ಕಾವ್ಯಯಾನ

ಕಾವ್ಯಯಾನ

ನೀ ಹೋದರೂ.. ಶೀಲಾ ಭಂಡಾರ್ಕರ್ ನಿನ್ನ ನೆನಪುಗಳು..ನನ್ನ ಬಳಿಯೇ ಉಳಿದಿವೆನಿನ್ನ ಜತೆ ಹೋಗದೆ.. ಇನ್ನೂ ..ಚೆನ್ನಾಗಿ ಬೆಳೆಯುತ್ತಿವೆ..ದಟ್ಟವಾಗಿಮನದ ತೋಟದೊಳಗೆ ನೀನಾಡಿದ್ದ ಮಾತುಗಳುಆಸೆಯಿಂದ ಕತ್ತೆತ್ತುತ್ತವೆ ಆಗಾಗಹಳೆಯ ಆಲದ ಮರದಪೊಟರೆಯೊಳಗಿನಿಂದಮರಿ ಕೋಗಿಲೆಗಳು ಇಣುಕಿದ ಹಾಗೆ. ಎಷ್ಟು ದೂರದವರೆಗೆನಡೆದು ಬಂದಿವೆ ನೋಡುಆ ನೆನಪುಗಳು ಬರಿಗಾಲಿನಲ್ಲಿ.ಬೇಸಿಗೆಯಿಂದ ಮಳೆಯವರೆಗೆಬಾಲ್ಯದಿಂದ ತಾರುಣ್ಯದವರೆಗೆ ಅಡಗಿ ಕುಳಿತುಸಂಭಾಷಿಸುತ್ತವೆ ಕೆಲವುತಮ್ಮ ತಮ್ಮಲ್ಲೇಒಳಕೋಣೆಯೊಳಗೆ. ಎಲ್ಲವೂ ನೆನಪಿದೆ ನನಗೆನಿನ್ನ ಪ್ರೀತಿ. ನಿನ್ನ ಮಾತು..ತಿಳಿ ಹಾಸ್ಯ ಮತ್ತು ನಿನ್ನ ನಗೆ. ನೇರಳೆ ಹಣ್ಣೆಂದು ತಿನ್ನಿಸಿದಬೇವಿನ ಹಣ್ಣಿನ ರುಚಿಯೂಮರೆತಿಲ್ಲ ಇನ್ನೂ ನನಗೆ ಕಹಿ ಹಾಗೆಯೇ ಉಳಿದುಕೊಂಡಿದೆ..ನಾಲಿಗೆಯ […]

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಗಂಟಿಕ್ಕಿ ಹುರಿ ಹುಬ್ಬು ಹಾರಿಸಿದಂತೆಲ್ಲ ನಾನೇನೂ ಬೆದರುವುದಿಲ್ಲಪೊದೆ ಮೀಸೆಯಲ್ಲೇ ರೋಷ ಉಕ್ಕಿಸಬೇಡ ಸೊಪ್ಪು ಹಾಕುವುದಿಲ್ಲ ತವರಲ್ಲಿ ಮುದ್ದಾಗಿ ಅಂಗೈಲೇ ಬುವಿ ಬಾನು ದೋಚಿದವಳು ನಾನುಕಣ್ಣಲ್ಲೇ ಕೆಣಕಿದಂತೆಲ್ಲ ಮೈ ಮನದ ಕಣಗಳೆಲ್ಲ ನವಿರೇಳುವುದಿಲ್ಲ ನಿನ್ನಂತೆಯೇ ಆಡಿ ನಲಿದು ಬಣ್ಣದ ಲಂಗದಲಿ ಕನಸ ಜೀಕಿದವಳುಮಾತು ಮೌನಕೆ ಮಣಿವ ಬೆಳ್ನಗೆಯಲಿ ಸ್ವಂತಿಕೆ ನಳನಳಿಸುವುದಿಲ್ಲ ನಿನ್ನ ಸೇವೆಯೇ ಎನ್ನ ಜೀವನದ ಪರಮ ಗುರಿಯೆಂಬ ಭ್ರಮೆಯೇಕೆಸದಾ ಕೀಲುಗೊಂಬೆಯಂತೆ ನಡೆವ ಪರಿ ನನಗೂ ಇಷ್ಟವಾಗುವುದಿಲ್ಲ ಕಾಲ ಮೇಲೆ ಕಾಲು ಹಾಕಿ ಕೂತು […]

