ಅಂಕಣ ಬರಹ ಎಲ್ಲಾ ಒಳ್ಳೆಯದೇ ಆಗುತ್ತೆ… ಈ ಥರದ ಮಾತುಗಳನ್ನ ನಾವು ಬಹಳಷ್ಟು ಸಾರಿ ಕೇಳಿರ್ತೇವೆ. “ಒಳ್ಳೇವ್ರಿಗೆ ಒಳ್ಳೆಯದೇ ಆಗುತ್ತೆ”, “ನಾವು ಒಬ್ರಿಗೆ ಒಳ್ಳೇದು ಮಾಡಿದ್ರೆ ದೇವರು ನಮಗೆ ಒಳ್ಳೇದು ಮಾಡ್ತಾನೆ”, “ತಾತ ಮಾಡಿದ ಪಾಪ ಮೊಮ್ನೊಗನಿಗೆ”… ಹೀಗೆ ಹಲವಾರು ಮಾತುಗಳು… ಇವೆಲ್ಲ ಬರಿಯ ಮಾತುಗಳಲ್ಲ, ಅದೊಂದು ದೈತ್ಯ ಶಕ್ತಿಯ ನಂಬಿಕೆ, ನಮ್ಮ ಬದುಕನ್ನು ಮುನ್ನಡೆಸುವ ಶಕ್ತಿ. ನನ್ನ ತಂದೆ ಒಬ್ಬ ಪ್ರಾಮಾಣಿಕ ಹೈಸ್ಕೂಲ್ ಗಣಿತದ ಮೇಷ್ಟ್ರು. ತಮ್ಮ ವಿದ್ಯಾರ್ಥಿಗಳಿಗೆ ಸ್ವಂತ ಮಕ್ಕಳ ರೀತಿಯಲ್ಲೇ ಭಾವಿಸಿ ಪಾಠ […]

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ!

ಅನುಭವ ಕಥನ  ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! ವಿಜಯಶ್ರೀ ಹಾಲಾಡಿ ಹೋಳಿಹಬ್ಬ ಬರುವುದು ಬೇಸಗೆಯ ವಸಂತಮಾಸದಲ್ಲಿ… ಅಂದರೆ ಮಾವು, ಗೇರು ಮತ್ತು ಕಾಡಿನ ಬಹುತೇಕ ಮರಗಳು ಚಿಗುರು, ಹೂ ಬಿಡುವಕಾಲದಲ್ಲಿ. ವಿಜಿಯ ಮನೆ ಹತ್ತಿರದ ಕಾಡುಗಳಲ್ಲಿ ಕೆಲವು ಮಾವಿನಮರಗಳಿದ್ದವಲ್ಲ, ಅವು ಚಿಗುರು ಬಿಡುವುದನ್ನು ನೋಡಬೇಕು! ಇಡಿ ಮರವೇ ಹೊಳೆಯುವ ಕೆಂಪು ಬಣ್ಣವಾಗಿಬಿಡುತ್ತಿತ್ತು. ಇದೇ ಸಂದರ್ಭದಲ್ಲಿ ಹೋಳಿಹಬ್ಬವೂ ತನ್ನ ಬಣ್ಣ ಸೇರಿಸಿ ಕೆಂಪು, ಹಳದಿ, ಹಸಿರು, ಕಿತ್ತಳೆ ವರ್ಣಗಳಲ್ಲಿ ಅವರ ಊರು ಹೊಳೆಯುತ್ತಿತ್ತು. ಅಲ್ಲಿ ಕುಡುಬಿ ಜನಾಂಗದವರ ಮನೆಗಳು ಸಾಕಷ್ಟಿದ್ದವು. […]

