ನಿತ್ಯೋತ್ಸವವಿನ್ನು ನೆನಪು

ನಿಂತು ಹೋದ ನಿತ್ಯೋತ್ಸವ ಕೆ.ಎಸ್.ನಿಸಾರ್ ಅಹಮದ್ ನಿತ್ಯೋತ್ಸವ ಕವನ’ ನಿಲ್ಲಿಸಿದ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್..! ನಿತ್ಯೋತ್ಸವದ ಕವಿ ಎಂದೇ ಖ್ಯಾತರಾದ ಕನ್ನಡ ಹಿರಿಯ ಕವಿ ಪ್ರೊ. ಕೆ.ಎಸ್‌ ನಿಸಾರ್ ಅಹಮದ್ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು… ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ 1936ರ ಫೆಬ್ರುವರಿ 5ರಂದು ಜನಿಸಿದವರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದವರು… ನಿಸಾರ್ ಅಹಮದ್ ಅವರಲ್ಲಿ 10ನೇ ವಯಸ್ಸಿನಲ್ಲೇ ಸಾಹಿತ್ಯಾಸಕ್ತಿ ಮೂಡಿತು. ‘ಜಲಪಾತ’ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ 21ಕ್ಕೂ ಹೆಚ್ಚು ಕವನ ಸಂಕಲನಗಳು, 14 ವೈಚಾರಿಕೆ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ… ಅವುಗಳಲ್ಲಿ- ಮನಸು ಗಾಂಧಿ ಬಜಾರು ಹಾಗೂ ನಿತ್ಯೋತ್ಸವ ಇವು ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ ಎಂದೇ ಪ್ರಸಿದ್ಧರಾಗಿದ್ದಾರೆ… 1978ರಲ್ಲಿ ಇವರ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ನಿತ್ಯೋತ್ಸವ ಹೊರಬಂದು, ಕನ್ನಡ ಲಘು ಸಂಗೀತ (ಸುಗಮ ಸಂಗೀತ) ಕ್ಷೇತ್ರದಲ್ಲಿ ಭರ್ಜರಿ ಯಶಸ್ಸು ಪಡೆಯಿತು. ಇದು ವರೆಗೂ 13 ಧ್ವನಿಸುರುಳಿಗಳ ಮೂಲಕ ಅವರು ರಚಿಸಿದ ಕವನಗಳು, ಗೀತೆಗಳು ಸಂಗೀತದೊಂದಿಗೆ ಪ್ರಚುರಗೊಂಡಿವೆ… ಕುರಿಗಳು ಸಾರ್‌ ಕುರಿಗಳು, ರಾಜಕೀಯ ವಿಡಂಬನೆ ಕವನವಾಗಿದೆ. ಭಾರತವು ನಮ್ಮ ದೇಶ (ಸರ್‌ ಮೊಹಮದ್ ಇಕ್ಬಾಲ್ ಅವರ ಸಾರೆ ಜಹಾಂ ಸೆ ಅಚ್ಛಾ ಕವನದ ಕನ್ನಡ ಭಾಷಾಂತರ) ‘ಬೆಣ್ಣೆ ಕದ್ದ ನಮ್ಮ ಕೃಷ್ಣ’ ಕವನ ಕವಿಯ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿವೆ… ಅವರ ಕವನ ಸಂಕಲನಗಳು— ಮನಸು ಗಾಂಧಿ ಬಜಾರು, ನೆನೆದವರ ಮನದಲ್ಲಿ, ಸುಮಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ (1974), ಆಯ್ದ ಕವಿತೆಗಳು (1974), ನಿತ್ಯೋತ್ಸವ, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ಬಹಿರಂತರ, ಸಮಗ್ರ ಕವಿತೆಗಳು, ನವೋಲ್ಲಾಸ, ಆಕಾಶಕ್ಕೆ ಸರಹದ್ದುಗಳಿಲ್ಲ, ಅರವತ್ತೈದರ ಐಸಿರಿ, ಸಮಗ್ರ ಭಾವಗೀತೆಗಳು, ಪ್ರಾತಿನಿಧಿಕ ಕವನಗಳು ಇವರ ಕವನ ಸಂಕಲನಗಳಾಗಿವೆ… ಅವರ ಗದ್ಯ ಸಾಹಿತ್ಯ– ‘ಅಚ್ಚುಮೆಚ್ಚು’, ‘ಇದು ಬರಿ ಬೆಡಗಲ್ಲೊ ಅಣ್ಣ’ ಷೇಕ್ಸ್ ಪಿಯರ್ನ‌ನ ಒಥೆಲ್ಲೊದ ಕನ್ನಡಾನುವಾದ, ‘ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್’ ಕೃತಿಯ ಕನ್ನಡಾನುವಾದ. ಅಮ್ಮ ಆಚಾರ ಮತ್ತು ನಾನು- ಇವುಗಳು ನಿಸಾರ್ ಅಹಮದ್ ಅವರ ಗದ್ಯ ಕೃತಿಗಳಾಗಿವೆ… ಅವರಿಗೆ ಸಂದ ಪ್ರಶಸ್ತಿ, ಪುರಸ್ಕಾರಗಳು— 2006 ರ ಮಾಸ್ತಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗೊರೂರು ಪ್ರಶಸ್ತಿ, ಅನಕೃ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಪಂಪ ಪ್ರಶಸ್ತಿ, 1981ರ ರಾಜ್ಯೋತ್ಸವ ಪ್ರಶಸ್ತಿ, 2003ರ ನಾಡೋಜ ಪ್ರಶಸ್ತಿ, 2006 ರ ಅರಸು ಪ್ರಶಸ್ತಿಗೆ ಅವರು ಭಾಜನರಾಗಿದ್ದರು… 2006 ಡಿಸೆಂಬರಿನಲ್ಲಿ ಶಿವಮೊಗ್ಗದಲ್ಲಿ ನಡೆದ 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಕೂಡ..! ಇಂತಹ ಕವಿ, ಸಾಹಿತಿ ಕೆ.ಎಸ್‌. ನಿಸಾರ್ ಅಹಮದ್ ರು ಈಗ ನಮ್ಮನ್ನು ಅಗಲಿದ್ದಾರೆ. ಅವರಿಗೆ ಇದೋ ಅನಂತಾನಂತ ನಮನಗಳು… ********** ಕೆ.ಶಿವು.ಲಕ್ಕಣ್ಣವರ

