ಕಾವ್ಯಯಾನ

ಕಾವ್ಯಯಾನ

ಅಸ್ವಸ್ಥ ಅಭಿಪ್ರಾಯ –ನೂರುಲ್ಲಾ ತ್ಯಾಮಗೊಂಡ್ಲು ವಟಗುಡುವ ಕಪ್ಪೆಗಳಂತಿರುವ ಕೆಲ ಮೂರ್ಖ ಆಂಕರರು; ನೋಟಿನಲಿ ಮೈಕ್ರೊ ಚಿಪ್ಪುಕಂಡುಕೊಂಡ ವಿಜ್ಞಾನ ದೇವಿ ಪುರುಷರು ! -ಎಂದಿನಂತೆ ವಟಗುಡುವುದೇ ಅವರ ಕೆಲಸವೆಂದು ನಾನೂ ಸುಮ್ಮನಿರಲಾರದೆ ಕಪ್ಪಗೆ ಜಿನುಗುವ ಬಿಸಿಲು ಮಳೆಯ ಹಾಗೆ ಒಂದೆರಡು ಕವಿತೆಯ ತುಣುಕುಗಳನ್ನು ಹಾಳೆಯ ಮೇಲೆ ಹರಿಸುತ್ತೇನೆ ನನಗೆ ಗೊತ್ತಿದೆ ಮತ್ತೆ ಎಲ್ಲರಿಗೂ ಗೊತ್ತಿರುವ ವಿಷಯವೇ ; ಈ ಶತಮಾನದ ಪೆಂಡಮಿಕ್ ರೋಗ ! ‘ಕೊರೊನಾ’ ಚೈನಾದಿಂದ ವಕ್ಕರಿಸಿದ್ದೆಂದು ಆದರೆ , ಅದು ನಮ್ಮ ದೇಶದ ಸರಹದ್ದುಗಳನ್ನು ದಾಟಿದ್ದು […]

ಕಾವ್ಯಯಾನ

ವಿಧಾಯ ಹೇಳುತ್ತಿದ್ದೇವೆ ದೇವವರ್ಮ ಮಾಕೊಂಡ(ದೇವು) ಮಧುರ ಸ್ಪರ್ಷವಿತ್ತ ನೆನಪುಗಳು ಮುಳುಗುತ್ತಿವೆ ಕಣ್ಣುಗಳ ಮುಂದೆ ಹಾದು ಹೋಗುತ್ತಿವೆ ದಿನ ದಿನ ಕಳೆದ ಘಟನೆಗಳು ಭಯವಿದೆ ನನಗೀಗ ನೂರಾರು ವರುಷಗಳಿಂದ ಪಕ್ಕೆಲುಬುಗಳಲಿ ಬಚ್ಚಿಟ್ಟಿದ್ದ ನೆನಪುಗಳು ಅಭದ್ರಗೊಳ್ಳುತ್ತಿವೆ ಎಂದು ಹೇರಳವಾಗಿರುವ ಸಿಡಿಲು ಮಳೆ ಹನಿಗಳಿಂದ ನಾನು ಏಕಾಂಗಿಯಾಗಿದ್ದೇನೆ ಸ್ವರ್ಗದ ಹಾದೀಲಿ ದುಃಖಗಳ ಗುರುತ್ವಾಕರ್ಷಣೆಯ ತುದಿಗೆ ಒರಗಿಕೊಂಡು ನಾನೀಗ ಕಳೆದು ಹೋದ ಜೋತಿರ್ವರ್ಷಗಳ ಮೆಲಕು ಹಾಕುತ್ತ ನಿಂತಿರುವೆ ಲಿಖಿತ ಡೈರಿಗಳು ಶೀರ್ಷಿಕೆ ರಹಿತ ಪದ್ಯಗಳು ರಾತ್ರಿ ಮಂಡಿಸಿದ ಕನಸುಗಳು ಕಳೆದುಕೊಂಡು ಬರಿ ಅರೆಬರೆ […]

ಕಾವ್ಯಯಾನ

ಆಸ್ಪತ್ರೆಗಳು ಸಿ ವಾಣಿ ರಾಘವೇಂದ್ರ ರೋಗಗಳ ಭೀತಿ ಮನ-ಮನೆಗಳಲ್ಲಿ ಆಸ್ಪತ್ರೆಗಳಲ್ಲಿ ಮೂರು ನಾಲ್ಕು ರೋಗಗಳು ನೂರಾರು ರೋಗಿಗಳಲ್ಲಿ ಬಿಡದು ರೋಗಗಳು ಮೊಲೆ ಹಾಲುಗಳನ್ನು ನವಜಾತ ಶಿಶುಗಳನ್ನು ಎಲ್ಲ ಕಲೆತ ಜಗದ ವೈದ್ಯರು ಒಟ್ಟಾಗಿ ಚಿಕಿತ್ಸೆ ನೀಡಿದರೂ ಮತ್ತಷ್ಟು ಅಸಾಧ್ಯ ರೋಗಗಳು ರೋಗ ನಾಶವಾಗುವ ತನಕ ಆಸ್ಪತ್ರೆಗಳು ರೋಗಿ ನಾಶವಾಗುವ ತನಕ ರೋಗಗಳು *****

