ಪ್ರಸ್ತುತ

ಪ್ರಸ್ತುತ

‘ಜಾಲ’ತಾಣ ಸ್ಮಿತಾ ರಾಘವೇಂದ್ರ ಹೆಸರೇ ಹೇಳುವಂತೆ ಇದೊಂದು “ಜಾಲ” ಮತ್ತೆ ನಾವೆಲ್ಲ ಅಲ್ಲಿ “ತಾಣ” ಪಡೆದವರು ಜಾಲದೊಳಗೆ ಸಿಲುಕಿಕೊಂಡ ಕೀಟದಂತಾಗಿದ್ದೇವೆ.. ಆದರೂ ನಾವಿಲ್ಲಿ ತಂಗಿದ್ದೇವೇ ತಂಗುತ್ತೇವೆ ಇಂದೂ ಮುಂದೂ ಸದಾ ತಂಗಲೇ ಬೇಕಾದ ಜಾಲದಲ್ಲಿ ಒಂದಿಷ್ಟು ಜಾಗೃತೆಯೂ ಮುಖ್ಯ ಅಂಶವಾಗುತ್ತದೆ. ಹೌದು.. ಸಾಮಾಜಿಕ ಜಾಲತಾಣವು ಸಂಬಂಧಗಳನ್ನು ಕಸಿಯುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಎಂಬುದು ಜನ ಜನಿತವಾದ ಮಾತು ಮತ್ತು ಸತ್ಯದ ಮಾತುಕೂಡಾ.. ಯಾಕೆ!? ಎಂದು ಸ್ವಲ್ಪವೇ ಸ್ವಲ್ಪ ವಿಚಾರಮಾಡುವದಕ್ಕೂ ನಮಗಿಂದು ಸಮಯವಿಲ್ಲ.. ಯಾಕೆಂದರೆ ನಮ್ಮ ಅಳಿದುಳಿದ ಸಮಯವನ್ನು ಜಾಲತಾಣ […]

ಚಳಿ ಮತ್ತು ಅಗ್ಗಿಷ್ಠಿಕೆ

ಚಳಿ ಮತ್ತು ಅಗ್ಗಿಷ್ಠಿಕೆ ಮಳೆಗಾಲದ ಒಂದು ಸಂಜೆ ಕಪ್ಪುಗಟ್ಟಿದ್ದ ಹಡಗಿನಂತ ಮೋಡಗಳುಸ್ಪೋಟಗೊಂಡು ಸುರಿದ ಜಡಿ ಮಳೆಗೆಸಿಕಿ ತೊಯ್ದು ತೊಪ್ಪೆಯಾದವಳ ಬಟ್ಟೆ ಒಣಗಿಸಲುನನ್ನ ಪುಟ್ಟ ಹಿತ್ತಲಿತ್ತು ಗಡಗಡ ನಡುಗಿಸುವ ಚಳಿಗೆಅಗ್ಗಿಷ್ಠಿಕೆಯಾಗಿ ನಾನಿದ್ದೆ. ಮಳೆ ಸುರಿದು ಸರಿದು ಹೋಯಿತುಹಿಂಬಾಲಿಸಿಕೊಂಡು ಬಂದ ಬಿಸಿಲುಬಂದ ಮಳೆಯ ಮರೆಸಿತು ಮತ್ತೆಂದೂ ಇಲ್ಲಿ ಅಂತ ಘನಮೋಡ ಕಟ್ಟಲಿಲ್ಲಮಳೆಯಾಗಲಿಲ್ಲಬಿಸಿಲ ಝಳಕ್ಕೆ ಬರಬಿದ್ದ ಊರಿಗವಳೆಂದೂ ಬರಲೇ ಇಲ್ಲ ಮತ್ತೀಗ ಅಲ್ಲಿ ಮಳೆಯಾಗುತ್ತಿರ ಬಹುದುಅವಳಲ್ಲಿ ನೆನೆಯುತ್ತಲೂ ಇರಬಹುದು ಆ ಊರಲ್ಲೂ ಹಿತ್ತಲುಗಳಿವೆಜೊತೆಗೆ ಅಗ್ಗಿಷ್ಠಿಕೆಗಳೂ!******** ಕು.ಸ.ಮಧುಸೂದನ ಕು.ಸ.ಮಧುಸೂದನ

