ಫೋಟೋ ಆಲ್ಬಂ
ಪಂಚವರ್ಣದ ಹಂಸ ಸತ್ಯಮಂಗಲ ಮಹಾದೇವ ಕೃತಿ ಬಿಡುಗಡೆಯ ಸಂಭ್ರಮದ ಕ್ಷಣಗಳು ದಿನಾಂಕ: 04-11-2019 ಬಿಡುಗಡೆ: ಶ್ರೀ ಮಲ್ಲೇಪುರಂ.ಜಿ.ವೆಂಕಟೇಶ್ ಕೃತಿ ಕುರಿತು ಮಾತಾಡಿದವರು: ಡಾ.ಸಿ.ಎನ್. ರಾಮಚಂದ್ರನ್
ಕಾವ್ಯಯಾನ
ಖಾಲಿ ದೀಪ ಮತ್ತು ಕತ್ತಲು ಬಿದಲೋಟಿ ರಂಗನಾಥ್ ಕಟ್ಟಿದ ಮಣ್ಣಗೋಡೆಯು ತಪ ತಪನೆ ಬೀಳುತ್ತಿದೆ ನಿದ್ದೆಯಿಲ್ಲದ ರಾತ್ರಿಗಳ ಕನಸು ಆ ಮನೆ ಪ್ರತಿ ಇಟ್ಟಿಗೆಯ ಮೇಲೂ ನಿನ್ನ ಶ್ರಮದ ಬೆವರ ವಾಸನೆ ನೀನು ಮಲಗೆದ್ದ ಜಾಗದ ನಿಟ್ಟುಸಿರು ಕಣ್ಣೀರಾಕುತ್ತಿದೆ ನೀನೆ ನೆಟ್ಟ ನಂಬಿಕೆಯ ಗಿಡದ ಬುಡಕ್ಕೆ ಪಾದರಸ ಸುರಿದ ಅವಳು ಇವತ್ತು ಬೀದಿ ನಾಯಿಯ ಬಾಲ ಅವಮಾನದ ಗಾಯ ನಂಜಾಗಿ ನಸಿರಾಡಿ ಬದುಕುವ ಭರವಸೆಯು ಕುಂದಿ ನೆಲದ ಮೇಲಿಟ್ಟ ಅಷ್ಟೂ ಹೆಜ್ಜೆಗಳು ಕೆಂಡಗಳಾಗಿ ಧಗ ಧಗಿಸಿ ಉರಿದು […]
ವರ್ತಮಾನ
“ಓಟದಿಂದ ಕಲಿಯುವ ಆಡಳಿತದ ಪಾಠ” ಗಜಾನನ ಮಹಾಲೆ ಓಟದ ಸ್ಪರ್ಧೆಯಲ್ಲಿ ಬೇರೆ ಬೇರೆ ರೀತಿಯ ಓಟಗಳಿರುತ್ತವೆ. 5000 ಮೀಟರ್ ಹಾಗೂ 100 ಮೀಟರ್ ಓಟಗಳ ಎರಡು ವಿಭಾಗದ ಮಧ್ಯೆ ಬಹಳಷ್ಟು ವ್ಯತ್ಯಾಸವಿರುತ್ತದೆ. ವ್ಯತ್ಯಾಸ ಓಡುವ ದೂರದ ಬಗ್ಗೆ ಮಾತ್ರವಲ್ಲ. ಓಡುವ ವಿಧಾನದಲ್ಲಿಯೂ ವ್ಯತ್ಯಾಸವಿದ್ದು ಸರಿಯಾದ ವಿಧಾನದಲ್ಲಿ ಓಡಿದ ಸ್ಪರ್ಧಿ ಮೊದಲಿಗನಾಗುವ ಸಂಭವ ಹೆಚ್ಚಿರುತ್ತದೆ. 100 ಮೀಟರ್ ಓಟದಲ್ಲಿ ಪ್ರಾರಂಭದಿಂದ ಅತ್ಯಂತ ವೇಗವಾಗಿ ಓಡಿದವರು ಮತ್ತು ಆ ಸಾಮರ್ಥ್ಯವಿದ್ದವರು ಪ್ರಥಮ ಸ್ಥಾನ ಗಳಿಸುತ್ತಾರೆ. 5000 ಮೀಟರ್ ಓಟದಲ್ಲಿ ಈ […]
