Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

“ಸರಹದ್ದುಗಳಿಲ್ಲದ ಭೂಮಿಯಕನಸು:

ಪುಸ್ತಕ ಸಂಗಾತಿ ಸರಹದ್ದುಗಳಿಲ್ಲದ ಭೂಮಿಯಕನಸು ಕನ್ನಡ ಕಾವ್ಯ ಲೋಕದ ಹೊಸ ಬೆಳಕು ಕವಯಿತ್ರಿ ನಿರ್ಮಲಾ ಶೆಟ್ಟರ 2020 ರಲ್ಲಿ ಕನ್ನಡ ಸಾಹಿತ್ಯದ ಕಾವ್ಯ ಲೋಕಕ್ಕೆ ಕೊಟ್ಟ ಹೊಸ ನೋಟದ ಕೃತಿ ‘ಸರಹದ್ದುಗಳಿಲ್ಲದ ಭೂಮಿಯ ಕನಸು’. ಹೌದು ಕವಿ ಹಾಗೆ. ಕವಿತೆಗಳಿಗೆ ಸರಹದ್ದುಗಳಿರುವುದಿಲ್ಲ. ಕಾವ್ಯ ಸದಾ ಮನುಷ್ಯ ಮನುಸ್ಸು ಗಳನ್ನು ಬೆಸೆಯುವ ,ಹೊಸ ಹೊಸ ಕನಸು ಕಾಣುವ, ಶೋಷಣೆಯ ಬಂಧಗಳ ಮುರಿದು , ಹೊಸ ಹುಡುಕಾಟ ಮಾಡುತ್ತಿರುತ್ತದೆ. ಅದು ಕಾವ್ಯದ ಕ್ರಿಯೆ. ಕನ್ನಡದ ಪರಂಪರೆಯೇ ಹಾಗೆ. ವಚನಗಳ ಬೇರುಗಳಿಂದ […]

ಪುಸ್ತಕ ಬಿಡುಗಡೆ

ಪುಸ್ತಕ ಸಂಗಾತಿ ‘ಗೌರಿಯೊಂದಿಗೆ ಏಕಾಂತ_ಲೋಕಾಂತ‘ ಸ್ನೇಹಿತರೆ…ಗೌರಿಯೊಂದಿಗೆ ಏಕಾಂತ_ಲೋಕಾಂತ ಪುಸ್ತಕ ಬಿಡುಗಡೆಯ ಆಹ್ವಾನ ಪತ್ರಿಕೆ ಇಲ್ಲಿದೆ. ಆಸಕ್ತರೆಲ್ಲರೂ ಸಮಯ ಸರಿದೂಗಿಸಿಕೊಂಡು ನಮಗೆ ಜೊತೆಯಾಗಿ…!! ಭೇಟಿಯಾಗಿ ಬಾಂಧವ್ಯ ಬೆಸೆದುಕೊಳ್ಳುವ. ಪ್ರೀತಿಯಿಂದ- ಚಾರು ಪ್ರಕಾಶನ ಒಟ್ಟು ಪುಟಗಳು 200ಬೆಲೆ ರೂ 150/- ಪ್ರತಿಗಳಿಗಾಗಿ ಸಂಪರ್ಕಿಸಿ94483806379380788349080-266603037.Charu PrakashanaCurrent Account number64054262366IFSC Code SBI no 040014State Bank Of India.Basavanagudi BranchBengaluru 560004 Parvateesh Bilidaale Charu Prakashana No 83, 3rd Floor Pride plaza building 5th Main Near […]