ಪುಸ್ತಕ ವಿಮರ್ಶೆ

ಸಿರ್ವಂತೆ ಕ್ರಾಸ್ ದಿನೇಶ ಹುಲಿಮನೆ ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’ ಕಥೆಗಳ ಸಂಕಲನ..! ದಿನೇಶ ಹುಲಿಮನೆಯವರು ಮಲೆನಾಡು ಆದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಿಮನೆಯವರು. ಹಾಗಾಗಿ ಇಲ್ಲಿ ಬರುವ ಎಲ್ಲಾ ಕಥೆಗಳೂ ದಿನೇಶ ಹಲಿಮನೆಯವರ ಮಲೆನಾಡಿನ ಕಲರವವಿದ್ದಂತೆ ಭಾಸವಾಗುತ್ತವೆ. ಭಾಸವಾಗುವುದೇನು ಬಂತು ಇದು ನಿಜವೂ ಆಗಿದೆ. ಏಕೆಂದರೆ ಈ ದಿನೇಶ ಹುಲಿಮನೆಯವರ ಈ ‘ಸಿರ್ವಂತೆ ಕ್ರಾಸ್’ ಈ ಕಥೆಗಳ ಸಂಕಲನವು ‘ಸಿರ್ವಂತೆ ಕ್ರಾಸ್‌’ ಕಥೆಯೂ ಸೇರಿದಂತೆ ಒಟ್ಟು […]

ಸ್ವಾತ್ಮಗತ

ಕವಿ ಹೋರಾಟಗಾರ ಗವಿಸಿದ್ದ ಎನ್ ಬಳ್ಳಾರಿ ಕೆ.ಶಿವು ಲಕ್ಕಣ್ಣವರ ಹೈದರಾಬಾದ್ ಕರ್ನಾಟಕದ ಜನಧ್ವನಿ ಸಾಹಿತಿ, ಹೋರಾಟಗಾರ ಗವಿಸಿದ್ಧ ಎನ್. ಬಳ್ಳಾರಿ..! ಕೊಪ್ಪಳವನ್ನು ಕೇಂದ್ರವನ್ನಾಗಿಟ್ಟುಕೊಂಡೇ ರಾಜ್ಯಮಟ್ಟದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದವರು ಗವಿಸಿದ್ಧ ಎನ್. ಬಳ್ಳಾರಿ.ಯವರು. ಹುಟ್ಟಿದ್ದು ಜೂನ್ ೧೭, ೧೯೫೦ ರಂದು. ಮಾರ್ಚ್ ೧೪, ೨೦೦೪ ರಂದು ೫೪ ನೇ ವಯಸ್ಸಿನಲ್ಲೇ ನಿಧನರಾದರು… ಸಾಹಿತ್ಯ ಕ್ಷೇತ್ರದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪಡೆದವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಕೆಲಸ ನಿರ್ವಹಿಸಿದವರು… ಬಿ.ಎಸ್ಸಿ., ಎಂ.ಎ ಪದವೀಧರರು. ಪ್ರೌಢಶಿಕ್ಷಣದವರೆಗೆ ಕೊಪ್ಪಳದ ಗವಿಸಿದ್ಧೇಶ್ವರ […]

ಲಂಕೇಶರನ್ನು ಏಕೆ ಓದಬೇಕು?

