Category: ಕೇರಿ ಕೊಪ್ಪಗಳ ನಡುವೆ

ವಿ.ಜೇ. ನಾಯಕ ಅವರ ತರುವಾಯ ಜಿಲ್ಲಾ ಘಟಕದ ಅಧ್ಯಕ್ಷಗಾದಿಯೇರಿದ ಟಿ.ಕೇ.ಮಹಮೂದ ಎಂಬ ಹಿರಿಯರು ಇಪ್ಪತ್ತೊಂದು ವರ್ಷಗಳ ಕಾಲ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಅವಧಿಯಲ್ಲಿಯೂ ಜಿಲ್ಲಾಧ್ಯಕ್ಷರಾಗಲೀ, ತಾಲೂಕು ಘಟಕದ ಅಧ್ಯಕ್ಷರಾಗಿದ್ದ ಹಿರಿಯರಾಗಲೀ, ಅಂಕೋಲಾ ತಾಲೂಕು ಸಾಹಿತ್ಯ ಸಮ್ಮೇಳನ ನಡೆಸುವುದಾಗಲೀ, ಘಟಕವನ್ನು ಕ್ರಿಯಾಶೀಲ ಚಟುವಟಿಕೆಗಳಿಂದ ಮುನ್ನಡೆಸುವುದು ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ.

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—43 ಆತ್ಮಾನುಸಂಧಾನ ಜಿ.ಸಿ. ಕಾಲೇಜಿನಲ್ಲೊಂದು ‘ಅಭಿನಯ ಮಂಟಪ’ ಅಂಕೋಲೆಯಲ್ಲಿ ಮಾನ್ಯ ದಿನಕರ ದೇಸಾಯಿ ಅವರ ನಾಯಕತ್ವದಲ್ಲಿ ಸ್ಥಾಪನೆಗೊಂಡ “ಕೆನರಾ ವೆಲ್‌ಫೇರ್ ಟ್ರಸ್ಟ್” ಎಂಬ ಶಿಕ್ಷಣ ಸಂಸ್ಥೆ ಜಿಲ್ಲೆಯಾದ್ಯಂತ ಹುಟ್ಟುಹಾಕಿದ ಜನತಾ ವಿದ್ಯಾಲಯಗಳೆಂಬ ಪ್ರೌಢಶಾಲೆಗಳು ಜಿಲ್ಲೆಯಲ್ಲಿ ಅಕ್ಷರ ಜ್ಯೋತಿ ಬೆಳಗಿಸುವ ಮಹತ್ವದ ಕಾರ್ಯಾಚರಣೆಗೆ ತೊಡಗಿ ಶೈಕ್ಷಣಿಕ ಕ್ರಾಂತಿಗೆ ಕಾರಣವಾದದ್ದು ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಒಂದು ಸುವರ್ಣಮಯ ಕಾಲಾವಧಿ. ಇದರ ಮುಂದಿನ ಹೆಜ್ಜೆಯಾಗಿ ಸ್ಥಾಪನೆಗೊಂಡದ್ದೇ ಅಂಕೋಲೆಯ ‘ಗೋಖಲೆ ಸೆಂಟನರಿ ಕಾಲೇಜ್’ ಎಂಬ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—42 ಆತ್ಮಾನುಸಂಧಾನ ಅಂಕೋಲೆಯ “ಕರ್ನಾಟಕ ಸಂಘ” ಮತ್ತು ನಾನು ೧೯೫೦ ರ ದಶಕದ ಆರಂಭದಲ್ಲಿಯೇ ಹುಟ್ಟಿ ಅಂಕೋಲೆಯ ಸಾಮಾಜಿಕ ಪರಿಸರದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆರಂಭಿಸಿದ ಅಂಕೋಲೆಯ “ಕರ್ನಾಟಕ ಸಂಘ” ವೆಂಬ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಯು ನನ್ನಂಥ ಹಲವರಿಗೆ ಸಾಂಸ್ಕೃತಿಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ವೇದಿಕೆಯಾದದ್ದು ಅಂಕೋಲೆಯ ಇತಿಹಾಸದಲ್ಲಿಯೇ ಒಂದು ಅಭೂತಪೂರ್ವ ಕಾಲಾವಧಿ ಎನ್ನಬಹುದು. ೧೯೫೨ ರಲ್ಲಿ ಸ್ಥಾಪನೆಗೊಂಡು ಅಂಕೋಲೆಯ ಸಾಹಿತ್ಯ-ಕಲೆ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ ಸಹಸ್ರಾರು ಜನರ ಆಶೋತ್ತರಗಳನ್ನು […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—41 ಆತ್ಮಾನುಸಂಧಾನ ಅಧ್ಯಾಪಕ ವೃತ್ತಿಯ ಆರಂಭದ ದಿನಗಳು ೧೯೭೫ ರ ಜುಲೈ ಒಂದರಂದು  ನಾನು ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕನಾಗಿ ಕರ್ತವ್ಯಕ್ಕೆ ಹಾಜರಾದೆ. ಅಂದು ನನ್ನ ಜೊತೆಯಲ್ಲಿಯೇ ನಮ್ಮ ನಾಡು ಮಾಸ್ಕೇರಿಯವರೇ ಆದ ಶ್ರೀ ಎನ್.ಎಚ್.ನಾಯಕ. ಜೀವಶಾಸ್ತ್ರ ವಿಭಾಗಕ್ಕೆ, ಅಂಕೋಲಾ ತಾಲೂಕಿನ ಬಾಸಗೋಡಿನ ಶ್ರೀ ವಿ.ಆರ್.ಕಾಮತ ರಸಾಯನ ಶಾಸ್ತ್ರ ವಿಭಾಗಕ್ಕೆ ಉಪನ್ಯಾಸಕರಾಗಿ ಸೇರಿದರು. ನಮ್ಮ ಕಾಲೇಜಿನ ಆಡಳಿತ ಕಚೇರಿಯಲ್ಲಿ ನಮ್ಮ ಹಾಜರಾತಿಯ ಪ್ರಕ್ರಿಯೆ ನಡೆಯುವಾಗ ಬಹುತೇಕ ಎಲ್ಲ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—40 ಆತ್ಮಾನುಸಂಧಾನ ಆಗೇರ ಸಮಾಜದ ತರುಣನಿಗೆ ಪ್ರಾಧ್ಯಾಪಕ ಹುದ್ದೆ”— ಎಂದು ಸುದ್ದಿಯಾದೆ : ಧಾರವಾಡ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ ಎರಡು ವರ್ಷಗಳು ಕಳೆದು ಹೋದದ್ದೇ ತಿಳಿಯಲಿಲ್ಲ. ಬಹುಪಾಲು ತಂಪಾಗಿಯೇ ಇರುವ ಪ್ರಾಕೃತಿಕ ಪರಿಸರ, ಬಯಲು ಸೀಮೆಯ ಆಪ್ತವೆನ್ನಿಸುವ ಕನ್ನಡ ಭಾಷೆಯ ಸೊಗಸು, ಮತ್ತೆ ಮತ್ತೆ ಕರ್ನಾಟಕ ವಿದ್ಯಾವರ್ಧಕ ಸಂಘದ, ಕನ್ನಡ ವಿಭಾಗದ ಕಾರ್ಯಕ್ರಮಗಳು, ಅಲ್ಲಿಗೆ ಬಂದು ಹೋಗುವ ಹಿರಿ-ಕಿರಿಯ ಲೇಖಕರು, ಕವಿಗಳು, ವಿದ್ವಾಂಸರು ಇವರನ್ನೆಲ್ಲ ನೋಡುವುದೇ ಕೇಳುವುದೇ […]

