Category: ಚಿತ್ತ ಜನ್ಯ

ಅಂಕಣ ಬರಹ “ಸಿಕ್ಕಿತಾ ಎಂದರೆ ಸಿಕ್ಕಿಲ್ಲ ಎಂಬುದೇ ಉತ್ತರ…” ಆಗಾಗ ಕೆಲವರು ಬರಹವನ್ನೂ ಮತ್ತು ಬರೆದ ಬರಹಗಾರನನ್ನೂ ಒಂದೆನ್ನುವಂತೆ ಭಾವಿಸಿ ಅನುಮಾನದಿಂದ ನೋಡುವುದನ್ನು ನೋಡುತ್ತಿರುತ್ತೇವೆ. ಗೆಳೆಯರು ಇದನ್ನು ಬಾರಿ ಬಾರಿ ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ ಇದು ಪ್ರತಿಯೊಬ್ಬ ಬರಹಗಾರನಿಗೂ ಒಂದಲ್ಲಾ ಒಂದು ಬಾರಿ ಎದುರಿಸಬೇಕಾಗಿ ಬರುವ ಸಾಮಾನ್ಯ ಸನ್ನಿವೇಶವೂ ಆಗಿರುತ್ತದೆ. ಆದರೆ ಓದುಗರು ಒಂದು ಮಾತನ್ನು ನೆನಪಿನಲ್ಲಿಡಬೇಕು. ಅವನು ಬರಹಗಾರ… ತನಗೆ ಕಂಡ, ಅನುಭವಿಸಿದ, ಇರರ ಅನುಭವದಿಂದ ಅರಿತ ಎಲ್ಲವನ್ನೂ ಒಂದಾಗಿಸಿ ಬರಹದ ಮೂಲತತ್ವದ ಅಚ್ಚಿಗೆ ಸುರಿದು ಓದುಗರಿಗೆ […]

ಅಂಕಣ ಬರಹ ಎಲ್ಲಾ ಒಳ್ಳೆಯದೇ ಆಗುತ್ತೆ… ಈ ಥರದ ಮಾತುಗಳನ್ನ ನಾವು ಬಹಳಷ್ಟು ಸಾರಿ ಕೇಳಿರ್ತೇವೆ. “ಒಳ್ಳೇವ್ರಿಗೆ ಒಳ್ಳೆಯದೇ ಆಗುತ್ತೆ”, “ನಾವು ಒಬ್ರಿಗೆ ಒಳ್ಳೇದು ಮಾಡಿದ್ರೆ ದೇವರು ನಮಗೆ ಒಳ್ಳೇದು ಮಾಡ್ತಾನೆ”, “ತಾತ ಮಾಡಿದ ಪಾಪ ಮೊಮ್ನೊಗನಿಗೆ”… ಹೀಗೆ ಹಲವಾರು ಮಾತುಗಳು… ಇವೆಲ್ಲ ಬರಿಯ ಮಾತುಗಳಲ್ಲ, ಅದೊಂದು ದೈತ್ಯ ಶಕ್ತಿಯ ನಂಬಿಕೆ, ನಮ್ಮ ಬದುಕನ್ನು ಮುನ್ನಡೆಸುವ ಶಕ್ತಿ. ನನ್ನ ತಂದೆ ಒಬ್ಬ ಪ್ರಾಮಾಣಿಕ ಹೈಸ್ಕೂಲ್ ಗಣಿತದ ಮೇಷ್ಟ್ರು. ತಮ್ಮ ವಿದ್ಯಾರ್ಥಿಗಳಿಗೆ ಸ್ವಂತ ಮಕ್ಕಳ ರೀತಿಯಲ್ಲೇ ಭಾವಿಸಿ ಪಾಠ […]

