Category: ಸಂಪ್ರೋಕ್ಷಣ

ಉತ್ತಮರ ಸಂಗ ಎನಗಿತ್ತು ಸಲಹೊ

ಸಂಬಂಧಗಳು ಹುಟ್ಟಿಕೊಳ್ಳುವುದು ಅಂಥ ವಿಶೇಷವಾದ ಸಂಗತಿಯೇನಲ್ಲ. ಹುಟ್ಟಿಕೊಂಡ ಸಂಬಂಧಗಳು ಎಲ್ಲಿಯವರೆಗೆ ಬಾಳುತ್ತವೆ, ನಮ್ಮ ಬದುಕಿನ ಚಲನೆಯಲ್ಲಿ ಅವುಗಳ ಮಹತ್ವವೇನು, ಅವು ಯಾವ ಬಗೆಯ ಹೊಸತನವನ್ನು ನಮ್ಮ ಯೋಚನೆಗಳಿಗೆ ಒದಗಿಸಬಲ್ಲವು ಎನ್ನುವ ಆಧಾರದ ಮೇಲೆ ಸಂಬಂಧಗಳ ಗುಣಮಟ್ಟದ ನಿರ್ಧಾರವಾಗುತ್ತದೆ. ಈ ಗುಣಮಟ್ಟದ ಮೌಲ್ಯಮಾಪನ ಯಾವುದೇ ರೂಪ, ಆಕಾರ ಅಥವಾ ಹೆಸರುಗಳ ಪ್ರಾಪಂಚಿಕ ಚೌಕಟ್ಟಿನೊಳಗೆ ನಡೆಯುವಂಥದ್ದಲ್ಲ. ತಲೆದಿಂಬಿನ ಪಕ್ಕದಲ್ಲಿ ನೆಮ್ಮದಿಯಿಂದ ನಿದ್ರಿಸಿರುವ ಮೊಬೈಲ್ ನಲ್ಲಿ ಪಾಪ್ ಅಪ್ ಆಗುವ ಗುಡ್ ಮಾರ್ನಿಂಗ್ ಮೆಸೇಜುಗಳಲ್ಲಿ ಹದಿನೈದು ವರ್ಷಗಳ ನಂತರ ಮತ್ತೆ ಜೊತೆಯಾದ […]

ಮಾತು ಅರಳುವ ಹೊತ್ತು ನಗುವಿನೊಂದಿಗೆ ಜನ್ಮತಳೆದ ಸಂಬಂಧಗಳ ಭವಿಷ್ಯವನ್ನು ಮಾತು ನಿರ್ಣಯಿಸುತ್ತದೆ. ಮಾತು ಸರಾಗವೆನ್ನಿಸದ ಹೊರತು ಸಂಬಂಧಗಳನ್ನು ಸರಳವಾಗಿಸಿ ಸುಂದರಗೊಳಿಸಲಾಗದು. ಬದುಕಿನ ಸೂಕ್ಷ್ಮಗಳೆಲ್ಲವನ್ನೂ ತನ್ನೆಲ್ಲ ಚಾಣಾಕ್ಷತೆಯನ್ನು ಉಪಯೋಗಿಸಿ ಕಾಪಾಡಿಕೊಳ್ಳುವ ಮಾತು, ಅಗತ್ಯ ಬಿದ್ದಾಗಲೆಲ್ಲ ಸಂಬಂಧಗಳಿಗೊಂದು ಜೀವಂತಿಕೆಯನ್ನೂ ಒದಗಿಸುತ್ತದೆ. ಮಾತುಗಳೇ ಇಲ್ಲದ ಸಂಬಂಧವೊಂದು ಎಲ್ಲಿಯವರೆಗೆ ಜೀವಂತವಾಗಿ ಉಳಿದೀತು; ಎಲ್ಲ ನಕಾರಾತ್ಮಕತೆಯ ಪರಿಹಾರವೆನ್ನುವಂತೆ ಹೃದಯಕ್ಕಿಳಿವ ಮಾತು ಮಾತ್ರವೇ ಸಂಬಂಧಗಳನ್ನೆಲ್ಲ ಸಹೃದಯತೆಯ ಸೆರಗಿನಲ್ಲಿ ಬಚ್ಚಿಟ್ಟು ಸಾಕಿ ಸಲಹೀತು!           ಕಾಲಕಾಲಕ್ಕೆ ತಕ್ಕಂತೆ ಸಂಬಂಧಗಳ ಮೌಲ್ಯದ ಪರಿಕಲ್ಪನೆ ಬದಲಾಗುತ್ತಾ ಹೋದರೂ ಮಾತು ಮಾತ್ರ […]