ಕಲ್ಲಳ್ಳಿ ಗಜಲ್

ಪುಸ್ತಕ ಸಂಗಾತಿ ಕಲ್ಲಳ್ಳಿ ಗಜಲ್ ಸಂಕಲನದ ಹೆಸರು : ಕಲ್ಲಳ್ಳಿ ಗಜಲ್ ಲೇಖಕರು : ದೊಡ್ಡ ಕಲ್ಲಳ್ಳಿ ನಾರಾಯಣಪ್ಪ ಬೆಲೆ : ೧೨೦/- ದೊಡ್ಡ ಕಲ್ಲಳ್ಳಿ ನಾರಾಯಣಪ್ಪನವರು ವೃತ್ತಿಯಲ್ಲಿ ಪದವೀಧರ ಶಿಕ್ಷಕರಾಗಿದ್ದು, ಪ್ರವೃತ್ತಿಯಾಗಿ ಕನ್ನಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಪ್ರತಿಭೆ. ಇವರು ಈಗಾಗಲೇ ಉತ್ತತೀಯ ಹಾಡು, ಎದೆಯೊಳಗಿನ ಇಬ್ಬನಿ, ಬೆಂಗಾಡು ಎಂಬ ಮೂರು ಸಂಕಲನಗಳನ್ನು ಹೊರ ತಂದಿದ್ದು ಈ ಕಲ್ಲಳ್ಳಿ ಗಜಲ್ ನಾಲ್ಕನೇ ಸಂಕಲನವಾಗಿದೆ.  ಇವರ ಪ್ರತಿಭೆಯನ್ನು ಗುರುತಿಸಿ ಇವರಿಗೆ ಗೋವಿಂದ ದಾಸ್ ಪ್ರಶಸ್ತಿ, ಬೆಳಕು ಸಾಹಿತ್ಯ […]

ಆಡುಭಾಷೆಯ ಸವಿ ಗೋದಾನ.

ಪುಸ್ತಕ ಸಂಗಾತಿ ಆಡುಭಾಷೆಯ ಸವಿ     ಗೋದಾನ. ಕನ್ನಡ ನುಡಿ’  ಯನ್ನು   ಮೂರು ರೀತಿಯಿಂದ ಅಭಿವ್ಯಕ್ತ    ಗೊಳಿಸಬಹುದೆಂದು ಗೊತ್ತಿರುವ ಸಂಗತಿ. ಅದು ಶಿಷ್ಟ, ಜಾನಪದ ಮತ್ತು ಆಡು ಭಾಷೆ.ನಾನು,ನೀವೂ ಸೇರಿದಂತೆ ಬರಹಗಾರ,ಬರಹಗಾರ್ತಿಯರು, ಅರಿತೋ ಅರಿಯದೆಯೋ,ಗ್ರಾಂಥಿಕ ಭಾಷೆಗೆ ಮರುಳಾಗಿಬಿಟ್ಟಿದ್ದೇವೆ.ಜನಪದ ಭಾಷೆಗೆ ಹತ್ತಿರ ವಾಗಿದ್ದ,ಅಡುಕನ್ನಡವನ್ನು ಜೀವಂತವಾಗಿಟ್ಟವರು ನಮ್ಮ ಗ್ರಾಮೀಣ ಜನಾಂಗ.ಅವರಿಗೆ ಶಿಷ್ಟ ಜನಗಳು ಮಾಡುತ್ತಿರುವ ಅನ್ಯಾಯ ಇದು ಎಂದೇ ಹೇಳಬಹುದು ಎಂದು ನಾನು ಇದೇ ಅಂಕಣದಲ್ಲಿ ಈ ‌ಮೊದಲೇ ಹೇಳಿದಂತೆ ನೆನಪು. ನಮ್ಮ ಓದು ,ಕತೆ,ವಸ್ತು,ಪಾತ್ರ,ವಾಕ್ಯ ರಚನೆ ಗಳ ಜೊತೆಗೆ ಭಾಷಾ […]

ಇ-ಬುಕ್ ಬಿಡುಗಡೆ

ಇ-ಬುಕ್ ಬಿಡುಗಡೆ ಮೂಚಿಮ್ಮ” ಕಥಾಸಂಕಲನ ಬಿಡುಗಡೆಯ ಕಾರ್ಯಕ್ರಮ ಕನ್ನಡದ ಯುವ ತಲೆಮಾರಿನ ಭರವಸೆಯ ಕಥೆಗಾರರಾಗಿ ಹೊರಹೊಮ್ಮುತ್ತಿರುವ ಡಾ.ಅಜಿತ್ ಹರೀಶಿ ಅವರ “ಮೂಚಿಮ್ಮ” ಕಥಾ ಸಂಕಲನ ಇಬುಕ್, ಆಡಿಯೋ ಬುಕ್ ಹಾಗೂ ಮುದ್ರಿತ ರೂಪದಲ್ಲಿ ಮೈಲ್ಯಾಂಗ್ ಪ್ರಕಾಶನ ಹೊರ ತಂದಿದೆ. ಅದರ ಬಿಡುಗಡೆ ಕಾರ್ಯಕ್ರಮ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀ.ರವೀಂದ್ರ ಭಟ್ಟರು ಕನ್ನಡಕ್ಕೆ ಅಜಿತ್ ಒಬ್ಬ ಸೂಕ್ಷ್ಮ ಬರಹಗಾರರಾಗಿ ದಕ್ಕುತ್ತಿದ್ದಾರೆ. ಅವರ ಕೃತಿಗಳು ಇನ್ನಷ್ಟು ಸಮಾಜಮುಖಿಯಾದ ತಲ್ಲಣಗಳಿಗೆ […]

