ಗಜಲ್

ಗಜಲ್

ಗಜಲ್ ಶಾಲಿನಿ ಆರ್. ಅನುರಾಗ ಆರಾಧನೆಯಿದೆ ಕಣ್ಣಂಚಿನ ಕೊನೆಯಲಿ ಮಿಂಚು ಸುಳಿದಿದೆ ನಾ ನಿನ್ನೆನೆವಾಗ/ಮನದಾಳದ ಮಾತಲ್ಲಿ ನವಿರಾದ ಭಾವೋತ್ಕರ್ಷ ಸಂಚು ಅಡಗಿದೆ ನಾ ನಿನ್ನ ನೆನೆವಾಗ// ನೆನೆದಷ್ಟು ಮನ ಮೃದುಲತೆಯ ತವರು,ಪೇಮ ಫಲದ ಗೊಂಚಲು/ರಾಗದೊಲವ ಎಲರು ಹಾದಿಗುಂಟ ತೂಗುತಿದೆ  ನಾ ನಿನ್ನ ನೆನೆವಾಗ//. ಬಾನಲಿ ಹೊಳೆವ ತಾರೆಗಳ ಕಾಂತಿಗೆ ನಿನ್ನ ವದನ ಚಂದಿರನ ಪ್ರತಿಫಲನವು/ಆಹಾ! ಮನವದು ನಿಲುಕದೆ ಒಲವಿನಂಕಣಕ ಬರೆಯುತಿದೆ, ನಾ ನಿನ್ನ ನೆನೆವಾಗ// ತಂಪೆಲರ ಒಲವಿಗೆ ಮನವು ಆರ್ದ್ರಗೊಂಡು  ಕರಗುತಿದೆ/ತನುವದು ಮುದದಿ ತಣಿದುಚರ್ವಿತ ಒಲವು ಹೊನಲಾಗಿದೆ, […]

ಕಾವ್ಯಯಾನ

ಮತ್ತೆ ನೆನಪಾಗುತ್ತಿದೆ ಚಂದ್ರು ಪಿ ಹಾಸನ್ ಮತ್ತೆ ನೆನಪಾಗುತ್ತಿದೆ, ನನ್ನ ಬಾಲ್ಯದೊಳುಕಳೆದ ದಿನಗಳು ಸುಂದರ ಆ ಮಧುರ ಕ್ಷಣಗಳುಕೆದಕಿದೆನು ನಾ ಇಂದು ಒಂದೊಂದು ಮನದೊಳುಚಿತ್ರಿಸಲೊರಟೆ ಸಾಲುಗಳಲ್ಲಿ ಆಕ್ಷಣಗಳ ಮುದದೊಳು ಮತ್ತೆ ನೆನಪಾಗುತ್ತಿದೆ, ನಾಲ್ಕೆಜ್ಜೆಯ ಮುಗ್ದ ಸಾಲುಅಮ್ಮನ ತೋಳು ಅದು ಸಂತಸದ ಸಾಲುರಾಜ ಸಿಂಹಾಸನ ನನ್ನ ತಾಯಿಯ ಮಡಿಲುಕುಣಿದು ಕುಪ್ಪಳಿಸಿದೆ ಪಡೆದೆ ಕೈತುತ್ತು ಅಲ್ಲಿ ನೆನಪಾಗುತ್ತಿದೆ ವಿದ್ಯಾರ್ಜನೆಯ ಆರಂಭಪ್ರಾಥಮಿಕ ಶಾಲೆಯ ಗಂಟೆ ಸದ್ದುಕೇಳಿದೊಡನೆ ಅಡ್ಡಗದ್ದೆ ಬಯಲಲ್ಲಿಓಡುತ್ತಿದ್ದೆವು ಗುಂಪಾಗಿ ಎದ್ದು-ಬಿದ್ದು ಮತ್ತೆ ನೆನಪಾಗುತ್ತಿದೆ, ಶಾಲೆಯ ಸಂಜೆಗಳುಅಣ್ಣನ ತೋಳು ಪ್ರತಿಸಂಜೆ ನಾ […]