ಬೊಗಸೆಯಲ್ಲೊಂದು ಹೂನಗೆ ನೆನಪೊಂದು ಮಳೆಯಾಗಿ ಸುರಿದಾಗಲೆಲ್ಲ ನಗುವೊಂದು ಮಳೆಯ ಹನಿಗಳಾಗಿ ಅಂಗೈಯನ್ನು ಸ್ಪರ್ಶಿಸುತ್ತದೆ. ಹಾಗೆ ಸ್ಪರ್ಶಿಸಿದ ಒಂದಿಷ್ಟು ಹನಿಗಳು ಜಾರಿಬಿದ್ದು ನೆಲವನ್ನು ಹಸಿಯಾಗಿಸಿದರೆ, ಉಳಿದವು ಬೊಗಸೆಯಲ್ಲೊಂದು ಹೊಸ ಪ್ರಪಂಚವನ್ನು ಬಿಚ್ಚಿಡುತ್ತವೆ. ಹಾಗೆ ನಮ್ಮೆದುರು ತೆರೆದುಕೊಳ್ಳುವ ಪ್ರಪಂಚದಲ್ಲಿ ಕೈಗೂಸಿನ ಕನಸಿನಂಥ ನಗುವೊಂದು ಅಮ್ಮನ ಮಡಿಲಿನಲ್ಲಿ ಕದಲಿದರೆ, ಹೂನಗೆಯ ಹೊತ್ತ ಹುಡುಗಿಯೊಬ್ಬಳು ಸೈಕಲ್ಲನ್ನೇರಿ ಕನಸಿನಂತೆ ಮರೆಯಾಗುತ್ತಾಳೆ; ಹನಿಮೂನ್ ಪ್ಯಾಕೇಜಿನ ರೆಸಾರ್ಟ್ ಒಂದರ ಡೈನಿಂಗ್ ಹಾಲ್ ನಲ್ಲಿ ನಾಚಿಕೆಯ ನಗುವೊಂದು ಮೋಂಬತ್ತಿಯಾಗಿ ಕರಗಿದರೆ, ಆಪರೇಟಿಂಗ್ ರೂಮೊಂದರಿಂದ ಹೊರಬಂದ ವೈದ್ಯರ ನಗುವೊಂದು ಕಣ್ಣೀರನ್ನೆಲ್ಲ […]

ಜಾಮಿನಿಯ ನೆನಪಿನಲ್ಲಿ ಈ ಮಳೆಗಾಲದಲ್ಲಿಯೇ ನೆನಪುಗಳು ಹುಟ್ಟಿಕೊಂಡಿರಬಹುದು ಎನ್ನುವ ಬಲವಾದ ನಂಬಿಕೆಯಿದೆ ನನಗೆ. ಮೋಡಗಳೊಂದಿಗೆ ತಣ್ಣಗೆ ತೇಲಿಬಂದ ನೆನಪೊಂದು, ಏಕಾಂತ ಬಯಸಿ ಟೆರೇಸಿನಲ್ಲಿ ಕುಳಿತು ಆಕಾಶ ದಿಟ್ಟಿಸುತ್ತಿದ್ದ ಹೃದಯವೊಂದನ್ನು ತಾಕಿ ನೆಲಕ್ಕೆ ಇಳಿದಿರಬಹುದು. ಹಾಗೆ ತಾಕಿದ ನೆನಪು ಒಮ್ಮೆ ಬಾಲ್ಯದ ಬೆರಗಾಗಿ, ಇನ್ನೊಮ್ಮೆ ಹರೆಯದ ಕನಸಾಗಿ, ಮತ್ತೊಮ್ಮೆ ಫ್ರಿಡ್ಜ್ ನಲ್ಲಿಟ್ಟ ಐಸ್ ಕ್ರೀಮಾಗಿ ಎಲ್ಲರ ಅರಿವಿಗೂ ದಕ್ಕಿರಬಹುದು. ಹಾಗೆ ದಕ್ಕಿದ ನೆನಪು ಈಗಷ್ಟೇ ಟ್ರೆಕ್ಕಿಂಗ್ ಮುಗಿಸಿದ ಹುಡುಗನೊಬ್ಬನ ಭಾರವಾದ ಬ್ಯಾಗ್ ನಲ್ಲೋ, ಕಾಡುಪಾಪವೊಂದನ್ನು ಕಷ್ಟಪಟ್ಟು ಕ್ಲಿಕ್ಕಿಸಿದ ಫೋಟೋಗ್ರಾಫರ್ […]