ರಾಜೇಶ್ವರಿ ಬೋಗಯ್ಯ ಜಾಣ ಜಾಣೆಯರೆ , ಎನ್ನುತ್ತಾ ದಿಕ್ಕು ,ದೆಸೆಯಿಲ್ಲದೆ  ಓದುವುದಕ್ಕೂ ,ಬರೆಯುವುದಕ್ಕೂ ಒಂದು ಗುರಿ ಇಲ್ಲದೆ ಸಿಕ್ಕಿದ್ದೇ ಓದುತ್ತಾ ಅಲೆಯುತ್ತಿದ್ದ ಅತ್ರಪ್ತ ಬ್ಯೂಟಿಫುಲ್ ಮನಸ್ಸುಗಳನ್ನು ಸೆಳೆದು ಕೂರಿಸಿದ್ದೇ ನಮ್ಮ ಜಾಣರಲ್ಲಿ ಜಾಣರು ಲಂಕೇಶರು. ಲಂಕೇಶರನ್ನು ನಾನ್ಯಾಕೆ ಓದಬೇಕು ? ಅಥವಾ ನಾನೇಕೆ ಲಂಕೇಶರನ್ನು ಓದುತ್ತೇನೆ ? ಎರಡೂ ಪ್ರಶ್ನೆಗಳು ಬೇರೆ ಬೇರೆ ಅನ್ನಿಸಿದರೂ ಉತ್ತರ ಮಾತ್ರ ಒಂದೇ. ಲಂಕೇಶರನ್ನಲ್ಲದೆ ಇನ್ಯಾರನ್ನು ಓದಬೇಕು ? ಇದು ನನ್ನ ಮರು ಪ್ರಶ್ನೆ. ಲಂಕೇಶರಿಗಿಂತ ಮೊದಲು ಯಾರ್ ಯಾರನ್ನೋ ಓದಿ […]

ಕಾವ್ಯಯಾನ

ಅಡುಗೆ ಮನೆಯೆಂದರೆ ಸ್ಮಿತಾ ರಾಘವೇಂದ್ರ ಅಡುಗೆ ಮನೆಯೆಂದರೆ ಯುದ್ಧಕ್ಕೆ ಮೊದಲು ಎಲ್ಲವೂ ಶಾಂತವೇ ಯುದ್ದ ಮುಗಿದ ಮೆಲೂ… ಅನಿವಾರ್ಯ ಮತ್ತು ಅವಶ್ಯಕತೆ- ಸಂಭವಿಸುವ ಮುಂಚಿನ ಸಮಜಾಯಿಶಿ. ಅಣಿಗೊಳ್ಳಲು ಹೆಚ್ಚಿನ ತಯಾರಿ ಏನಿಲ್ಲ ಅತ್ತಿಂದಿತ್ತ ತಿರುಗಾಡುತ್ತಲೇ ಮಾತು ಒಗೆದಂತೆ- -ಅಣಿಮಾಡುವ ರಣರಂಗ. ನುಗ್ಗೆಕಾಯಿ ಸಪೂರ ದಂತವರು, ಹೊಟ್ಟೆ ಭಾರದ ದೊಣ್ಣ ಮೆಣಸಿನಂತವರು ಕೆಂಪು ಗಲ್ಲದ ಟೊಮೆಟೊ ಅಂತವರು, ಸೊಪ್ಪಿನಂತೆ ಉದ್ದ ಕೂದಲಿನವರು, ನಾ ನಾ ವಿಧದ ಸೈನಿಕರ ಗುಂಪು, ರಾಜನ ಆಗಮನವನ್ನೇ ಎದುರು ನೋಡುತ್ತ.. ಯಾರು ಮೊದಲು ಮಡಿಯಬಹುದು!? […]

