಿ ಅಂದಿನ ಜನಜೀವನದ ದಿನನಿತ್ಯ ಕಾರ್ಯಕ್ರಮವಾಗಿತ್ತು. ಪರಿಸರ ರಕ್ಷಣೆ ಹಾಗೆಂದು ತಿಳಿದುಕೊಳ್ಳದೆಯೇ ಜೀವನದ ಆಂಗ ಆಗಿತ್ತು. ಈಗ ಮಾತ್ರ ಇದು ಫ್ಯಾಶನ್. ಮಳೆ – ಇಳೆ ಎಂಬ ಪೃಥ್ವಿಯನ್ನು ರಕ್ಷಣೆ ಮಾಡುವುದೇ […]

ಸ್ವಾತ್ಮಗತ

ಸುಭಾಷ್ ಪಾಳೇಕರರ ‘ಸಹಜ ಕೃಷಿ ಪದ್ದತಿ’ಯೂ..! ಮೈಸೂರಿನ ಆರ್.ಸ್ವಾಮಿ.ಆನಂದರ ‘ಸುಭಾಷ್ ಪಾಳೇಕರರ ಸಹಜ ಕೃಷಿ’ ಪುಸ್ತಕವೂ.!! ಕಳೆದ ಜುಲೈನಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ‘ಶೂನ್ಯ ಬಂಡವಾಳದ (ನೈಸರ್ಗಿಕ) ಕೃಷಿ’ಯನ್ನು ಉತ್ತೇಜಿಸುವುದಾಗಿ ಉಲ್ಲೇಖಿಸಿದ್ದರು. ಇದಕ್ಕೂ ಮುಂಚೆಯೇ ಕರ್ನಾಟಕವೂ ಸೇರಿದಂತೆ ಆಂಧ್ರ ಪ್ರದೇಶ, ಛತ್ತೀಸ್ ಘಡ, ಹಿಮಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲೂ ಈ ಕೃಷಿ ಪದ್ದತಿಯನ್ನು  ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯಾಯ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿವೆ. […]

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ

ದಬದಬೆಗೆ ಧೈರ್ಯ ಕೊಟ್ಟವನೂ ಸೀರೆಯುಟ್ಟ ಇಣಚಿಯೂ ಪ್ರಜ್ಞಾ ಮತ್ತಿಹಳ್ಳಿ            ತನ್ನೆಲ್ಲ ಎಲೆಗಳನ್ನುದುರಿಸಿಕೊಂಡು ಒಣಗಿ ನಿಟಾರನೆ ನಿಂತುಕೊಂಡ ಬಿದಿರು ಗಳದಂತಹ ಎಲುಬುಗಳಿಗೆ   ಚರ್ಮ ಸುತ್ತಿ ಇಟ್ಟ ಹಾಗೆ ಭಾಸವಾಗುವ ಅವಳ ಕುತ್ತಿಗೆಯ ನರಗಳು ಹಸಿರು ಕಾಡು ಬಳ್ಳಿಗಳಂತೆ ಉಬ್ಬುಬ್ಬಿ ಗಂಟಲು ಹರಿದು ಹೊರಬಂದು ಬಿಡುತ್ತವೋ ಎಂಬಂತೆ ಕಾಣುತ್ತಿದ್ದವು. ಹಕ್ಕಿಯೊಂದು ಮೊಟ್ಟೆಯಿಡಲು ಮರದ ಕಾಂಡದಲ್ಲಿ ಹುಡುಕಿಕೊಂಡ ಡೊಗರಿನ ಹಾಗೆ ಎಲುಬುಗಳ ನಡುವೆ ಖಾಲಿ ಜಾಗ ಎದ್ದು ಕಾಣುತ್ತಿತ್ತು.  ಬದುಕಿನ ನಲವತ್ತು ವರ್ಷ ಜೊತೆಗಿದ್ದ ಅಸ್ತಮಾ ಅವಳ ಉಸಿರಾಟದ ರೀತಿಯನ್ನೇ […]

Back To Top