ಗುಂಡಪ್ಪೆಯ ಮಳೆಗಾಲ ಈ ಮಾವಿನಹಣ್ಣಿಗೂ ಮಳೆಗಾಲಕ್ಕೂ ಒಂಥರಾ ಅವಿನಾಭಾವ ಎನ್ನುವಂಥ ಸಂಬಂಧ. ಮೊದಲಮಳೆಯೆನ್ನುವ ಸಂಭ್ರಮ ನಮ್ಮೊಳಗೊಂದು ಹೊಸ ಚೈತನ್ಯ ತುಂಬುವ ಸಮಯದಲ್ಲಿ, ಸಕಲ ಸೊಬಗಿನ ದೇವಕನ್ಯೆಯೊಬ್ಬಳು ಭುವಿಗಿಳಿದಂತೆ ಮಾವಿನಹಣ್ಣೊಂದು ನೆಲಕ್ಕುರುಳುತ್ತದೆ. ಹೀಗೆ ಕಳಚಿಬಿದ್ದ ಮಾವಿನಹಣ್ಣಿನ ಮೇಲೆ ಮಳೆಹನಿಗಳೆಲ್ಲ ಮುತ್ತಿನಂತೆ ಹೊಳೆದು, ಗೌಜು-ಗದ್ದಲವಿಲ್ಲದ ಹೊಸ ಲೋಕವೊಂದು ಸೃಷ್ಟಿಯಾಗುತ್ತದೆ. ಹೀಗೆ ಗದ್ದೆಬಯಲಿನಲ್ಲೋ, ಬೆಟ್ಟದ ತುದಿಯಲ್ಲೋ ನಿರಾತಂಕವಾಗಿ ಹುಟ್ಟಿಕೊಳ್ಳುವ ಈ ಸೊಬಗಿನ ಪ್ರಪಂಚಕ್ಕೆ ಮಳೆಯೊಂದು ಜೀವ ತುಂಬುವ ಪರಿ ಅನನ್ಯ. ಮಳೆ ಆಗೊಮ್ಮೆ ಈಗೊಮ್ಮೆ ಅವಾಂತರಗಳನ್ನು ಸೃಷ್ಟಿಸಿದರೂ ಅದೊಂದು ಮಾಯೆಯಾಗಿ ಮೈ-ಮನಗಳನ್ನು […]

