ಯುಗಾದಿ ವಿಶೇಷ ಬರಹ ಯುಗಾದಿಯೆಂಬ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಹೇಳುವುದು ಪ್ರಮುಖವಾಗಿ ಭಾಷೆ,  ಆಚರಣೆ-ಸಂಪ್ರದಾಯಗಳು, ಉಡುಗೆ-ತೊಡುಗೆ, ಆಹಾರ ಮೊದಲಾದವುಗಳಿಗೆ ಸಂಬಂಧಿಸಿದಂತೆ . ಇಲ್ಲಿನ  ವೈವಿಧ್ಯತೆ ಎಷ್ಟೆಂದರೆ  ರಾಜ್ಯ ರಾಜ್ಯಗಳ ನಡುವಿನ ಮಾತಿರಲಿ, ಅಕ್ಕಪಕ್ಕದ ತಾಲೂಕುಗಳಲ್ಲಿ, ಊರುಗಳಲ್ಲೇ ಭಿನ್ನತೆಯನ್ನು ಕಾಣಬಹುದು.   ಆದರೆ ಕಳೆದ 2 ದಶಕಗಳಿಂದ ಇಂಥ ಪ್ರಾದೇಶಿಕ ಭಿನ್ನತೆಗಳು ಬದಲಾಗುತ್ತಿವೆ  ಅಥವಾ  ಕೆಲವು  ಇಲ್ಲವಾಗಿವೆ. ಇದಕ್ಕೆ ಬಹುಮುಖ್ಯ ಕಾರಣ ದೊಡ್ಡ ಪಟ್ಟಣ ಹಾಗೂ ಶಹರಗಳಿಗೆ ಉದ್ಯೋಗ ಹಾಗೂ  ಜೀವನ ನಿರ್ವಹಣೆಯ ದಾರಿಗಳನ್ನು ಅರಸುತ್ತ […]

ಯುಗಾದಿ ವಿಶೇಷ ಬರಹ ಕೊನೆಗೂ ಸಿಕ್ಕ ಸದ್ಗುರು 1993 – 94 ರ ಮಾತದು. ನಾವಾಗ ಖಾಸಗಿ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದಾಗ ವಿಜ್ಞಾನ ವಿಷಯ ಬೋಧಿಸಲು ಹೊಸ ಶಿಕ್ಷಕರೊಬ್ಬರ ಆಗಮನವಾಯಿತು. ಹಳ್ಳಿ ಶಾಲೆ. ಹಳ್ಳಿ ಹುಡುಗರಾಗಿದ್ದ ನಮಗೆ ಅವರ ಮಾತು – ಕತೆ, ರೀತಿ – ನೀತಿ & ಎಲ್ಲಕ್ಕೂ ಮಿಗಿಲಾಗಿ ಅವರ ಸ್ಟೈಲ್ ಅತ್ಯಾಕರ್ಷಿಸಿತು. ಮೊದಲ ನೋಟದಲ್ಲೇ ವಿದ್ಯಾರ್ಥಿಗಳ ಮನ ಗೆದ್ದ ಅವರು ನಮ್ಮ ಪಾಲಿಗೆ ಸ್ಟೂಡೆಂಟ್ ಐಕಾನ್ ಎನಿಸಿದರು.  ಅವರು ಪಾಠ ಹೇಳುತ್ತಿದ್ದ […]

ಯುಗಾದಿ ವಿಶೇಷ ಬರಹ ಯುಗಾದಿ ಯುಗಾದಿ        ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆದ ಒಂದು ಅತ್ಯುನ್ನತ ಸಾಂಸ್ಕೃತಿಕ ಮಹತ್ವವಿದೆ. ಆದುದರಿಂದಲೇ ಭಾರತೀಯರು ತಮ್ಮ ಹೊಸವರುಷದ ದಿನವೂ ಯುಗಾದಿಯ ದಿನದಿಂದಲೇ ಆರಂಭವಾಗುತ್ತದೆ ಎಂದು ನಂಬುತ್ತಾರೆ. ಗ್ರಾಮೀಣರ ಆಡುಮಾತಿನ ಲ್ಲಿ ಹೇಳುವುದಾದರೆ ಯುಗಾದಿಯು ‘ಉಗಾದಿ’ ಎನಿಸಿಕೊಳ್ಳುತ್ತದೆ. ಯುಗಾದಿ ಹಬ್ಬ ಶಿಶಿರ ಋತು ಕಳೆದು ವಸಂತನಾಗಮನದ ಮೊದಲ ಹಬ್ಬ. ಇದು ಭಾರತೀಯರ ಪಾಲಿಗೆ ನವಮನ್ವಂತರ, ಅಲ್ಲದೆ ಇದು ಭಾರತೀಯರಾದ ನಮ್ಮ ಪಾಲಿಗೆ ಹೊಸ ವರುಷದ ಮೊದಲ ದಿನ.     […]