ಅಂಕಣ ಬರಹ ಹೊಸ ದನಿ ಹೊಸ ಬನಿ – ೧೫. ದೀರ್ಘ ಶೀರ್ಷಿಕೆಗಳ ಭಾರದಲ್ಲೂ ಸರಳ ನಡಿಗೆಯ ಮಂಜುಳ. ಡಿ  ಕವಿತೆಗಳು ಮಂಜುಳ ಡಿ ಈಗಾಗಲೇ ವಿಶ್ವವಾಣಿ ಪತ್ರಿಕೆಯ ಅಂಕಣ ಬರಹಗಾರರಾಗಿ ಕವಯತ್ರಿಯಾಗಿ ಖ್ಯಾತರಾದವರು. ಈಗಾಗಲೇ ಮೂರು ಪುಸ್ತಕಗಳನ್ನು ಪ್ರಕಟಿಸಿರುವ ಅವರು ಬೆಂಗಳೂರಿನವರು. ಅವರ ಫೇಸ್ಬುಕ್ ಬರಹಗಳಲ್ಲಿ ಗದ್ಯ ಪದ್ಯಗಳ ಮಿಶ್ರಣವನ್ನು ಕಾಣಬಹುದು. “ಆಸೆಯ ಕಂದೀಲು” ಕವನ ಸಂಕಲನಕ್ಕೆ ಕಾವ್ಯ ವ್ಯಾಮೋಹಿ ವಾಸುದೇವ ನಾಡಿಗರು ಮುನ್ನುಡಿ ಬರೆದಿರುವುದರಿಂದ ಸಂಕಲನದ ಗುಣ ನಿಷ್ಕರ್ಷೆ ಸುಲಭದ್ದೇ ಆಗಿದೆ. ಈ ಸಂಕಲನ […]

ಅಂಬರ ಫಲ!

ಕವಿತೆ ಅಂಬರ ಫಲ! ಗಣಪತಿ ಗೌಡ ಅಂಬರದಲಿ ತೂಗುತಿಹುದುಒಂದೇ ಒಂದು ಹಣ್ಣು,ಬೆಳದಿಂಗಳ ರಸವೇ ಕುಡಿದು––ತಂಪು ರಸಿಕ ಕಣ್ಣು!/ಅಂಬರದಲಿ. ……// ಕೆಲ ದಿನದಲಿ ಕರಗಿ ಬಲಿತುತುಂಬಿ ಪೂರ್ಣ ಪ್ರಾಯ!ಹೊರ ಸೂಸಿದೆ ಹೊನ್ನ ಕಿರಣಕುಡಿದು ಹೊನ್ನ ಪೇಯ!/ಅಂಬರದಲಿ……….// ಹೊಂಬೆಳಕದು ಸುರಿವ ಜೇನು!ಚಪ್ಪರಿಸುತ ಜಿಹ್ವೆ,ಮುಳುಗೇಳುತ ಆನಂದದಿ,ಮರೆತು ಎಲ್ಲ ನೋವೇ!/ಅಂಬರದಲಿ……….// ತಂಪು ಬೆಳಕ ಬೆರಳಿನಲ್ಲಿನೇವರಿಸುತ ಎಲ್ಲ,‘ಶಾಂತಗೊಳ್ಳಿ’ ಎನುವ ತೆರದಿಸವರುತೆಲ್ಲ ಗಲ್ಲ! /ಅಂಬರದಲಿ………..// *****************************************

“ಉಳ್ಳವರು ಶಿವಾಲಯವ ಮಾಡುವರು”

ಅನಿಸಿಕೆ “ಉಳ್ಳವರು ಶಿವಾಲಯವ ಮಾಡುವರು” ವೀಣಾ ದೇವರಾಜ್           ನಿಜಕ್ಕೂ ಅಣ್ಣನ ಈ ವಚನವು ಬರಿಯ ಪುಸ್ತಕಗಳಿಗೆ ಮತ್ತು ಹಾಡುಗಾರರಿಗೇ ಸೀಮಿತವಾಗಿವೆ. ಕಾರ್ಯರೂಪಕ್ಕೆ ಬರುವುದೆಂದೊ. ಹಿರಿಯರು ‘ಉಳ್ಳವರು ಶಿವಾಲಯವ ಮಾಡುವರು ‘ ಎಂದರು, ಆದರೆ ಇಂದಿನ ಉಳ್ಳವರು ತಮಗಾಗಿ ತಮ್ಮ ಕುಟುಂಬಕ್ಕಾಗಿ ಮಾತ್ರ ಆಲಯ ಮಾಡಿಕೊಳ್ಳುವರೇ ಹೊರತು ಸಮಾಜಕ್ಕಾಗಿ ಯಾವ ಉಪಯೋಗಕ್ಕೂ ಬಾರದು. ಇಂಥಹವರಿಂದ ಪರಿವರ್ತನೆ ಬಯಸುವುದು ಸಾಧ್ಯವೇ?        ಆಯ್ದಕ್ಕಿ ಲಕ್ಕಮ್ಮ, ಮಾರಯ್ಯ ದಂಪತಿಗಳು, ದಾಸೋಹ ಮಾಡುವ ಶಕ್ತಿ ಇರದಿದ್ದರೂ ಅಂತಹ ಮನಸ್ಸಿತ್ತು. ಲಕ್ಕಮ್ಮತನ್ನ ಬಿಡುವಿನ […]