ಕಾವ್ಯಯಾನ

ಗೆಳತಿ ನಕ್ಕುಬಿಡು ಮೂಗಪ್ಪ ಗಾಳೇರ ನಾನು ನೋಡಿದ ಹುಡುಗಿಯರೆಲ್ಲಾ….. ಪ್ರೇಯಸಿಯರಾಗಿದ್ದರೆ ನಾನು ಗೀಚಿದ ಸಾಲುಗಳೆಲ್ಲಾ ಕವಿತೆಗಳಾಗಬೇಕಿತ್ತಲ್ಲ! ದಡ್ಡಿ….. ನಿನಗಿನ್ನೂ ಹಗಲು ಮತ್ತು ರಾತ್ರಿಯ ವ್ಯತ್ಯಾಸ ಗೊತ್ತಿದ್ದಂತೆ ಕಾಣುತ್ತಿಲ್ಲ! ಕತ್ತಲನ್ನು ನುಂಗಿ ಬೆಳಕಾಯಿತೋ…! ಬೆಳಕನ್ನು ನುಂಗಿ ಕತ್ತಲಾಯಿತೋ…! ನೀನು ನನ್ನ ಜೊತೆ ಇಟ್ಟ ಒಂದೊಂದು ಹೆಜ್ಜೆಯೂ ಹಳೆ ಸಿನಿಮಾದ ಹಾಡುಗಳಂತೆ ನನ್ನೆದೆಯಲ್ಲಿ ಯಾವಾಗಲೂ ಗುನುಗುತ್ತಿರುತ್ತವೆ ಒಮ್ಮೊಮ್ಮೆ ಎದೆಭಾರ ಆದಾಗ ಕವಿತೆಯ ಸಾಲು ಬೇರೆಯಾಗಬಹುದು ಕವಿತೆ ಮಾತ್ರ ಎಂದೆಂದೂ ನೀನೆ ಒಂದೊಮ್ಮೆ ನನ್ನ ಕವಿತೆಯ ಸಾಲುಗಳನ್ನು ಯಾರೋ ಓದುತ್ತಿದ್ದಾರೆಂದರೆ ಅದು […]

ಪುಸ್ತಕ ಸಂಭ್ರಮ

ಕತ್ತಲೆಯೊಳಗಿನ ಮಹಾಬೆಳಗು ಲೇಖಕರು : ಡಾ. ಡಿ.ಎ.ಬಾಗಲಕೋಟ ಪ್ರಕಾಶಕರು : ಅಜಬ್ ಪ್ರಕಾಶನ, ನಿಪ್ಪಾಣಿ

ಕಾವ್ಯಯಾನ

ದೇವರ ದೇವ ಅಂಜನಾ ಹೆಗಡೆ ಕಾಲ ಎಲ್ಲವನ್ನೂ ಮರೆಸುತ್ತದೆ ಎಂದವ ಕಾಲಕ್ಕೆ ಕಿವುಡಾಗಿ ಕಣ್ಣುಮುಚ್ಚಿ ಉಟ್ಟಬಟ್ಟೆಯಲ್ಲೇ ಧ್ಯಾನಕ್ಕೆ ಕುಳಿತಿದ್ದಾನೆ ತಂಬೂರಿ ಹಿಡಿದು ತಂತಿಗಳ ಮೇಲೆ ಬೆರಳಾಡಿಸುತ್ತ ಶ್ರುತಿ ಹಿಡಿಯುತ್ತಾನೆ ಬೆರಳಲ್ಲಿ ಹುಟ್ಟಿದ ಬೆಳಕಿನ ಕಿರಣವೊಂದು ನರಗಳಗುಂಟ ಹರಿದು ಬೆಂಕಿಯಾಗಿ ಮೈಗೇರಿದೆ ಉಸಿರೆಳೆದುಕೊಳ್ಳುತ್ತಾನೆ ದೇವರ ಗೆಟಪ್ಪಿನಲ್ಲಿ ಕಾಲಮೇಲೆ ಕೈಯೂರಿದ್ದಾನೆ ಕಪ್ಪು ಫ್ರೆಮಿನ ದಪ್ಪಗಾಜಿನ ಕನ್ನಡಕ ರೂಪಕವಾಗಿ ಮುಚ್ಚಿದ ಕಿವಿಯ ಮೇಲೆ ಬೆಚ್ಚಗೆ ಕೂತಿದೆ ಕೈಗೆ ಸಿಗದ ಕಣ್ಣಿಗೆ ಕಾಣಿಸದ ಶಬ್ದ ಹಿಡಿಯಲು ಕುಳಿತವನ ಮೈಯೆಲ್ಲ ಕಣ್ಣು…. ಮುಚ್ಚಿದ ಕಣ್ಣೊಳಗೊಂದು […]

Back To Top