ಯುಗಾದಿ ವಿಶೇಷ ಬರಹ ಯುಗಾದಿಯ ಸವಿ ಅಲ್ರಿ..ನನಗೊಂದು ಹೊಸ ಸೀರಿಬೇಕು.ಯಾಕಂದ್ರ ಹೊಸ ವರ್ಷದ ಸಂಭ್ರಮಕ ಎಲ್ಲವೂ ಹೊಸದಾಗಿರಬೇಕು ಅನ್ನು ತ್ತಿದ್ದರು ಅವನೇನು ತಲಿ ಕೆಡಸಿಕೊಂಡಿರಲಿಲ್ಲ. ಅಲ್ಲೆ ಕಪಾ ಟ ತುಂಬ ಇರೋ ಸಾರಿ ಮೊದಲ ಉಟ್ಟ ಹರಿ,ಆ ಮ್ಯಾಲೆ ಹೊಸಾದು ತಗೊಳಾಕಂತ. ಸುಮ್ಮನ ಯಾಕ ಖರ್ಚು ಎಷ್ಟ ರ ಜಿಪುಣ‌ ಅದಿರಿ ನೀವು? ನಾ ಎನಾರ ಬಂಗಾರ ಕೇಳಿನೇ ನು? ಅದನಂತೂ ಹಾಕ್ಕೊಂಡು ಅಡ್ಡಾಡೋ ಯೋಗ ಇಲ್ಲ ನನಗ.ಬರಿ ಸೀರಿವಳಗಾದ್ರೂ ಖುಷಿ ಪಡೋಣ‌ ಅಂದ್ರ ಅದಕೂ ಹಿಂಗ […]

ಯುಗಾದಿ ವಿಶೇಷ ಬರಹ ಕಹಿ ಜಾಸ್ತಿ ತಿಂದ್ರೆ ವರ್ಷ ಪೂರ್ತಿ ಸಿಹಿಯಂತೆ  ನಮ್ಮ ಹಿಂದೂ ಸಂಸ್ಕೃತಿಯ ಪ್ರಕಾರ ವರ್ಷದ ಆರಂಭ ಯುಗಾದಿ. ಸಂವತ್ಸರವೊಂದು ಮುಗಿದು ಮತ್ತೊಂದು ಸಂವತ್ಸರಕ್ಕೆ ಕಾಲಿಡುವ ಸಮಯ ಅರವತ್ತು ಸಂವತ್ಸರಗಳ  ಈ ಚಕ್ರದಲ್ಲಿ ಈಗ ನಾವು ೩೫ ರ ಪ್ಲವ ನಾಮ ಸಂವತ್ಸರದಲ್ಲಿ ಇದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯ ಆಚರಣೆ ಬಂದಮೇಲೆ ತಿಥಿ ನಕ್ಷತ್ರ ಸಂವತ್ಸರಗಳ ಲೆಕ್ಕಾಚಾರ ಅಷ್ಟಾಗಿ ನಮ್ಮ ದೈನಂದಿನ ಬದುಕಿನಲ್ಲಿ ಉಳಿದುಕೊಂಡಿಲ್ಲ.  ಅದರಲ್ಲಿ ಯುಗಾದಿಯ ಆಚರಣೆ ಸ್ವಲ್ಪ ಮುಂಚೂಣಿಯಲ್ಲಿದೆ ಅನ್ನಬಹುದೇನೋ. ಯಾಕೆಂದರೆ ನಾವು […]

