ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ನಾನು ಮತ್ತು ಆಕಾಶ ಡಾ.ಧನಂಜಯ ಕುಂಬ್ಳೆ ಕವಿಮಿತ್ರ ಡಾ.ಧನಂಜಯ ಕುಂಬ್ಳೆಯವರ ‘ನಾನು ಮತ್ತು ಆಕಾಶ’ ವಿಮರ್ಶಾ ಸಂಕಲನದ ಬರಹಗಳನ್ನು ಮರುಓದುವ ಅವಕಾಶ ಲಭಿಸಿದೆ. ಹದಿನಾರು ವರ್ಷಗಳ ಹಿಂದೆ ಪುಟ ತಿರುವಿ ದೃಷ್ಟಿ ಹಾಯಿಸಿದ್ದೆ ಅಷ್ಟೆ. ಈಗ ಅನುಭವಿಸಿದ ಸಾರ್ಥಕ ಭಾವ. ೨೦೦೩ರಲ್ಲಿ ಮೂಡಬಿದಿರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪುಸ್ತಕ ಪ್ರಕಾಶನ ಧನಸಹಾಯ ಯೋಜನೆಯಲ್ಲಿ ಆಯ್ಕೆಯಾದ ಈ ಕೃತಿಯನ್ನು ಪುತ್ತೂರಿನ ಅನನ್ಯ ಪ್ರಕಾಶನ ಹೊರ ತಂದಿದೆ. ಧನಂಜಯ ಅವರ ಭಾವಗಳು, ಸಂವೇದನೆಗಳು, […]

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ನೆನಪು ಮರೆಯಲು ಮದಿರೆಯ ಸಂಗ ಮಾಡಿದ್ದೆ ಸಖಿವ್ಯಸನ ತೊರೆಯಲು ಸುರೆಯ ಹಂಗ ಬಿಡದಾಗಿದೆ ಸಖಿ ಮಧುವಿನ ದಾಸನಾಗಿ ದಾಸ್ಯದಿ ಬದುಕ ನೂಕುತಿರುವೆತುಟಿಯಂಚಿಗಿಟ್ಟ ಬಟ್ಟಲಿನಲ್ಲಿ ನೀನು ಕಾಣುತಿರುವೆ ಮರೆಯದಾಗಿದೆ ಸಖಿ ನೀರವ ಮೌನದ ಕತ್ತಲೆಯಲಿ ಸಿಗಬಹದೆಂದು ಹುಡುಕಿರುವೆಶರಾಬಿನ ಸಿಸೆಯೊಳಗೂ ನಿನ್ನದೆ ಬಿಂಬವ ಕಾಣುತಿದೆ ಸಖಿ ಮರೆಯಲಾಗದ ಹವ್ಯಾಸ ನನ್ನನು ಬೆಂಬಿಡದೆ ಕಾಡಿದೆಅವಳನು ಮರೆಯುವ ಮಾತಾಡಿಮಿಣುಕು ದೀಪದ ಮುಂದೆ ಕುಳಿತಿದ್ದೆ ಸಖಿ ಸುರಪಾನದ ಸುಖದಲಿ ತೇಲಾಡಿ ನೊಂದ ಮರುಳನು ಮರುಗುತಿರುವನುಆದದ್ದೇಲ್ಲ ಮರೆತು ಹೊಸಬಾಳ್ವೆಗೆ ಹೊಂದಿ […]

