ಗಜಲ್

ಗಜಲ್

ಗಜಲ್ ಸರೋಜಾ ಶ್ರೀಕಾಂತ್ ಸುರಿದ ಬೆಳದಿಂಗಳಿಗೆ ಇರುಳೆಲ್ಲ ಮಾಯವಾಗಿದೆ ಕೇಳು ಸಖಬಳಿಗೆ ಕರೆವ ಸನಿಹಕ್ಕೂ ತುಸು ನಾಚಿಕೆ ಕೇಳು ಸಖ ರಂಗೇರಿದ ಕೆನ್ನೆಗೆ ಕಾರಣವೇ ನಿನ್ನಾಗಮನಒಲವರಿತ ಮುಂಗುರುಳಿಗೆ ಸ್ಪರ್ಶದ ಸಡಗರ ಕೇಳು ಸಖ ಸದ್ದಿಲ್ಲದ ಮೌನದೊಳಗೂ ನೂರೊಂದು ಮಾತುಗಳಿವೆಕಿವಿಗಪ್ಪಳಿಸುತ್ತ ಚಿತ್ತವನ್ನೆಲ್ಲ ಅಪಹರಿಸುತ್ತಿವೆ ಕೇಳು ಸಖ ಸೋತೆನೆನ್ನುವ ಭಾವಕ್ಕೂ ನವಿರಾದ ಮಂದಹಾಸಗೆಲುವಿನ ನಗೆ ನೀ ಬೀರುವಾಗ ಸೊಗಸಿದೆ ಕೇಳು ಸಖ ನೇಸರ ಬರುವ ಮುನ್ನವೇ ಸಂಭ್ರಮಿಸಲಿ ಮತ್ತೊಂದು ಸಲ‘ಸರೋಜ’ಳ ಅಂತರಂಗ ಪ್ರತಿಧ್ವನಿಸುತ್ತಿದೆ ಕೇಳು ಸಖ ***********************************

ಮಾಯಾವಿ 2020

ಕವಿತೆ ಮಾಯಾವಿ 2020 ರಜಿಯಾ ಕೆ ಭಾವಿಕಟ್ಟಿ ಅಳಿದು ಉಳಿದದ್ದು ಎಲ್ಲವೂನಿಗೂಢತೆಯ ಸಾರವನ್ನು ಹೊತ್ತು ತಂದು ತೇಲುವ ದೋಣಿಯಲ್ಲಿ ಜಲದ ಸುಳಿಯೇ ಇಲ್ಲದೆ ಮುಳುಗಿ ಸತ್ತಂತೆ ಭಾಸವಾಗಿತ್ತು ಅಂಧನಿಗೂ ಕುರಡನೆಂಬ ಹಣೆಪಟ್ಟಿ ಮೊದಲೇ ಇದ್ದರು ಹೊಸತರಹದ ಮುಖವಾಡದನೇತ್ರಗಳಿಗೆ ಬಣ್ಣಗಳ ಲೇಪಿಸಲಾಗಿತ್ತು ಕಾಣದಾ ಜೀವಯು ಎಂಬ ಸುಳ್ಳುಗಳ ಸೋಗಿಗೆ ಕಾಲವೇನಿಂತು ಮುನ್ನುಡಿ ಬರೆದಿತ್ತುಅದಕೆ ಸತ್ಯವೆಂಬಂತೆ ಸಮಯಸಾತು ನೀಡಿ ಗರ್ವಪಟ್ಟಿತ್ತು. ಬಿತ್ತಿದವನು ಬರೀಗೈಲಿ ಬೆತ್ತಲಾಗಿ ನಿಂತು ಪರರ ಪಾಲಿಗೆಹುಚ್ಚನಂತೆ ಕಂಡು ಬದುಕುವ ಪಾಡು ಬಂದು ನಿಂತಿತ್ತು. ಗುಡಿ ಗುಂಡಾರ ಮಸೀದಿಗಳನದೇವರಿಗೂ […]