ಅನುಭವ

                      ಮನೆ……. ಹಕ್ಕಿ ಮನೆ ಅನುಪಮಾ ರಾಘವೇಂದ್ರ                       ಮನೆ……. ಹಕ್ಕಿ ಮನೆ        ಈ ಮರೆವು  ಅನ್ನೋದು ಮನುಷ್ಯರಿಗೆ ಮಾತ್ರವೋ….? ಅಲ್ಲಾ ಪ್ರಾಣಿ ಪಕ್ಷಿಗಳಿಗೂ ಇರುತ್ತೋ…..? ನನಗೀ ಸಂಶಯ ಬರಲು ಕಾರಣವೇನೋ ಇದೆ. ಕೆಲವು ದಿನಗಳ ಹಿಂದಿನ ಘಟನೆ……          ಸಂಜೆ ವೇಳೆ ಹಟ್ಟಿ ಬಳಿಗೆ ಹೋದಾಗ ಹಟ್ಟಿಯ ಒಳಗಿನಿಂದ ಹಕ್ಕಿಯೊಂದು ಪುರ್ರನೆ ಹಾರಿ ಹೋಯ್ತು. ಮರುದಿನ ಬೆಳಗ್ಗೆಯೂ ಅದೇ ರೀತಿ ಹಕ್ಕಿ  ಹಾರುವುದು ಕಂಡಿತು. ಹಕ್ಕಿಗಳ ಕಿಚ ಪಿಚ ಸುಮಧುರವಾದ ಸಂಗೀತ…… ನಾನು ಹೋದ […]

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಅಸಲಿಗೆ ನಕಲಿಯ ಲೇಪನ ಬಳಿದಿರಬಹುದು ನೋಡುಕಂಗಳಿಗೆ ಆವರಿಸಿರುವ ಪೊರೆಯ ಸರಿಸಿ ಅರಿಯಬಹುದು ನೋಡು ಭಿತ್ತಿಯ ಮೇಲೆ ಬಿದ್ದ ಛಾಯೆಯು ಮಿಥ್ಯವಿರಬಹುದು ಒಮೊಮ್ಮೆಅಂತಃಕರಣದ ಅಕ್ಷಿಯರಳಿಸಿ ದಿಟವ ತಿಳಿಯಬಹುದು ನೋಡು ತಳವಿಲ್ಲದ ಬಾವಿ ಅನಂತ ಆಳವ ತೋರಿರಬಹುದು ಅಲ್ಲಿಭ್ರಮೆಯಿಂದ ಹೊರಬಂದು ನೈಜತೆಯ ಕಾಣಬಹುದು ನೋಡು ದಿಗಂತವು ಇಳೆ ಆಗಸವು ಸಂಧಿಸಿದಂತೆ ಭಾಸವಾಗುವುದುವಿಶ್ವವನ್ನೊಮ್ಮೆ ಪರ್ಯಟಿಸಿ ಅವಲೋಕಿಸಬಹುದು ನೋಡು ಅಖಂಡ ಆಗಸವು ನೀಲವರ್ಣದಿ ಗೋಚರಿಸುವುದು ಮೇಲೆಬೆಳಕಿನ ಮೂಲದ ಸತ್ಯಾಸತ್ಯತೆಯನ್ನು ಪರಾಮರ್ಶಿಸಬಹುದು ನೋಡು ********

