ಕಾವ್ಯಯಾನ

ಕಾವ್ಯಯಾನ

ಸಾವಿನ ಸಾಂಗತ್ಯದಲ್ಲಿ ಮಧುಸೂದನ ಮದ್ದೂರು ಸಾವೆಂಬ ಸೂತಕದ ಹಕ್ಕಿ ರಕ್ಕೆ ಬಿಚ್ಚಿ ಹಾರುತ್ತಿದೆ ಯಾವ ಜೀವಗಳೆಂಬೋ ಹಣ್ಣ ಕಚ್ಚಿ ತಿಂದು ರಕ್ಕೆ ಪಟಪಟಿಸಿ ಗಗನದ ಚಿಕ್ಕೆಯಾಗಲಿದೆಯೋ ಬಲ್ಲವರು ಯಾರು ? ಸಾವೆಂಬ ಮಾಂತ್ರಿಕನ ಮಂತ್ರಬೂದಿಯ ಸೆಳತೆಗೆ ಸಿಲುಕಿ ಮಾಯವಾಗುವ ಮಾಯಕಾರರೆಷ್ಟೋ ಬಲ್ಲವರು ಯಾರು? ಸಾವೆಂಬ ಬುಟ್ಟಿಯಲಿ ಕಣ್ಕಟ್ಟಿನ ಯಕ್ಷಿಣಿಕಾರನ ಯಕ್ಷಿಣಿ ಕೋಲಿನ ಮಂತ್ರಕೆ ಅತಳ ಸುತಳ ಪಾತಾಳ ಸೇರುವವರೆಷ್ಟೋ ಬಲ್ಲವರು ಯಾರು? ಬಡವ-ಬಲ್ಲಿದ ಅಧಿಕಾರಸ್ಥ-ವ್ಯವಹಾರಸ್ಥ ಕಲೆಕಾರ-ಓಲೆಗಾರ ಯಾಂತ್ರಿಕ-ಮಾಂತ್ರಿಕ ವಿಜ್ಞಾನಿ-ಅಜ್ಞಾನಿ ಎಂಬೋ ಬೇಧ ಭಾವ ಎಣಿಸದ ಸಾವೆಂಬೋ ಸಾಹುಕಾರನೆದರು […]

ಪುಸ್ತಕ ಪರಿಚಯ

ಕೃತಿ-ಗುಣ (ಕಾದಂಬರಿ) ಲೇಖಕರು-ಡಾ.ಗುರುಪ್ರಸಾದ್ ಕಾಗಿನೆಲೆ ಛಂದ ಪುಸ್ತಕ ಡಾ.ಅಜಿತ್ ಹರೀಶಿ ಶಿವಮೊಗ್ಗದಲ್ಲಿ ಹುಟ್ಟಿ ಬಳ್ಳಾರಿಯಲ್ಲಿ ಎಂಬಿಬಿಎಸ್.ಎಂಡಿ ಮಾಡಿ ಪ್ರಸ್ತುತ ಅಮೆರಿಕದಲ್ಲಿ ಎಮರ್ಜೆನ್ಸಿ ವೈದ್ಯರಾಗಿ ಕೆಲಸಮಾಡುತ್ತಿರುವ ಗುರುಪ್ರಸಾದರು ಬರೆದಿರುವ ಕಾದಂಬರಿಯಿದು. ಬಿಳಿಯ ಚಾದರ,ಗುಣ ಮತ್ತು ಹಿಜಾಬ್ ಅವರ ಪ್ರಕಟಿತ ಕಾದಂಬರಿಗಳು. ನಿರ್ಗುಣ, ಶಕುಂತಳಾ ಕಥಾಸಂಕಲನಗಳು, ಲೇಖನ ಸಂಗ್ರಹ-ವೈದ್ಯ ಮತ್ತೊಬ್ಬ, ಆಚೀಚೆ ಕಥೆಗಳು- ಸಂಪಾದಿತ ಕಥಾಸಂಕಲನಗಳನ್ನು ಇವರು ಪ್ರಕಟಿಸಿದ್ದಾರೆ. ಹಿಂದಿನ ದಶಕದಲ್ಲಿ ಅಮೆರಿಕೆಯಲ್ಲಿ ಘಟಿಸಿರಬಹುದಾದ, ಈ ದಶಕದಲ್ಲಿ ಭಾರತದ ಮಹಾನಗರಗಳಲ್ಲಿ ನಡೆಯುತ್ತಿರಬಹುದಾದ ಮತ್ತು ಮುಂದಿನ ದಿನಮಾನಗಳಲ್ಲಿ ನಾವೇ ಕಾಣಬಹುದಾದ ವಿಶಿಷ್ಟ […]