ಪ್ರವಾಸ ಕಥನ

ಜಾರಕಬಂಡೆಕಾವಲ್ ವೃಕ್ಷ ಉದ್ಯಾನ ಚಂದ್ರಮತಿ ಪುರುಷೋತ್ತಮ್ ಭಟ್ ಮಲೆನಾಡಲ್ಲಿ ಬೆಳೆದವರಿಗೆ ಮರಗಳೇ ಸ್ನೇಹಿತರು . ಹಾಗೂ ತಮ್ಮ ಊರಿನ ಕಂಪು, ಸಂಸ್ಕೃತಿ ರೀತಿ ರಿವಾಜು ಮರೆತು ಬಾಳುವವರು ಇಲ್ಲವೇ ಇಲ್ಲ ಎಂದರೂ ತಪ್ಪಾಗಲಾರದು. ಎಲ್ಲಾ ಕಾಲದಲ್ಲೂ ಮರಗಿಡಗಳು ಹಸಿರಾಗಿ ಪರೋಪಕಾರಿಯಾಗಿಯೇ ಮೌನವಾಗಿ ತನ್ನತನವನ್ನು ಎತ್ತಿ ತೋರಿಸುವಂತಹ ಪ್ರಕೃತಿಯನ್ನು ಮೈದುಂಬಿಸಿಕೊಂಡಿರುತ್ತದೆ. ಬೆಟ್ಟಗುಡ್ಡಗಳು ನಿತ್ಯ ಜನರನ್ನು ಕೈಬೀಸಿ ಕರೆಯುತ್ತಿರುತ್ತದೆ.ಆಗಲೂ ಈಗಲೂ ಅರಣ್ಯಗಳಲ್ಲಿ ಸಿಗುವಂತಹ ಹಣ್ಣುಹಂಪಲುಗಳೇ ಅಲ್ಲಿಯ ಎಷ್ಟೋ ಜನರ ಆಹಾರವಾಗಿರುತ್ತದೆ. ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದ ನಮ್ಮಂತಹ ಎಷ್ಟೋ  ನಿಸರ್ಗಾರಾಧಕರಿಗೆ […]

ಅಂಕಣ ಬರಹ ಸುಜಾತಾ ಎನ್. ರವೀಶ್ ಸುಜಾತಾ ಎನ್. ಮೈಸೂರಿನಲ್ಲಿಯೇ ಹುಟ್ಟಿ ಬೆಳೆದದ್ದು .ಬಿಕಾಂ ಪದವೀಧರೆ. ಅನಂತರ ಅಂಚೆ ದೂರಶಿಕ್ಷಣದ ಮೂಲಕ ಎಂಕಾಂ ಪದವಿ ಪೂರೈಸಿದರು. ಚಿಕ್ಕಂದಿನಿಂದ ಓದುವ ಹವ್ಯಾಸ ಇತ್ತು. ಶಾಲೆ ಕಾಲೇಜು ಪತ್ರಿಕೆಗಳಲ್ಲಿ ಕಥೆ ಕವನಗಳು ಪ್ರಕಟವಾದವು. ಭಾರತೀಯ ಜೀವ ವಿಮಾ ನಿಗಮ ಮೈಸೂರು ಶಾಖೆ ೫ ರಲ್ಲಿ ವೃತ್ತಿ. ಈ ಮಧ್ಯೆ ಸುದೀರ್ಘ ಮೂವತ್ತು ವರ್ಷಗಳ ಅವಧಿಯಲ್ಲಿ ಓದುವ ಹವ್ಯಾಸ ಮುಂದುವರಿದಿದ್ದರೂ ಏಕೋ ಬರವಣಿಗೆ ಕೈ ಹಿಡಿದಿರಲಿಲ್ಲ. ಇತ್ತೀಚೆಗೆ ಮೂರು ವರ್ಷಗಳಲ್ಲಿ ಎಫ್ […]

ಬಸ್ ಪಯಣ

ಬಸ್ ಪಯಣ ಬಸ್ ಪಯಣ ಎಂ. ಆರ್. ಅನಸೂಯ ನನಗೆ ಬಸ್ ಪ್ರಯಣ ಅಂದ್ರೆ ಇಷ್ಟವೇ ಆಗುತ್ತದೆ . ಅಲ್ಲಿ ನಮಗೆದುರಾಗುವ ವೈವಿಧ್ಯಮಯ ಪ್ರಸಂಗಗಳು ಬಹು ಸ್ವಾರಸ್ಯಕರವಾಗಿದ್ದು ಒಂಥರಾ ನಮ್ಮ ಲೋಕಾನುಭವ  ಹೆಚ್ಚಿಸುತ್ತವೆ.ಕಾರಣ ವಿವಿಧ ರೀತಿಯ ಜನರೊಡನಾಟ !  ಬಹುಶಃ ವೈವಿಧ್ಯತೆ ಕೊಡುವಷ್ಟು ಅನುಭವವನ್ನು ಬೇರೆ ಯಾವುದೂ ಕೊಡಲಾರದು. ಆದ್ದರಿಂದಲೆ ನಾವು ಅಂದ್ರೆ ಭಾರತೀಯರಿಗೆ ಸಿಗುವಷ್ಟು ಅನುಭವ ಇನ್ಯಾವ ದೇಶದ ಪ್ರಜೆಗಳಿಗೆ ಸಿಕ್ಕಲಾರದು. ಬಸ್ ಪಯಣವೆಂದರೆ ಒಂಥರ ಜನ ಧ್ವನಿಯೇ ಸರಿ. ಜನರ ನಾಡಿ ಮಿಡಿತ ! […]