ಗೆರೆಬರೆ
ಡಾ.ಎನ್.ಸುಧೀಂದ್ರ
ಕಾವ್ಯಯಾನ
ಗುಳಿಗೆ ಮಾರುವ ಹುಡುಗ ಅರುಣ್ ಕೊಪ್ಪ ಇವನು ಬ್ಯಾಗ್ ಹೊತ್ತು ಬೆವರು ಬಿತ್ತಿ ಜಿಪ್ಪು ಸರಿಸುತ್ತಾ ಸ್ಯಾಂಪಲ್ ಹಂಚುವ ಡಾಕ್ಟರ್ ಛೆಂಬರ್ ಲಿ ದಿನವೂ ಜ್ಞಾನಾರ್ಜನೆಯಂತೆ! ಸರತಿ ಸಾಲಿನಲ್ಲಿ ಮಾತು ಬರದವ ಹೊಡೆಯಲು ಹೋಗುತ್ತಲೇ… ಕಾಲು ಕಿತ್ತು ಬೇರೆ ವೈದ್ಯರ ಭೇಟಿಗೆ ಗೀಳಿಡುತ್ತಾನೆ ಇವ ಗುಳಿಗೆ ಮಾರುವ ಹುಡುಗನಂತೆ ಒಳ ಸೇರಿಸಿದ ಅಂಗಿ, ಕಪ್ಪು ಸೊಂಟದ ಪಟ್ಟಿ ಶೂ ಕೂಡ ಹೊಳೆವ ಹಾಗೇ ರೋಗಿಗಳು ಮತ್ತಷ್ಟು ಹಿಡಿ ಶಾಪ ಹಾಕುವ ಉತ್ತೇಜನ ನೀಡುವ ಹಾಗೇ ಅವನ ಡ್ರೆಸ್ […]
ಅನುವಾದ
ವಸಂತನಾಗಮನ ಮೂಲ ತೆಲುಗು ರಚನೆ: ಗುಂಟೂರು ಶೇಷೇಂದ್ರಶರ್ಮ ಗುಂಟೂರು ಶೇಷೇಂದ್ರ ಶರ್ಮಾ ಬಿ.ಏ.ಬಿ.ಯಲ್ 1927 -2007 ತೆಲುಗು ಸಾಹಿತ್ಯದಲ್ಲಿ ಜನಪ್ರಿಯ ಕವಿ ಯುಗಕವಿ ಎಂದು ಹೆಸರುಗಳಿಸಿದವರು. ಇವರು ಕವಿ, ವಿಮರ್ಶಕ ಹಾಗೂ ಬರಹಗಾರರು.1994 ರಲ್ಲಿ ಇವರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಇವರು ನೋಬಲ್ ಬಹುಮಾನಕ್ಕೂ ಭಾರತದಿಂದ ನಾಮಿನೇಟ್ ಆಗಿದ್ದರು. ಇವರ ಹಲವಾರು ರಚನೆಗಳು ಕನ್ನಡ, ಇಂಗ್ಲೀಷು ಹಿಂದೀ ಉರ್ದೂ ಬೆಂಗಾಲೀ ನೇಪಾಲಿ ಹಾಗೂ ಗ್ರೀಕ್ ಭಾಷೆಗಳಿಗೂ ಅನುವಾದಗೂಂಡಿವೆ ಕನ್ನಡಕ್ಕನುವಾದ: ನಾರಾಯಣ ಮೂರ್ತಿ ಬೂದುಗೂರು ಹೂಗಳು ತುಟಿಯರಳಿಸಿವೆ […]