“ನಮ್ಮ ಪಯಣ”

ಪುಸ್ತಕ ಸಂಗಾತಿ “ನಮ್ಮ ಪಯಣ” ಮಕ್ಕಳ ಮೂಲಕ ಇತಿಹಾಸ ಸೃಷ್ಠಿ.           ಒಬ್ಬ ಸಮರ್ಥ ಶಿಕ್ಷಕ ಅಕ್ಷರಗಳನ್ನು ಮಾತ್ರ ಕಲಿಸಲಾರ. ತಾನಿರುವ ಊರಿನ ಶಾಲೆಯ ಮತ್ತು ಸಮುದಾಯದ ಇತಿಹಾಸವನ್ನೂ ಸೃಷ್ಠಿಸಬಲ್ಲ ಎಂಬುದಕ್ಕೆ ಶಿಕ್ಷಕ ಗಂಗಪ್ಪ ಎಸ್.ಎಲ್ (ಗಂಗಾಧರ) ಅವರು ಸಂಪಾದಿಸಿದ “ನಮ್ಮ ಪಯಣ” ಎಂಬ ಕೃತಿಯೇ ಸಾಕ್ಷಿಯಾಗಿದೆ.        ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಮುಂಡಗೋಡ, ಹಳಿಯಾಳ ಮತ್ತು ಜೋಯಡಾ ತಾಲೂಕುಗಳ ಹಚ್ಚಹಸಿರಿನ ದಟ್ಟ ಕಾನನದ ಮಧ್ಯದಲ್ಲಿ ತಮ್ಮ ದನ-ಕರುಗಳನ್ನು ಸಾಕುತ್ತಾ ಬದುಕು ಸಾಗಿಸುತ್ತಿರುವ ಗೌಳಿಗರು ಆಧುನಿಕ […]

“ಧ್ಯಾನಸ್ಥ ಕವಿತೆಗಳು”

ಪುಸ್ತಕ ಸಂಗಾತಿ “ಧ್ಯಾನಸ್ಥ ಕವಿತೆಗಳು”  “ಥಟ್ ಎಂದು ಬರೆದು ರಸೀದಿಯಲ್ಲ ಕವಿತೆ” ಶೀರ್ಷಿಕೆಯ ಕಾರಣಕ್ಕಾಗಿಯೇ ಸೆಳೆವ ಕವನ ಸಂಕಲನವಿದು. ರಸೀದಿ ಎನ್ನುವುದು ಯಾವುದೇ ವಸ್ತು ವಿಲೇವಾರಿಯಾಗಿದ್ದಕ್ಕೆ ನೀಡುವ ಸಾಕ್ಷö್ಯ. ಮತ್ತದು ವ್ಯವಹಾರದ ನಂಬಿಕೆ ಮತ್ತು ಅಪನಂಬಿಕೆಯನ್ನು ಬಿಂಬಿಸುತ್ತದೆ. ನಂಬಿಕಸ್ಥ ನಡವಳಿಕೆ ಎನ್ನುವ ಹೊತ್ತಿನಲ್ಲಿಯೇ ಅಪನಂಬಿಕೆಯ ಜಾಡು ಕೂಡ ಇದೆ ಎನ್ನುವುದನ್ನು ಸೂಚ್ಯವಾಗಿ ಸೂಚಿಸುತ್ತಿರುತ್ತದೆ. ಆದರೆ ಕವಿತೆಗಳು ಹಾಗಲ್ಲ ಎನ್ನುವ ನಂಬಿಕೆ ಸುಮಿತ್ ಮೇತ್ರಿಯದು. ಮತ್ತು ಇಲ್ಲಿನ ಕವಿತೆಗಳದ್ದು ಕೂಡ ಹೀಗಾಗಿಯೇ ಇವು ಎದೆಗಿಳಿಯುತ್ತವೆ. ಕಂಡದ್ದನ್ನು ಪ್ರಾಮಾಣಿಕವಾಗಿ ಇಷ್ಟೇ […]

Back To Top