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ನಾ ನಿನ್ನ ಎಷ್ಟು ಪ್ರೇಮಿಸುತ್ತಿರುವೆನೆಂದು ನನಗೆ ಸರಿ ಗೊತ್ತಿಲ್ಲನೀ ಇಲ್ಲದೇ ನಾ ಬದುಕಿರಲಾರೆನೆಂದಿಗೂ ಅನ್ನೋದು ಸುಳ್ಳಲ್ಲ ನಿನ್ನನ್ನು ಬೇರೆಯವರು ಒಲಿಸಿಯಾರೆಂದು ಸದಾ ಭಯವಿದೆ ಈ ಹೃದಯಕೆಬಹು ಕಷ್ಟದಿ ಮತ್ತೆ ಮತ್ತೆ ಸಮಾಧಾನಿಸುವೆ ಹಾಗೇನು ಆಗಲಿಕ್ಕಿಲ್ಲ ಏನೇನು ಕಾಳಜಿ ಮಾಡಿ ಸಂಭಾಳಿಸಿಕೊಳ್ಳುವೆ ಅಂತ ನಿನಗೇನು ಗೊತ್ತುಈ ಮನಸ್ಸು ತಕರಾರಿಲ್ಲದೆ ಒಳಗೆ ನೊಯ್ಯುತ್ತಿದೆ ನಿನಗೆ ಅರಿವಿಲ್ಲ ಬೇಡವೆ ಮುಗಿಸು ಈ ಕಣ್ಣುಮುಚ್ಚಾಲೆಯಾಟ ಕಳೆಯಲಿ ಮಧು ಬಟ್ಟಲಲ್ಲಿಎಷ್ಟು ಸಲ ಮನದ ಮಾತು ಹೇಳಿದರೂ ನಿನ್ನ ಮನದ ಹಾಡೇ […]

ಅರಿವೇ ಗುರು

ಕವಿತೆ ಅರಿವೇ ಗುರು ವಸುಂಧರಾ ಕದಲೂರು ದೀಪ ಆರಿಸಿಬಿಟ್ಟೆ; ಸೂರ್ಯನೂಮುಳುಗಿದ. ಕತ್ತಲೆಂದರೆ- ಕತ್ತಲೀಗಒಳಹೊರಗೂ.. ಮೌನಕ್ಕೆ ಶರಣಾದೆ, ಕಿವುಡುತನದಲಿ.ಶಾಂತಿಯೆಂದರೆ ಶಾಂತಿಯೀಗ ಒಳಹೊರಗೂ.. ಇತಿಮಿತಿಗಳ ಅರಿವಾಯ್ತು,ನನ್ನದೂ ಮತ್ತವರಿವರದು.ಜಾಗರೆಂದರೆ ಜಾಗರೂಕಳೀಗ.ಒಳಹೊರಗೂ.. ಮಮತೆಯ ಕಣ್ತೆರೆದು, ಒಲವಿನಲಿನೋಡಿ ನುಡಿದೆ. ಹರುಷವೆಂದರೆಹರುಷವೀಗ. ಒಳಹೊರಗೂ.. ದೀಪ ಹಚ್ಚಿಟ್ಟೆ, ಬೆಳಕ ಹಂಬಲದಲಿ. ಇರುಳಿನಿಂದ ಸೂರ್ಯನೆದ್ದುಬಂದ. ಬೆಳಕೆಂದರೆ ಬೆಳಕೀಗಒಳಹೊರಗೂ.. **************************************

ಅಂಕಣ ಬರಹ ಗಾನ್ ವಿತ್ ದ ವಿಂಡ್ ಗಾನ್ ವಿತ್ ದ ವಿಂಡ್ಮೂಲ ಇಂಗ್ಲಿಷ್ : ಮಾರ್ಗರೆಟ್ ಮಿಶೆಲ್ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟನೆಯ ವರ್ಷ : ೨೦೦೪ : ಎಂದಿನಂತೆ ಶ್ಯಾಮಲಾ ಮಾಧವ ತಮ್ಮ ಅನುವಾದಕ್ಕಾಗಿ ಒಂದು ಕ್ಲಾಸಿಕ್  ಕಾದಂಬರಿಯನ್ನು ಎತ್ತಿಕೊಂಡಿದ್ದಾರೆ. ೧೮೬೧ರಲ್ಲಿ ಅಮೆರಿಕಾದಲ್ಲಿ ನಡೆದ ಅಂತರ್ಯುದ್ಧದ ಸಂದರ್ಭದ ಒಂದು ಕಥೆ ಇಲ್ಲಿದೆ. ಆದ್ದರಿಂದ ಕಥೆಯ ಜತೆಜತೆಗೇ ಯುದ್ಧದ ವರ್ಣನೆಯೂ, ಅದರಿಂದಾಗುವ ಅನಾಹುತಗಳ ವರ್ಣನೆಯೂ ಸಾಗುತ್ತದೆ. ದಕ್ಷಿಣ ಅಮೇರಿಕಾದ ಜಾರ್ಜಿಯಾದ ಟಾರಾ […]