ಯುಗಾದಿ ವಿಶೇಷ ಬರಹ ಹೊಸ ವರುಷವು ಬರಲಿ, ಸುಖ ಸಾವಿರ ತರಲಿ… ಅದೇನೋ ಬೇರೆ ಎಲ್ಲಾ ಹಬ್ಬಗಳಿಗಿರುವ ಒಂದು ಆಕರ್ಷಣೆ, ಆಚರಣೆ ಯುಗಾದಿ ಹಬ್ಬಕ್ಕಿಲ್ಲ. ಹಿಂದೂ ಚಾಂದ್ರಮಾನ ಪಂಚಾಗದ ಪ್ರಕಾರ ಚೈತ್ರ ಶುದ್ಧ ಪಾಡ್ಯಮಿಯನ್ನು ಯುಗಾದಿ ಹಬ್ಬವೆಂದು, ವರ್ಷದ ಮೊದಲ ದಿನವೆಂದು ಆಚರಿಸುತ್ತೇವೆ. ಸೌರಮಾನದವರು ಪ್ರತಿವರ್ಷ ಏಪ್ರಿಲ್‌ 14ರಂದು ಯುಗಾದಿಯನ್ನು ಆಚರಿಸುತ್ತಾರೆ. ಒಟ್ಟಿನಲ್ಲಿ ಮಾರ್ಚ್‌ ತಿಂಗಳ ಕೊನೆಯಿಂದ ಏಪ್ರಿಲ್‌ ನಡುವಿನೊಳಗೆ ಹೊಸವರ್ಷದ ಆರಂಭವಾಗುವುದು ಆಚರಣೆಯಲ್ಲಿದೆ. ಚಿಕ್ಕಂದಿನಿಂದಲೂ ಈ ಹಬ್ಬದ ಬಗ್ಗೆ ವಿಶೇಷವಾದ ಆಸಕ್ತಿಯೇನೂ ಇರಲಿಲ್ಲ. ಮನೆಯ ಬಾಗಿಲಿಗೆ […]

ಯುಗಾದಿ ವಿಶೇಷ ಬರಹ ಚಿಗುರಿದಚೈತ್ರ ನಾಳೆ ಚೈತ್ರಮಾಸದ ಮೊದಲನೆ ದಿನ,  ನಮಗೆ ಹೊಸ ವರುಷ.  ತೊರಣ ಕಟ್ಟಬೇಕು, ಮಾವಿನ ಎಲೆ, ಬೇವಿನ ಸೊಪ್ಪು ತರಬೇಕಾಗಿದೆ, ಮಗನಿಗೆ ಹೇಳಲೇ! ಪ್ರತಿವರ್ಷವೂ ಇದೇ ಗೊಳು, ಮಗನು ಪ್ರಾಯಕ್ಕೆ ಬಂದಾಗಿಂದಾ ಹಬ್ಬದ ದಿನಗಳಲ್ಲಿ ಮಗನಾಗಲಿ, ಗಂಡನಾಗಲೀ ಸ್ವಲ್ಪವೂ ಆಸಕ್ತಿಯನ್ನು ತೋರುವುದೇ ಇಲ್ಲ.  ನಾನೊಬ್ಬಳೇ ಎಲ್ಲಾ ಹಬ್ಬದ ಕೆಲಸಗಳನ್ನು ಮಾಡಬೇಕು. ಎಲ್ಲರೂ ಆಸಕ್ತಿಯಿಂದ ಜೊತೆಗೂಡಿ ಹಬ್ಬಗಳನ್ನು ಆಚರಿಸಿದರೆ ಬಲು ಚೆಂದ.  ಏನು ಮಾಡುವುದಕೂ ಬೆಸರ, ಮನಸಿಗೆ ಉಲ್ಲಾಸವೇ ಇಲ್ಲವಾಗುತ್ತಿದೆಯಲ್ಲ! ಜೀವನದಲ್ಲಿ ಸಾರವೇ ಇಲ್ಲ. […]