ಮಿಸ್ಟರ್ ಅನ್ ಫ್ರೆಂಡ್

ತೆಲುಗಿನಿಂದ ಅನುವಾದವಾದ ಕಥೆ ತೆಲುಗು ಮೂಲಃ ಶ್ರೀ ರಾಮದುರ್ಗಂ ಮಧುಸೂದನ ರಾವು                   ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಈಗೇನು ಮಾಡೋದು…..? ಗೇಟಿನಿಂದಲೇ ಹೊರಗೋಡಿಸಿದ್ದರೆ ಚೆನ್ನಾಗಿರೋದಾ….. ಈಗಂತೂ ಆ ಛಾನ್ಸ್ ಇಲ್ಲ. ಬಂದು ಕೂತಿದ್ದಾನೆ. ಬರೀ ಪರರ ಜೀವನಗಳಲ್ಲಿ ಇಣುಕಿ ನೋಡುವುದು ಬಿಟ್ಟರೆ ಇಷ್ಟು ವರ್ಷಗಳ ತನ್ನ ಜೀವನದಲ್ಲಿ ಮಾಡಿದ್ದು ಬೇರೇ ಏನಾದರೂ ಇದೆಯಾ ? ಎಲ್ಲಿ ಸಿಕ್ಕರೆ ಅಲ್ಲಿ…. ಯಾವಗ ಸಿಕ್ಕರೆ ಅವಾಗ…. ಹೇಗೆ ಸಿಕ್ಕರೆ ಹಾಗೆ ತೂರಿಬಿಡೋದೇ! ********** ಉಂಡಾಡಿ….. ಗಾಳಿ ಜೀವ…. ಶಿವಕುಮಾರನ […]

ಪಾರಿವಾಳ ರಾಣಿ

ಕಥೆ ಪಾರಿವಾಳ ರಾಣಿ ಹರೀಶ್ ಗೌಡ ಒಂದು ಪ್ರೇಮ ಕಥೆ ಕ್ರಿ ಶ ಮತ್ತು ಕ್ರಿ ಪೂ ದಲ್ಲಿ ಹಿಂದೆ ಜಗತ್ತು ಹೇಗಿತ್ತು? ಸ್ವಚ್ಚಂದ ಜಗತ್ತು ಪ್ರಕೃತಿಯ ಮಡಿಲಿನಲ್ಲಿ ಸರ್ವರು ಸಮಾನರೆಂಬ ಭಾವನೆ ಇದ್ದಂತ ಕಾಲ. ಮತ್ತು ಜಾತಿ ವರ್ಣ ಇದರ ತಕರಾರು ಇಂದಿನದಲ್ಲ ಹಿಂದಿನಿಂದಲೂ ಇದೆ ಅದೆಲ್ಲ ಬಿಡಿ ನಮ್ಮ ಕಥೆ ಶುರು ಮಾಡೊಣ ಓದೊಕೆ ನೀವ್ ರೇಡಿ ಅಲ್ವ ಮತ್ತೆ ಬನ್ನಿ ಯಾಕ್ ತಡ. ಸುತ್ತಲೂ ಬೆಟ್ಟ ಗುಡ್ಡಗಳು ಕಾಡು ನದಿಗಳ ಮಧ್ಯೆ ನೂರಾರು […]

ಬಣ್ಣದ ಚಿಟ್ಟೆಗಳು

ಕಥೆ ಬಣ್ಣದ ಚಿಟ್ಟೆಗಳು ವಾಣಿ ಅಂಬರೀಶ ಈ ಊರಿನ ಕುವರ ಆ ಊರಿನ ಕುವರಿ ಅವಳೆಲ್ಲೋ ಇವನ್ನೇಲ್ಲೋ,, ಇನ್ನೂ ಇವರಿಬ್ಬರ ಪ್ರೀತಿ ಇನ್ನೇಲ್ಲೋ.. ಅದೇ ನಾ ಹೇಳ ಬಯಸುವ ಇವರಿಬ್ಬರ ನಡುವೆ ಪ್ರೀತಿ ಬೆಸೆಯುವ ಪ್ರೇಮದ ಕಥೆ.. ಮಲ್ನಾಡಿನ ಮುದ್ದು ಮನಸ್ಸಿನ ಬೆಡಗಿ, ಕೊಡಗಿನ ಕುವರಿ ಈ ಸ್ವಪ್ನ ಸುಂದರಿ, ಇವಳೇ ಈ ಕಥೆಯ ಕಥಾನಾಯಕಿ “ನಯನಶ್ರೀ “ ಈ ಭೂಮಿಯ ಮೇಲಿರುವ ಅದ್ಭುತಗಳಲ್ಲೊಂದಾದ ಆ ಮಲೆನಾಡಿನ ಹಸಿರ ಸಿರಿಯ ಸೊಬಗಿನಲ್ಲಿ ಚಂದದಿ ನಲಿದಾಡುತ ಬೆಳೆದಿರುವಳು ಈ […]