ಕಾವ್ಯಯಾನ
ಜೀವಾತ್ಮ ಕೊಟ್ರೇಶ್ ಅರಸೀಕೆರೆ ಯಾವುದೋ ಹಕ್ಕಿ ಹಾಕಿರುವ ಈ ಹಿಕ್ಕೆ ಈಗ ಸಸಿಯಾಗಿದೆ! ಉದರಾಂಬರದ ಕಾರಣ ನುಂಗಿ,ನೀರು ಕುಡಿದುದೆಲ್ಲಾ ಏನೆಲ್ಲಾ ಸಕಾರಣಗಳಿಗೆ ಕಾರಣ!! ಜಗಕ್ಕೆ ಬಿದ್ದ ಕಿರಣ,ಮೇಲಿಂದ ಬಿದ್ದ ನೀರ ಬಿಂದು,ಸುಯ್ಯನೇ ಬೀಸುವ ಗಾಳಿ…… ಯಾವ ಯಾವುದಕ್ಕೆ ಸಂಬಂಧ!! ಅಲ್ಲೊಂದು ಜೋಡಿ ಹಕ್ಕಿ, ಇಲ್ಲೊಂದು ಮಿಲನ, ನಳ ನಳಿಸುತ್ತಿರುವ ಹೂ… ಒಂಟಿಯಾಗಿ ಯಾವುದೋ ಶಿಖರ ತೇಲಿ ಹೋಗುತ್ತಿರುವ ಮೋಡಗಳು ಯಾವ ದಂಡಯಾತ್ರೆಗೆ……. ಜೀವ ಇರಲೇಬೇಕಿಲ್ಲ ಚಲನೆಗೆ ಸೃಷ್ಟಿಯ ಸಾರ ಯಾರು ಹೀರಿದ್ದಾರೆ? ಯಾರೋ ಮೇಲೋ ಯಾರ ವಿಜಯ? […]
ಶಿಕ್ಷಣ
ಶಿಕ್ಷಣದ ಸವಾಲುಗಳ ಬೆಟ್ಟು ಯಾರ ಕಡೆಗೆ? ಶೃತಿ ಮೇಲಿಸೀಮೆ ಶಿಕ್ಷಣ ಎನ್ನುವುದು ಸಾಮಾಜಿಕ ಸಂರಚನೆಯಲ್ಲಿ ಮಹತ್ವದ ಪರಿವರ್ತನೆ ತರುವ ದಿವ್ಯಾಸ್ತ್ರವಾಗಿದೆ. ಈ ಶಿಕ್ಷಣವು ಮುಂದಿನ ಪೀಳಿಗೆಗೆ ಹಿಂದಿನ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವಾಸ್ತವಿಕ ಮಾಹಿತಿಗಳನ್ನು ನೀಡುತ್ತಾ, ಯುವ ಪೀಳಿಗೆಯಲ್ಲಿ ಉತ್ತಮ ಆಲೋಚನೆ, ಭಾವನೆ, ನಿರಂತರತೆಯನ್ನು ಬೆಳೆಸುವ ಗುರುತರ ಜವಾಬ್ದಾರಿಯನ್ನು ಹೊತ್ತಿದೆ. ಪೂರ್ವ ಭಾರತದಲ್ಲಿ ವಿದ್ಯಾವಂತರಿಗಿಂತ ಹೆಚ್ಚಾಗಿ ಜ್ಞಾನವಂತರು,ಸುಶಿಕ್ಷಿತರು ಇದ್ದರು. ಪ್ರಸ್ತುತ ಎಷ್ಟೇ ಪದವಿಗಳನ್ನು ಹೊತ್ತಿದ್ದರೂ ಅವರು ಪಡೆದ ವಿದ್ಯೆ ಅವರಿಗೆ ವಿನಯವನ್ನು ನೀಡುತ್ತಿಲ್ಲ . ‘ಶಿಕ್ಷಣ’ ಎಂದರೇನು? […]