ಪುಸ್ತಕ ಸಂಗಾತಿ

“ಪಮ್ಮಿ” ಹನಿಗವಿತೆಗಳು ಕನ್ನಡದಲ್ಲಿ ಚುಟುಕು ಸಾಹಿತ್ಯಕ್ಕೆ ಮಹತ್ವದ ಸ್ಥಾನವಿದೆ.ನಮ್ಮ‌ಜನಪದ ತ್ರಿಪದಿಗಳು ಮೂರೆ ಸಾಲಿನಲ್ಲಿ ಥಟ್ ಅಂತ ಒಂದು ವಸ್ತುವಿಷಯದ ಮೇಲೆ ಬೆಳಕು ಚೆಲ್ಲಿ ಬೆಳಗಿಸಿಬಿಡುವ ಮಿಣುಕು ಹುಳುಗಳಂತಹವು.ಜೀವನಾನುಭವದಿಂದ ಮೂಡಿದ ನುಡಿಮುತ್ತುಗಳು.ಹೊಸಗನ್ನಡದಲ್ಲಿ ಚುಟುಕುಗಳ ಬ್ರಹ್ಮನೆಂದೆ ಖ್ಯಾತರಾದ ದಿನಕರ ದೇಸಾಯಿ ಅವರ ದ್ವಿಪದಿ, ಬೀಚಿ ಅವರ ಹಾಸ್ಯದ ಚುಟುಕುಗಳು,ದುಂಡೀರಾಜ್ ಅವರ ಪಂಚ್ ಗಳು ಪ್ರಸಿದ್ದಿಯಾದವು.ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗದ ಕಂದ ಪದ್ಯಗಳು ತಾತ್ವಿಕ ವಿಚಾರಗಳನ್ನು ತುಂಬಿಕೊಂಡೆ‌ ತೆನೆಗಳು.ಚುಟುಕುಗಳ ಮುಖ್ಯ ಲಕ್ಷಣವೇ ಯಾವ ವಿಷಯವನ್ನಾದರೂ ಪರಿಣಾಮಕಾರಿಯಾಗಿ ಚಿಕ್ಕದಾಗಿ ಚೊಕ್ಕಾವಾಗಿ ಭಾವ ಸ್ಪುರಿಸುವಂತೆ […]

ದಿಕ್ಸೂಚಿ

ಸೋಲು ಒಪ್ಪಿಕೊಳ್ಳುವ ಮುನ್ನ ಕೊಂಚ ಪ್ರಶ್ನಿಸಿಕೊಳ್ಳಿ ಜಯಶ್ರೀ ಅಬ್ಬಿಗೇರಿ ನಾನು ಕೈ ಹಾಕಿದ ಯಾವ ಕೆಲಸದಲ್ಲೂ ಗೆಲುವು ಸಿಗುತ್ತಲೇ ಇಲ್ಲ. ನನ್ನ ಹಣೆ ಬರಹವೇ ಚೆನ್ನಾಗಿಲ್ಲ. ನಸೀಬು ಕೆಟ್ಟಿದೆ. ಸಾಲು ಸಾಲು ಸೋಲುಗಳು ನನ್ನ ಬೆನ್ನು ಹತ್ತಿವೆ. ಹೀಗೇ ಇನ್ನೊಂದಿಷ್ಟು ಸಮಯ ಕಳೆದರೆ ಜೀವನದ ಆಸೆಗಳೇ ಕಮರಿ ಹೋಗಿ ಬಿಡುತ್ತವೆ. ನನ್ನಿಂದೇನೂ ಮಾಡಲು ಸಾಧ್ಯವಿಲ್ಲವೆಂದು ಊಟ ತಿಂಡಿ ಬಿಟ್ಟು ಕೈ ಕಟ್ಟಿ ಕುಳಿತು ಚಿಂತಿಸಿದರೆ ಬದುಕು ನಿಂತ ನೀರಾಗಿ ಬಿಡುತ್ತದೆ. ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಳ್ಳುತ್ತವೆ. ಉಗ್ರ ರೂಪ […]