ಕಥಾಯಾನ

ಮರಳಿನ ಕಥೆ ರಮೇಶ್ ನೆಲ್ಲಿಸರ ತುಂಗಾನದಿಯ ನೀರನ್ನು ಕುಡಿದೊ ಅಥವಾ ಬೆಳೆಗಳಿಗೆ ಹಾಯಿಸಿ ಬದುಕು ಕಟ್ಟಿಕೊಂಡವರು ಹಲವರಾದರೆ ತುಂಗೆಯ ಒಡಲ ಬಗೆದು ಮರಳು ತೆಗೆಯುವುದರ ಮೂಲಕ ಸಿರಿತನದ ಸುಪ್ಪತ್ತಿಗೆಯನ್ನು ಅನುಭವಿಸುತ್ತಿರುವವರು ಕೆಲವೇ ಕೆಲವರು, ರಾಜಕೀಯದ ವಾಸನೆ ತುಂಗೆಯ ಎಡಬಲದ ಮರಳು ಕ್ವಾರಿಗಳ ಪ್ರತಿ ಮರಳಿನ ಕಣದಲ್ಲಿ ಹಿಂದೆಯೂ ಇತ್ತು ಈಗಲೂ ಇದೆ. ಅಂದ ಹಾಗೆ ನಾನು ಹೇಳ ಹೊರಟಿದ್ದು ಈ ಮರಳು ಮಾಫಿಯಾದ ಕುರಿತು ಅಲ್ಲ!, ಈ ಮರಳು ದಂಧೆಗೆ ಅಂಟಿಕೊಂಡಿರುವ ಕೆಲಸಗಾರರ ಕುರಿತು, ಆಗ 2002-03 […]

ಕಾವ್ಯಯಾನ

ಜಕ್ಕವಕ್ಕಿಗಳು ಕಮಲಾ ಹೆಮ್ಮಿಗೆ ೧. ನೆನಪಿದೆಯೆ ನಿಮಗೆ ಕಣವಿಯವರೆ      ಜಯನಗರದ ಹಳಿ ದಾಟಿದರೆ      ಹಳದೀ ಹೂವು ಚೆಲ್ಲಿದ ರಸ್ತೆ      ‘ ಚೆಂಬೆಳಕು’! ಹಕ್ಕಿ ಗೂಡಂಥ ನಿಮ್ಮ ಮನೆ      ಆಚೀಚೆ ಕೂತ ನೀವುಗಳು,ನಡುವೆ      ಬೂದಿ ಮುಚ್ಚಿದ ಕೆಂಡದಂಥ ನಾನು….ಮಧ್ಯೆ ವ್ಯಸ್ತ,ಮೂಸಿನೋಡುವ ನಿಮ್ಮ ‘ಗೂಫಿ’ನಾಯಿ!……….             ಗುಟುಕರಿಸುತ್ತ ಚಹಾ,ಮಾತು,ಬದುಕಿನ ಪಾಡು…………………………         ಜsರ್ ಮಳೆಯಿದ್ದಲ್ಲಿ, ದಾಟಿಸುತ್ತಿದ್ದಿರಿ ಬ್ರಿಡ್ಜು,ಛತ್ರಿ ಹಿಡಿದು….. ೨.  ನಿಮ್ಮ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲೊಮ್ಮೆ       ಓದಬೇಕಿತ್ತು ನಾನೂ,ಒಂದು ಕವಿತೆ       ರೈಲಲ್ಲಿ ಒಂದೇ ಬೋಗಿ….ಧಡಖ್ […]

ಕಾವ್ಯಯಾನ

ನಿನ್ನದೇ ಜಪದಲ್ಲಿ ವೀಣಾ ಪಿ. ಏಕಪತ್ನಿ ರಾಮನಿಗೆ ವನ-ವೈಭೋಗಗಳಲಿಅನ್ಯ ಸ್ತ್ರೀಯಿಲ್ಲ ಸತಿ ಸೀತೆ ಹೊರತು.. ಕೃಷ್ಣನನೆದೆಯಲ್ಲಿ ಅನುರಣಿತ ರಾಗದಲಿಅನ್ಯ ಪ್ರೇಮವದಿಲ್ಲಅನುರಾಗಿ ರಾಧೆ ಹೊರತು.. ಮೀರಾ-ಶಬರಿಯರಲ್ಲಿ ಅನ್ಯ ತುಡಿತವದಿಲ್ಲಕೃಷ್ಣ-ರಾಮರ ಪರಮ ಕಾಮ್ಯದ ಹೊರತು.. ಸ್ವರ-ಶೃತಿಯ ಬೆಸೆಯುವ ಸರಸತಿಯ ಮೀಟು ತಂತಿಅನ್ಯವಾದ್ಯವಲ್ಲವದು ವೀಣಾ.. ಹಂಗಿನರಮನೆ ತೊರೆದ ಪ್ರೇಮದೀ ಗುಡಿಯಲ್ಲಿಬೇರೆ ಮಾತುಗಳಿಲ್ಲ ನಿನ್ನ ಜಪದ ಹೊರತು.. *******