ಕಾವ್ಯಯಾನ

ರೆಕ್ಕೆ ಮುರಿದ ಹಕ್ಕಿ ಕನಸು ಬಿದಲೋಟಿ ರಂಗನಾಥ್ ದುಃಖ ಬಚ್ಚಿಟ್ಟುಕೊಂಡು ನಗುವ ಸೂಸುವ ನಿನ್ನ ಅಂತರಂಗದ ನುಡಿಯೇ ನೋವುಗಳು ಜಾರುತ್ತಿವೆ ನಿನ್ನ ತುಟಿ ಸೀಳುಗಳ ಮೇಲೆ… ಕಣ್ಣಪದರುಗಳಲ್ಲಿ ತೇಲುವ ಕಣ್ಣೀರು ನಿಜಕ್ಕೂ ಎದೆಯಲ್ಲಡಗಿದ ಕಥೆ ಬಿಚ್ಚುತಿದೆ ಕುಂತ ನೆಲದ ಜೊಳ್ಳು ಮಾತುಗಳೋ ಸೀರೆ ಸುಟ್ಟ ನೋವೋ ಅಂತು ಸುಡುತ್ತಿದೆ ಎದೆಯ ಮೇಲೆ ಬಿದ್ದು ಉಕ್ಕಲಾರದೆ ರತಿ ಉಕ್ಕಿ ಗರಿಬಿಚ್ಚದೆ ಒಳಗೇ ಸುತ್ತಿ ಸುತ್ತಿ ಭಾವನೆಗಳ ಕೊಲ್ಲುತ.. ರತಿ ತಿಲೋತಮೆಯಂತಿದ್ದರೂ ಒಡೆದ ಒಳಮನಸಿನ ಕನ್ನಡಿಯ ಚೂರು ತಿವಿಯುತ್ತಿದೆ ಮೆತ್ತಗೆ […]

ಕಥಾಗುಚ್ಛ

ಜೀವನವೆಂದರೆ ಹೀಗೇನೆ ಟಿ.ಎಸ್.ಶ್ರವಣಕುಮಾರಿ ಪುಟ್ಟ ದೀಪೂಗೆ ಇವತ್ತು ಶಾಲೆಯಿಂದ ಬರುವಾಗಲೇ ಎರಡು ರೆಕ್ಕೆ ಹುಟ್ಟಿಕೊಂಡು ಬಿಟ್ಟಿತ್ತು. ಯಾವಾಗಲೂ ತನ್ನನ್ನು ಎರಡನೆಯ ಸ್ಥಾನಕ್ಕೆ ತಳ್ಳುತ್ತಿದ್ದ ಪುನೀತನನ್ನು ಅವನು ಎರಡನೆಯ ಸ್ಥಾನಕ್ಕೆ ಕಳಿಸಿ ತಾನು ಅವನ ಜಾಗದಲ್ಲಿ ಹೆಮ್ಮೆಯಿಂದ ನಿಂತಿದ್ದ. ಟೀಚರ್ ಮಾರ್ಕ್ಸ್ ಕಾರ್ಡ್ ಕೊಡೋವಾಗ ಪುನೀತನ ಮುಖ ನೋಡ್ಬೇಕಿತ್ತು. `ತಾನೇ ಫಸ್ಟ್ ಬರೋದು ಅನ್ನೋ ಜಂಭ… ಬೀಗ್ತಾ ಎಲ್ಲರ ಕಡೆ ನೋಡ್ತಾ ಇದ್ದ. ಆದರೆ ತನ್ನ ಹೆಸರು ಹೇಳಿದ ತಕ್ಷಣ ಅವನ ಮುಖ ಹೇಗಾಗಿ ಹೋಯಿತು…. ಹಾ! ಹಾ! […]