ನುಡಿ ನಮನ

ನುಡಿ ನಮನ ಹೊರಗಣ್ಣ ಮುಚ್ಚಿದರೆ ಒಳಗಣ್ಣು ತೆರೆಯುವುದು ಕಾಣುವುದು ಎಲ್ಲೆಲ್ಲು ವಿಶ್ವರೂಪ_ _ಕೆ.ಎಸ್.ನಿಸ್ಸಾರ ಒಬ್ಬ ಕವಿಯಾಗಿ,ಭಾವ ಜೀವಿಯಾಗಿ,ನಾನೆಂಬ ಪರಕೀಯರೊಳು ಒಂದಾಗಿ,ಪ್ರೇಮ ಕವಿಯಾಗಿ, ನಿತ್ಯೋತ್ಸವದ ಜೀವವಾದ ಕವಿ,ಲೇಖಕನ ಸೇವೆ ಅಗಣಿತವಾದ ಪರಿಧಿಯೋಳು ನೆಲೆನಿಲ್ಲಲು ಇವರ ಕವಿತೆಗಳೇ ಸಾಕ್ಷಿ..! ನಾಡು ನುಡಿಗೆ ಕಹಳೆಯುದಿದ ನಿಷ್ಠಾವಂತ ಯೋಧ… ** “ಕನ್ನಡವೆಂದರೆ ಬರಿ ನುಡಿಯಲ್ಲ ಹಿರಿದಿದೆ ಅದರರ್ಥ ನೀರೆಂದರೆ ಬರಿ ಜಲವಲ್ಲ ಅದು ಪಾವನತೀರ್ಥ”…. ಇಡೀ ಕರುನಾಡ ಸೊಗಡನ್ನು ಕನ್ನಡಿಗರಿಗೆ ಎಳೆಎಳೆಯಾಗಿ ಕಟ್ಟಿಕೊಟ್ಟಿದ್ದಾರೆ.ಕನ್ನಡ ನಾಡಲ್ಲಿ ಹುಟ್ಟುವುದೇ ಪುಣ್ಯ.ಇದು ಬರಿ ಗಡಿನಾಡಲ್ಲಿ ಗುರುತಿಸಿದ ನಾಡಲ್ಲ..ಕನ್ನಡಿಗರ ಉಸಿರು‌ ಬೆರೆತ ನಾಡು..ಎಂದು ನುಡಿವಲ್ಲಿ ಅವರ ಆಂತರ್ಯದ ಅಭಿಮಾನಕ್ಕೆ ಹಿಡಿದ ಕನ್ನಡಿಯಾಗಿದೆ. ನಿತ್ಯೋತ್ಸವ * *೧೯೭೮ *ರಲ್ಲಿ ಇಡೀ ನಾಡಿನಾದ್ಯಂತ ಕನ್ನಡಿಗರ ತನು ಮನದಲ್ಲಿ ಚಿರಸ್ಥಾಯಿಯಾದ ಕವಿತೆಗಳ ಗುಚ್ಛ. “ಜೋಗದ ಸಿರಿ ಬೆಳಕಿನಲ್ಲಿ,ತುಂಗೆಯ ತೆನೆ ಬಳುಕಿನಲ್ಲಿ ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ನಿತ್ಯಹರಿದ್ವರ್ಣವನದ ತೇಗ,ಗಂಧ ತರುಗಳಲ್ಲಿ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ”… ಈ ‌ಕವಿತೆಯ ಸಾಲುಗಳು ನಾವ್ ಪ್ರೀತಿಸುವ ಕನ್ನಡಾಂಬೆಯ ಉಸಿರು ಪ್ರತಿಯೊಬ್ಬ ಕನ್ನಡಿಗನ ನಾಡಿ ಮಿಡಿತವೆಂದರೆ ತಪ್ಪಾಗಲಾದು. ಪ್ರೇಮಕವಿಯ ಅಂತರಂಗದಾ ಸೆಳೆತಗಳು* ನೆನೆದೆ ನೆನೆಯುವೆ. “ಕಂಡ ಸಾವಿರ ಅನ್ಯ ಮೊಗದ ಭಂಗಿಗಳಲ್ಲಿ ನನ್ನ ದೈನ್ಯವ ನೊಂದು ಹೋಲಿಸಿದಾಗ ಕಣ್ಣಂಚ ಹೆದೆಯಲ್ಲಿಬಿಗಿಗೊಂಡ ನೋವೊಂದು ನೇರ ನಿನ್ನೆದೆಯತ್ತ ತೂರಿದಾಗ”. ಎಂಬ ಭಾವ ಕವಿಯ ಮನಸ್ಸಿಗಾದ ಗಾಯವನ್ನು ಸುಲಭವಾಗಿ ಅರ್ಥೈಸುವಂತೆ ನನ್ನ ನೆನಪು ಛಾಯೆಯಂತೆ ನಿನ್ನೆದುರಿಗೆ ನಿಲ್ಲುವಾಗ ನೆನೆಯದೆ ಇರಲಾರೆಯೆಂಬ ಸತ್ಯ ಪ್ರೇಮದ ಸ್ವರೂಪವಾಗಿದೆ. ** ನಾ ನಿನ್ನ ಕಂಡಾಗ… ನಾ ನಿನ್ನ ಕಂಡಾಗ ಎಷ್ಟೊಂದು ನಲಿವಿತ್ತು ಎಷ್ಟೊಂದು ಗೆಲುವಿತ್ತು,ಅಷ್ಟೊಂದು ನಗುವಿತ್ತು ಹಗಲೆಲ್ಲ ನಿನ್ನ ಧ್ಯಾನ,ಇರುಳೆಲ್ಲ ನಿನ್ನ ಸ್ವಪ್ನ ನೀ ನಡೆವ ದಾರಿಯಲ್ಲಿ ಅನುದಿನವು ನನ್ನ ಪಯಣ ನೀ ಸುಳಿದರೆನ್ನ ಬಳಿಗೆ ನೆರೆ ಬಂದ ಹಾಗೆ ಹೊಳೆಗೆ ನನ್ನೆದೆಯ ತೋಟದಲ್ಲಿ ಆಡಾಡು ಓ ನವಿಲೇ.. ನೆನೆದಾಗ ನಿನ್ನ ರೂಪ ಎದೆಗತ್ತಲಲ್ಲಿ ದೀಪ…! ” ಕವಿಯ ಸುಕೋಮಲ ಹೃದಯ ಪ್ರೇಮವೆಂಬ ಆಕಾಶದಲ್ಲಿ ಪ್ರೇಯಸಿಯ ನೆನೆದು ಅಗೋಚರ ಪ್ರೀತಿಯ ಸುಧೆಯ ಹರಿಸಿ ಆರಾಧಿಸುವ ಕಲೆ ಒಬ್ಬ ಪ್ರೇಮಿಗೆ ಮಾತ್ರ ದೇವರು ಕೊಟ್ಟ ವರವೆಂದರೆ ವಿಶೇಷವೆನಿಲ್ಲ..ಆ ಪ್ರೇಮಿ ಕವಿ ನಿಸ್ಸಾರರು. ** ನೆನಪು ಕವಿತೆ ನಿನ್ನ ನಗೆಗಳ ಜಾಹಿರಾತಿಗೊಲವಿನ ಅರ್ಜಿ ಗುಜರಾಯಿಸುತ ಪ್ರತಿಸಲವು ಉತ್ತರಕೆ ತತ್ತರಿಸಿ ಮುಖಭಂಗವಾಗಿರುವ ಹಣೆಬರಹ ಚಿತ್ತದ ‘ನಿರ್ಭಾಗ್ಯ’ ನಿನ್ನಾಸೆಗೆಳ್ಳುನೀರನು ಬಿಟ್ಡು ವರ್ಷಗಳ ಕಳೆದಿವೆ ಚಿಹ್ನೆಗಳು ಉಳಿದಿವೆ ನನ್ನೆದೆಯ ಹಸುರಲ್ಲಿ… ” ಹಿಂದಿನಪಘಾತಕ್ಕೆ ಎಚ್ಚರಿಕೆ ಕೆತ್ತಿಹುದು ನಿನ್ನತ್ತ ಧಾವಿಸುವ ಭಾವಗಳು ಸತ್ತಿಹವು…….. ಪ್ರೇಮದ ಕರಿನೆರಳಿಗೆ ಆಘಾತವಾದ ಮನಸು ಚೇತರಿಸಿಕೊಂಡು ಬದುಕ ಕಟ್ಡಿದರು,ಪ್ರೇಮದ ಅಲೆಯಲಿ ನೋವ ಮರೆತು,ಮತ್ತೆ ಮರಳಲಾರದ ಸ್ಥಿತಿ ಪ್ರತಿಯೊಬ್ಬನದೆಂಬಂತೆ ನೆನಪ ಹಂಚಿರುವುದು.