ಕಾವ್ಯಯಾನ

ನನಸಿನೊಳಗೊಂದು ಕನಸು ಹುಳಿಯಾರ್ ಷಬ್ಬೀರ್ ನನ್ನ ಕವಿತೆಯೊಳಗೆ ಬದುಕು ಮಾತಾಡುತ್ತಿದೆ ನಿಜವಾಗಿಯೂ ನಾವು ಬಡವರು ಎಂದು ನೀವು ಕರೆದವರು ದಲಿತರು ಶ್ರಮಿಕರು ಅಲ್ಪ ಸಂಖ್ಯಾತರು ನೀವು ಹಾಕಿದ ಚೌಕಗಳೊಳಗೆ ನಡೆಸಲ್ಪಡುವ ಚದುರಂಗದ ದಾಳಗಳು.. ನನ್ನ ಕವಿತೆಯೊಳಗೆ ಬದುಕು ಮಾತಾಡುತ್ತಿದೆ ನಾನು ಮಾತಾಡುವಾಗ ನಿಮ್ಮ ಕಿವಿ ಗಬ್ಬುನಾತದ ಸಂಡಾಸಿನೊಳಗೆ ಕೂತು ತುಕ್ಕು ಹಿಡಿದ ತಗಡಿನ ಮೇಲಿನ ಅತೃಪ್ತ ಸಾಲುಗಳಲ್ಲಿ ಕಣ್ಣು ಹೂತು ಸೋತು ಹೋದ ನಿಮ್ಮ ಪಂಚೇಂದ್ರಿಯಗಳ ಪ್ರಜ್ಞಾವಂತಿಕೆಗೆ ಅಕಾಲಿಕ ಆಮಶಂಕೆ….! ಈ ಅಯೋಮಯದೊಳಗೆ ನಿಮಗೆ ಬಿತ್ತಂತೆ ಒಂದು […]

ಕಥಾಯಾನ

ಸಂತೆಯಲಿ ಕಂಡ ರೇಣುಕೆಯ ಮುಖ ಮಲ್ಲಿಕಾರ್ಜುನ ಕಡಕೋಳ ಸಂತೆಯಲಿ ಕಂಡ ರೇಣುಕೆಯ ಮುಖ ಸಂತೆಯಲಿ ಕಂಡ ರೇಣುಕೆಯ ಮುಖ   ಒಂದಲ್ಲ, ಎರಡಲ್ಲ, ಬರೋಬ್ಬರಿ ಎಂಟು ವರುಷಗಳ ಕಾಲ ಅವಳ ಕಣ್ಣಲ್ಲಿ  ಕಣ್ಣಿಟ್ಟು ನಿರಂತರವಾಗಿ ನೋಡಿದ ನನ್ನ ನೆನಪಿಗೆ ಸಾವಿಲ್ಲ. ಮರೆತೆನೆಂದರೂ  ಮರೆಯಲಾಗದ ಮೃದುಲ ಮುಖವದು.  ಅದೊಂದು ಅನಿರ್ವಚನೀಯ ಮಧುರ ಸ್ಮೃತಿ. ಹೌದು, ಅವಳ ” ಆ ಮುಖ ” ನನ್ನ  ಸ್ಮೃತಿಪಟಲದಲ್ಲಿ ಕಳೆದ ಶತಮಾನದಿಂದ ಹಾಗೇ ಅನಂತವಾಗಿ ಸಾಗಿ ಬರುತ್ತಲೇ ಇದೆ. ನನ್ನ ಪಾಲಿಗೆ ಅದೊಂದು ಬಗೆಯ ಸಂವೇದನಾಶೀಲ ಪ್ರ(ತಿ)ಭೆಯ  ಸುಮಧುರ ಸಮಾರಾಧನೆ. ಅವಳನ್ನು  ಅದೆಷ್ಟು ಬಾರಿ ಭೆಟ್ಟಿ ಮಾಡಿ,  ಅವಳೊಂದಿಗೆ ಮಾತಾಡಿ, ಜೀವಹಗುರ  ಮಾಡಿಕೊಂಡಿದ್ದೇನೆಂಬುದು ಲೆಕ್ಕವಿಟ್ಟಿಲ್ಲ. ಯಡ್ರಾಮಿಯ ಶಾಲಾದಿನಗಳು  ಮುಗಿಯುವ ಮುಜೇತಿ… ಅವಳ ನನ್ನ  ಭೆಟ್ಟಿ. ಅವಳನ್ನು ಮಾತಾಡಿಸುವ ದಿವ್ಯ  ಕುತೂಹಲ ನನಗೆ. ಆದರೆ ಅವಳು  ಹುಂ..ಹೂಂ.. ನನ್ನನ್ನು ಕಣ್ಣೆತ್ತಿಯೂ  ನೋಡುತ್ತಿರಲಿಲ್ಲ. ಆಕೆಗೆ ನಾನ್ಯಾವ ಲೆಕ್ಕ, ಹೇಳಿಕೇಳಿ ನಾನು ‘ಹಸೀಮಡ್ಡ’ ಎಂದು ನನಗೆ ನಾನೇ ಅಂದುಕೊಳ್ಳುತ್ತಿದ್ದೆ. […]