ಯುಗಾದಿ ವಿಶೇಷ ಲೇಖನ ನವಚೈತನ್ಯಕ್ಕೆ ಮುನ್ನುಡಿ ಯುಗಾದಿ ಸಂಗಾತಿ ಸಾಹಿತ್ಯ ಪತ್ರಿಕೆ: ಯುಗಾದಿ ಬಂತೆಂದರೆ ಸಾಕು ಪ್ರಕೃತಿಯಲ್ಲೊಂದು ಸಂಚಲನ ಮೂಡುತ್ತದೆ ಎಲ್ಲಾ ಕಡೆಗೂ ಹಸಿರುತೋರಣ ಹೂವಿನ ಶೃಂಗಾರ ಮಾಡಿದಂತೆ ಗಿಡದ ತುಂಬಾ ಹೂಗಳು ಅರಳಿ ಚಿಗುರು ಮೂಡಿ ಸಂಭ್ರಮದ ವಾತಾವರಣ ಏರ್ಪಡಿಸುತ್ತವೆ.ಇದು ನಾವು ಹೊಸವರ್ಷದ ಎಂದು ಸಂಭ್ರಮಪಡುವ ಯುಗದ ಆದಿ ಯುಗಾದಿಯ ವಿಶೇಷತೆ.        ಹೊಸವರ್ಷವೆಂದರೆ ಇದುವೇ ಎಂದು ಸಾಧಿಸುವಂತೆ ಎಲ್ಲಾ ಕಡೆಗೂ ಹಸಿರು ಉಸಿರಾಡುವುದು. ಬಣ್ಣ ಬಣ್ಣದ ಹೂವುಗಳು ಗಿಡದ ತುಂಬೆಲ್ಲಾ ಅರಳಿ ಪರಿಸರವೆಲ್ಲಾ ಶೃಂಗಾರ. […]

ಅಂಕಣ ಬರಹ ಯಾರಿಗೆ ಯಾರುಂಟು           ಯಾರಿಗೆ ಯಾರುಂಟು ಎರವಿನ ಸಂಸಾರ ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೆ..        ಶುದ್ಧ ವೈರಾಗ್ಯ ಮೂಡಿಸುವ ಈ ದಾಸರ ಪದವನ್ನು  ಬಹುಶಃ ಹಳೆಯ ತಲೆಮಾರಿನವರು ಅದೆಷ್ಟು ಸಲ ಗುಣುಗುಣಿಸಿರಬಹದೋ ಏನೋ..        ನಿಜವೆ ?  ಈ ಪ್ರಪಂಚದಲ್ಲಿ ಯಾರಿಗೂ ಇಲ್ಲವೆ? ಲೌಕಿಕ ವ್ಯಾಪಾರಿಗಳಾದ ನಾವುಗಳು ಕಟ್ಟಿಕೊಂಡ ಸಂಸಾರ , ಕೈಕೊಂಡ ವೃತ್ತಿ , ಗೆಳೆಯರು ,ಬಂಧುಗಳು ಇವರೆಲ್ಲ ಏನೂ ಅಲ್ಲವೆ? ನೀರಿನೊಳಗಿದ್ದರೂ ನೀರನ್ನು ಸೋಕಿಸಿಕೊಳ್ಳದ ಕಮಲಪತ್ರದಂತಹ ಬದುಕು ಸಾಮಾನ್ಯರಿಗೆ […]

ಗಜ಼ಲ್

ಗಜ಼ಲ್ ಎ. ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ?ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ ಊರ ಸೇರುವುದು ಹೇಗೆ ? ಶಾಂತವಾಗಿ ಹರಿಯುತ್ತಿದ್ದ ಬಾಳಕಡಲಿನಲಿ ಎಣಿಸದ ಉಬ್ಬರವಿಳಿತಇರುವ ನೆಲೆ ಜೀವಗಳ ನಲುಗಿಸಿದೆ ಮರಳಿ ಊರ ಸೇರುವುದು ಹೇಗೆ ? ದುಡಿಮೆ ಆದಾಯವಿಲ್ಲದ ಬದುಕು ನರಕಸದೃಶವಲ್ಲದೇ ಮತ್ತೇನು ?ತಿನ್ನುವ ಅನ್ನಕೂ ತತ್ವಾರವಾಗಿದೆ ಮರಳಿ ಊರ ಸೇರುವುದು ಹೇಗೆ ? ಅನುಕಂಪವಿಲ್ಲದ ಸಾವು ಹಗಲಲ್ಲೂ ಭೀತಿಯ ಕಾರಿರುಳ ಹರಡಿದೆಬೆದರಿದ ಮನ ದೃಢತೆ ಕಳೆದುಕೊಂಡಿದೆ ಮರಳಿ […]

Back To Top