ಗಜಲ್

ಗಜಲ್

ಗಜಲ್ ಶಮಾ. ಜಮಾದಾರ. ತರಗಲೆಯ ಅಲುಗಾಟದಲಿ ನಿನ್ನ ಕಾಲ್ಸಪ್ಪಳಕೆ ಕಾಯುತಿರುವೆಕೊರಕಲಿನ ಇಳಿಜಾರಿನಲಿ ನಿನ್ನ ದರುಶನಕೆ ಕಾಯುತಿರುವೆ ಲೋಕದ ನಾಲಿಗೆ ಹೊಸದೊಂದು ಪಟ್ಟಕಟ್ಟಿ ನಗುತಿದೆಅಮವಾಸ್ಯೆ ರಾತ್ರಿಯಲಿ ಬೆಳದಿಂಗಳಕೆ ಕಾಯುತಿರುವೆ ಯುಗಗಳಿಂದಲೂ ಪ್ರೀತಿ ನಿರೀಕ್ಷೆಯಲಿ ಪರಿತಪಿಸಿದೆನಿರ್ಭೀತ ಹೊಸಗಾಳಿಯಲಿ ಉಸಿರಾಟಕೆ ಕಾಯುತಿರುವೆ ಮನುಜ ಮಾಡಿದ ಮತಪಂಗಡಗಳು ಬೇಲಿ ಕಟ್ಟುತ್ತಲಿವೆಸೌಹಾರ್ದದ ಹೃದಯಗಳಲಿ ಸಮನ್ವಯಕೆ ಕಾಯುತಿರುವೆ ಎದೆಯ ಗೂಡುಗಳಲಿ ನಗಬೇಕು ನಿಸ್ವಾರ್ಥ ಶಮೆಗಳುಕಳಚಿದ ಬೇಡಿಗಳಲಿ ಅನುಸಂಧಾನಕೆ ಕಾಯುತಿರುವೆ **********************************

ಕಾವ್ಯಯಾನ

ಆಯ್ಕೆ ಪವಿತ್ರ ಎಂ. ‘ಮರ ಬೆಳೆಸಿ’ಧರೆ ಉಳಿಸಿಕೂಗುತಿದೆ ಜಾಹಿರಾತು.ಉರುಳಿಸಿ ಅಗಲಿಸಿಡಾಂಬರರಿಸಿ ಪೋಷಿಸುತಿದೆನಿಯಮದಾದೇಶ.ಅದು ಮತಿಗಾಯ್ಕೆ ಅಗ್ನಿಪರೀಕ್ಷೆಜಾಣ್ಮೆಗಾಯ್ಕೆ ವಿವೇಕಕಾಯ್ಕೆಮಗುವ ಚಿವುಟಿ ಲಾಲಿ ಹಾಡ್ವಕವಲದಾರಿ ಪಯಣ!ತೋರಿಕೆಗೇಕೆ ಧೋರಣೆ?ಜನರಾಯ್ಕೆ ನೀನುಕಾಯ್ವ ಹೊಣೆ ನಿನ್ನದೇ. ***********************

ಅಂಕಣ ಬರಹ ಫ್ರಾಂಕಿನ್‌ಸ್ಟೆನ್ ಫ್ರಾಂಕಿನ್‌ಸ್ಟೆನ್ಮೂಲ ಇಂಗ್ಲಿಷ್ : ಮೇರಿ ಷೆಲ್ಲಿ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟಣೆಯ ವರ್ಷ :೨೦೦೭ ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೆöನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ. ನಿಸರ್ಗ ನಿಯಮಗಳ ವಿರುದ್ಧ ಹೋಗುವ ಅಹಂಕಾರವನ್ನು ಮನುಷ್ಯ ತೋರಿಸಿದರೆ ಪರಿಣಾಮವೇನಾಗಬಹುದು ಎಂಬ ವಿಷಯದ ಕುರಿತುಳ್ಳ ಈ ಕಾದಂಬರಿತನ್ನ ನಿರೂಪಣೆಗೆ ಫ್ಯಾಂಟಸಿ ಶೈಲಿಯನ್ನು ಆಯ್ದುಕೊಂಡಿದೆ ಮಾತ್ರವಲ್ಲದೆ ಅದು ಒಂದು […]