ಲಿವಿಂಗ್ ಟುಗೆದರ್

ಲೇಖನ ಲಿವಿಂಗ್ ಟುಗೆದರ್ ಸುಜಾತಾ ರವೀಶ್ ಇಬ್ಬರೂ ಸಮಾನ ಮನಸ್ಕರು ಒಂದೇ ಸೂರಿನಡಿ ವಾಸಿಸುತ್ತಾ ಭಾವನಾತ್ಮಕ ಹಾಗೂ ದೈಹಿಕ ಸಂಬಂಧಗಳನ್ನು ವಿವಾಹ ವ್ಯವಸ್ಥೆ ಇಲ್ಲದೆ ಹೊಂದಿ ಜೀವಿಸುವುದಕ್ಕೆ livein relationship ಅಥವಾ ಸಹಬಾಳ್ವೆ ಪದ್ಧತಿ ಎನ್ನುತ್ತಾರೆ.  ಈಗ ಎರಡು ದಶಕಗಳಿಂದೀಚೆಗೆ ಪ್ರಪಂಚದಲ್ಲಿ ಶುರುವಾಗಿರುವ ಹಾಗೂ ಸಮಾಜಶಾಸ್ತ್ರಜ್ಞರು ಮತ್ತು ಮಾನವ ಶಾಸ್ತ್ರಜ್ಞರ ನಿರೀಕ್ಷೆಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ವ್ಯವಸ್ಥೆ ಇದು ಪ್ರಚಲಿತ ಅಸ್ತಿತ್ವದಲ್ಲಿರುವ ಕುಟುಂಬ ಎಂಬ ಸಾಮಾಜಿಕ ಪರಿಕಲ್ಪನೆಯಿಂದ ಹೊರತಾದ ಹೊಸ ಬದಲಾವಣೆಯ ಅಲೆ ಇದು .  ಮನುಷ್ಯ […]

ನಾಗರೀಕತೆಯನ್ನು ಆರಂಭಿಸಿದ ಮಿತ್ರರು

ಅಂಕಣ ಬರಹ-01 ಶಾಂತಿ ವಾಸು ರೇಡಿಯೋ ಸಾಮ್ರಾಜ್ಯ ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಬೆಂಗಳೂರು ಎಂಬುದು ಬಹು ನೆಮ್ಮದಿಯ ತಾಣವಾಗಿತ್ತು. ಕರ್ನಾಟಕದ ಬೇರೆ ಬೇರೆ ಹಳ್ಳಿಗಳು, ದೇಶದ ನಾನಾ ರಾಜ್ಯಗಳಿಂದ ಉದ್ಯೋಗ, ಜೀವನವನ್ನರಸಿ ಬಂದವರಿಗೆ ಬದುಕು ಸೃಷ್ಟಿಸುತ್ತಾ, ವಿವಿಧ ಸಂಸ್ಕೃತಿಯ ಜೊತೆಗೆ ಎಲೆಕ್ಟ್ರಿಕಲ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಬ ಆಧುನಿಕತೆಯನ್ನು ಅಳವಡಿಸಿಕೊಳ್ಳುತ್ತಿದ್ದ ಬೆಂಗಳೂರಿನಲ್ಲಿ, ಬೆಳಕಿನ ಮೂಲವಾಗಿ ಪರಿಚಯವಾದ ಮನೆಗಳ ಬಲ್ಬುಗಳು, ಬೀದಿ ದೀಪಗಳು, ಸೈಕಲ್ಲಿಗೆ ಡೈನಾಮ ಲೈಟ್, (ಸೈಕಲ್ಲು ತುಳಿಯುವಾಗ ಪುಟ್ಟ ಬಲ್ಬ್ ಹೊತ್ತಿಕೊಳ್ಳುತ್ತಿತ್ತು.) ಈ ಡೈನಾಮ ಲೈಟುಗಳು […]

Back To Top