ಕವಿತೆ ಕಾರ್ನರ್

ತಬ್ಬಲಿ ಕವಿತೆ ಮಾತುಗಳ ಅಟ್ಟಹಾಸದೊಳಗೆ ಅಪಹಾಸ್ಯಕ್ಕೀಡಾದ ಮೌನ ಶಬ್ದಗಳ ಜಾತ್ರೆಯೊಳಗೆ ತೇರಿನ ಗಾಲಿಯಡಿ ಅಪ್ಪಚ್ಚಿಯಾಯಿತು. ಮುಳ್ಳುಗಳ ಕಾವಲಿನಲಿದ್ದ ಹೂಗಳು ನಗುವುದನ್ನೆ ಮರೆತುಬಿಟ್ಟವು ವಿರಹದಲಿ ಬಣ್ಣಗೆಟ್ಟ ಚಿಟ್ಟೆಗಳು ಹಸಿವಿನಲಿ ಕಂಗೆಟ್ಟವು. ನಿನ್ನೆ ಸಂಜೆಯ  ಮುದಿಬಿಸಿಲಲಿ ಅಕಾಲ ಮಳೆಸುರಿಯುತು ವಿದಾಯದ ಹೊತ್ತಿನಲಿ ಬಿಕ್ಕಿದವಳ ನೋಡಿ ಒಂಟಿಹಕ್ಕಿ ಮಮ್ಮುಲ ಮರುಗಿತು. ಕವಿತೆಯೊಂದ ಕಟ್ಟುವ ನೆಪದಲಿ ಶಬ್ದಗಳ ಮಾರಣಹೋಮ ಕವಿಯ ಸಮಾದಿಯ ಮೇಲೆ ಅಪರಿಚಿತ ಓದುಗನ ಹೂಗುಚ್ಚ. ಎರಡು ಸಾಲಾದರು ಬರೆದು ಹೋಗು ಗೋಗರೆದ ಕವಿತೆಯೀಗ ತಬ್ಬಲಿ. ******** ಕು.ಸ.ಮಧುಸೂದನ

ಕಾವ್ಯಯಾನ

ಇನ್ನಷ್ಟು ಯೌವನ ಕೊಡು ಮಂಜುನಾಥ ನಾಯ್ಕ ಹಾಲುಮಾರುವ ಹುಡುಗ ಕಾಜುಗಣ್ಣಿನ ವಿನೋದನೊರೆ ಹಾಲಿನಂತವನು ಪೇಟೆಯ ತುಂಬಹಾಲು ಹಂಚುವ ಉಮೇದಿಕಾಜುಗಣ್ಣ ಬಿಂಬಗೊಳಗೆಉಫ್ ಉಫ್ ಎಂದು ರಸ್ತೆ ಉಬ್ಬಿನಲಿ ತುಳಿದಿದ್ದಕ್ಕೆ ಸೈಕಲ್ಲುಬಿದ್ದು ರಕ್ತಕಾರಿಕೊಂಡ ಹೆಬ್ಬಟ್ಟಿನ ಉರಿ ಬ್ರೇಕೊತ್ತಿದೆಸೈಕಲ್ಲಿನ ವೇಗಕ್ಕೆಅಪ್ಪನ ಕ್ಯಾನ್ಸರಿಗೆ, ಅಮ್ಮನ ಮಧುಮೇಹಕ್ಕೆಚಂದನದ ಕೊರಡುತೇಯುತ್ತಿದೆ ಬೀದಿಯಲಿಕಾಯುತ್ತಿದೆಹಾಲಿನ ಮನಸ್ಸೊಂದುಮಗನ ಬರುವಿಕೆಗೆಅಡುಗೆ ಮನೆಯಲಿ ಬೇನೆಯಲಿಬೇಯುವ ಹಂಚಿನ ರೊಟ್ಟಿ ಐನೋರ ತೋಟದ ಮರದ ತುದಿಗೇರಿ ಅಡಿಕೆಗೊನೆ,ಸಿಂಗಾರ,ಸಿಯಾಳಕಾಯಿ ಕೊಯ್ವ ಈರಜ್ಜಕಸರತ್ತುಗಯ್ಯುತ್ತಾಆಕಾಶ ಮುಟ್ಟುವಂತೆಮರದ ತುದಿಯಲಿಒಂದೊಂದೇ ಫಲಗಳಎಸೆಯುವ ಕೆಳಗೆನುಣ್ಣಗೆ ಜಾರುವ ಮರತಡವರಿಸುವುದು ಒಮ್ಮೊಮ್ಮೆ ಈರನ ಕಾಲುಕೆಳಗೆ ಭೂಮಿ ಬಾಯ್ತೆರೆದು […]