ನಿಮ್ಮೊಂದಿಗೆ ಮಕ್ಕಳ ಬಗ್ಗೆ ಎರಡು ಮಾತು

ಇವತ್ತು ನವೆಂಬರ್ ಹದಿನಾಲ್ಕು ಮಕ್ಕಳದಿನಾಚರಣೆ. ಯಾರ ನೆನಪಿನಲ್ಲಿ  ಆಚರಿಸುತ್ತಿದ್ದೇವೆ ಅನ್ನುವುದಕ್ಕಿಂತ, ಹೇಗೆ ಮತ್ತು ಯಾವ ಉದ್ದೇಶಗಳನ್ನು ಇಟ್ಟುಕೊಂಡು ಆಚರಿಸುತ್ತಿದ್ದೇವೆಂಬುದು ಮಾತ್ರ ನಮಗೆ ಮುಖ್ಯವಾಗಬೇಕಿದೆ. ಮಕ್ಕಳ ದಿನದಂದು ಮಕ್ಕಳಿಂದ ನೃತ್ಯ ಮಾಡಿಸಿ, ಆಟ  ಆಡಿಸಿ, ಸಿಹಿ ಹಂಚಿ ಮಕ್ಕಳ ಬಗ್ಗೆ ಉದ್ದನೆಯ ಬಾಷಣಗಳನ್ನು ಬಿಗಿಯುವಷ್ಟಕ್ಕೆ ಈ ಆಚರಣೆಯನ್ನು ಮುಗಿಸಲಾಗುತ್ತಿದೆ. ಆದರೆ  ಮಕ್ಕಳದಿನದಂದು ಮಾತ್ರವಲ್ಲದೆ ಪ್ರತಿನಿತ್ಯವು ನಮಗೆ ಮಕ್ಕಳ ಬಗ್ಗೆ ಕಾಳಜಿ-ಪ್ರೀತಿಯಿರಬೇಕು. ಯಾಕೆಂದರೆ ಯಾವುದೇ ನಾಡಿನ ಭವಿಷ್ಯ ನಿಂತಿರುವುದು ಆ ನಾಡಿನ ಮಕ್ಕಳು ಹೇಗೆ ಪಾಲಿಸಲ್ಪಡುತ್ತಿದ್ದಾರೆ-ಬೆಳೆಸಲ್ಪಡುತ್ತಿದ್ದಾರೆ  ಎನ್ನುವುದರ ಮೇಲೆ. ಹಾಗಾಗಿ […]

ಮಕ್ಕಳ ದಿನ

ಅಣ್ಣ ಬಾರಣ್ಣ ಸಿಂದು ಭಾರ್ಗವ್ ಅಣ್ಣ ಅಣ್ಣ ನನ್ನ ಜೊತೆಗೆ ಆಡಲು ಬಾರಣ್ಣ ಬ್ಯಾಟು ಬಾಲು ತಂದು ಇಡುವೆನು ಬೇಗ ಬಾರಣ್ಣ ಸ್ಕೂಲ್ ಗೆ ಹೋಗುವೆ ನನ್ನನು ಬಿಟ್ಟು ಏಕೆ ಹೇಳಣ್ಣ ತಿರುಗಿ ಬರುವ ತನಕ ಕಾಯುವೆ ನಿನ್ನೀ ಹಾದಿಯನ್ನ ಅಣ್ಣ ಅಣ್ಣ ನನ್ನ ಜೊತೆಗೆ ಅಂಗಡಿಗೆ ಬಾರಣ್ಣ ಮಿಠಾಯಿ ಕೊಡಿಸು ಆಟಿಕೆ ಕೊಡಿಸು ಎಂದು ಕೇಳೆನಣ್ಣ. ನಿನ್ನ ಕೈಹಿಡಿದೇ ಸಾಗುವೆ ಪೂರ ಬೀದಿಯನ್ನ ಅಣ್ಣ ಅಣ್ಣ ನನ್ನ ಜೊತೆಗೆ ಊಟಕೆ ಬಾರಣ್ಣ ನಾನೊಂದು ತುತ್ತು ನೀನೊಂದು […]

GO BLUE- ಗೋ ಬ್ಲೂ

ಅಂಜಲಿ ರಾಮಣ್ಣ ಇವತ್ತು ರಾಷ್ಟ್ರೀಯ ಮಕ್ಕಳ ದಿನಾಚರಣೆ. ೨೦ ನವೆಂಬರ್ ಅಂತರಾಷ್ಟ್ರೀಯ ಮಕ್ಕಳ ದಿನಾಚರಣೆ. ಮಕ್ಕಳ ಹಕ್ಕುಗಳ ವಿಷಯದಲ್ಲಿ ಈ ವರ್ಷಕ್ಕೆ ತನ್ನದೇ ಆದ ಮಹತ್ವ ಇದೆ. ೧೯೫೯ ರ ನವೆಂಬರ್ ೨೦ರಂದು ವಿಶ್ವಸಂಸ್ಥೆಯು ಜೆನೆರಲ್ ಅಸೆಂಬ್ಲಿಯಲ್ಲಿ ಮಕ್ಕಳ ಹಕ್ಕುಗಳ ಘೋಷಣೆ ಮಾಡಿತ್ತು. ನಂತರ ೧೯೮೯ರಲ್ಲಿ  ಹಲವಾರು ರಾಷ್ಟ್ರಗಳು ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿ ಹಾಕಿದವು. ಒಡಂಬಡಿಕೆಗೆ ಸಹಿ ಹಾಕಿರುವ ರಾಷ್ಟ್ರಗಳು, ಈ ವರ್ಷ ೧೪ ರಿಂದ ೨೦ನೆಯ ತಾರೀಕಿನವರೆಗೂ ಪ್ರಪಂಚದಾದ್ಯಂತ ಮಕ್ಕಳ ಹಕ್ಕುಗಳ ಬಗ್ಗೆ ಸಮಾಜದಲ್ಲಿ ಪ್ರಜ್ಞ್ನೆ  […]