ಗಜಲ್ ಸಿದ್ಧರಾಮ ಕೂಡ್ಲಿಗಿ ನನಸಾದ ಕನಸುಗಳು ಮತ್ತೆ ಕನಸಾದವಲ್ಲ ಅದೆಂಥ ನೋವುಕಂಬನಿಯೆಲ್ಲ ಮುತ್ತಾಗಿ ಮತ್ತೆ ಕಂಬನಿಯಾದವಲ್ಲ ಅದೆಂಥ ನೋವು ಇರುಳ ಕನವರಿಕೆಗಳೆಲ್ಲ ನೆನಪಿನೊಂದಿಗೆ ಉರಿವ ಚಿಕ್ಕೆಗಳಾದವುತಣ್ಣಗಿದ್ದ ಚಂದಿರ ಮತ್ತೆ ಉರಿಗೋಳವಾದನಲ್ಲ ಅದೆಂಥ ನೋವು ನೀ ನಡೆದು ಹೋದ ಹಾದಿಯ ಹೂಗಳೆಲ್ಲ ಮುಖ ಬಾಡಿಸಿದವುಮುಳ್ಳುಗಳೆಲ್ಲ ಹೂವಾಗಿ ಮತ್ತೆ ಮುಳ್ಳಾದವಲ್ಲ ಅದೆಂಥ ನೋವು ಉಲ್ಲಾಸದಿಂದಿದ್ದ ತಂಗಾಳಿಯೂ ಸಹ ಚಂಡಮಾರುತವಾಯಿತುತಣ್ಣನೆಯ ಮಳೆಯೂ ಕೆಂಡದ ಮಳೆಯಾಯಿತಲ್ಲ ಅದೆಂಥ ನೋವು ನಿನ್ನೆದುರು ನಲಿಯುತ್ತಿದ್ದ ಸಿದ್ಧನ ಹೃದಯ ಮಿಡಿತವನ್ನೇ ಮರೆತಿದೆಸಂತಸದಿಂದಿದ್ದ ಉಸಿರು ವೇದನೆಯ ಉಸಿರಾಯಿತಲ್ಲ ಅದೆಂಥ […]

ಗಜಲ್ ಪ್ರೇಮಾ ಹೂಗಾರ ಅಳು ಬಂದರೂ ಅಳಲಾರೆ ಆ ಹನಿಯಲ್ಲಿ ಜಾರಿಹೋಗುವೆ ಎಂಬ ಸಂಕಟನಗು ಬಂದರೂ ನಗಲಾರೆ ಆ ನಗುವಿನೊಂದಿಗೆ ಕಳೆದುಹೋಗುವೆ ಎಂಬ ಸಂಕಟ ನಿನ್ನ ಗಜಲ್ ಸಾಲಿನಲ್ಲಾದರೂ ಜೀವಂತ ಇರುವೆನಲ್ಲ ಎಂಬುದೇ ಸಮಾಧಾನಹಾಡು ಬಂದರೂ ಹಾಡಲಾರೆ ಆ ಹಾಡಿನೊಂದಿಗೆ ಹಾರಿಹೋಗುವೆ ಎಂಬ ಸಂಕಟ ಅಕ್ಷರಗಳ ಜೊತೆಗೇ ಒಂದಾಗಿ ಬೆರೆತೆವು ನಲಿದೆವು ಮುನಿಸ ತೋರಿದೆವು ರೋದಿಸಿದೆವುಬರೆಯಬೇಕೆಂದರೂ ಬರೆಯಲಾರೆ ಆ ಬರಹದೊಂದಿಗೆ ಖಾಲಿಯಾಗುವೆ ಎಂಬ ಸಂಕಟ ಬದುಕಿನ ಪ್ರತಿ ಕ್ಷಣದಲೂ ಜೊತೆಯಾದೆವು ಪ್ರತಿ ಕ್ಷಣವನು ಹಂಚಿಕೊಂಡೆವುನಡೆಯಬೇಕೆಂದರೂ ನಡೆಯಲಾರೆ ಆ […]