ನೊಂದವರಿಗೆ ಮಾದರಿ. ** ಬೇಸರವಾಗಿದೆ ಮಾತು ಕವಿತೆಯಂತು…… ಭಾರವಾಗಿದೆ ಮೌನ ನೋವು ಕರಗಿದ ಕಣ್ಣಲಿ ಅಡಿಗೆ ಚುಚ್ಚಿದ ಮುಳ್ಳು ಒಳಗಡೆ ಮುರಿದಂತೆ ಭಾವ ಕುಟಿಕಿದೆ ಮನದಲಿ ಮುರಿದ ಪ್ರೀತಿಯ ಮರೆಯೇ ಬಾಳಿನೊಳ ಹೊಕ್ಕಿರಲು ಸಾವ…ಭಯ ತಾನೆರಗಿತೋ ಯಾವ ಗವಿ ಗತ್ತಲಿನಲಿ ಮೌನಭಾರವ ಕನಸಿ‌ ಇದ್ದ ಹಕ್ಕೆಯ ಬಿಟ್ಟಿತೋ…. ಹೃದಯದಲಡಗಿದ ಪ್ರೀತಿ ಕಮರಿ ಕಣ್ಮರೆಯಾದ ಗಳಿಗೆಗಳು ಪುನಃ ಬೇರುರದೇ.ನಶಿಸುವ ಕ್ಷಣಗಳ ಕವಿಯು ಅನುಭವಿಸದೇ ಹೇಳಲಾರನೆಂಬುದಕೆ ಸಾಕ್ಷಿ… ನಿನ್ನ ಮೈತ್ರಿ..ಕವನದ ಸಾಲುಗಳು ಅತ್ಯದ್ಭುತ. ನಿನ್ನೆದೆಯ ಗೆದ್ದಿರುವ ಹೆಮ್ಮೆಯಿಂದೆಷ್ಟೋಸಲ ಎನಿಸುವುದು,ನನಗಿಂತ ಇಲ್ಲ ಧನ್ಯ.ನನಾ ಪಾತ್ರನೋ ಏನೋ ನಿನ್ನಮಲ ಪ್ರೇಮಕ್ಕೆ,ನನಗಂತೂ ದಕ್ಕಿಹುದು ಜೀವದಾನ. ಬಾಳ ದುರ್ಗಮ ಪಥದ ಪಾದಯಾತ್ರೆ ಚಿರರಕ್ಷೆಯಾಗಿರಲಿ ನಿನ್ನ ಮೈತ್ರಿ…… ಕವಿ ನಿಸ್ಸಾರರ ಅಭೂತಪೂರ್ವ ಕವಿತೆಗಳಲ್ಲಿ ಒಂದಾದ ಕವಿತೆ… ಎಲ್ಲ ಮರೆತಿರುವಾಗ ಇಲ್ಲಸಲ್ಲದ ನೆವವ ಹೂಡಿ ಬರದಿರು ಮತ್ತೆ ಹಳೆಯ ನೆನಪೆ…..ಕವಿಯೆಯಂತೂ ಇಹಪರ ಚಿಂತನೆಗೆ ಒರೆಹಚ್ಚದಿರಲಾರದು. ** ಇನ್ನೊಂದು ಕವನ “ಮತ್ತದೇ ಬೇಸರ”… ಕವಿತೆ ಮತ್ತದೇ ಬೇಸರ ಅದೇ ಸಂಜೆ ಅದೇ ಏಕಾಂತ ನಿನ್ನ ಜೊತೆಯಿಲ್ಲದೆ ಮಾತಿಲ್ಲದೆ ಮನ ವಿಭ್ರಾಂತ ಆಸೆಗಳ ಹಿಂಡಿನ ತುಳಿತಕ್ಕೆ ಹೋಲನನ್ನೀದೇಹ ಬರುವೆಯೇ,ಬಾರೆಯೇ ನೀ ನೆನಿಸುತಿದೆ ಹಾ.ಸಂದೇಹ.. *ಕವಿ ಬರೆದ ಕವಿತೆ…. ಕವಿ ಬರೆದ ಲೆಕ್ಕಣಿಕೆಯಲ್ಲಿ ತನ್ನ ಎದೆಯನ್ನೆ ಇರಿದಿರಿದು ಆಂತರ್ಯ ಸಂಚಯಿತ ಬಾಧೆಯನೇ ಸುರಿದೆರೆದು.. ಬರೆದಾಗ ಪ್ರೇಮದ ಕುಣಿಕೆ ಆಂತರ್ಯದಲಿ ಚಿಗುರೊಡೆದಿದ್ದು ಆಶ್ಚರ್ಯವೇ… ** ರೂಪ ಕವಿತೆ….ಅಮೂರ್ತದಿಂದ ಮೂರ್ತದೆಡೆಗೆ… ಕವಿತೆಯಲ್ಲಂತೂ ಕವಿಯ ತುಮುಲಗಳು,ತುಡಿತಗಳು, ಮೇಳೈಸಿದಂತೆ ” ಮತ್ತೆ ಆ ರೂಪ ಎದೆಗೆ ಹಾಯುತಿದೆ ಚಿತ್ತ ಸಂತಾಪದಲ್ಲಿ ಬೇಯುತಿದೆ. ಎಂದೋ ಹುಗಿದಂಥ ನೆನಹ ಕೆದಕುತಿದೆ ಮೌನದುತ್ತಾಪದಲ್ಲಿ ಹೊಗೆಯಿತಿದೆ ಇದ್ದಕ್ಕಿದ್ದಂತೆ ಹೃದಯ ಹೌಹಾರಿ ಸದ್ದೆ ಇರದಂತೆ ರೋಧಿಸಿದೆ ಬೇಲಿ ಇಲ್ಲಮೆಯ ಭಾವ ಮುಸುಕಿ ಮಿಡುಕುತಿದೆ ಜೀವ ಏನನ್ನೋ ಬೇಡಿ ದುಡುಕುತಿದೆ ….ಮತ್ತೆ ಆ ರೂಪ.! ಹೇಳುತ್ತಾ ಹೊರಟರೆ ಕವಿಯ ಮನವರಳುತ್ತಾ ಸಾಗುವುದು.ಕಾರಣ ಕನ್ನಡ ನಾಡಿನ ಅಪರೂಪದ ರತ್ನ..ಜಾತಿ ಮತ ಧರ್ಮ ಭೇದಗಳ ಮೆಟ್ಟಿನಿಂತು. ಸಾಗಿದ ಬದುಕು ದಿಗಂತದಂತೆ ಅನಂತ. ಕವಿಯೇ ಹೇಳುವಂತೆ… ಸಂಜೆ ಐದರಮಳೆ ಕವನ ಸಂಕಲನದೊಂದು ಕವಿತೆ… “ನಿಮ್ಮೊಡನಿದ್ದೂ ನಿಮ್ಮಂತಾಗದ ಜಗ್ಗಿದ ಕಡೆ ಬಾಗದೇ ನಾನು ನಾನೆ ಆಗಿ ಈ ನೆಲದಲ್ಲೆ ಬೇರೂತ್ತಿದ್ದರು ಬೀಗಿ ಪರಕೀಯವಾಗಿ ತಲೆಯೆತ್ತುವುದೆದೆ ನೋಡಿ ಅದು ಬಲು ಕಷ್ಟದ ಕೆಲಸ………..ವೆಂದು ನುಡಿಯುವಾಗ ಕವಿಯ ಅಂತರಾತ್ಮ ಎಷ್ಟೊಂದು ಮರುಗಿರಬಹುದು.. ಕವಿಯೆಲ್ಲವನ್ನು ಮೀರಿ ತನ್ನಾತ್ಮದೊಳು ನೆಲೆನಿಂತು ಸಾಗಿ ಮನೆಮನಗಳಲ್ಲಿ ಮನೆಮಾತಾಗಿರುವ ಅಚ್ಚ ಕನ್ನಡಿಗ ನಮ್ಮ ಮೆಚ್ಚಿನ ಕವಿ ನಿತ್ಯೋತ್ಸವದ ಹರಿಕಾರ….ಕೆ.ಎಸ್.ಎನ್…….ಇಂದು ನೆನಪಿನ ಬಿತ್ತಿಯೋಳು ಮಿನುಗುವ ನಕ್ಷತ್ರ. “ನಾದವಿರದ ಬದುಕು ಇದ್ದು ಸತ್ತಂತೆ ಎಂದು ಸಾರುತ್ತಾ”……ಬದುಕಿರುವಷ್ಟು ಗಳಿಗೆ ನಾಡು.ನುಡಿಗೆ ಮಿಸಲಿಟ್ಟು………..” ಬಿಸುಸುಯ್ಯುವ ಹಂಬಲವೋ ಶುಭ ಸಮ್ಮಿಲನದ ಕಾತರವೋ ಬಾ ಇನಿಯ,ಕರೆವ ನೊಂದು ಬರದೆ ಹೋದೆ ನೀನು,ಮರೆತು ಹೋದೆ ನೀನು.” ನೋವಿನಧಾರೆಯ ನಮ್ಮೊಡಲಿಗಿಟ್ಟು ಮತ್ತದೇ ಬೇಸರದ ನಾದವಾಗಿ ಮರೆಯಾದ ಪ್ರೇಮ ಕವಿಗೆ ಕೋಟಿಕೋಟಿ ನಮನಗಳು. ************************** ಶಿವಲೀಲಾ ಹುಣಸಗಿ