ನಾಡಿನ ಕ್ರಾಂತಿಕಾರಿ ಕವಿ, ರೈತ ಚಳುವಳಿಯ ನಾಯಕ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆನರಾವೆಲ್‌ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಅಕ್ಷರ ಸೂಯನನ್ನು ಬೆಳಗಿಸಿದ ಮಾನ್ಯ ಡಾ|| ದಿನಕರ ದೇಸಾಯಿಯವರ ಕೃಪಾ ದೃಷ್ಟಿಗೆ ಪಾತ್ರನಾದ ಬಾಲಕ ಸಣ್ಣು ಅವರ ಆಶ್ರಯದಲ್ಲೇ ಇದ್ದುಕೊಂಡು ಇಂಟರ್ ಮೀಡಿಯೇಟ್ ವರೆಗೆ ಶಿಕ್ಷಣ ಪಡೆದದ್ದು ಬಹುದೊಡ್ಡ ಅದೃಷ್ಟವೇ ಸರಿ.

ಕೆಲವೇ ದಿನಗಳಲ್ಲಿ ಒಂದು ದಿನ “ನಾಗಮ್ಮತ್ತೆ ರಾತ್ರಿ ಮಲಗಿದವಳು ಮುಂಜಾನೆ ನಾಪತ್ತೆಯಾಗಿದ್ದಾಳೆ” ಎಂಬ ಆತಂಕದ ಸುದ್ದಿ ತಂದರು. ಅಪ್ಪ ನಮ್ಮ ದಾಯಾದಿ ಇಬ್ಬರು ಚಿಕ್ಕಪ್ಪಂದಿರೊಂದಿಗೆ ಹಿಲ್ಲೂರಿಗೆ ಹೋದರು. ಅಲ್ಲಿ ಮತ್ತೆರಡು ದಿನಗಳವರೆಗೆ ಬೆಟ್ಟ, ಗುಡ್ಡ, ನದಿ, ಕೆರೆ, ಬಾವಿ ಇತ್ಯಾದಿ ಎಲ್ಲ ಕಡೆಗಳಲ್ಲಿಯೂ ಹುಡುಕಾಟ ಮಾಡಿದ್ದಾರೆ. ಆಗಲೂ ಮಂತ್ರವಾದಿಗಳು “ಅವಳು ಬದುಕಿದ್ದಾಳೆ… ಉತ್ತರ ದಿಕ್ಕಿನಲ್ಲಿ ಇದ್ದಾಳೆ…” ಇತ್ಯಾದಿ ಭವಿಷ್ಯ ನುಡಿದು ಹುಡುಕಾಟದ ತಂಡವನ್ನು ಅಲೆದಾಡಿಸಿ ನೋಡಿದರಲ್ಲದೆ ಅತ್ತೆಯು ಎಲ್ಲಿಯೂ ಕಾಣಸಿಗಲಿಲ್ಲ.

