ತಂತಿಯೊಳಗಣ ಶಬ್ದ !
ಕಾವ್ಯ ಸಂಗಾತಿ ತಂತಿಯೊಳಗಣ ಶಬ್ದ ! ಬಿದಲೋಟಿ ರಂಗನಾಥ್ ನಾನು ಶರಾಬಿನ ದಾಸ ಘಟಶೋಧನೆಯಲ್ಲಿನ ಬಂಧವನ್ನು ಹುಡುಕುತ್ತಲೇ ಹೋದೆ ಅವನ ನೆರಳಿತ್ತು ಅವಳ ಒಲವಿತ್ತು ನಾನೇ ಇರಲಿಲ್ಲ. ಶೋಧಿಸಿಸಲು ಎದೆಗೂಡಲ್ಲಿದ್ದ ಹಂಸದ ನಡಿಗೆಯ ಹೆಜ್ಜೆಯ ಸುತ್ತಿ ಹೊಲೆದ ಪಾಪದ ಮೂಟೆಯ. ತಿರುಗಿದೆ ಕಾಡು –ಮೇಡು ಬೆಟ್ಟ ಕಣಿವೆ ಕಂದರ ನಾ ಬಯಸಿದ್ದು ಸಿಗಲಿಲ್ಲ ಧ್ಯಾನದ ಹೆಜ್ಜೆ ಮುಟ್ಟಿ ನೋಡಿದೆ ಸಕಲವೂ ನನ್ನೊಳಗೇ ಇತ್ತು ತಂತಿ ಮೀಟಿದ ಶಬ್ದ ನಿಜದ ನೆಲೆಯ ಬದುಕಿಗೆ ದಾರಿ ತೋರಿ ಬಯಲ ಪದಗಳು […]
ಲೇಖನ
ಆ ದೃಶ್ಯಗಳನ್ನು ಅಲಂಕರಿಸಿ ಹಂಚುತ್ತಿದ್ದಾರೆ! ಪಿಎಂ ಇಕ್ಬಾಲ್ ಕೈರಂಗಳ ಕೆಲವು ದೌರ್ಜನ್ಯದ ವಾರ್ತೆಗಳು, ವೀಡಿಯೋಗಳು FB ಮತ್ತು ವಾಟ್ಸಪಲ್ಲಿ ಷೇರು ಆಗಿ ನಮ್ಮ ಕಣ್ಣಿಗೆ ಬೀಳುತ್ತಿರುವುತ್ತವೆ. ನೋಡಕ್ಕಾಗದೇ ನೋಡುತ್ತೇವೆ. ಆಗೆಲ್ಲಾ ಮನಸ್ಸು ವಿಪರೀತ ಹರ್ಟುಗೊಳ್ಳುತ್ತದೆ. ಹೃದಯವನ್ನು ಯಾರೋ ಹಿಂಡಿದಂತಾಗುತ್ತದೆ. ಕೆಲವು ನಮ್ಮನ್ನು ಅಳಿಸಿಯೇ ಬಿಡುತ್ತವೆ. ವಿಕೃತ ಮನಸ್ಸಿನ ಪೈಶಾಚಿಕ ಮನುಷ್ಯರ ವಿರುದ್ಧ ರಕ್ತ ಕುದಿಯುತ್ತದೆ. ಅವರನ್ನು ಜೀವಂತ ಸುಡಬೇಕೆಂದು ಅನಿಸುತ್ತದೆ. ಕ್ರೌರ್ಯ, ದೌರ್ಜನ್ಯಗಳ ತಾಕತ್ತೇ ಹಾಗೆ. ಒಂದೆರಡು ನಿಮಿಷದ ವಾರ್ತೆಯಾಗಿ ಅಥವಾ ವೀಡಿಯೋ ಆಗಿ ಸಿಕ್ಕರೆ ನಮಗೆ […]
ಕಾವ್ಯಯಾನ
ಹೊಸ ಹಾಡು ದೇವಯಾನಿ ನೆನಪಿಗೆಂದು ಕೊಳಲ ನಾನೆಂದೂ ಕೇಳಲೇ ಇಲ್ಲ ಚಕ್ರ ಹಿಡಿಯಲೆಂದೇ ಹೊರಟವನು ನೀನು , ಕೊಳಲು ಬೇಕಿರಲಿಲ್ಲ ಏನು ಮಾಡಲಿ ಈ ಕೊಳಲ ಗಾಳಿ ನುಸುಳಿದರೂ ರಾಧೆ ರಾಧೇ ಎಂದೇ ಉಲಿಯುತ್ತಿದ್ದ ಕೊಳಲೀಗ ಬರಿ ಬಿದಿರ ಕೊಳವೆಯಾಗಿ ಬಿದ್ದಿದೆ ನೀನು ಕೊಳಲೂದಲೆಂದೇ ಗೋಕುಲಕೆ ಈ ಜಗಕೆ ಬರಲಿಲ್ಲ ಬಿಡು ಆದರೂ ಚಕ್ರ ಹೊತ್ತ ಕೈ ಸೋತಾಗ ಕೊಳಲ ನೆನಪಾಗದ್ದೇ ನನಗೆ ವಿಸ್ಮಯ ಕೊಳಲೆಂದರೆ ರಾಧೆ ಎಂದುಕೊಂಡಿದ್ದೆ ಎಂದು ಹೆಮ್ಮೆ ಪಡುತ್ತಿದ್ದೆ ನಾನು ಕೊಳಲ ತೊರೆದಷ್ಟೇ […]
