ಗಝಲ್
ಗಝಲ್ ನೂರ್ ಸಾಘರ್ ಹಾದಿಗಳಿಂದ ಹಾದಿಗಳು ಹಾಯಿದಷ್ಟು ಕೈಮರಗಳಿವೆ ಇಲ್ಲಿ ಸಖಿಬೀದಿಗಳಿಂದ ಬೀದಿಗೆ ಬದುಕುಗಳು ಬೆತ್ತಲಾಗಿವೆ ಇಲ್ಲಿ ಸಖಿ ಜಗದ ಒಡಲು ಮನದ ಕಡಲುತಟ್ಟದಿದ್ದರೂ ಮುಟ್ಟದಿದ್ದರೂ ಔರ್ವ ಸ್ಪರ್ಶದಲೆಗಳಿವೆ ಇಲ್ಲಿ ಸಖಿ ಒಂದೇ ಒಂದು ಮಾತಿನ ಶಬ್ದಗಳು ಬಯಲಲಿ ಬಯಲಾಯಿತುಅರಿತು ಅರಿಯದ ಮರೆತು ಮರೆಯದ ಪುರಾವೆಗಳಿವೆ ಇಲ್ಲಿ ಸಖಿ ಬಾಳು ಬಿಕ್ಕಳಿಕೆಯ ಕಥೆಗಳಿವೆ ನೂರಾರು ಅನಾಥದ್ದು ಅನಾತ್ಮದ್ದು ಇನ್ನು…ತಡೆದರೂ ತಡೆಯದ ಪಡೆದರೂ ಪಡೆಯದ ನೋವುಗಳಿವೆ ಇಲ್ಲಿ ಸಖಿ ಕದವಿಲ್ಲದ ಎದೆಯನು ಪದಗಳಿಂದ ಆವರಿಸಲಾಗದುತಬಿದ ತಬ್ಬದ ಬಾಹುಗಳನು ಕಲ್ಪಿಸಲು […]
ಮುನಿಸು ಸೊಗಸು
ಕವಿತೆ ರೇಖಾ ಭಟ್ ಹೋದವಾರಮೂಲೆ ಮೂಲೆ ಹುಡುಕಿಹೊಸಕಿ ಹೊರಹಾಕಿದ ಮುನಿಸುಅದಾವ ಕಿಂಡಿಯಲ್ಲಿಒಳಸೇರಿತೋಕಾಣೆಈಗ ಮತ್ತೆ ಬಲೆ ಹಬ್ಬುತಿದೆಒಬ್ಬರಿಗೊಬ್ಬರು ಕಾಣದಷ್ಟುದಟ್ಟವಾಗಿ ಎಲ್ಲೆಲ್ಲೂಬೆಳಕಿನ ಹೂಗಳೇ ಅರಳಿದಕನಸು ಕಾಣುತ್ತಕತ್ತಲೆ ಬೇರಿಗೆನೀರೆರೆಯಲು ಮರೆತಾಗಲೇನಗು ಮಾಯಮನದ ಅರಸನಂತಿದ್ದಸರಸ ಸರಿದು ಹೋಗಿ: ಕಿರೀಟವ ಮುನಿಸು ಧರಿಸಿ ನಿಂತಿದ್ದುನಾವು ಅಡಿಯಾಳಾಗಿನಮ್ಮೊಳಗೆ ಅಡಗಿಕೊಂಡಿದ್ದು ಅವನೇ ಮಾತಾಡಲಿ ಎನ್ನುವ ನಾನುನಾನೇ ಏಕೆ ಮೊದಲು ಎಂಬುವ ಆತಇನ್ನೆಷ್ಟು ಹೊತ್ತುಅಹಮ್ಮುಗಳನ್ನೇ ಹೊದ್ದು ಮಲಗುವುದು!? ಆಗಲೇಒಳಸೆಲೆಯ ಒಲುಮೆಯಿಂದಹೊಸ ಸೂತ್ರವೊಂದು ಸಿದ್ಧವಾಗಿಪರದೆ ಸರಿಯುತ್ತದೆಓಡಿಹೋದ ಅರಸ ಮತ್ತೆಸಿಂಹಾಸನ ಏರುತ್ತಾನೆನಾವು ಕಣ್ಣಲ್ಲೇ ನಗುತ್ತೇವೆ *************
ಭಯದ ಬಗ್ಗೆ ಭಯ ಬೇಡ
ಇಂದಿನ ಆಧುನಿಕ ಗಡಿಬಿಡಿ ಜೀವನ ಶೈಲಿಯು ನಮ್ಮ ಮನಸ್ಸಿನ ಮೆಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ. ಅದರಲ್ಲಿ ಭಯವು ಪ್ರಮುಖವಾಗಿದೆ. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನಮಾನಗಳಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವದು ಅಷ್ಟು ಸುಲಭದ ಮಾತಲ್ಲ. ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಗೊಳ್ಳುತ್ತವೆ. ಭಯ ಕೇವಲ ಮಕ್ಕಳಿಗೆ ಅಷ್ಟೇ ಅಲ್ಲ ದೊಡ್ಡವರಿಗೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ […]
ಶಾಂತಿ ಬೀಜಗಳ ಜತನ’
ಸಾಹಿತ್ಯದ ಬರವಣಿಗೆ ಗಂಭೀರವಾದಂತೆಲ್ಲಾ ಲೇಖಕರ ಜವಾಬ್ದಾರಿ ಹೆಚ್ಚುತ್ತದೆ ಡಾ. ಪ್ರಕಾಶ ಗ. ಖಾಡೆ ಬಾಗಲಕೋಟೆಯಲ್ಲಿ ಅಧ್ಯಾಪಕರಾಗಿರುವ ಡಾ. ಪ್ರಕಾಶ ಗಣಪತಿ ಖಾಡೆ ಅವರು ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ೧೦-೦೬-೧೯೬೫ ರಂದು ಜನಿಸಿದರು. ಓದಿದ್ದು ತೊದಲಬಾಗಿ, ಕೆರೂರ (ಬದಾಮಿ), ಇಳಕಲ್ಲ ಹಾಗೂ ಧಾರವಾಡಗಳಲ್ಲಿ, ಕನ್ನಡದಲ್ಲಿ ಎಂ.ಎ.ಪ್ರಥಮ ದರ್ಜೆಯಲ್ಲಿ ಪಾಸಾಗಿ , ೨೦೦೫ರಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ “ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ” ಮಹಾ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಬೈಲಹೊಂಗಲ,ಚಂದರಗಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ,ಬಾಗಲಕೋಟ […]
ಕರೋನ ಮುಕ್ತ ಶಾಲೆ
ಸರಿತಾಮಧು ಎಂದಿಗೆ ಬರಲಿದೆಯೋ ಶಾಲೆಗೆ ಹೋಗಿ ನಲಿಯುವ ದಿನಗಳು ಎಂದು ಕಾತರಿಸುವ ಮಕ್ಕಳಿಗೆ ಅಪ್ಪ ಅಮ್ಮ ಇಬ್ಬರೂ ಕೆಲಸಕ್ಕೆ ಹೊರಟಾಗ ಮನೆಯಲ್ಲಿ ತಾವಷ್ಟೇ ಇರಬೇಕಾ ಎನ್ನುವ ಭಯ. ಹಾಗೆ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗುವ ಪೋಷಕರಿಗೂ ಇದೇ ಚಿಂತೆಯಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ಶಾಲೆಗಳು ತೆರೆಯುವ ಸೂಚನೆ ಸದ್ಯಕ್ಕೆ ಇಲ್ಲವೇನೋ? ಹೀಗಿರುವಾಗ ಮಕ್ಕಳ ಕಲಿಕೆ ಹೇಗೆ ಎಂದು ಚಿಂತಿಸಿ ಆನ್ಲೈನ್ ಮೂಲಕ ಶಿಕ್ಷಣ ನೀಡುವುದು ಒಳಿತೋ ಕೆಡುಕೋ ಎಂಬ ಜಿಜ್ಞಾಸೆ ಎಲ್ಲರ ಮನದಲ್ಲೂ ಮೂಡಿದೆ.ಪ್ರಾಥಮಿಕ ಹಂತದಿಂದಲೇ ಈ […]