ಅವ್ಯಕ್ತಳ ಅಂಗಳದಿಂದ

ಈ ಹೊಸ ಅಂಕಣ ಎರಡು ವಾರಕ್ಕೊಮ್ಮೆ ಪ್ರಕಟವಾಗುತ್ತದೆ. ಅವ್ಯಕ್ತ ಓದುವ ಮುನ್ನ ಮಕ್ಕಳು ಮುಂದಿನ ಸಮಾಜವನ್ನು ಕಟ್ಟುವಂತಹ ಶಿಲ್ಪಿಗಳು ಎಂದು ನಂಬಿರುವವಳು ನಾನು. ನಮ್ಮ ಸುತ್ತ ನೋಡಿದಾಗ ಎರಡು ತರಹದ ವ್ಯಕ್ತಿತ್ವಗಳನ್ನು ಕಾಣಬಹುದು ಎಜುಕೇಶನ್ ಎಂಬುದನ್ನು ಬರೀ ಅಂಕಪಟ್ಟಿಯಲ್ಲಿ ಹೆಚ್ಚಿನ ಅಂಕ ತೆಗೆಯಲು ಸೀಮಿತವಾಗಿರಿಸಿರುವುದು,ಹಣ ಮಾಡುವುದು, ಸ್ವಾರ್ಥ ಜೀವನ ನಡೆಸುವುದು…ಅಥವಾ ಎಜುಕೇಶನ್ ಎಂದರೆ ಒಂದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವುದು, ಸ್ವಾರ್ಥ ಹಾಗೂ ನಿಸ್ವಾರ್ಥ ಎರಡರನಡುವೆ ಸಮತೋಲನ ತರುವುದು, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು…ಮೊದಲನೆಯ ತರಹದ ವ್ಯಕ್ತಿಗಳು ಹಲವರಿದ್ದರೂ, ಎರಡನೆಯ […]

ಮಕ್ಕಳ ದಿನದ ಸಂಭ್ರಮ

ಅನು ಮಹಾಲಿಂಗ ಪುಟ್ಟ ನೀನು ಬಹಳ ಚೆಂದನಿನ್ನ ನಗುವ ಇನ್ನೂ ಅಂದ ಪುಟ್ಟ ಪುಟ್ಟ ಹೆಜ್ಜೆ ಇಟ್ಟು  ಬಂದಾಗಇಡುವೆ ನಿನಗೆ ದೃಷ್ಟಿ ಬೊಟ್ಟು ನಾನಗ ಬಿಸ್ಕೇಟ್ ಚಾಕೊಲೇಟ್ ಭಾರಿ ತರುವೆನೀನಿಗ ಬೇಗ ತಿನ್ನು ಊಟವನ್ನುಅ ಆ ಕಲಿಯೊ ಕಂದಾನಮ್ಮಯ ಭಾಷೆಯೆ ಚೆಂದ ಚೆಂದದಿ ನುಡಿಯೋ ಅಂದದಿ ಕುಣಿಯೊಚಂದ್ರವದನನೇ ಚುಕ್ಕಿ ಚಂದ್ರಮತಾರಲೋಕದ ಅಧಿಪತಿ ನೀನುತಾರ ಬಳಗದೀ ಹೋಳೆಯುವೆ ಏನು ನಿನ್ನಯ ಅಂಗಾಲು ಮುಂಗಾಲನೆಲ್ಲಮುದ್ದಿಸಿ ತೊಳೆದು ಮುತ್ತನ್ನು ಇಡುವೆನನ್ನಯ ಕನಸು ನಾಳೆಯ ನನಸುಜಗಕೆಲ್ಲ ಅಧಿಪತಿ ನೀನೆ ಕಂದಯ್ಯಾ —————————–

Back To Top