ಪುಸ್ತಕ ಸಂಭ್ರಮ
ಪುಸ್ತಕ ಬಿಡುಗಡೆ ಕಾವ್ಯಕಂದೀಲು ಬಳಗ,ಬಾಗಲಕೋಟೆ ಹಾಗೂ ಕನ್ನಡಸಾಹಿತ್ಯಪರಿಷತ್ತು,ಬಾಗಲಕೋಟೆ ಹಾಗೂ ಫೀನಿಕ್ಸ್ ಪ್ರಕಾಶನ’_ ತೀರ್ಥಹಳ್ಳಿ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ;20/10/2019ರಬಾನುವಾರ ಬಾಗಲಕೋಟೆಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕನ್ನಡ ಸಾಹಿತ್ಯ ಲೋಕದ ಎರಡು ಹೊಸ ಪುಸ್ತಕಗಳೂ ಲೋಕಾರ್ಪಣೆಗೊಂಡವು ‘ನವಿಲೂರ _ದಾರಿಯಲ್ಲಿ’ (ಕಥಾಸಂಕಲನ)- ಶ್ರೀಹರಿದೂಪದ ‘ತೊರೆದು ಜೀವಿದಬಹುದೆ?’(ಭಾವಲಹರಿಗಳ ಗುಚ್ಛ)-ಪುನರ್ವಸು ಪ್ರಶಾಂತ್
ಪ್ರಬಂಧ
ಶ್ರೀದೇವಿ ಕೆರೆಮನೆ
ಪ್ರಬಂಧ
ಮನೆಯ ತಿಂಡಿ
ಮೀನು ಶಿಕಾರಿಯ ಸಂಭ್ರಮ
ಮಳೆಗಾಲದ ಆರಂಭ ಮತ್ತು ಮೀನು ಶಿಕಾರಿ… ರಮೇಶ್ ನೆಲ್ಲಿಸರ ‘ಮಳ್ಗಾಲ ಅನ್ನೋದ್ ಯಾವಾಗ್ ಬಂದ್ ಈ ಸುಡ್ಗಾಡ್ ಶೆಕೀನ ಹೊತ್ಕಂಡ್ ಹೋಯ್ತದೋ ಆ ದ್ಯಾವ್ರೆ ಬಲ್ಲ’, ಅಂತ ಬೇಸ್ಗೀಲಿ ಹಾಗೇಯ “ಈ ಹಾಳಾದ್ ಮಳಿ ದಸೇಂದ್ ಮನೆ ಹೊರ್ಗ್ ಕಾಲಿಡಕ್ ಆಗ್ದು” ಅಂತ ಮಳ್ಗಾಲದಾಗೆ , ಈ ಬಗೀ ಮಾತು ನಮ್ ಮಲ್ನಾಡ್ ಕಡೆ ಎಲ್ರೂ ನಾಲ್ಗಿ ಮೇಲೂ ನಲೀತರ‌್ದದೆ. ಏನ್ ಶೆಕಿ ಅಂತೀರಾ, ಹೋದ್ ಮಳ್ಗಾಲ‌್ದಲ್ ಆ ನಮೂನಿ ಮಳೆ ಹೊಯ್ದ್ರು ನೀರ್ ಅನ್ನದ್ ಪಾತಾಳ್‌ಮಟ […]
ಮಕ್ಕಳ ಸಾಹಿತ್ಯ
ಸಿಂಧು ಬಾರ್ಗವ್
ಮತ್ತೆ ಶಾಲೆ ಶುರುವಾಯಿತು
ಕಾವ್ಯಯಾನ