ಅಂಕಣ ಬರಹ ಶಾಲಾರಂಗದೊಳಗೊಂದು ಕೋಲಾಟ ಠಣ್…ಠಣ್… ಠಣ್.. ಗಂಟೆಯ ಸದ್ದು ಒಂಭತ್ತು ಸಾರಿ  ಕೇಳಿಸಿತಾ! ಹಾಂ!! ಅದು ನಮ್ಮ ಶಾಲೆಯ ಬೆಳಗಿನ ಗಂಟೆ.   ನನ್ನಜ್ಜಿಯ ಹಣೆಯ ನಡುವಿನ ಕುಂಕುಮದ ಬೊಟ್ಟಿನಂತೆ ನಮ್ಮ ಊರಿನ ಕೇಂದ್ರ ಭಾಗದಲ್ಲಿ ಆಧಾರ ಸ್ತಂಭದಂತೆ ಕೂತಿತ್ತು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಹೌದು ಅದು ನಮ್ಮ ಶಾಲೆ.  ನಮ್ಮ ಹಳ್ಳಿಯ ಶಾಲೆ.  ಬಲಗಾಲಿಟ್ಟು ಒಳಗೆ ಬರಬೇಕು. ಮೊದಲು ಕಾಣಿಸುವುದೇ ಬಿಳೀ ಕಂಬದ ಧ್ವಜಸ್ತಂಭ. ಅದರ ಬುಡದಲ್ಲಿ ಕಟ್ಟೆ . ಅದರ ಹಿಂದೆ, […]

ಅಂಕಣ ಬರಹ ಅರಿವಿನ ನಾವೆಯ ಮೇಲೆ ಸುಖ ಪಯಣ… “Every human being lives in a perpetual state of insuffiency. No matter who you are or what you have achieved, you still want a little more than what you have right now…“ -Sadhguru (Inner Engineering) ಕೊರತೆಯ ಶಾಶ್ವತ ಸ್ಥಿತಿಯೊಂದು ನಮ್ಮೊಳಗೆ ಸದಾ ಜಾಗೃತ ಮತ್ತು ಜೀವಂತ ಇಲ್ಲದೆ ಹೋಗಿದ್ದಿದ್ದರೆ ನಾವೆಲ್ಲ ಬಹುಶಃ ಕೈಕಟ್ಟಿ […]

ಗಜಲ್

ಗಜಲ್ ಶಿವರಾಜ್.ಡಿ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ ಕಾಮದ ರೂಪ ಉಂಟೂ ಲೋಕದಲಿನಮ್ಮಿಬ್ಬರ ಪರಿಶುದ್ಧ ಪ್ರೇಮಕೆ ಈ ರಾತ್ರಿಗಳೇ ಸಾಕ್ಷಿ ಸಾಕಿ ಸೌಂದರ್ಯವ ಆಸ್ವಾದಿಸದೇ ಅನುಭೋಗಿಸುವುದು ಸಲ್ಲದುಹೃದಯಾಂತರಾಳದಲಿ ಮಿಳಿತಗೊಂಡ ಆತ್ಮಗಳೇ ಸಾಕ್ಷಿ ಸಾಕಿ ನಿನ್ನೊಲವ ಸವಿರುಚಿಯ ಉಣಬಡಿಸು ನನ್ನೆದೆಗೆನೀನಿರದ ಅನುಕ್ಷಣಗಳಿಗೆ ವಿರಹಗಳೇ ಸಾಕ್ಷಿ ಸಾಕಿ ಪ್ರೀತಿ ಎಂದರೆ ಬರೀ ದೇಹಾಕರ್ಷಣೆ ಅಲ್ಲ ‘ ಬಾಬಾ ‘ಮನಸ್ಸು ಮನಸ್ಸುಗಳ ಸಮ್ಮೀಲನಗಳೇ ಸಾಕ್ಷಿ ಸಾಕಿ *******************************************