ನಿತ್ಯೋತ್ಸವದ ಕವಿಗೆ ನಮನ

ನಿತ್ಯೋತ್ಸವದ ಕವಿಗೆ ನಮನ ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ ನಿತ್ಯಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ ತಾಯಿ ನಿತ್ಯೋತ್ಸವ ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ…. ಈ ಹಾಡು ಕೇಳದವರಾರು, ಈ ಹಾಡು ಹಾಡದವರಾರು.ಕನ್ನಡಮ್ಮನಿಗೆ ನಿತ್ಯೋತ್ಸವದ ಹಾಡು ಬರೆದು ಕನ್ನಡದ ಹಿರಿಮೆ ಹೆಚ್ಚಿಸಿದ ಕವಿ ನಿಸಾರ್ ಅಹಮದ್ ಅವರು ನಮ್ಮನ್ನು ಅಗಲಿದ್ದು ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ. ಪ್ರೊ. ನಿಸಾರ್ ಅಹಮದ್ ಎಂದೇ ಖ್ಯಾತರಾದ ಕೊಕ್ಕೆರೆ ಹೊಸಳ್ಳಿ ಹೈದರ ನಿಸಾರ್ ಅಹಮದ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಫೆಬ್ರವರಿ 5, 1936ರಂದು ಜನಿಸಿದರು. 1959ರಲ್ಲಿ ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದವರು. ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತ ಸಾಹಿತ್ಯ ಕೃಷಿ ಆರಂಭಿಸಿದರು. ನಿಸಾರ್ ಅಹಮದ್ ಸುಮಾರು 25 ಕೃತಿಗಳನ್ನು ರಚಿಸಿದ್ದು, ನಿತ್ಯೋತ್ಸವ ಹಾಗೂ ಗಾಂಧಿ ಬಜಾರ್ ಇವರ ಪ್ರಸಿದ್ಧ ಕವನ ಸಂಕಲನಗಳು. ಅಲ್ಲದೇ ಕನ್ನಡದಲ್ಲಿ ಪ್ರಥಮ ಬಾರಿಗೆ ಭಾವಗೀತೆ ಕ್ಯಾಸೆಟ್ ತಂದ ಕೀರ್ತಿ ಕೂಡಾ ಇವರಿಗೆ ಸಲ್ಲುತ್ತದೆ. ರಾಜಕಾರಣಿಗಳನ್ನು ಕುರಿತು ಬರೆದ ಕವಿತೆ ಕುರಿಗಳು ಸಾರ್ ಕುರಿಗಳು ವಿಡಂಬನಾತ್ಮಕ ಗೀತೆಯಾಗಿ ಪ್ರಸಿದ್ಧಿಯಾಗಿ ನಿಸಾರ್ ಅಹಮದ್ ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಕವಿತೆ. “ಕೃಷ್ಣನ ತುಂಟತನವನ್ನು ವರ್ಣಿಸುವ ಬೆಣ್ಣೆ ಕದ್ದ ನಮ್ಮ ಕೃಷ್ಣ ಬೆಣ್ಣೆ ಕದ್ದ ನಮ್ಮ, ಬೆಣ್ಣೆ ಕದ್ದು ಜಾರುತ ಬಿದ್ದು “ಈ ಹಾಡಿಗೆ ಮರುಳಾಗದವರಾರು. “ನಾಡದೇವಿಯೆ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯ, ಒಂದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇದ ತಾಯಿ “ಎಂದು ಅಸಮಾನತೆ ವಿರುದ್ದ ಬರೆದ, ಕುರಿಗಳು ಸಾರ್ ಎಂದು ವ್ಯವಸ್ಥೆಯ ಬಗ್ಗೆ ವ್ಯಂಗ್ಯವಾಡಿದ ಜೋಗದ ಸಿರಿಯ ಕವಿ ಕೆ ಎಸ್ ನಿಸಾರ್ ಅಹಮದ್ ಈ ನಾಡಿನ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿರುವ ಕವಿ. ಕನ್ನಡಾಂಬೆಯ ತೇರು ಎಳೆದಿರುವ, ಎಳೆಯುತ್ತಾ ಇರುವ ನನ್ನ ಅಚ್ಚುಮೆಚ್ಚಿನ ಅನೇಕ ಕವಿಗಳಲ್ಲಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಕೂಡ ಒಬ್ಬರು. “ಎಲ್ಲಾ ಮರೆತಿರುವಾಗ ಇಲ್ಲಾ ಸಲ್ಲದ ನೆವವಾ ಹೂಡಿ ಬರದಿರು ಮತ್ತೆ ಹಳೆಯ ನೆನಪೇ “ಈ ಕವಿತೆ ನಾನು ಸದಾ ಗುನುಗುನಿಸುತ್ತಿದ್ದ ಅಚ್ಚುಮೆಚ್ಚಿನ ಭಾವಗೀತೆ ಯಾಗಿತ್ತು. ಗಾಂಧಿಬಜಾರು ಮತ್ತು ನಿತ್ಯೋತ್ಸವ ನಿಸಾರ್ ಅಹಮದ್ ಅವರಿಗೆ ಅತಿ ದೊಡ್ಡ ಹೆಸರು ತಂದುಕೊಟ್ಟವು. ನಿತ್ಯೋತ್ಸವ ಗೀತೆ ಕನ್ನಡ ನಾಡಿನಲ್ಲಿ ತನ್ನದೆ ಹೊಸ ಸಂಗೀತ ಮತ್ತು ಸಾಹಿತ್ಯ ಲೋಕ ಸೃಷ್ಟಿಗೆ ಕಾರಣವಾಯಿತು.ಅದರಲ್ಲಿದ್ದ ಅಷ್ಟೂ ಹಾಡುಗಳೂ ಜನರಿಗೆ ಅತ್ಯಂತ ಇಷ್ಟವಾದ ಹಾಡುಗಳಾಗಿದ್ದವು.ಇವತ್ತಿಗೂ ಅಷ್ಟೇ ಜನಪ್ರಿಯತೆ ಉಳಿಸಿಕೊಂಡಿವೆ.ಸುಗಮ ಕ್ಷೇತ್ರದಲ್ಲಿ ಇವತ್ತಿಗೂ ಜನ ಆಸಕ್ತಿ ಮತ್ತು ಇಷ್ಟ ಪಟ್ಟು ಕೇಳುವ ಬಹುಪಾಲು ಗೀತೆಗಳಲ್ಲಿ ನಿಸಾರ್ ಅಹಮದ್ ಅವರ ಕವನಗಳ ಪಾಲು ಬಹುದೊಡ್ಡದು . ಇವರಿಗೂ ಸುಗಮ ಸಂಗೀತ ಕ್ಷೇತ್ರಕ್ಕೂ ಬಿಡಸಲಾರದ ನಂಟು.  ನಿಸಾರ್ ಕವನಗಳನ್ನು ಆಧರಿಸಿದ ಅನೇಕ ಆಲ್ಬಂಗಳು ಸದಭಿರುಚಿಯ ಹೊಸ ಕೇಳುಗ ಲೋಕ ಸೃಷ್ಟಿಗೆ ಕಾರಣವಾಯಿತು . ಸಂವೇದನೆ, ವಿಡಂಬನೆ, ತಿಳಿಹಾಸ್ಯ ನಿಸಾರ್ ಅಹಮದ್ ಅವರ ವಿಶೇಷತೆ. ಚಿಂತನೆ, ಜಾಗೃತಿ, ಮತ್ತು ವೈಚಾರಿಕತೆ ಇವರ ರಚನೆಯಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆದಿದೆ. ರಾಮನ್ ಸತ್ತ ಸುದ್ದಿ’. ಇದು ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ಅತ್ಯಂತ ಪ್ರಸಿದ್ಧ ಕವನಗಳಲ್ಲೊಂದು. ತಾವು ಬರೆದ ಕವನಗಳ ಪೈಕಿ ತಮಗೆ ಎಲ್ಲಕ್ಕಿಂತ ಹೆಚ್ಚು ಇಷ್ಟವಾದ ಕವನ ಇದೆಂದು ಸ್ವಯಂ ನಿಸಾರರೇ ಹೇಳಿದ್ದಾರೆ. . ನಿತ್ಯೋತ್ಸವ ಕವಿಯೆಂದೇ ಮನೆಮಾತಾಗಿದ್ದ, ನಿಸಾರ್ ಅಹಮದ್ ಅವರು, ಸಾಹಿತ್ಯೋತ್ಸವ ನಿಲ್ಲಿಸಿದರು ಅನ್ನೋ ಸುದ್ದಿ ನಿಜಕ್ಕೂ ಆಘಾತಕಾರಿ ವಿಷಯ.ನಾಡು ನುಡಿಯ ಪ್ರಿಯರಾದ ನಿಸಾರ್ ಅಹಮದ್ ಎಂದರೆ ಎಲ್ಲರಿಗೂಅಚ್ಚುಮೆಚ್ಚು. ಅದ್ಬುತ ವ್ಯಕ್ತಿತ್ವದ ಅಪರೂಪದ ಕವಿ ಶ್ರೀ ನಿಸಾರ್ ಅಹಮದ್ ರವರು.ಅವರ ಅಗಲುವಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ . ನಿತ್ಯೋತ್ಸವದ ಕವಿಗೆ ಭಾವಪೂರ್ಣ ಶ್ರದ್ಧಾಂಜಲಿ ********** ಶೈಲಜ ಹಾಸನ