ಪುಸ್ತಕ ಸಂಗಾತಿ

ಹಾಲಕ್ಕಿ ಕೋಗಿಲೆ ಮಾರ್ಚ್ ತಿಂಗಳಿನಲ್ಲಿ ಬರಹ ಓಡಾಟ ಎಂದುಕೊಂಡು ಸದಾ ಕೆಲಸದ ಒತ್ತಡದಲ್ಲಿದ್ದ ನನಗೆ ಒಮ್ಮೆಲೆ ಅನಿರೀಕ್ಷಿತವಾಗಿ ಕೋವಿಡ- 19 ನಿಂದಾಗಿ ಲಾಕ್ಡೌನ ಆದಾಗಿನಿಂದ ಮಾನಸಿಕ ಗೊಂದಲ.ಭಯದಿಂದ ಮನೆಯ ನಾಲ್ಕು ಗೋಡೆಗಳ ನಡುವೆ ಸುಧಾರಿಸಿಕೊಳ್ಳಲು ಕೆಲವು ದಿನಗಳು ಬೇಕಾದವು.ಬಳಿಕ ನಾವೆಲ್ಲ ನಮ್ಮ ಆಸಕ್ತಿಗೆ ತಕ್ಕಂತೆ ಮನಸ್ಸು ಪ್ರಪುಲ್ಲಗೊಳಿಸಿಕೊಳ್ಳಲು ಮಾರ್ಗ ಹುಡುಕುತ್ತಿದ್ದಾಗ ಕಣ್ಣಿಗೆ ಬಿದ್ದದ್ದು ಅಕ್ಷತಾಕೃಷ್ಣಮೂರ್ತಿ ಅವರ ಹಾಲಕ್ಕಿ ಕೋಗಿಲೆ. ಮುಖಪುಟದಲ್ಲಿದ್ದ ಮುಗ್ಧ ನಗುವಿನ ಸುಕ್ರಜ್ಜಿಯನ್ನು ಕಂಡ ಮೇಲಂತೂ ಒಂಥರಾ ಖುಷಿ. ಇದಕ್ಕೆ ಒಂದು ತಿಂಗಳ ಮೊದಲಷ್ಟೆ ಬಡಗೇರಿಯ […]