ಕಾವ್ಯಯಾನ
ಮಲ್ಲಿಗೆ-ಸಂಪಿಗೆ ಅನು ಮಹಾಲಿಂಗ ಅಂಗಳದಿ ಹರಡಿತ್ತು ಹಸಿರಿನ ಮಲ್ಲಿಗೆ ಚಪ್ಪರ ಮಳೆಹೊಯ್ದು ತಂಪಾಗೆ ಸೊಂಪಾದ ಹಂದರ ಬಳ್ಳಿಯ ತುಂಬೆಲ್ಲ ಮಲ್ಲಿಗೆ ಹೂ ರಾಶಿ ಸಂಜೆಗೆ ಕೊಯ್ದರೆ ಮನೆತುಂಬ ಘಮ ಸೂಸಿ ಮನದೊಡೆಯ ತಂದಿರುವನು ಘಂಗುಡುವ ಮಲ್ಲಿಗೆ ನಾರಿಯ ಮುಡಿಯೇರಿ ನಗುತಿರಲು ಮೆಲ್ಲಗೆ ಹಿತ್ತಲ ಮರದಲ್ಲಿ ಬಿರಿದಾಳು ಸಂಪಿಗೆ ಘಮನವಾ ಸೂಸ್ಯಾಳು ಸುತ್ತೆಲ್ಲಾ ಸುಮ್ಮಗೆ ಬಾಲೆಯ ಮನ ಸೆಳೆಯೊ ಗಗನದ ಸಂಪಿಗೆ ಮುಡಿಸೇರಿಸಲು ಪರದಾಟ ಪಕ್ಕದ ಮನೆ ಕೆಂಪನಿಗೆ ಮಲ್ಲಿಗೆ ಸಂಪಿಗೆ ಪ್ರತ್ಯೇಕ ರಾಣಿಯರುಅವರವರ ಕಕ್ಷೆಯಲಿ ಅವರವರೆ ಬೀಗುವರು. […]
ಕಾವ್ಯಯಾನ
ಪ್ರಶ್ನೋತ್ತರ ರತ್ನನಂದಿನಿ (ಲತಾ ಆಚಾರ್ಯ) ಪ್ರೀತಿ ಅಂದರೇನು ಕೇಳಿದಳು ಅವಳು ಉತ್ತರಿಸದೆ ನಾನು ಸೊಸೆಯ ಕಡೆಗೊಮ್ಮೆ ಕೈಯ ತೋರಿಸುತ ಮುಗುಳ್ನಗೆಯ ಬೀರಿದೆ ಅರ್ಥವಾಗಿರಬೇಕು ಈಗ ಆಕೆಗೆ ಅಮ್ಮ ಮಗುವಿಗೆ ತುತ್ತು ಉಣ್ಣಿಸುತ್ತಿದ್ದಳು. ಸ್ನೇಹವೆಂದರೇನು ಮತ್ತೊಂದು ಪ್ರಶ್ನೆ ಈಗಲೂ ನಾನು ಮೌನ ದಿಟ್ಟಿಸಿದಳು ನನ್ನ ಗೆಳೆಯನೋರ್ವನು ಬಂದು ಹೇಗಿರುವೆ ಎಂದನು ಮತ್ತದೇ ಅಸೌಖ್ಯ ತೋರಿದರೆ ಹೆದರದಿರು ನಾನಿರುವೆ ಜೊತೆಯಲ್ಲಿ ಎಂದಾಗ ಆಕೆ ಮೌನವಾಗಿದ್ದಳು. ಬೆಸುಗೆ ಎಂದರೇನು ಕೇಳಿದಳು ಈ ಬಾರಿ ಏನು ಹೇಳಲಿ ನಾನು ಮಾತು ಬಾರದು ನನಗೆ […]