ಕಾವ್ಯಯಾನ

ಜೀತ ಸ್ವಪ್ನ ಆರ್.ಎ. ಜೀತದಾಳು ಆಗಿ ಹುಟ್ಟಿ ಜೀತದ ಆಳಾಗಿ ದುಡಿ ಯೋ ಕಾಲ ನಮ್ಗೆ ಹೋಗಲಿಲ್ಲ ವ ಲ್ಲೋ ಕರ್ಮ ತಮ್ಮ ಹೋಗಲಿಲ್ಲ ವಲ್ಲೋ!!! ಜೀತ ಪದ್ದತಿ ಬೇಡ ಕಣೋ!! ನಮ್ಮ ರಕ್ತ ಸುರಿಸಿ ಅವ್ರು ಜಗ್ಗಿ ಕೂಳು ಕೊಡದೆ ಚಿತ್ರ ಹಿಂಸೆ ಕೊಡ್ತರಲ್ಲೋ ಶಿವನೇ ನಮ್ಮ ಕಷ್ಟ ದಿನಕ್ಕೆ ಕಷ್ಟ ಕೊಡ್ತಾರಲ್ಲೋ ಜೀತ ಪದ್ದತಿ ಬೇಡ ಕಣೋ!! ಬಟ್ಟೆ ಇಲ್ಲ ಬರೆ ಇಲ್ಲ ,ಸ್ನಾನ ಇಲ್ಲ ಮೈ ಮೈಲಿಗೆ ಎಲ್ಲ ನಮ್ಮ ಪಾಡು ನಾಯಿ ಗಿಂತ ಕೀಳು ಕಣೋ ಜೀತ ಪದ್ದತಿ ಬೇಡ ಕಣೋ!! ನಮ್ಗೆ ಮನೆಯಿಲ್ಲ,ನೆಲೆ ಇಲ್ಲ, ಬಂಧು ಇಲ್ಲ,ಭಗಿನಿ ಇಲ್ಲ ತಂದೆಯಿಲ್ಲ ತಾಯಿ ಇಲ್ಲ ಸಾಯೋವಾರ್ಗು ನಾವೇ ಕತ್ತೆ ತರ ದುಡಿಯೋ ಕರ್ಮ ನಮ್ದು ಜೀತ ಪದ್ದತಿ ಬೇಡ ಕಣೋ!! ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ದೂರ ಹೋಗಿಲ್ಲ ನಮ್ಮ ಊರ ಜೀತ ದ ಎತ್ತುಗಳು ನಾವೇ ಕಣೋ , ರಕ್ತ ಮುಗಿಯೋ ವರ್ಗೂ ಜೀವ ಅಷ್ಟೆ ಕಣೋ ಜೀತ ಪದ್ದತಿ ಬೇಡ ಕಣೋ!! ಚಪ್ಲಿ ಇಲ್ಲ,ಚಂದ ಇಲ್ಲ ನಮ್ಮ ಗೋಳು ಕೇಳೋರು ಇಲ್ಲ ತುತ್ತು ಊಟ ಕೂಡ ನಟ್ಟ ಗೆ ಕೊಡುವ ಜೀವ,ಜೀವನ ನಮ್ಗಿ ಇಲ್ವಲ್ಲೋ ಸುಖ ಅನ್ನೋದು ನಮ್ಮ ಬಾಳಲ್ಲಿ ಬರಲ್ವಲ್ಲೋ. ಜೀತ ಪದ್ದತಿ ಬೇಡ ಕಣೋ *******

ನಿಂತುಹೋದ ನಿತ್ಯೋತ್ಸವ

ಕೆ.ಎಸ್ ನಿಸಾರ್ ಅಹಮದ್ ನಮ್ಮನ್ನಗಲಿದ್ದಾರೆಂದು ತಿಳಿಸಲು ವಿಷಾದವಾಗುತ್ತಿದೆ

ಕಾವ್ಯಯಾನ

ಗಝಲ್ ರತ್ನರಾಯಮಲ್ಲ ನೆಮ್ಮದಿಯ ಜೀವನಕ್ಕಾಗಿ ಮನಸ್ಸನ್ನು ಮರೆತುಬಿಡು ಶಾಂತಿಯುತ ಬದುಕಿಗಾಗಿ ಬುದ್ಧಿಯನ್ನು ಮರೆತುಬಿಡು ಬಾಳೊಂದು ಸುಂದರ ಸ್ವಪ್ನ ಎಂಬುದನ್ನು ಮರೆಯದಿರು ನಿರ್ಮಲ ಸಹಯೋಗದ ಸಾಂಗತ್ಯವನ್ನು ಮರೆತುಬಿಡು ಪರಪಂಚದಲ್ಲಿ ಶೂನ್ಯ ಸಂಪಾದನೆ ಮಾಡಬೇಕಾಗಿದೆ ಎಲ್ಲಾ ಬಲ್ಲೆನೆಂಬ ಸಿಹಿಯಾದ ಭ್ರಮೆಯನ್ನು ಮರೆತುಬಿಡು ಮನುಷ್ಯ ಸಮಾಜ ಜೀವಿ ಎಂದು ಸಾರಲು ಹೋಗಬೇಡ ಜಿಂದಗಿಯ ಸವಿಯನುಣಲು ಸಂಸಾರವನ್ನು ಮರೆತುಬಿಡು ‘ಮಲ್ಲಿ’ ಮರೆವು ಪ್ರಜ್ಞಾವಂತ ಜಗತ್ತಿನ ಬಹುದೊಡ್ಡ ಆಸ್ತಿ ಶಾಶ್ವತವೆಂಬ ಮಾಯಾ ಜಿಂಕೆಯನ್ನು ಮರೆತುಬಿಡು ******