ಯುವ ಗಜಲ್ ಕವಿ ಅಕ್ಷತಾ ಕೃಷ್ಣಮೂರ್ತಿ ಅಕ್ಷತಾ ಕೃಷ್ಣಮೂರ್ತಿವಯಸ್ಸು : ೩೯ವೃತ್ತಿ: ಶಿಕ್ಷಕಿಶಿಕ್ಷಣ: ಕನ್ನಡ ಸ್ನಾತಕೋತ್ತರ ಪದವಿ ಕೃತಿಗಳು: ಹನ್ನೆರಡು ದಡೆ ಬೆಲ್ಲಹಾಲಕ್ಕಿ ಒಕ್ಕಲಿಗರುಮಧುರಚನ್ನಕೋಳ್ಗಂಬಹಾಲಕ್ಕಿ ಕೋಗಿಲೆಕೇದಿಗೆಯ ಕಂಪುನಾನು ದೀಪ ಹಚ್ಚಬೇಕೆಂದಿದ್ದೆ ಅಕ್ಷತಾ ಕೃಷ್ಣಮೂರ್ತಿಯವರ ಒಂದು ಗಜಲ್ ತಮ್ಮ ಓದಿಗಾಗಿ ಒಂದೆಒಂದು ಸಾರಿ ಪ್ರೀತಿಸುವೆ ಎಂದ್ಹೇಳಿ ಬಿಡು ಮಳೆಯಾಗಿ ಸುರಿದುಬಿಡುವೆಒಲವ ಪರಿಮಳವಾಗಿ ಬೀರಿ ಬಿಡು ತಂಗಾಳಿಯಾಗಿ ನಿನ್ನ ಸುತ್ತುವರಿಯುವೆ ಒಂದೆರಡು ಪದಗಳಿಗೆ ನೀ ಪ್ರೀತಿತುಂಬಿದರೆ ನಾ ಮಾತಾಡಿಬಿಡುವೆಉಸಿರು ಬಿಗಿಹಿಡಿದು ನಿನಗಾಗಿ ಕಾಯುವುದೇ ಪುಣ್ಯವೆಂದುಜೀವಿಸುವೆ ಒಂದೆಒಂದು ನೋಟಕೊನೆಯ ಬಾರಿಎಂಬಂತಾದರೂ ನೋಡಿಬಿಡುವೆನೀನು […]

ಫಕೀರ್ ಸೂಫಿ ಸಂತ ಸೈಯದ್ ಹಜರತಶಾ ಕಾದರಿ..!

ಲೇಖನ ಫಕೀರ್ ಸೂಫಿ ಸಂತ ಸೈಯದ್ ಹಜರತಶಾ ಕಾದರಿ..! ಸೈಯದ್ ಹಜರತಶಾ ಕಾದರಿಯವರು ಸೂಫಿ ಸಂತರಲ್ಲೊಬ್ಬರು. ಇವರು ಆಗಿನ ಧಾರವಾಡ ಜಿಲ್ಲೆಯ ಈಗಿನ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹುಲಗೂರಲ್ಲಿ ನೆಲೆ ಕಂಡುಕೊಂಡವರು. ಇವರ ಜನನ, ಬಾಲ್ಯ, ಬದುಕು ಹಾಗೂ ಈ ಸಂತರ ಮರಣಗಳೆಲ್ಲವೂ ಪೂರ್ಣ ವಿಶಿಷ್ಠವಾದವುಗಳು ಆಗಿದ್ದವು… ಸೈಯದ್ ಹಜರತಶಾ ಕಾದರಿಯವರು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬಂಕಾಪುರದಲ್ಲಿ ಜನಿಸಿದವರು. ಇವರ ತಂದೆಯ ಹೆಸರು ಸೈಯದ್ ಖಾದರಬಾಶಾ ಕಾದರಿ ಬಿಜಾಪೂರ. ತಾಯಿಯ ಹೆಸರು ಸೈಯದಾ ವಲಿಮಾಬೀಬಿ. […]

Back To Top