ಬಣ್ಣ-ರೇಖೆಗಳ ಜೊತೆಯಾಟ ಪಕ್ಷಾತೀತ ಕಲಾವಿದ ಅನಾಥ ಶಿಶುವಿನಂತೆ’ ಎಂ.ಎಲ್.ಸೋಮವರದ ಎಂ.ಎಲ್.ಸೋಮವರದ ದೇಶ ಕಂಡ ಉತ್ತಮ ಕಲಾವಿದರಲ್ಲಿ ಒಬ್ಬರು. ಮಂಡ್ಯದ ವಿ.ವಿ.ನಗರದ ಕಲ್ಲಹಳ್ಳಿ ನಿವಾಸಿ. ತುಂಬಾ ನಿಷ್ಠುರ ವ್ಯಕ್ತಿತ್ವದ ಸೋಮವರದ , ಜೀವನದಲ್ಲಿ ಕಷ್ಟಗಳನ್ನೇ ಹೆಚ್ಚು ಹೊದ್ದವರು. ನ್ಯಾಯ, ನೈತಿಕ ಮತ್ತು ವೈಚಾರಿಕ ನಿಲುವಿನ ಕಲಾವಿದ. ವೈಚಾರಿಕ ಮನೋಭಾವದಿಂದ ಅನೇಕ ಅವಕಾಶಗಳನ್ನು ಕಳೆದುಕೊಂಡವರು. ಎಂ.ಎಲ್.ಸೋಮವರದ ಬೆಂಗಳೂರಿನ ಕೆನ್ ಕಲಾ ಶಾಲೆಯಿಂದ 1987ರಲ್ಲಿ ಡಿ.ಎಂ.ಸಿ. ಪದವಿ ಪಡೆದವರು. 2008 ರಲ್ಲೇ ಮೈಸೂರು ಮುಕ್ತ ವಿ.ವಿ.ಯಿಂದ ಬಿ.ಎಫ್.ಎ. ಅಧ್ಯಯನ ಮಾಡಿದರು. ಮಂಡ್ಯ, […]

ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಕೊರೆಯುವ ಚಳಿಯಲ್ಲೂ ವಹ್ನಿಯೊಡಲು ದಹಿಸುತ್ತಿದೆ ಸಾಕಿಬಹಿರಂಗದ ತೊಗಲು ಅಂತರಂಗದ ಜ್ವಾಲೆಯಲ್ಲಿ ಮೈ ಕಾಯಿಸುತ್ತಿದೆ ಸಾಕಿ ಹೆಪ್ಪುಗಟ್ಟಿದ್ದ ಹೃದಯ ರಂಧ್ರ ಮುಚ್ಚಿದ್ದ ಕಾಯದ ಬಾಯಿ ತೆರೆದುನರನಾಡಿಯಲ್ಲೂ ಶರವೇಗದಿ ಕಾವು ಮಿಂಚಂತೆ ಸಂಚರಿಸುತ್ತಿದೆ ಸಾಕಿ ರೆಕ್ಕೆ ಮೂಡದ ಹಕ್ಕಿಯ ಕನಸೊಳಗೆ ಮೌನದ ನೀರವತೆ ಮಡುಗಟ್ಟಿದೆಹನಿವ ಮಳೆಯೊಡನೆ ಹರಿವಕಂಬನಿ ಧರೆಯಲಿ ಲೀನವಾಗುತ್ತಿದೆ ಸಾಕಿ ಸಲಿಲದಿಂದ ಬೇರ್ಪಟ್ಟ ಮತ್ಸ್ಯದ ಒದ್ದಾಟದ ಚಡಪಡಿಕೆಯಲಿಜಾತಕಪಕ್ಷಿ ಜೀವಸೆಲೆಗಾಗಿ ಕಾತರಿಸಿ ಜವವ ಕಾಯುತ್ತಿದೆ ಸಾಕಿ ಇರುಳ ತಿಂಗಳ ತೇಜಸ್ಸನ್ನು ಭ್ರಮಿಸಿ ಸ್ಮೃತಿಪಟಲದ ಅಕ್ಷಿಗಳಲ್ಲಿಜಾರಿದ ಅಶ್ರುಬಿಂದುಗಳ […]