ಅನುವಾದ ಸಂಗಾತಿ

 ಕೊನೆಯ ಮು೦ಜಾನೆ ಮೂಲ: ಆಕ್ತೇವಿಯೋ ಪಾಜ಼್  ಕನ್ನಡಕ್ಕೆ : ಮೇಗರವಳ್ಳಿ ರಮೇಶ್ ಮೇಗರವಳ್ಳಿ ರಮೇಶ್ ಕಗ್ಗಾಡಿನೊಡಲ ಕತ್ತಲಲಿ ಕಳೆದಿದೆ ನಿನ್ನ ಕೂದಲು ನನ್ನ ಪಾದವನ್ನು ಸೋಕುತ್ತಿದೆ ನಿನ್ನ ಪಾದ ಮಲಗಿರುವೆ ನೀನು ರಾತ್ರಿಗಿ೦ತಲೂ ಹಿರಿದಾಗಿ. ಆದರೆ ನಿನ್ನ ಆ ಕನಸು ಈ ಕೋಣೆಗಷ್ಟೇ ಸೀಮಿತ. ಎಷ್ಟೊ೦ದು ಜನ ಇದ್ದೇವೆ ನಾವು ನೋಡು ಇಷ್ಟು ಚಿಕ್ಕದಾಗಿ! ಭೂತಗಳನ್ನು ತು೦ಬಿಕೊ೦ಡ ಟ್ಯಾಕ್ಸಿಯೊ೦ದು ಸರಿದು ಹೋಗುತ್ತಿದೆ ಹೊರಗೆ. ಹತ್ತಿರದಲ್ಲಿ ಹರಿವ ನದಿ ಯಾವಗಲೂ ಹಿಮ್ಮುಖ ಪ್ರವಾಹಿಯಾಗಿದೆ. ನಾಳೆ ಇನ್ನೊ೦ದು ದಿನವಾದೀತೆ? ****

ಕಾವ್ಯಯಾನ

ಯುದ್ದ ಮಲ್ನಾಡ್ ಮಣಿ ಮಾಯ ಜಾಲದ ಮಾಂತ್ರಿಕನೊಬ್ಬನ ಮಾಯೆಯಾಟದ ಛಾಯೆಯ ಕರಿನೆರಳು ಸುಡುತಿದೆ ಭೂಮಂಡಲವನ್ನು. ತುಪಾಕಿಗಳ ಗುಂಡಿನ ಘನಘೋರ ಶಬ್ದ ಗಗನ ಚುಂಬಿಯಾಗಿತ್ತು ನರ ಮಂಡಲದ ವಿಷವರ್ತುಲದಲ್ಲಿ ವಿಲವಿಲ ಒದ್ದಾಡಿ ಬೆತ್ತಲಾಗಿ ನಿಂತಿದೆ ಬದುಕು. ಅರೆಗಳಿಗೆಯ ಅಲ್ಪಸುಖದಲ್ಲಿ ತಲ್ಲೀನನಾಗಿದ್ದೆ, ಚಾಟಿಯ ಏಟು ಬೀಸಿ ಬರುತ್ತಿತ್ತು ನನ್ನೆಡೆಗೆ, ತಂಗಾಳಿಯಲ್ಲಿ ವಿಷ ಬೆರತದ್ದು‌ ಗೊತ್ತಾಗಲೆ ಇಲ್ಲ. ಯದ್ಧಕ್ಕೆ ಸಜ್ಜು ಮಾಡುತ್ತಿದ್ದೆ ತುಕ್ಕು ಹಿಡಿದ ಅಲಗನ್ನು ಮಸೆಯುತ್ತಿದ್ದೆ, ವೈರಿಯು ಅದನ್ನೆ ನಡೆಸಿರಬೇಕು. ನನಗೆ ಶತ್ರು ಭಯ, ಶತ್ರುವಿಗೆ ನನ್ನ ಭಯ, ಆದರು ಮೆರೆಯುತ್ತಿದ್ದೆವು ಐಶ್ವರ್ಯ ಮದದಿಂದ. ಯುದ್ಧಕ್ಕೆ ಕ್ಷಣಗಣನೆ,ಹುಮ್ಮಸ್ಸು, ಹುರುಪು, ಕತ್ತಿಗೆ ತಣಿಯದ ರಕ್ತ ದಾಹ. ಶತ್ರು ವಿನಾಶದಲ್ಲಿ ನನಗೆ ತಿಳಿಯಲಿಲ್ಲ ನನ್ನವರ ಹಸಿವು ಏಕೆ? ನನ್ನದು ತೋರಿಕೆಯ ಸಂಭ್ರಮ, ಶ್ರೀಮಂತಿಕೆಯ ತೋರು ನೋಟ. ಅಸ್ತ್ರ ಪ್ರಯೋಗಕ್ಕೆ ಸನ್ನದ್ದರಾಗಿದ್ದ ನಮ್ಮಿಬ್ಬರಿಗು ಅದಾವ ಮಾಟಗಾರ ಮಂತ್ರಿಸಿದನೊ…. ಆ ಮಾಯೆ ನಮ್ಮಿಬ್ಬರ  ದೇಹದ ರಕ್ತ ಹೀರುತ್ತಿರುವುದು ತಿಳಿಯಲೆ  ಇಲ್ಲ. ಆ ಮಾಯೆ ಅಮಾಯಕ ನನ್ನ ಜನರನ್ನು ಹೆಣಮಾಡುತ್ತಿರುವುದು ತಿಳಿಯಲೇ ಇಲ್ಲ. ಮದ್ದು ನನ್ನಲ್ಲಿರಲಿಲ್ಲ ನನ್ನಲ್ಲಿದ್ದ ಮದ್ದು‌ ರಕ್ತ ಸುರಿಸುವುದಕ್ಕೆ ಮಾತ್ರ.