ಅಂಕಣ ಬರಹ ಹವ್ಯಾಸವೆಂಬ ಮಂದಹಾಸ… ಹವ್ಯಾಸಗಳಿಲ್ಲದ ಮನುಷ್ಯನೆಂದರೆ ಎಲೆ ಹೂವು ಹಣ್ಣು ಏನೊಂದೂ ಇಲ್ಲದ ಬೋಳು ಮರವೇ ಸರಿ. ಬದುಕು ದುರ್ಬರವೆನಿಸಿದ ಹೊತ್ತಲ್ಲೂ ಸಹನೀಯತೆ ತರುವ ಶಕ್ತಿ ಇದ್ದರೆ ಅದು ಹವ್ಯಾಸಗಳಿಗೆ ಮಾತ್ರ. ಹೊತ್ತು ಕಳೆಯಲು ವ್ಯರ್ಥ ಅಭ್ಯಾಸಗಳನ್ನು ಮಾಡಿಕೊಳ್ಳುವ ಬದಲು ಸಮಯವನ್ನು ಗೌರವಿಸುವಂತ ಅರ್ಥಪೂರ್ಣ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಹವ್ಯಾಸಗಳು ಬರಿದೆ ಮೂರ್ತಿಗೆ ಮಾಡಿದ ಅಲಂಕಾರದಂತೆ ನಮ್ಮನ್ನು ಚೆಂದಗಾಣಿಸುತ್ತದೆ. ಹವ್ಯಾಸವೆನ್ನುವ ಟಾರ್ಚು ನಮ್ಮ ಕೈಯಲ್ಲಿದ್ದರೆ ಅದು ದಟ್ಟ ಕಾಡಿನ ನಡುವೆಯೂ ಕೈಹಿಡಿದು ನಡೆಸಿ ಗುರಿ ಮುಟ್ಟಿಸಬಲ್ಲದು, ಮನಸ್ಸನ್ನು […]

ಅಂಕಣ ಬರಹ ಹಾಡು ಹಳೆಯದಾದರೇನು ಹಳೆಯ ಹಾಡುಗಳನ್ನು ಕೇಳುವಾಗಲೆಲ್ಲಾ ಎಂಥದೋ ಭಾವುಕತೆಗೆ ಒಳಗಾಗುವುದು, ಏನೋ ಒಂದು ರೀತಿ ಹೊಟ್ಟೆ ಚುಳ್ ಎನ್ನುವುದು, ಆ ಹಳೇ ದಿನಗಳ ನೆನಪುಗಳೆಲ್ಲಾ ಹಿಂದಿನ ಜನ್ಮದ ನೆನಪುಗಳೇನೋ ಎನ್ನುವಂತೆ ಕಾಡುವುದು… ಹೀಗೆಲ್ಲಾ ನನಗೆ ಮಾತ್ರ ಅನಿಸುತ್ತದಾ? ಬೇರೆಯವರಿಗೂ ಹೀಗೆಲ್ಲಾ ಆಗುತ್ತದಾ? ಗೊತ್ತಿಲ್ಲ. ಆದರೆ ನನಗೆ ಇದರ ಜೊತೆಗೆ ಇನ್ನೂ ವಿಚ್ ವಿಚಿತ್ರವಾಗೆಲ್ಲ ಏನೇನೋ ಅನ್ನಿಸುವುದಿದೆ. ಹಳೇ ಫೋಟೋಗಳನ್ನು ನೋಡುವಾಗ ಅದರಲ್ಲಿನ ಅಪರಿಚಿತರ ಬಗ್ಗೆ ಏನೇನೋ ಅನಿಸುತ್ತದೆ. ಅವರನ್ನು ನಾನೆಲ್ಲೋ ಭೇಟಿ ಮಾಡಿರುವೆ, ಮಾತಾಡಿಸಿರುವೆ, […]

ಅಂಕಣ ಬರಹ ಅಸಾಮಾನ್ಯದ ವ್ಯಕ್ತಿ ಚಿತ್ರ ಇವನು… ಬಾಲ್ಯದಲ್ಲಿ ಅಜ್ಜನ ಊರು ಮತ್ತು ಅಜ್ಜನ ಮನೆ ಎನ್ನುವ ಆ ಜಾಗ ಎಷ್ಟೊಂದು ಆಸ್ಥೆಯ ಆಕರ್ಷಣೆಯ  ಜಾಗವಾಗಿತ್ತು… ಅದೆಷ್ಟು ಖುಷಿಯಿಂದ ಅಜ್ಜನ ಮನೆಗೆ ಬರುತ್ತಿದ್ದೆವು… ಅಜ್ಜನ ಮನೆಯ ಮಾಳಿಗೆ, ಪಡಸಾಲೆ, ನೆಲಾಗಾಣೆ, ಅಟ್ಟ, ಗಣಿಗೆ, ಬಾದಾಳ, ಸಗಣಿ ನೆಲ, ಮಣ ಗಾತ್ರದ ಒಂಟಿ ತಲೆ ಬಾಗಿಲು, ಪಡಸಾಲೆಯ ನಾಲ್ಕು ಕಂಬಗಳು, ಅಡುಗೆ ಮನೆಯ ಮಜ್ಜಿಗೆ ಕಡೆಯುವ ಕಂಬ,  ದನಾಕ್ಕೆ, ತಿಪ್ಪೆ, ಬಾರುಕೋಲು, ಹಗೇವಿನ, ಸಗಣಿ, ಗಂಜಲ…. ಇನ್ನೂ ಅಸಂಖ್ಯ […]