ಕಾವ್ಯಯಾನ

ಸಮುದ್ರ ಸಂಗೀತ ಫಾಲ್ಗುಣ ಗೌಡ ಅಚವೆ. ದೂರ ದಿಗಂತದಿಂದ ಓಡಿ ಬರುವಅಲೆಗಳು ದಂಡೆಗೆ ಅಪ್ಪಳಿಸುತ್ತಿವೆನಿರಾಳವಾಗುತ್ತಿವೆ.ಗುರಿಯ ಸಾಫಲ್ಯತೆಪ್ರಯತ್ನದ ಫಲವತ್ತತೆಸಾರುತ್ತಿದೆ ಕಡಲುಹಾಗೆ ಒಳಗೆ ಇಣುಕಿದರೆದಂಡೆಯ ಮೌನ ಸಂಗೀತಕೇಳುವುದು. ಸತ್ತ ಮೀನು ಸೌದೆ ಕೋಲುಎಲ್ಲವನ್ನೂ ದಂಡೆಗೆಸೆವತಾನು ಶುಭ್ರಗೊಳ್ಳುವ ಪರಿಅಚ್ಚರಿ!ಒಂದು ಕ್ಷಣ ಮನದಲ್ಲಿಣುಕಿದರೆನಿನ್ನೊಳಗಿನ ದ್ವೇಷ, ಅಸೂಯೆಕೋಪ ಸಣ್ಣತನಗಳ ಇದೇದಂಡೆಯಲ್ಲಿ ಬಿಟ್ಟು ಹೊರಡುವೆನಿಶ್ಕಲ್ಮಶ ಮನಸ ಹೊತ್ತು. ಶರಧಿಯೋಳಗಿನ ಆಳ ವಿಸ್ತಾರಭೋರ್ಗರೆತ,ಭರತ ಇಳಿತಗಳುಲಾಗಾಯ್ತಿನಿಂದಿಲ್ಲಿವರೆಗೆಸೇರುವ ಹೊಳೆಹಳ್ಳ,ನದಿಗಳುಕೂಡುತ್ತಲೇ ಇವೆ.ಎಲ್ಲ ಇದ್ದು ಇಲ್ಲದಂತಿರುವಸಮುದ್ರ ಸಮತೋಲನದ ಪಯಣನಿನ್ನೊಳಗೆ ಬಿಂದು ಸಿಂಧುವಾಗಲಿ. ಆಗಾಗ್ಗೆ ಅಥವಾ ಸಂಜೆಯಲ್ಲಿಸಣ್ಣಗೆ ಅಲೆವ ಅಲೆ ತನ್ನೊಳಗಿನಸುಪ್ತ ಸಂಗೀತ ಸೃಷ್ಟಿಸುವುದುನಿನ್ನೊಳಗಿನ […]

ಪ್ರಸ್ತುತ

ಕೊರೊನಾ ಕಾಲದ ರಂಗಸಂಸ್ಕೃತಿ ಚಿಂತನೆಗಳು ಮಲ್ಲಿಕಾರ್ಜುನ ಕಡಕೋಳ ಕೊರೊನಾ ಎಂಬ ಕರಾಳ ರಾಕ್ಷಸ ಹಾವಳಿಯಿಂದಾಗಿ ಮನುಷ್ಯರ ಬದುಕು ತೀವ್ರ ಸ್ವರೂಪದ ಆಘಾತವನ್ನು ಎದುರಿಸುವಂತಾಗಿದೆ. ಸಾಂಸ್ಕೃತಿಕ ಬದುಕಿಗೂ ತೀವ್ರವಾದ ಪೆಟ್ಟು ಬಿದ್ದಿದೆ. ನಿಸ್ಸಂದೇಹವಾಗಿ ಅದನ್ನು ಯಾರೂ ಅಲ್ಲಗಳೆಯಲಾರರು. ಹಾಗಂತ ಕೊರೊನಾ ಪೂರ್ವದಲ್ಲಿ ನಮ್ಮ ಸಾಹಿತ್ಯ, ಸಂಗೀತ, ನಾಟಕ ಹೀಗೆ ಎಲ್ಲಾ ಕಲೆಗಳಿಗೆ ಸಿಗುತ್ತಿದ್ದ ಪ್ರೋತ್ಸಾಹ, ಸಹಾಯ, ಸಹಕಾರ, ಅಭಿವ್ಯಕ್ತಿ ಸ್ವಾತಂತ್ರ್ಯ ಅಮೋಘವಾಗಿತ್ತು. ಅದರಿಂದಾಗಿ ಅತ್ಯಂತ ಸಮೃದ್ಧವಾದ ಸಾಂಸ್ಕೃತಿಕ ಬದುಕು ಮೈಮನ ತುಂಬಿ ಚೆಂಗುಲಾಬಿಯಂತೆ ಅರಳಿಕೊಂಡಿತ್ತೆಂದು ಭ್ರಮಿಸಬೇಕಿಲ್ಲ. ಈಗ ಕೊರೊನಾ […]

Back To Top