Category: ಗಜಲ್ ವಿಶೇಷ

ಗಜಲ್ ಪ್ರತಿಮಾ ಕೋಮಾರ ವೈಷಮ್ಯದ ಮನಸುಗಳ ಪ್ರೀತಿಯ ಮಾತಿನಿಂದ ಸೆಳೆಯಬೇಕು ನಾವುಒಡೆದ ಕನಸುಗಳ ಬೆಳಕಿನ ದೀಪವಿಟ್ಟು ಹೊಸೆಯಬೇಕು ನಾವು ತಾಳ್ಮೆಯಿಲ್ಲದ ಬದುಕು ಸರಿಯ ದಡ ಸೇರುವುದೇ?ವೃಕ್ಷದ ಫಲ ಹಣ್ಣಾಗಿ ಮಾಗುವವರೆಗೆ ಕಾಯಬೇಕು ನಾವು ಸುಖ ದುಃಖಗಳು ಎಲ್ಲರ ಜೀವನದ ಇಬ್ಬದಿಗಳುನೋವ ಕಂಗಳ ಸಾಂತ್ವನದ ಹಾಡಿನಿಂದ ನಗಿಸಬೇಕು ನಾವು ಸಾಧನೆಯ ಹಾದಿಯಲಿ ಮಲ್ಲಿಗೆಯ ಹಾಸಿರದು ಎಂದಿಗೂಎಡರು ತೊಡರುಗಳನ್ನು ಹಠದಿಂದ ಮೀರಿ ಜಯಿಸಬೇಕು ನಾವು ಹುಟ್ಟಿದ ಎಲ್ಲಾ ಜೀವಿಗಳು ಬಾಳ ಸವೆಸಿ ಹೋಗುವುವುಬಾಡಿದ “ಪ್ರತಿ “ಬದುಕ ಮಾಣಿಕ್ಯವಾಗಿಸಲು ಪ್ರಯತ್ನಿಸಬೇಕು ನಾವು […]

ಗಜಲ್ ಸ್ಮಿತಾ ಭಟ್ ಎದೆಯ ಮಾತುಗಳು ಮೊರೆಯುತ್ತಿದೆ ನನಗೂ ನಿನಗೂ/ಅಂತರಂಗದ ಆಹ್ವಾನ ಹಿತನೀಡುತ್ತಿದೆ ನನಗೂ ನಿನಗೂ/ ಕಣ್ಣ ಗೊಳದಲಿ ನೂರಾರು ಕನಸುಗಳ ಚಲನವಲನನಭವ ತೋರಿಸಿ ಹಗುರಾಗಬೇಕಿದೆ ನನಗೂ ನಿನಗೂ/ ಆತುಕೊಂಡೇ ಬದುಕುವ ಹಂಬಲ ಕೆರಳುತ್ತದೆ ಕೆಲವೊಮ್ಮೆಸಾಕೆಂದು ಸರಿಸದೆ ಒಳಗೊಳ್ಳುವುದಿದೆ ನನಗೂ ನಿನಗೂ/ ಮೋಹದ ಸೆಳೆತಕೆ ಮನಸೋತ ವಾಂಛೆಯಲ್ಲವಿದು ಗೆಳೆಯಾಈಗಷ್ಟೇ ಹನಿಯಾಗಿದ್ದೇನೆ ಕಡಲಾಗುವುದಿದೆ ನನಗೂ ನಿನಗೂ/ ಪಯಣದ ತಿರುವುಗಳಿಗೆ ಹೆಸರಲಿಗೆಯ ಹಂಗೇಕೆ ದೊರೆಯೇಮರೆಯದೇ ಸರಿ ದಾರಿಯಲಿ ಕೂಡುವುದಿದೆ ನನಗೂ ನಿನಗೂ/ ಮೌನವಾಗಿದ್ದೇ ಮುನ್ನುಡಿ ಬರೆದಾಗಿದೆ ಬದುಕಿಗೆ ಓದಿ ಬಿಡುಇಲ್ಲಬಿಡು […]