ಗಜಲ್ ಮುರಳಿ ಹತ್ವಾರ್ ಹೊಳೆವ ನೀರ ಮೇಲೆ ಅರಳಿದ ತಾವರೆಯಲ್ಲಿ ನಿನ್ನದೇ ನೆನಪುಸುಳಿವ ತಂಗಾಳಿಗೆ ನಾಚಿ ಸರಿವ ಅಲೆಯಲ್ಲಿ ನಿನ್ನದೇ ನೆನಪು ಶಿಶಿರದಾ ಎಳೆಬಿಸಿಲು ಉಸಿರಿತ್ತು ತೆರೆವ ಚಿಗುರಿನೆಲೆಯಲ್ಲಿಆ ನೆಲೆಯ ಹಕ್ಕಿಗಳ ಚಿಲಿಪಿಲಿಯ ಹಾಡಿನಲ್ಲಿ ನಿನ್ನದೇ ನೆನಪು! ಬಸಿರೊಡೆದ ಮುಗಿಲು ಸುರಿಸುವ ತಿಳಿನೀರ ಹನಿಹನಿಗಳ ಸ್ಪರ್ಶದಲಿಹಸಿರೊಡೆದ ಮನದಿ ಮೂಡುವ ಕಾಮನಬಿಲ್ಲಿನಲ್ಲಿ ನಿನ್ನದೇ ನೆನಪು! ನೆಗೆನೆಗೆದು ಧುಮುಕುತ್ತ ಸರಿಸರಿವ ನದಿಗಳ ಬಳುಕಿನಲ್ಲಿಅಬ್ಬರದ ಅಲೆಗಳಲಿ ದಡವನಪ್ಪುವ ಶರಧಿಯಲ್ಲಿ ನಿನ್ನದೇ ನೆನಪು! ಚಳಿಯೊಡೆವ ಇರುಳುಗಳು ಮಬ್ಬಿಟ್ಟ ನಸುಕಿನ ಮಂಜಿನಲಿರಾಧೆಯ ನೆನೆನೆನೆದು ಮೆರೆವ […]

ಗಜಲ್ ಸುಜಾತಾ ರವೀಶ್ ನೆಲವ ನೋಡುತ ನಡೆಯಲು ಒಲವು ಪದವಾಗಿ ಇಳಿಯಿತಲ್ಲ ಗೆಳೆಯಾಛಲವ ಬಿಡುತ ಸಾಗಿರಲು ನಲಿವು ಹದನಾಗಿ ಉಳಿಯಿತಲ್ಲ ಗೆಳೆಯಾ ಬಲವ ತೋರಲು ಬದುಕಿದು ಗೆಲುವು ಕಾಣುವುದು ತೋರಿಕೆಯಲಿ ಮಾತ್ರನಿಲುವ ಬದಲು ಮಾಡಿರಲು ಜಗವು ಸೊಗವೆಂದು ತಿಳಿಯಿತಲ್ಲ ಗೆಳೆಯಾ ಹಮ್ಮಿನ ಪರದೆ ಸುತ್ತೆತ್ತಲೂ ಧಿಮ್ಮನೆ ಕವಿಯುತ ಮಂಜಾಯಿತೇಕೆ ದೃಷ್ಟಿ ಬಿಮ್ಮನು ತೊರೆದು ವರ್ತಿಸಲು ಘಮ್ಮನೆ ಪರಿಮಳ ಸುಳಿಯಿತಲ್ಲ ಗೆಳೆಯಾ ಎಳವೆ ಕಲಿಸಿದ ರಾಗಗಳ  ಆಲಾಪ ಮರೆತರೆ ಪ್ರಬುದ್ದರಾದಂತೆಯೇಸುಳಿವೆ ಕಾಣಿಸದೆ ನೋವುಗಳ ಪ್ರಲಾಪ ಜೀವನದಿ ಅಳಿಯಿತಲ್ಲ ಗೆಳೆಯಾ ಅಧ್ಯಾತ್ಮ […]