ಕಾವ್ಯಯಾನ

ಗಝಲ್ ರತ್ನರಾಯಮಲ್ಲ ಆಗಸದಲ್ಲಿ ನೇಸರ ಹುಟ್ಟುತಿದ್ದಾನೆ ನೋಡಿಕನಸುಗಳು ಮೂಟೆ ತರುತಿದ್ದಾನೆ ನೋಡಿ ಇರುಳು ಕಳೆದು ಹೋಗಿದೆ ಹಗಲಿನ ಒಡಲಲ್ಲಿಚೈತನ್ಯವನ್ನು ಹೊತ್ತು ಬಂದಿದ್ದಾನೆ ನೋಡಿ ಮೂಡಣದಲ್ಲಿ ರವಿ ಅಂಬೆಗಾಲು ಇಡುತಿರುವನುಅಕ್ಷಯ ಉಲ್ಲಾಸವನ್ನು ಹಂಚುತಿದ್ದಾನೆ ನೋಡಿ ಅವನಿಯನ್ನು ಹೊಂಗಿರಣಗಳು ಚುಂಬಿಸುತಿವೆಪಾದರಸದ ಚಲನೆಯನ್ನು ನೀಡುತಿದ್ದಾನೆ ನೋಡಿ ಹಕ್ಕಿಗಳ ಚಿಲಿಪಿಲಿಯು ಹೃದಯವನ್ನು ತಟ್ಟುತ್ತಿದೆನಿರಾಸೆಯ ಕೊಳೆಯನ್ನು ತೊಳೆಯುತಿದ್ದಾನೆ ನೋಡಿ ಗಿಡ-ಮರಗುಳು ತಂಗಾಳಿಯಿಂದ ಸ್ವಾಗತಿಸುತಿವೆಬಾಳಿನ ಅನನ್ಯ ಕಲೆಯನ್ನು ಕಲಿಸುತಿದ್ದಾನೆ ನೋಡಿ ಹಾಸಿಗೆಯನ್ನು ತೊರೆದು ಹೊರಗೆ ನೋಡು ಮಲ್ಲಿಮಂದಹಾಸದ ಪಾಠವನ್ನು ಹೇಳುತಿದ್ದಾನೆ ನೋಡಿ

ಕಾವ್ಯಯಾನ

ನೀ ಹೋದರೂ.. ಶೀಲಾ ಭಂಡಾರ್ಕರ್ ನಿನ್ನ ನೆನಪುಗಳು..ನನ್ನ ಬಳಿಯೇ ಉಳಿದಿವೆನಿನ್ನ ಜತೆ ಹೋಗದೆ.. ಇನ್ನೂ ..ಚೆನ್ನಾಗಿ ಬೆಳೆಯುತ್ತಿವೆ..ದಟ್ಟವಾಗಿಮನದ ತೋಟದೊಳಗೆ ನೀನಾಡಿದ್ದ ಮಾತುಗಳುಆಸೆಯಿಂದ ಕತ್ತೆತ್ತುತ್ತವೆ ಆಗಾಗಹಳೆಯ ಆಲದ ಮರದಪೊಟರೆಯೊಳಗಿನಿಂದಮರಿ ಕೋಗಿಲೆಗಳು ಇಣುಕಿದ ಹಾಗೆ. ಎಷ್ಟು ದೂರದವರೆಗೆನಡೆದು ಬಂದಿವೆ ನೋಡುಆ ನೆನಪುಗಳು ಬರಿಗಾಲಿನಲ್ಲಿ.ಬೇಸಿಗೆಯಿಂದ ಮಳೆಯವರೆಗೆಬಾಲ್ಯದಿಂದ ತಾರುಣ್ಯದವರೆಗೆ ಅಡಗಿ ಕುಳಿತುಸಂಭಾಷಿಸುತ್ತವೆ ಕೆಲವುತಮ್ಮ ತಮ್ಮಲ್ಲೇಒಳಕೋಣೆಯೊಳಗೆ. ಎಲ್ಲವೂ ನೆನಪಿದೆ ನನಗೆನಿನ್ನ ಪ್ರೀತಿ. ನಿನ್ನ ಮಾತು..ತಿಳಿ ಹಾಸ್ಯ ಮತ್ತು ನಿನ್ನ ನಗೆ. ನೇರಳೆ ಹಣ್ಣೆಂದು ತಿನ್ನಿಸಿದಬೇವಿನ ಹಣ್ಣಿನ ರುಚಿಯೂಮರೆತಿಲ್ಲ ಇನ್ನೂ ನನಗೆ ಕಹಿ ಹಾಗೆಯೇ ಉಳಿದುಕೊಂಡಿದೆ..ನಾಲಿಗೆಯ […]

Back To Top