ಒಮ್ಮೆ ಕಾರವಾರದಲ್ಲಿ ‘ಗಂಡಭೇರುಂಡ’ ಚಲನ ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗ ನನ್ನನ್ನು ಕರೆಸಿಕೊಂಡ ಕೃಷ್ಣಮೂರ್ತಿ ಚಿತ್ರತಂಡದ ಭೇಟಿಗೆ ಅವಕಾಶ ಪಡೆದುಕೊಂಡಿದ್ದ. ಅಂದು ಕಾರವಾರದ ಪ್ರತಿಷ್ಠಿತ ಗೋವರ್ಧನ ಹೋಟೆಲಿನಲ್ಲಿ ನಾಯಕ ನಟರಾದ ಶ್ರೀನಾಥ, ಶಂಕರನಾಗ್, ಖಳನಟ ವಜ್ರಮುನಿ ಮತ್ತು ನಾಯಕಿ ಜಯಮಾಲಾ ಅವರ ಜೊತೆಯಲ್ಲಿ ಒಂದೆರಡು ಗಂಟೆಗಳ ಕಾಲ ಸಮಯ ಕಳೆದದ್ದು ಒಂದು ಅವಿಸ್ಮರಣೀಯ ಸಂದರ್ಭವೇ ಆಗಿತ್ತು

ಈ ಅಸಹಾಯಕ ಸಂದರ್ಭದಲ್ಲಿ ನನ್ನ ಜೈಹಿಂದ್ ಹೈಸ್ಕೂಲು ಸಹಪಾಠಿ ಪ್ರಭು ಎಂಬಾತ ಸಹಾಯಕ್ಕೆ ನಿಂತ. (ಕ್ಷಮೆ ಇರಲಿ ಅವನ ಹೆಸರು ಮರೆತಿದ್ದೇನೆ). ಅಂಕೋಲೆಯ ಮಠಾಕೇರಿಯ ಜಿ.ಎಸ್.ಬಿ ಸಮುದಾಯದ ಪ್ರಭು ನನಗೆ ಹೈಸ್ಕೂಲು ದಿನಗಳಲ್ಲಿ ತುಂಬಾ ಆತ್ಮೀಯನಾಗಿದ್ದವನು. ಆತ ನನಗೆ ವಾಸ್ತವ್ಯದ ವ್ಯವಸ್ಥೆಯಾಗುವವರೆಗೆ ನಿಜಲಿಂಗಪ್ಪ ಹಾಸ್ಟೆಲ್ಲಿನ ತಮ್ಮ ಕೊಠಡಿಯಲ್ಲಿಯೇ ಉಳಿಯಲು ಅವಕಾಶ ನೀಡಿದ. ಇದಕ್ಕೆ ಅವನ ರೂಮ್‌ಮೇಟ್ ಕೂಡ ಆಕ್ಷೇಪವೆತ್ತದೆ ಸಹಕರಿಸಿದ. ಇಬ್ಬರ ಉಪಕಾರ ಬಹು ದೊಡ್ಡದು

ಕೃಷ್ಣಮೂರ್ತಿ ಹೆಗಡೆ ಪ್ರತಿಷ್ಠಿತ “ಶಿಂತ್ರಿ ಬಿಲ್ಡಿಂಗ್” ನಲ್ಲಿ ಬಾಡಿಗೆ ರೂಮು ಮಾಡಿಕೊಂಡಿದ್ದ. ಇತರ ಬ್ರಾಹ್ಮಣ ಹುಡುಗರು ಸಪ್ತಾಪುರ ಇತ್ಯಾದಿ ಕಡೆಗಳಲ್ಲಿ ರೂಮು ಪಡೆದಿದ್ದರು. ಒಮ್ಮೆಯಂತೂ ಅವರಲ್ಲಿ ಯಾರೋ ತನ್ನ ಕುರಿತು ಸಲ್ಲದ ಮಾತನಾಡಿದರೆಂದು ಕೋಪಗೊಂಡ ಕೃಷ್ಣಮೂರ್ತಿ ಹೆಗಡೆ ರಾತ್ರಿ ವೇಳೆ ಅವರ ರೂಮಿಗೆ ಹೋಗಿ ರಂಪ ಮಾಡಿದ ಸಂಗತಿ ಮರುದಿನ ಕನ್ನಡ ವಿಭಾಗದಲ್ಲಿಯೇ ಚರ್ಚೆಯ ಸಂಗತಿಯಾಗಿತ್ತು!

Back To Top