ಅಜ್ಜನಮನೆಯೆನ್ನುವ ಜೀವನಪಾಠ….. ಅಜ್ಜ ನೆನಪಿಗೆ ಬಂದಾಗಲೆಲ್ಲ ಅಜ್ಜನಮನೆ ಎನ್ನುವ ಮಮತೆಯ ಮಲ್ಹಾರವೊಂದು ಮನಸ್ಸನ್ನೆಲ್ಲ ತುಂಬಿಕೊಳ್ಳುತ್ತದೆ. ಈ ಪ್ರೀತಿ-ಮಮಕಾರಗಳ ಮೂಲವನ್ನೊಮ್ಮೆ ಕೆದಕಿ ನೋಡಿ! ಅಜ್ಜಿಯ ಸೆರಗಿನಂಚಿನ ಪ್ರೀತಿಯ ಸೆಲೆಯೊಂದು, ಅಜ್ಜನ ಕಿರುಬೆರಳಿನ ಅಭಯವೊಂದು ನಾವಿಡುವ ಪ್ರತೀ ಹೆಜ್ಜೆಯನ್ನೂ ಸಲಹುತ್ತಿರುತ್ತದೆ. ಎಷ್ಟೇ ಆಧುನಿಕ ಜೀವನಶೈಲಿಯಾದರೂ, ಅಪಾರವಾದ ಸ್ನೇಹಬಳಗವಿದ್ದರೂ ಅಜ್ಜ-ಅಜ್ಜಿ ಎನ್ನುವ ಪ್ರೀತಿಯ ಬಲೆಯೊಂದರಲ್ಲಿ ಬದುಕಿನುದ್ದಕ್ಕೂ ಬಂದಿಯಾಗಿರುತ್ತೇವೆ; ಅಚ್ಚರಿಯೆಂದರೆ ಆ ಬಂಧನ ನಮಗೆಂದೂ ಹೊರೆಯೆನ್ನಿಸುವುದಿಲ್ಲ. ಅಜ್ಜನ ಕಥೆಯಲ್ಲಿ ಬರುವ ನೂರಾರು ಮೂಟೆಗಳ ಭತ್ತದ ದಾಸ್ತಾನನ್ನು ರಾತ್ರೋರಾತ್ರಿ ಖಾಲಿ ಮಾಡಿದ ಇರುವೆಗಳ ದಂಡು, […]

ಅಂಕಣ ಬರಹ

ಸಂಪ್ರೋಕ್ಷಣ ಬಣ್ಣಗಳಲ್ಲದ್ದಿದ ಬದುಕು ಅಂಜನಾ ಹೆಗಡೆ ಬಣ್ಣಗಳೇ ಇರದಿದ್ದರೆ ಜಗತ್ತು ಹೇಗಿರುತ್ತಿತ್ತು ಯೋಚಿಸಿ ನೋಡಿ. ಪುಟ್ಟ ಮಗುವೊಂದು ಬಣ್ಣದ ಬಲೂನುಗಳ ಹಿಂದೆ ಓಡುವ ದೃಶ್ಯವೇ ಕಾಣಸಿಗುತ್ತಿರಲಿಲ್ಲ. ಗಾಳಿಪಟವೊಂದು ಚೂರುಚೂರೇ ನೆಗೆಯುತ್ತ ಆಕಾಶಕ್ಕೆ ಎಗರಿ ಬಣ್ಣದ ಲೋಕವೊಂದನ್ನು ಸೃಷ್ಟಿಸುತ್ತಲೇ ಇರಲಿಲ್ಲ. ಕೆಂಡಸಂಪಿಗೆಗೆ ಕೆಂಡದಂತಹ ಬಣ್ಣವಿರುತ್ತಿರಲಿಲ್ಲ. ಕಾಮನಬಿಲ್ಲೊಂದು ಹುಟ್ಟುತ್ತಲೇ ಇರಲಿಲ್ಲ. ಬಣ್ಣಗಳಿಲ್ಲದಿದ್ದರೆ ಕಲೆ, ಸೌಂದರ್ಯ, ಪ್ರಕೃತಿ ಇವೆಲ್ಲವುಗಳ ಪರಿಕಲ್ಪನೆ ಬೇರೆಯೇ ಏನೋ ಆಗಿರುತ್ತಿತ್ತು. ಅದೇನಾಗಿರಬಹುದಿತ್ತು ಎಂದು ಒಂದು ಸೆಕೆಂಡು ಯೋಚಿಸಿದರೂ ಒಂದಿಷ್ಟು ಬಣ್ಣಗಳೂ ಯೋಚನೆಯೊಂದಿಗೆ ಅಂಟಿಕೊಳ್ಳುತ್ತವೆ.      ಯೋಚನೆಗಳಷ್ಟೇ ಅಲ್ಲದೇ […]

Back To Top