ಹೇಳಿ ಹೋಗು ಕಾರಣ ಸಂಗೀತ ಶ್ರೀಕಾಂತ್ ನುಡಿವೊಮ್ಮೆ ನಲ್ಲ ನಿನ್ನ ಕೊಳಲ!! ಕೊರಳ ಮಧುರ ಭಾವ ಹೊರಬರಲಿ.. ಎದೆಯೊಳಗಿರುವ ನಂಜು- ನೋವುಗಳೆಲ್ಲಾ ಹಾಡಾಗಿ ಹೊರ ಬಂದು ಕೇಳುವಂತಾಗಲಿ…. ಭಾವಧ್ಯುಯ್ಯಲೆಯಲಿ ಬದುಕಾ ದುಡುತ್ತಿರುವಾಗ ಅದನ್ನು ಧಿಕ್ಕರಿಸುತ್ತೆನೆಂಬುದು ಎಂಥ ಮೂರ್ಖತನವಾದಿತು? ನಿರ್ಭಾವದಲಿ ನಿಜವ ಕೊಲ್ಲ ಹೊರಟಿರುವುದೇಕೆ? ಬೆರಗಾಗಿದ್ದೆ ಹಿಂದೊಮ್ಮೆ ಬಂಡೆಗಳ ಮೇಲೂ ಚಿಗುರೊಡೆಯಬಲ್ಲೆ ಎಂಬ ಅದಮ್ಯ ಉತ್ಸಾಹಕ್ಕೆ ಜಗತ್ತನ್ನೆದುರಿಸಿ ನೆಡೆಯುತ್ತಿದ್ದ ನಿರ್ಭಿತ ನೆಡೆಗೆ.. ವಿರಹದ ದಳ್ಳುರಿಯ ದಾವನಲದಲ್ಲಿ ನಾ ಬೆಂದು ಬಸವಳಿಯುತ್ತಿರುವಾಗ ಬಂಧನ- ಬಿಡುಗಡೆ, ವಿರಹ- ವಿದಾಯ ಎಂಬೆಲ್ಲ ಅರ್ಥವಿರದ […]
ಲಹರಿ
ಒಮ್ಮೆ ತಿರುಗಿ ನೋಡು ನನ್ನ ಕೊನೆಯ ತಿರುವು ಬರುವ ಮುನ್ನ. ವಿಷ್ಣು ಭಟ್ ಹೊಸ್ಮನೆ ನನ್ನ ಮನಸ್ಸು ಅವಳು ತಿರುಗಿ ನೋಡಲೇಬಾರದು. ಮುಂದೆ ಎಂದಿಗೂ ಸಂಧಿಸದ ಹಾದಿಯಲ್ಲಿ ನಾನು ಮತ್ತು ಅವಳು ಸಾಗುತ್ತ ಇರಬೇಕು ಅಂದುಕೊಂಡಿತ್ತು. ಅವತ್ತು ತಿರುಗಿ ನೋಡದೇ ಹೋದರೂ ಎರಡು ದಿನ ಬಿಟ್ಟು ಮತ್ತೆ ಅವಳು ಬಂದಿದ್ದಳು. ಅವಳನ್ನು ಮತ್ತೆ ನೋಡಿದೆ ಎಂಬೊಂದು ಖುಷಿ ಬಿಟ್ಟರೆ ಮತ್ತೇನೂ ನನ್ನಲ್ಲಿ ಹುಟ್ಟಲಿಲ್ಲ. ಆದರೆ ಅವಳು ಎದೆ ತುಂಬ ಪ್ರೀತಿಯನ್ನು ಹೊತ್ತು ತಂದಿದ್ದಳು. ಅವಳು ಕಾದುಕಾದು ಕೇಳಿದ್ದು […]
ಸಂಪ್ರದಾಯದ ಸೊಬಗು
ಅರುಣ್ ಕೊಪ್ಪ ಊರ ಬಾಗಿಲು ಮುಂದೆ ಭಯಭಕ್ತ ಕಲ್ಲುಗಳು, ತೀರಾ ಹಳೆಯವು ಅಲ್ಲಲ್ಲಿ ಹಾಲು ಸೋಕುವ ಮರಗಳು, ಮುಗಿದರೆ ಕೈ ದೇವರು, ಹಾಗೋ ಹೀಗೋ ಗಾಳಿ ಬಂದಾಗ ಬುಡಸಡಿಲವಾಗುವ ಭಯ ಮಹಾಮಯ ! ಮುಂಗಾರಮುಂದೆ ಮಾತು ಕಥೆ, ಅಂತೂ ಕುದುರಿಸಿಯೇ ಬಿಟ್ಟರು ಮಾರಿ ಹಬ್ಬವಂತೆ, ಕುರಿ ಕೋಳಿಯ ಜಾತ್ರೆ ಊರೊಳಗೆ, ಮುಟ್ಟು ಮೈಲಿಗೆ ಹೆಂಗಸರ ಸ್ಥಳಾಂತರ ಒಪ್ಪ, ವಾಗತಿಯಲಿ ಹಬ್ಬ ಸಜ್ಜು ಊರ ಹಬ್ಬದ ಸಲುವಾಗೆ ಶಣ್ಣಿ ಮದುವಿ ಮುಂದಾತು ಕಿವಿಗಿಲ್ಲ ಮೂಗಿಗಿಲ್ಲ ಎಲ್ಲ ದುಬಾರಿಮಯ.. ಇದ್ದದ್ದು […]