ಅವ್ವ ಮತ್ತು ಅಬ್ಬಲಿಗೆ
ನನಗೆ ಅವ್ವ ಮತ್ತು ಅಬ್ಬಲಿಗೆ ಇಡೀ ಕವನ ಸಂಕಲನದಲ್ಲಿ ಲಂಕೇಶರ ಅವ್ವ ಆಧುನಿಕ, ನಗರವಾಸಿ ಅವ್ವನಾಗಿ ಕಾಣುತ್ತಿದ್ದಾಳೆ. ಅಬ್ಬಲಿಗೆಯಲ್ಲಿನ ಆಧುನಿಕ ಅವ್ವ ನೌಕರಿ ಮಾಡುತ್ತಾ, ಗಂಡನ ಸಂಭಾಳಿಸುತ್ತಾ , ತವರು ಮನೆಯ ನೆನಪ ಮೆಲುಕು ಹಾಕುತ್ತಾ , ಆಧುನಿಕ ವೈರುದ್ಧ್ಯಗಳಿಗೆ ಮುಖಾಮುಖಿಯಾಗುತ್ತಾ ನಡೆಯುತ್ತಾಳೆ. ಅನ್ಯಾಯಕ್ಕೆ ಕವಿತೆಯ ಮೂಲಕ ಸಣ್ಣ ಧ್ವನಿಯಲ್ಲಿ ಅತ್ಯಂತ ಖಚಿತವಾಗಿ ವ್ಯವಸ್ಥೆಯನ್ನು ಟೀಕಿಸುತ್ತಾಳೆ. ದೇವರು, ದೇವಾಲಯ,ಯುದ್ಧ ಗಳ ನಿರರ್ಥಕತೆಯನ್ನು ಬಿಡಿಸಿಡುತ್ತಾಳೆ. ಹೆಣ್ಣಿನ ಅಂತರಂಗದ ತಳಮಳಕ್ಕೆ ಭಾಷ್ಯ ಬರೆಯುತ್ತಾಳೆ. ಆಧುನಿಕ ಯಶೋಧರೆಯ ಅಂತರಂಗವನ್ನು ಇವತ್ತಿನ ಅಕ್ಷರಸ್ಥ […]
ಹೇಳದೇ ಹೋಗದಿರು
ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ ಮತ್ತೇರದಿರು ಸುರೆಗೆಲ್ಲಿದೆ ನಿನ್ನ ಮರೆಸುವ ತಾಕತ್ತುದೇಹದ ಬಟ್ಟಲಿಗೆ ಮದಿರೆ ತುಂಬಿಸಿರುವೆ ಹೇಳದೇ ಹೋಗದಿರು ಹಗಲಿರುಳೂ ಮತ್ತೇನೂ ಇಲ್ಲ ನಿನ್ನದೇ ಧ್ಯಾನದ ಹೊರತಾಗಿತಲಬಾಗಿಲ ಮೆಟ್ಟಿಲಲಿ ಕಾದು ಕುಳಿತಿರುವೆ ಹೇಳದೇ ಹೋಗದಿರು ಜೋಡಿಮಂಚದ ಬದಿಯಲ್ಲಿ ಹಚ್ಚಿಟ್ಟ ದೀಪದ ಎಣ್ಣೆ ತೀರಿದೆದೇವರ ಗೂಡಿಂದ ಹಣತೆಯೊಂದ ತರುವೆ ಹೇಳದೇ ಹೋಗದಿರು ವಿರಹ ತುಂಬಿದ ರಾತ್ರಿ ನಿದ್ದೆಯಿರದೆ ಬಲು ದೀರ್ಘವಾಗುವುದಂತೆಜೋಗುಳ ಹಾಡಿ ಮಡಿಲೊಳಗೆ […]
ವಚನ ಚಿಂತನೆ
ಚಿಂತನೆ ಡಾ.ವೈ.ಎಂ.