ಅಂಕಣ ಗಜಲ್ ಜಯಶ್ರೀ.ಭ. ಭಂಡಾರಿ. ಸರಿದು ಹೋಯ್ತು ಮತ್ತೊಂದು ಪ್ರೇಮಿಗಳ ದಿನಮರೆಯಲಾರೆ ನಾವಿಬ್ಬರೂ ಸಂಧಿಸಿದ ಆ ಸುದಿನ ಸಖನೇ ಜೋರಾದ ಮಳೆ ಅಬ್ಬರಕ್ಕೆ ನಡುಗಿ ನಿಂತಿದ್ದೆ ಮರದ ಕೆಳಗೆಸರಿ ಸಮಯಕೆ ಹಿತವಾಗಿ ಬಂದು ತುಂಬಿ ನಿಂತೆ ಮೈಮನ ಸಖನೇ ಪ್ರೀತಿ ದೇವನಿಟ್ಟ ವರ ಅದಕೆ ನೀ ನನಗೆ ದಕ್ಕಿದೆ ನೀ ನಿಟ್ಟೆ ಹಣೆಗೆ ಚುಕ್ಕಿ ಅದಕೆ ಸಲ್ಲಿಸುವೆ ದೇವಗೆ ನಮನ ಸಖನೇ ಪ್ರತಿ ಬಾರಿ ಈ ದಿನ ನಮ್ಮದೆ ಗುಲಾಬಿಯಲಿ ರಂಗಾಗಲುಹೊಸ ಚೈತನ್ಯ ತುಂಬಿ ಬರುತಿರಲು ಒಲವ ಗಾನ […]

ಗಜಲ್ ರೇಖಾ ಭಟ್ ಗುಡಿಸಲುಗಳ ಹೊಸ್ತಿಲಲಿ ಹಣತೆಗಳು ಬೆಳಗಿದರೆ ಅಂದು ದೀಪಾವಳಿಹಬ್ಬಿದ ಗೆದ್ದಲುಬಳ್ಳಿ ಉದುರಿ ಹಸೆಚಿತ್ರ ಮೂಡಿದರೆ ಅಂದು ದೀಪಾವಳಿ ಹಬ್ಬವೆಂದರೆ ಹೊಸ ಬಟ್ಟೆ ಹೊಸ ವೇಷ ಹೊಸ ನೋಟ ಇಷ್ಟೇ ಅಲ್ಲಹರಿದ ಅಂಗಿಯ ತುದಿಯಲಿ ಪಾಯಸವು ಅಂಟಿದ್ದರೆ ಅಂದು ದೀಪಾವಳಿ ರಂಗು ಬೆಳಕಿನಲಿ ನಡೆವ ನಶೆಯ ಕೂಟಗಳಿಗೆ ದೀಪಾವಳಿಯೇ ಆಗಬೇಕೆ‘ಮದ್ಯ’ದಲಿ ಕರಗುವ ಪುಡಿಗಾಸು ಕೂಸಿನ ಕಾಲ್ಗೆಜ್ಜೆಗಾದರೆ ಅಂದು ದೀಪಾವಳಿ ನೊಂದ ಜೀವಗಳಲಿ ಆಶಾಭಾವದ ಮಿಣುಕು ಮೊದಲು ಉದಿಸಬೇಕಿದೆ ಇಲ್ಲಿಕಸಮುಸುರೆಯಲಿ ಕನಸರಳಿಸುವ ಕೈಗಳಿಗೆ ಬಿಡುವಾದರೆ ಅಂದು ದೀಪಾವಳಿ […]

ಗಜಲ್ ಮುತ್ತು ಬಳ್ಳಾ ಕಮತಪುರ ನಿ‌ಮಗೆ ಮುಳ್ಳಂತೆ ಚುಚ್ಚುವುದು ಗೊತ್ತು |ಪ್ರೀತಿಸಿದರೆ ಹೂ ಹಣ್ಣಾಗುವುದು ಗೊತ್ತು || ಕಂಗಳಿಗೆ‌ ಸೋಲದವರು ಯಾರು ಹೇಳಿ |ಅಂದಕೆ ಮೋಸ ಮಾಡುವುದು ಗೊತ್ತು || ನೋವುಗಳು ನುಂಗಿದ ಮೌನ ಸಾಗರದಷ್ಟು |ಒಂದು ತಪ್ಪು ಬದುಕೇ ಬದಲಿಸುವುದು ಗೊತ್ತು || ಅಲೆವ ಜೀವ ನದಿ ಕೊನೆಗೆ ಅಂತ್ಯವಾಗುದೆ |ಬೆಣ್ಣೆಯಂತ ಸ್ನೇಹ ಬೆಸೆಯುವುದು ಗೊತ್ತು || ಒಂಟಿ ಚಂದ್ರನು ಬಣ್ಣ ಬದಲಿಸಿದ ಮುತ್ತು|ಬೆವರ ಹನಿ ನೆಲವ ತಣಿಸಿರುವುದು ಗೊತ್ತು | ಕದಡಿದ ಮನದಲಿ ಆಸೆಯ […]

Back To Top