ನನ್ನವನು

ಕವಿತೆ ನನ್ನವನು ಅನಿಲ ಕಾಮತ ಮದಿರೆಯ ಅಮಲಿನಲ್ಲಿದ್ದಾಗಕೈಹಿಡಿದು ಕುಳುಣಿಸಿದ್ದೇನೆಹಸಿವಿನಿಂದ ಒಡಲುಉರಿ ಎದ್ದರುಒಡಲು ತುಂಬಿದವರಂತೆನಟಿಸಿರುವೆ ಮಾನನಿಯರ ಸಂಘದಲ್ಲಿಮುಳುಗಿದರುಮೌನ ಮುರಿಯದಿರುವೆಮೈಯ ಮೇಲಿನಬರೆ ಸರಿಕರಿಗೆಸಣ್ಣ ಗುಮಾನಿಯೂಬರೆದ ಹಾಗೆಸೀರೆಯಿಂದಸುತ್ತಿಕೊಂಡಿರುವೆರಂಡೆ ಮುಂಡೆಯಬೈಗಳಿಗೆ ದಿನಂಪ್ರತಿಆಹಾರವಾಗಿರುವೆನಿನ್ನ ಸಿಟ್ಟಿಗೆ ಅದೆಷ್ಟು ಸಲನಾನು ಆಹುತಿಯಾಗಿರುವೆಏಕೆಂದರೆ ನೀನುನನ್ನವನು…………. ******************************************************

ನಿರುತ್ತರ

ಪುಸ್ತಕ ಸಂಗಾತಿ ನಿರುತ್ತರ ನಿರುತ್ತರ-ಕವನ ಸಂಕಲನಪ್ರಕಾಶಕರು-ದೀಪ್ತಿ ಬುಕ್ ಹೌಸ್ ಮೈಸೂರುಪುಟಗಳು-೧೧೨ಬೆಲೆ-೧೦೦ರೂ ಅದೇ ಹಳೆಯ ಒಲೆಗೆ ಹೊಸ ಉರಿಯ ಹಾಕಿ ಪ್ರತಿದಿನ ನಾವೀನ್ಯದ ಬೆಳಕು ತೆರೆದಿದೆ ಬೆಳಕಿನ ಬದುಕು. … ಕವಿತೆ ಹುಟ್ಟುವುದೇ ಒತ್ತಡದಿಂದ ಎನ್ನುವುದು ನನ್ನ ನಂಬಿಕೆ. ಎಲ್ಲಾ ಸಾಂಗವಾಗಿ ಸಾಗುತ್ತಿದ್ದಾಗ ಸಾಲೊಂದೂ ಹೊಳೆಯದೆ ಕವಿತೆಯೆಂಬ ಈ ಚಂಚಲೆಯನ್ಮು ಹುಡುಕಿ ಗಾಬರಿಯಾಗುವುದು ನನಗೆ ಆಗಾಗ ಘಟಿಸುವ ಸಂಗತಿ. ಈ ಒತ್ತಡದಿಂದ ಹುಟ್ಟಿದ್ದನ್ನು ಪ್ರಮಾಣಬದ್ದವಾಗಿ ಬೆಳೆಸಿ ಅಕ್ಷರಗಳಲ್ಲಿ ಬೆಳೆಯಗೊಟ್ಟರೆ ಕವಿಯಾಗಿ ಗೆದ್ದಂತೆ. ಒಲಿದಂತೆ ಹಾಡುವೆ ಎನ್ನುವ ನನ್ನ ಮೊಂಡುವಾದಕ್ಕೆ […]

ಗಜಲ್

ಗಜಲ್ ಎ. ಹೇಮಗಂಗಾ ವಿರಹ ಹೃದಯಕೆ ಹೊರೆಯಾಗುತಿದೆ ತೊರೆದು ಹೋಗದಿರು ನನ್ನಸನಿಹ ನೀನಿರದ ಕೊರಗು ಕೊರೆಯುತಿದೆ ತೊರೆದು ಹೋಗದಿರು ನನ್ನ ಹೊಂಬೆಳಕ ಸೂರ್ಯನೂ ಕೆಂಡದಂತೆ ಸುಡುವನು ನಿಷ್ಕರುಣಿಯಾಗಿಕುದಿಎಸರಿನಂತೆ ಮನಸು ಕುದಿಯುತಿದೆ ತೊರೆದು ಹೋಗದಿರು ನನ್ನ ಭಾವ ಸಂವಹನಕೆ ಬರಿಯ ಕಂಗಳೇ ಸಾಕು ಮಾತಿನ ಹಂಗಿಲ್ಲ ನನಗೆಎದೆಗೂಡಲಿ ಪ್ರೀತಿದೀಪವಿನ್ನೂ ಬೆಳಗುತಿದೆ ತೊರೆದು ಹೋಗದಿರು ನನ್ನ ಸುಖವೆಲ್ಲಿದೆ ಒಂಟಿ ಬಾಳಲ್ಲಿ ನಿನ್ನ ಕೂಡಿ ಒಡನಾಡದ ಹೊರತು ?ಮಧುಪಾನಕೆ ಅಧರ ಹಂಬಲಿಸುತಿದೆ ತೊರೆದು ಹೋಗದಿರು ನನ್ನ ತನುವಿಂದು ಕೊರಡಾಗಿ ಬಾಡಿದೆ ಹಿತ […]