ಪುಸ್ತಕ ವಿಮರ್ಶೆ

ಮೂರು ದಾರಿಗಳು ಯಶವಂತ ಚಿತ್ತಾಲ ಮೂರು ದಾರಿಗಳು ಕಾದಂಬರಿ ಯಶವಂತ ಚಿತ್ತಾಲ ಸಾಹಿತ್ಯ ಭಂಡಾರ ಮೂರು ದಾರಿಗಳು ಯಶವಂತ ಚಿತ್ತಾಲರ ಮೊದಲ ಕಾದಂಬರಿ.ಭೀತಿ, ಪ್ರೀತಿ ಮತ್ತು ಭಂಡಾಯ ( ಆತ್ಮನಾಶ) ; ಇವು ಈ ಕೃತಿಯಲ್ಲಿ ಉದ್ಭವಿಸಿದ ಒಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ಮೂರು ವ್ಯಕ್ತಿತ್ವಗಳು ಕಂಡುಕೊಳ್ಳುವ ದಾರಿಗಳು. ಹನೇಹಳ್ಳಿ, ಸಾಣಿಕಟ್ಟಾ, ಗೋಕರ್ಣ ಮತ್ತು ಕುಮಟಾದ ಸುತ್ತಲಿನ ಪರಿಸರದ ಚಿತ್ರಣ, ಭಾಷೆ ಈ ಕಾದಂಬರಿಯಲ್ಲಿ ಸಮೃದ್ಧವಾಗಿ ಮೂಡಿಬಂದಿದೆ. ವಿಶ್ವನಾಥ ಶಾನಭಾಗರು ಸಾಣೇಕಟ್ಟೆಯ ಧಕ್ಕೆಯಿಂದ ಕುಮಟೆಯ ಕಡೆಗೆ ಹೋಗುವ ಬೋಟಿಯನ್ನು […]

ಕಾವ್ಯಯಾನ

ನೆನಪಿಗೆ ಅಂಜನಾ ಹೆಗಡೆ ಎಲ್ಲ ಮರೆತೆನೆಂದು ಮೈಮರೆತರೂ ಆಗೊಮ್ಮೆ ಈಗೊಮ್ಮೆ ನೆನಪಾಗುವ ಮುಖಗಳಿಗೆ ಮುಖಕೊಟ್ಟು ಮುಂದಕ್ಕೋಡುವಾಗ ಮೈಯೆಲ್ಲ ಮುಳ್ಳು! ನನ್ನದೇ ನೆರಳು ಅಪರಿಚಿತ ಬೆನ್ನಿಗಂಟಿದ ಹಸ್ತಗಳು ಹತ್ತಾರು ದೃಷ್ಟಿಗಳು ಎಲ್ಲ ಅಸ್ಪಷ್ಟ! ಹಳೆಯದನ್ನೆಲ್ಲ ಹರಿದು ಹರಿದು ಹಂಚಿದಂತೆ ಕಾಲಿಗಡರಿದ ಕಲ್ಲು ಕತೆ ಹೇಳುತ್ತಲೇ ಮಣ್ಣಾಗಿ ಹೋದದ್ದು ಅದೇ ವರುಷ ಮಳೆ ಧಾರಾಕಾರ ಸುರಿದದ್ದು ಎಲ್ಲ ಇತಿಹಾಸವೇ ಇರಬೇಕು ಮುಖಗಳೆಲ್ಲ ಕತೆಗಳು ಈಗ! ದೃಷ್ಟಿಗಳೆಲ್ಲ ಬರಿದೇ ನೋಟಗಳು! ಮಣ್ಣಿದ್ದಲ್ಲಿ ಮರ ಮರದ ತುಂಬೆಲ್ಲ ಹೂವು ಹಣ್ಣು ಮಳೆ ಮಾತ್ರ […]