ಯಾಕೊಳ್ಳಿ ಕಾಮ ಕಾಲದ ಕಾಡುವ ಮಾಯೆ ನಳಲುಗತ್ತಲೆ ನೀನು ಮಾಯೆ ಸಂಗ ಸುಖದಿಂದ ಹಿಂಗುವರಾರು ಇಲ್ಲ ಬಿಗಿದ ಕುಚ,ಉರ ಮಧ್ಯವು ಲಿಂಗಾಕಾರವು ಮಹೇಶ್ವರಗೆಯೂ ಪ್ರೀತಿಯು ಸನ್ಮೋಹ ಅಮೃತ ಸಾರವು ಇಳೆ ಉತ್ಪತ್ಯಕ್ಕೆ ಆಧಾರವು ಇಂಥ ಮೋಹ ಪ್ರಿಯವಾದ ಮೋಹಿನಿಯರ ಅಗಲುವದೆಂತೋ ಕರಸ್ಥಳದ ಇಷ್ಟಲಿಂಗೇಶ್ವರಾ ಇಡೀ ವಚನ ಸಾಹಿತ್ಯವನ್ನು ಅಧ್ಯಯನ ಮಾಡಿದರೂ ಒಂದು ವಿಶೇಷ ನೆಲೆಯಲ್ಲಿ ನಿಲ್ಲುವ ವಚನ ಇದು . ಇದನ್ನು ರಚಿಸಿದವನು ಮೆಡ್ಲೇರಿ ಶಿವಲಿಂಗನೆಂಬ ಹದಿನಾರನೆಯ ಶತಮಾನದ ವಚನಕಾರ.ಡಾ ವೀರಣ್ಣ ರಾಜೂರ ಅವರು ಸಂಪಾದಿಸಿದ […]
ಬಣ್ಣದ ವೇಷ
ಕಥೆ ಪ್ರಜ್ಞಾ ಮತ್ತಿಹಳ್ಳಿ ನೀಲಕಮಲವೆಂದು ಚೆಂದನೆಯ ಸ್ಟಿಕ್ಕರ್ ಅಂಟಿಸಿಕೊಂಡು ಫಳಫಳ ಹೊಳೆಯುತ್ತಿದ್ದ ಸ್ಟೀಲು ತಾಟು ಢಮಾರ್ ಎಂಬ ದೊಡ್ಡ ಸಪ್ಪಳದೊಂದಿಗೆ ಗೋಡೆಗೆ ಮುಖ ಗುದ್ದಿಕೊಂಡು ನೆಲಕಪ್ಪಳಿಸುವುದು, ಅದೇ ಗೋಡೆಯ ಮೇಲೆ ನೇತಾಡುವ ಬಂಗಾರ ಬಣ್ಣದ ಗುಂಡು ಮೋರೆಯ ಗಡಿಯಾರ ಢಣ್ ಢಣ್ ಎಂದು ಒಂಭತ್ತು ಸಲ ಹೊಡೆದುಕೊಳ್ಳುವುದೂ ಏಕಕಾಲದಲ್ಲಿಯೇ ಘಟಿಸುವ ಮೂಲಕ ತಗ್ಗಿನಕೇರಿಯೆನ್ನುವ ಊರಿನಲ್ಲೇ ಹೆಚ್ಚು ತಗ್ಗಾಗಿರುವ ಆ ಕೇರಿಯಲ್ಲೊಂದು ಯುದ್ಧ ಘೋಷಣೆಯಾಗಿತ್ತು. ದುರವೀಳ್ಯವನ್ನು ತನ್ನ ಕುದಿಯುವ ಮನಸ್ಸಿನಲ್ಲಿಯೇ ತಯಾರಿಸಿಕೊಂಡ ನಾಗಲಕ್ಷ್ಮಿ ಹೆಡೆಯಾಡಿಸುವ ಘಟಸರ್ಪದಂತೆ ಧುಸ್ ಧುಸ್ […]
ಕಾಲ ಎಂದಿಗೂ ನಿಲ್ಲುವದಿಲ್ಲ
ಸ್ಮಿತಾ ಭಟ್ ಮಿಲಿಯನ್ ಗಟ್ಟಲೆ ವರ್ಷಗಳಿಂದ ಈ ಭೂಮಿಯ ಮೇಲೆ ಏನೆಲ್ಲ ಸಂಭವಿಸಿತೋ ಇಂದಿನವರೆಗೂ ಯಾರಿಗೂ ಸ್ಪಷ್ಟವಾದ ಮಾಹಿತಿ ಇಲ್ಲ. ಹೀಗಿತ್ತು,ಹಾಗಿತ್ತು,ಏನೋ ನಡೆದಿತ್ತು, ಎಂದು ಇತಿಹಾಸ ಪುಟಗಳಿಂದ ಅಷ್ಟೊ ಇಷ್ಟೊ ತಿಳಿಯುತ್ತೇವೆ,ಮತ್ತೊಂದಿಷ್ಟು ನಮ್ಮ ಊಹೆ. ಕಾಲದ ಜೊತೆಗೆ ಎಲ್ಲವೂ ಉರುಳುತ್ತವೆ ಎನ್ನುವದು ನಿತ್ಯ ಸತ್ಯ. ಸವೆದ ಹೆಜ್ಜೆಗಳ ಜಾಡು ಎಷ್ಟರ ಮಟ್ಟಿಗೆ ಇಂದು ಉಳಿದುಕೊಂಡಿದೆ.ಎಲ್ಲವೂ ಮಸುಕಾಗುತ್ತಲೇ ಹೋಗುತ್ತದೆ. ಹೊಸ ನೀರಿಗೆ ಹಳೆಯ ನೀರು ಕೊಚ್ಚಿಹೋಗಿ ಸಮುದ್ರಸೇರಿ ಅಸ್ತಿತ್ವವನ್ನೇ ಕಳೆದುಕೊಂಡಂತೆ. ಆಳಿದ ರಾಜ, ಕಟ್ಟಿದ ಕೋಟೆ,ಜಾರಿಯಾದ ನಿಯಮ,ತ್ಯಾಗದ ಬದುಕು,ಮಾಡಿದ […]