ಅಂಕಣ ಬರಹ ನಿರ್ಮಲಾ‌ ಶೆಟ್ಟರ್ ಕಥೆಯ ಕೇಂದ್ರ ಒಳಮನದಲ್ಲಿ ಬೇರುಬಿಟ್ಟರೂ ಅದರ ವ್ಯಾಪ್ತಿ ಜಗದಗಲ ಪರಿಚಯ: ನಿರ್ಮಲಾ ಶೆಟ್ಟರ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಧಾರವಾಡ ಜಿಲ್ಲೆಯಲ್ಲಿ ಹೈಸ್ಕೂಲ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಅತ್ಯುತ್ತಮ ಬೋಧನೆಯಿಂದ ತಾಲೂಕಾಮಟ್ಟದ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಈ ವರೆಗೂ ‘ಬೆಳಕಿನೊಡನೆ ಪಯಣ’ ಮತ್ತು ‘ನಿನ್ನ ಧ್ಯಾನಿಸಿದ ಮೇಲೂ’ ಎನ್ನುವ ಎರಡು ಪುಸ್ತಕಗಳು ಪ್ರಕಟಗೊಂಡಿರುತ್ತವೆ. ಅದರಲ್ಲಿ ಒಂದು ಕಾವ್ಯಸಂಕಲನವಾದರೆ, ಇನ್ನೊಂದು ಗಜಲ್ ಸಂಕಲನವಾಗಿದೆ. ಸಧ್ಯ, ‘ಸರಹದ್ದುಗಳಿಲ್ಲದ ಭೂಮಿಯ […]

ಹಿಮಾಲಯ ಪರ್ವತ ಶ್ರೇಣಿಗಳು”

ಲೇಖನ ಹಿಮಾಲಯ ಪರ್ವತ ಶ್ರೇಣಿಗಳು” ಆಶಾ ಸಿದ್ದಲಿಂಗಯ್ಯ ಸಿಂಧೂ ನದಿಯ ಬಯಲಿನಲ್ಲಿ ಸಂಸ್ಕೃತಿ ರೂಪುಗೊಳ್ಳುವ ಮೊದಲೇ ಗೊಂಡಿ ಭಾಷೆಯಿತ್ತು ಎನ್ನುವ ಮಾತು ಹೆಚ್ಚು ಮುಖ್ಯವಾಗುತ್ತದೆ. ಹಲವು ಲಕ್ಷ ವರ್ಷಗಳ ಹಿಂದೆ ಈಗಿನ ದಕ್ಷಿಣ ಅಮೆರಿಕ, ದಕ್ಷಿಣ ಆಫ್ರಿಕಾ, ಏಷ್ಯಾ ಖಂಡದ ದಕ್ಷಿಣ ಭಾಗ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಅಂಟಾರ್ಟಿಕಾಗಳು ಕೂಡಿದ್ದ ಭೂಭಾಗವಿತ್ತು. ಅದನ್ನು ಗೊಂಡ್ವಾನ ಎಂದು ಕರೆಯುತ್ತಿದ್ದರು. ಭಾರತದ ವಿಂಧ್ಯ ಪರ್ವತ ಶ್ರೇಣಿಯ ದಕ್ಷಿಣ ಭಾಗ ಅಂದರೆ ದಕ್ಷಿಣ ಭಾರತದ ಪ್ರಸ್ಥಭೂಮಿ ಗೊಂಡ್ವಾನ ಪ್ರದೇಶದ ಭಾಗವಾಗಿತ್ತು. ಅಲ್ಲಿ […]

Back To Top