ಗಜಲ್ ಪ್ರಭಾವತಿ ಎಸ್ ದೇಸಾಯಿ ವಿರಹದುರಿಗೆ ಜೀವವು ಪತಂಗದಂತೆ ಸುಟ್ಟು ಶವವಾಗಲಿ ರಾತ್ರಿಕಂಡ ಕನಸ ಹೂ ದಳಗಳು ಉದುರಿ ಉಸಿರು ಸಮಾಧಿಯಾಗಲಿ ರಾತ್ರಿ ಎದೆಭಾರವಾಗಿದೆ ನೆನಪಿನ ಗಂಟು ಹೊತ್ತು ಬಂಡಿ ಸಾಗಲಿ ರಾತ್ರಿಬದುಕು ಹಗುರಾಗಲು ಬೆಂದು ಉರಿವ ದೇಹಕೆ ತಂಬೆಳಕಾಗಲಿ ರಾತ್ರಿ ದಣಿದ ಕಣ್ಣ ರೆಪ್ಪೆಗಳು ನಿಂತು ನಿದ್ದೆಗೆ ಬೇಲಿಯಾಗಲಿ ರಾತ್ರಿಮಧುರ ಗಳಿಗೆಗಳ ಕಾಯುವ ಹೃದಯಗಳು ಒಲಿದು ಒಂದಾಗಲಿ ರಾತ್ರಿ ಮನದಾಳದಲ್ಲಿ ಎದ್ದ ಪ್ರಶ್ನೆಗಳಿಗೆ ಉತ್ತರವಾಗಲಿ ರಾತ್ರಿನೊಂದ ಜೀವಿಗಳಿಗೆ ಜಗದ ಎಲ್ಲ ಸುಖವು ಅನುಭವವಾಗಲಿ ರಾತ್ರಿ ಅಗಲಿಕೆ […]

ಗಜಲ್ ಮದುಶಾಲೆಯ ಹೊಸ್ತಿಲಲ್ಲಿ…

ವಿಶೇಷ ಲೇಖನ ಗಜಲ್ ಮದುಶಾಲೆಯ ಹೊಸ್ತಿಲಲ್ಲಿ… ಡಾ. ಮಲ್ಲಿನಾಥ ಎಸ್. ತಳವಾರ        ಪ್ರೀತಿಯೇ ಈ ಜಗದ ಸುಂದರ ಬುನಾದಿ. ಎಲ್ಲ ಚಟುವಟಿಕೆಗಳಿಗೆ ಹೃದಯ ಬಡಿತದ ಪಿಸುಮಾತೆ ಕಾರಣ. ಸ್ಪರ್ಶಕ್ಕೂ ಎಟುಕದ ಅನುಭವಗಳೆಲ್ಲವನ್ನು ಕಟ್ಟಿಕೊಡುವುದೆ ಸಾಹಿತ್ಯ. ಆ ಸಾಹಿತ್ಯದ ಸಸಿಗೆ ನಮ್ಮ ಭಾವನೆಗಳೆ ವರ್ಷಧಾರೆ..!! ಭಾವಗಳ ಸಂಗಮವೇ ಆ ಅಕ್ಷರ ಅಕ್ಷಯ ಪಾತ್ರೆ. ಸುಂದರ ಸಮಾಜದ ಪ್ರತಿಬಿಂಬವನ್ನು ಪ್ರತಿನಿಧಿಸುವ ದರ್ಪಣವೇ‌ ಈ ಅಕ್ಷರ ಲೋಕ..!! ಇದೊಂದು ಭಾವನೆಗಳ ಕಲ್ಪನಾತ್ಮಕ ಪರಪಂಚ. ಇದು ಕ್ರಿಯಾಶೀಲತೆ, ಭಾಷೆ, ವರ್ಣಗಳು ಮತ್ತು […]

Back To Top