ವಿದಾಯ

ಚಂದ್ರಕಾಂತ ಕುಸನೂರು ಖ್ಯಾತ ಸಾಹಿತಿ, ಚಿತ್ರ ಕಲಾವಿದ ಮತ್ತು ಹೈಕು ಗಾರುಡಿಗ ಚಂದ್ರಕಾಂತ ಕುಸನೂರು..! ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಇಂದು ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯದಲ್ಲಿ ಅಸಂಗತ ನಾಟಕ ಮತ್ತು ಜಪಾನಿ ಮಾದರಿಯ ಹೈಕುಗಳನ್ನು ಪರಿಚಯಿಸಿದ್ದರು ಅವರು. ಹೈಕು ಮಾದರಿಯ ಕವಿತೆಗಳನ್ನು ಸಹ ಕನ್ನಡಕ್ಕೆ ಪರಿಚಯಿಸಿದ್ದರು… ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ. ಕಲಬುರಗಿ […]

ಪ್ರಸ್ತುತ

ಕೋರೋನದ ತಲ್ಲಣಗಳು ಎನ್ . ಶೈಲಜಾ ಹಾಸನ,   ಕೋರೋನದ ತಲ್ಲಣಗಳು ಸರಾಗವಾಗಿ ಹರಿಯುತ್ತಿದ್ದ ಬದುಕಿನ ಬಂಡಿ ಕನಸಿನಲ್ಲಿಯೂ ನೆನೆಸದಂತೆ ನಿಂತು ಬಿಟ್ಟಿತು.ಅದೇನಾಗಿ ಹೋಯಿತೋ,ಕಂಡರಿಯದ ವೈರಾಣವೊಂದು ಇಡಿ ಪ್ರಪಂಚವನ್ನೆ ತಲ್ಲಣಗೊಳಿಸಿಬಿಟ್ಟಿದೆ. ದೂರದ ಅದ್ಯಾವುದೋ ದೇಶದಲ್ಲಿ ಅದೆಷ್ಟೋ ಪ್ರಾಣಗಳನ್ನು ತೆಗೆಯುತ್ತಿದೆ , ಅದೆಷ್ಟೋ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ ಅಂತೆ ಅಂತ ದೃಶ್ಯ ಮಾಧ್ಯಮಗಳಲ್ಲಿ ನೋಡುತ್ತಾ ಅಯ್ಯೋ ಪಾಪ ಅಂತ ಕನಿಕರ ಪಡುತ್ತಿರುವಾಗಲೆ ದಿಢೀರನೆ ನಮ್ಮ ದೇಶಕ್ಕೂ ಆ ಕ್ಷುದ್ರ ವೈರಸ್ ಬಂದು ಅಪ್ಪಳಿಸಿದೆ ಅಂತ ಗೊತ್ತಾದಾಗ ದಿಗಿಲು […]

ಕಾವ್ಯಯಾನ

ಮಣ್ಣಲಿ ಅವಿತ ಜೀವ ಟಿ.ಪಿ. ಉಮೇಶ್ ಬದುಕ ಸಂಪಾದನೆಗೆ ಹೋದ ಜೀವ ಬರಲಿಲ್ಲ ಮರಳಿ ಬೀದಿಯಲಿ ಅಲೆದು ತಿರುವಿನಲಿ ಕಳೆದು ಕಛೇರಿ ಕರ್ಮಗಳ ಫೈಲುಗಳಲಿ ಹೊರಳಿ ದಿನಸಿ ತರಕಾರಿ ಹಣ್ಣಿನಂಗಡಿಯಲಿ ಉರುಳಿ ಲೈಬ್ರರಿ ಸಿನೆಮಾ ಪಾರ್ಕು ಪಾರ್ಟಿಗಳ ಸಂಧಿಸಿ ನೋವಿನ ಮನೆಗೆ ಪ್ರೀತಿಯ ತರಲೋದ ಜೀವ ಮತ್ತೆ ಮರಳಿ ಬರಲಿಲ್ಲ ಜೀವ ಬರುವಾಗ ವಿಷದ ಮಳೆ ಬಂತಂತೆ ದಾರಿ ಅಲ್ಲಲ್ಲೆ ಹುಗಿದು ಹೋಯ್ತಂತೆ ಗಿಡ ಮರ ಪಶು ಪಕ್ಷಿ ಎಲ್ಲ ಉದುರಿ ಕರಗಿದುವಂತೆ ಜೀವವೂ ನೀರು ಆಹಾರವಿರದೆ […]

Back To Top