ಹೆಣ್ಣು ಬದುಕಿನ ಘನತೆ

  ಹೆಣ್ಣು ಬದುಕಿನ ಘನತೆ ವಸುಂಧರಾ ಕದಲೂರು. ವಸುಂಧರಾ ಕದಲೂರು. ಒಪ್ಪಿಗೆ ಇಲ್ಲದೇ ಮಹಿಳೆ ಮೈ ಮುಟ್ಟುವಂತಿಲ್ಲ ( ದೆಹಲಿ ನ್ಯಾಯಾಲಯ ತೀರ್ಪು 22-1-2018) ‘ಅರೆ.., ಹೆಣ್ಣಿನ ಮೈ ಮುಟ್ಟಲು, ಆಕೆಯ ಒಪ್ಪಿಗೆಯ ಅಗತ್ಯವಿದೆಯಾ’ ಎಂದು ಕುಹಕವಾಡುವ ಮಂದಿಯ ನಡುವಲ್ಲೇ ‘ಇದನ್ನೂ ಸಹ ನ್ಯಾಯಾಲಯವೇ ಹೇಳಿಕೊಡಬೇಕೆ ಅಷ್ಟೂ ಸೂಕ್ಷ್ಮ ಅರ್ಥವಾಗದೇ’ ಎಂದು ನೊಂದುಕೊಳ್ಳುವ ಮನಸ್ಸುಗಳು ಎಷ್ಟಿವೆಯೋ..      ಏನೆಲ್ಲಾ ಸಾಧಸಿ ಸೈ ಎನಿಸಿಕೊಂಡರೂ ಈ ಕ್ಷಣಕ್ಕೂ  ಹೆಣ್ಣುಮಗುವಾಗಿ  ಹುಟ್ಟುವ ಹಕ್ಕಿನಿಂದ ವಂಚಿತವಾಗಿ ಗರ್ಭ ಸೀಳಿಸಿಕೊಂಡು ಹೊರಬಂದು ಮಣ್ಣಾಗುತ್ತಿರುವ ಹೆಣ್ಣು ಭ್ರೂಣಗಳೆಷ್ಟೋ! ಸರ್ವೆ ಮಾಡಿ ಒಂದಷ್ಟು ಮಾಹಿತಿ ಕಲೆ ಹಾಕಬಹುದು. ಆದರೆ ಅದು ನಿಖರ ಸತ್ಯವಾಗಿರದು. ಬೆಳಕಿಗೆ ಬಾರದ, ವರದಿಯಾಗದ ಅದೆಷ್ಟು ಹೆಣ್ಣು ಭ್ರೂಣ ಹತ್ಯೆ ದಿನಂಪ್ರತಿ ನಡೆಯುತ್ತಿಲ್ಲ? ಹಾಗೋ ಹೀಗೋ ಹೆಣ್ಣಾಗಿ ಹುಟ್ಟಿದ ಮೇಲೂ ವಿದ್ಯೆ, ಉದ್ಯೋಗದ ಅವಕಾಶ ನಿರಾಕರಣೆಯಾಗಿಲ್ಲ? ಮದುವೆ, ಬಸಿರು, ಹೆರುವುದು ಮೊದಲಾದವು ಇಂದಿಗೂ ಆಕೆಯ ಆಯ್ಕೆಯ ಪರಿಧಿಯೊಳಗೆ ಬರುವುದಿಲ್ಲ ಎಂಬುದು ಗುಟ್ಟೇನಲ್ಲಾ.      ಭ್ರೂಣ ಹತ್ಯೆ, ಬಾಲ್ಯವಿವಾಹ, ಕೌಟುಂಬಿಕ ದೌರ್ಜನ್ಯ, ಲೈಂಗಿಕ ಶೋಷಣೆ ಮೊದಲಾದವು ಯಾರೋ ನಿರಕ್ಷರಿಗಳ ಮನೆಯಲ್ಲೋ, ಬಡಕುಟುಂಬಗಳಲ್ಲೋ ನಡೆದುಬಿಡುವ ಸಾಮಾನ್ಯ ವಿದ್ಯಮಾನಗಳೆನ್ನುವುದು ಖಂಡಿತಾ ತಪ್ಪು. ಸ್ತ್ರೀ ಸಮಸ್ಯೆಗಳು ಲಿಂಗಾಧಾರಿತವಷ್ಟೇ. ಇದರಲ್ಲಿ ಜಾತಿ, ಕುಲ, ಶ್ರೀಮಂತಿಕೆ, ಸ್ಥರ, ಅಧಿಕಾರಸ್ಥಾನ ಎಲ್ಲವೂ ನಗಣ್ಯವಾಗುತ್ತವೆ.        ಮರ್ಯಾದಾ ಹತ್ಯೆಗಳು, ಸಣ್ಣ ವಯಸ್ಸಿನಲ್ಲೇ ಹೆಣ್ಣು ಮಕ್ಕಳಿಗೆ ಬಹಳ ಬೇಗ ಮದುವೆ, ಓದನ್ನು ನಿರಾಕರಿಸುವುದು ಅಥವಾ ಮೊಟಕುಗೊಳಿಸುವುದು, ಉದ್ಯೋಗದ ನಿರಾಕರಣೆ, ಭ್ರೂಣಲಿಂಗಪತ್ತೆ ಮಾಡಿಸುವುದು, ಗಂಡು ಸಂತಾನಕ್ಕಾಗಿಯೇ ಮೂರೋ ನಾಕೋ ಹಡೆಯುವಂತೆ ಮಾಡುವುದು, ವೇಶ್ಯಾವಾಟಿಕೆ, ಆಸ್ತಿ ಹಕ್ಕಿನ ನಿರಾಕರಣೆ…. ಹೇಳುತ್ತಾ ಹೊರಟರೆ ಶೋಷಣೆಯ ಹಲವು ರೂಪಗಳು ಅನಾವರಣಗೊಳ್ಳುತ್ತಲೇ ಹೋಗುತ್ತವೆ.      ನಿಜಕ್ಕೂ ತನ್ನ  ಕೆಲಸದ ಸ್ಥಳದಲ್ಲಿ, ಅಕ್ಷರಿಗಳ ಎಡೆಯಲ್ಲಿ, ಬಡತನದ ನರಳಾಟವೋ, ಶ್ರೀಮಂತಿಕೆಯ ಡೌಲಿನ ನೆರಳೋ ಒಟ್ಟಿನಲ್ಲಿ ಸ್ತ್ರೀ ಮುಜುಗರಕ್ಕೆ ಒಳಗಾಗಿ ಅಭದ್ರತೆಯಿಂದ ನಲುಗುತ್ತಿರುವುದು ಇಂದು ಹೆಚ್ಚುಹೆಚ್ಚು ಬೆಳಕಿಗೆ ಬರುತ್ತಿದೆ. ಎಲ್ಲಾ ಪ್ರಕರಣಗಳು ಅಲ್ಲದಿದ್ದರೂ ಬಹಳಷ್ಟು ಹೊರಜಗತ್ತಿಗೆ ಗೊತ್ತಾಗುತ್ತಿವೆ. .   ಇನ್ನು ಸ್ತ್ರೀ ಶೋಷಣೆಯ ವಿರುದ್ಧ ದನಿ ಎತ್ತಿದರೆ ಸಾಕು ಅವಳಿಗೆ ‘ಮಹಿಳಾವಾದಿ’ ಎಂಬ ಪಟ್ಟ ಕಟ್ಟಲಾಗುತ್ತದೆ ಅಥವಾ ಆಕೆ ‘ಪುರುಷದ್ವೇಷಿ’ ಎಂದು ಬಿಂಬಿಸಲಾಗುತ್ತದೆ. ಹಾಗಾದರೆ  ಮಹಿಳೆಯಾಗಿ ಮಹಿಳೆಯರ ಕುರಿತು ಮಾತನಾಡುವುದು ತಪ್ಪೇ? ಹಾಗೇನಾದರು ಆಕೆ ನಿರಂತರವಾಗಿ ಸ್ತ್ರೀ ಶೋಷಣೆಯ ವಿರುದ್ಧ ಮಾತನಾಡಿದರೆ ಆಕೆಗೆ ಬೇರೆ ವಿಚಾರಗಳ ಬಗ್ಗೆ ಮಾತನಾಡಲು ಬರುವುದಿಲ್ಲ. ಆಕೆ ನಾಲಾಯಕ್ ಎಂದು ನಿರ್ಧರಿಸಿಬಿಡುವ ಸ್ಥಬ್ಧ ಮನಸ್ಥಿತಿಯವರಿದ  ಹಾಗೆಯೇ ಸ್ತ್ರೀಯೊಬ್ಬಳು ತನ್ನ ಪರಿಸರದಲ್ಲಾಗುತ್ತಿರುವ  ಅನ್ಯಾಯಗಳ ವಿರುದ್ಧ ಕಿಂಚಿತ್ ಪ್ರತಿಭಟನೆ ತೋರಿದರೆ ಅಥವಾ ತನ್ನ ನಿಲವುಗಳನ್ನು ಖಚಿತವಾಗಿ ಸ್ಪಷ್ಟಪಡಿಸಿದರೆ, ನಾಳಿನ ಔದ್ಯೋಗಿಕ ಸವಾಲುಗಳನ್ನು ನಿಭಾಯಿಸಲು ಆಕೆಗೆ ಅವಕಾಶಗಳನ್ನು ನಿರಾಕರಿಸುವ ಹುನ್ನಾರಗಳನ್ನು ಮಾಡಲಾಗುತ್ತದೆ. ಷಡ್ಯಂತ್ರ ರಚಿಸಿ ಆಕೆಯ ವ್ಯಕ್ತಿತ್ವಕ್ಕೆ ಚ್ಯುತಿತರುವ ಕೆಲಸ ಮಾಡುತ್ತಾರೆ. ಆಕೆ ಧೈರ್ಯವಂತೆಯೂ ಗಟ್ಟಿಗಿತ್ತಿಯೂ ಆಗಿದ್ದರೆ, ಆಕೆಯ  ಕೌಟುಂಬಿಕ ಸಾಮರಸ್ಯ  ಹದಗೆಡಿಸುವ ಮಸಲತ್ತುಗಳನ್ನು ಹೊಸೆಯಲಾಗುತ್ತದೆ.       ಹಾಗಾದರೆ ಮಹಿಳೆಯರ ಕುರಿತು  ಮಾತನಾಡುವುದು ತಪ್ಪೇ?      ಮಹಿಳೆಯರ ಕುರಿತು ಮಾತನಾಡುವುದು ತಪ್ಪೇ..? ಈ ಪ್ರಶ್ನೆ ಉತ್ತರ ಸಿಗುವುದಿರಲಿ, ಇಷ್ಟಕ್ಕೂ ಮಹಿಳೆ ಏಕೆ ಮಾತನಾಡಬೇಕು.!? ಹೇಳಿದಷ್ಟು ಮಾಡಿಕೊಂಡಿದ್ದರೆ ಸಾಕು ಎನ್ನುವ ಅಭಿಪ್ರಾಯಕ್ಕೇ ಹೆಚ್ಚು ಓಟು ಹಾಕುತ್ತಾರೆ.          ಈ ನೆಲದ ಸಂಸ್ಕೃತಿ ಹಾಗೂ ಆಚರಣೆಗಳು ಬಹಳ ವಿಭಿನ್ನವಾಗಿವೆ. ವಿವಿಧ ಕಾಲಘಟ್ಟಗಳಲ್ಲಿ ಹರಿದು ಬಂದಿರುವ ಹಲವು ಬದಲಾವಣೆಗಳಿಗೆ ಒಗ್ಗಿಕೊಂಡೂ, ತನ್ನ  ಅಸ್ಮಿತೆ ಸಾರುತ್ತಿರುವ ಹೆಣ್ಣಿಗೆ ಸಾಮಾಜಿಕವಾಗಿ ಇಂದಿಗೂ ಸಮಾನಸ್ಥಾನದ ನಿರಾಕರಣೆಯಾಗುತ್ತಿದೆ. ಕೆಳಸ್ತರದಲ್ಲೇ ಇಟ್ಟು ನೋಡುವ, ಹಿರಿತನ ( seniority)ದಲ್ಲಿ ಮುಂಚೂಣಿಯಲ್ಲಿದ್ದರೂ ಅತ್ಯುನ್ನತ ಹುದ್ದೆಗಳನ್ನು, ಅವಕಾಶಗಳನ್ನು ನೇರವಾಗಿಯೇ ನಿರಾಕರಿಸಿರುವ/ ನಿರಾಕರಿಸುತ್ತಿರುವ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ.      ಇದರ ನಡುವಲ್ಲೂ ಹಲವು ಸ್ಥಾನಮಾನಗಳು ಹೆಣ್ಣಿನ ಪ್ರತಿಭೆಯ ಕಾರಣಕ್ಕೇ ದಕ್ಕುತ್ತಿರುವುದನ್ನೂ ಕಾಣಬಹುದು. ಹಾಗೆಂದು, ಮಹಿಳೆಯ ಮೇಲಾಗುತ್ತಿರುವ ದೈಹಿಕ ದಾಳಿಗಳ ವರದಿಗಳೇನೂ ಕಡಿಮೆಯಾಗಿಲ್ಲ. ವರದಿಮಾಡಲಾಗದ ಮಾನಸಿಕ ಹಿಂಸೆಗಳದೆಷ್ಟೋ…        ಮಹಿಳೆಯರ ಪ್ರಶ್ನೆ ಇಷ್ಟೇ…, ದೇಹ ಮನಸ್ಸು ತನ್ನದು ಅಲ್ಲವೇ ಅಲ್ಲ ಎಂದು ನಿರ್ಲಿಪ್ತವಾಗಿ ಬದುಕಬೇಕಾಗಿರುವ ತಮ್ಮ ಪರಿಸ್ಥಿತಿ ಎಂದಾದರು ಕೊನೆಗೊಂಡೀತೆ ? ಹೆಣ್ಣುಜೀವ ಒಂದು ಘನತೆಯ ಬದುಕನ್ನು ಕಂಡೀತೆ..?