ಅಂಕಣ ಬರಹ ಮಾತಲ್ಲಿ ಹಿಡಿದಿಡಲಾಗದ ಚಿತ್ರ… ಕೆಲವರ ವ್ಯಕ್ತಿತ್ವವೇ ಹಾಗಿರುತ್ತದೆ. ಜೇನು ತುಪ್ಪದಲ್ಲಿ ಅದ್ದಿ ತೆಗೆದಷ್ಟು ಸವಿಯಾಗಿ. ಅದೆಷ್ಟು ವಿನಯತೆ, ಅದೆಷ್ಟು ಭೂಮಿಗಿಳಿದ ಮನುಷ್ಯ ಎನಿಸಿಬಿಡುವಂತೆ. ಮನುಷ್ಯ ಏನೂ ಗೊತ್ತಿಲ್ಲದ ಸಂದರ್ಭದಲ್ಲಿ ಮುಗ್ಧನಷ್ಟೇ ಸ್ವಾರ್ಥಿಯೂ ಇರುತ್ತಾನೆ. ಅದು ಪುಟ್ಟ ಮಗುವಿನಲ್ಲಿ ಕಂಡು ಬರುವಂತಹ ಮುಗ್ಧತೆ ಮತ್ತು ಸ್ವಾರ್ಥ. ತದ ನಂತರ ಬೆಳೆಯುತ್ತ ಬೆಳೆಯುತ್ತಾ ಅವನ್ನು ತನಗೆ ಬೇಕಾದ ಹಾಗೆ ಬಳಸುವುದನ್ನು ಕಲಿಯುತ್ತಾನೆ. ಆದರೆ ಜ್ಞಾನ ಸಂಪಾದನೆ ಮಾಡುತ್ತಾ ಮಾಡುತ್ತಾ ವಿನೀತನಾಗಿ ಬಿಡುತ್ತಾನೆ. ಅವನೆಲ್ಲಾ ಅಹಂಕಾರವೂ ಸತ್ತುಹೋಗುತ್ತದೆ. ಜ್ಞಾನ […]

ಅಂಕಣ ಬರಹ ಜ್ಞಾನವೆಂಬ ತಿಜೋರಿಯ ಕೀಲಿಕೈ… ಪುಸ್ತಕಗಳ ರಾಶಿಯನ್ನು ತಡವುವಾಗೆಲ್ಲಾ ಎಂಥದೋ ಆಪ್ತಭಾವ. ಗುಪ್ತಗೆಳೆಯನೊಬ್ಬ ಮನಕ್ಕೆ ಆಗಮಿಸಿದಂತೆ ಪ್ರತಿ ಪುಸ್ತಕವೂ ನಮ್ಮ ಅತಿ ಖಾಸಗೀತನವನ್ನು ಕೊಳ್ಳೆ ಹೊಡೆಯುತ್ತಿರುತ್ತದೆ. ನನಗೆ ಪುಸ್ತಕದ ರುಚಿ ಹತ್ತಿದ್ದು ಬಹುಶಃ ಮೂರೋ ನಾಲ್ಕನೆಯದೋ ತರಗತಿಯಲ್ಲಿದ್ದಾಗ. ಆಗ ನನ್ನ ಮನೆಗೆ ಬರುತ್ತಿದ್ದದ್ದು ದಿಕ್ಸೂಚಿ ಮಾತ್ರ. ಅದು ಖಂಡಿತ ದಿಕ್ಸೂಚಿ ಆಕರ್ಷಕವಾಗಿ ಕಾಣಿಸಬಹುದಾದ ವಯಸ್ಸು ಆಗಿರಲಿಲ್ಲ. ಆದರೆ ಒಂದು ಪುಸ್ತಕದ ಸ್ಪರ್ಶದ ಅನುಭೂತಿ ಹೇಗಿರುತ್ತದೆಂದು ತಿಳಿದದ್ದು ಮಾತ್ರ  ದಿಕ್ಸೂಚಿಯಿಂದಲೇ. ಶಾಲೆಯ ಪಠ್ಯ ಪುಸ್ತಕಗಳು ಸದಾ ನಮ್ಮೊಂದಿಗಿರುತ್ತಿದ್ದವಾದರೂ […]

Back To Top