ಕಾವ್ಯಯಾನ

ನಿನ್ನ ಧ್ಯಾನ ಮಲ್ನಾಡ್ ಮಣಿ ಅರಳು ಮಲ್ಲಿಗೆಯ ಮಾಲೆ ಮಾಡಿ ನಿನ್ನ ಕೊರಳ ಧ್ಯಾನಿಸುತ್ತಲಿರುವೆ. ಎಂದು ಬರುವೆಯೆಂದು ದಾರಿ ಕಾಯುವ ಶಬರಿ ನಾನು. ದೇಹ ಮಲ್ಲಿಗೆ ಗೀಡವು ಭಾವ ಅದರ ಹೂವು, ನಿನ್ನ ನೆನಪಿನ ನೀರನೆರೆದು ಹೂ ಕಿತ್ತು ಕಟ್ಟಿ ಮಾಲೆ ಮಾಡಿದೆ. ನಿನ್ನ ದಾರಿ ಕಾದು ಮತ್ತೆ ಮಲ್ಲೆ ಹೂವ ಕಂಡೆ, ಅರಳು ಮಲ್ಲಿಗೆ ನಗುವ ಬೀರಿತು. ಹೊತ್ತು ಹಾದು ಹೋದರು ನಿನ್ನ ಸುಳಿವು ಕಾಣದು ಬರುವ ಸಂಜೆಗೆಂಪು ನಗುವ ಮಾಸಿತು. ನೆರಳಿನಲ್ಲಿ ನನ್ನ ನೆರಳು ಮುಳುಗಿ ಮಾಯವಾಯಿತು ಮತ್ತೆ ಮಲ್ಲೆ ಹೂವ ಕಂಡೆ ಹೂವು ಭಿರಿದು ಬಾಡಿತು. ನಿನ್ನ ದಾರಿ ಕಾಯುತಿರುವ ಕಾಯ ತಣಿಯದು. ಮತ್ತೆ ನಿನ್ನ ನೇನಪ ಎರೆದು ಭಾವದೊಲುಮೆಯ ಹೂವ ಅರಳಿಸಿ ಮತ್ತೆ ಮಾಲೆ ಮಾಡಿ ಕಾಯುವೆ. ********

Back To Top