Category: ಕೇರಿ ಕೊಪ್ಪಗಳ ನಡುವೆ

ಡಾ.ರಾಮಕೃಷ್ಣ ಗುಂದಿಯವರ ಆತ್ಮಕಥೆ

ನಮ್ಮ ಗೆಳೆಯರ ಗುಂಪು ಈ ಚಹಾ ಅವಲಕ್ಕಿಯ ಭಾಗ್ಯಕ್ಕಾಗಿ ಪರಸಂಗದುದ್ದಕ್ಕೂ ಎಚ್ಚರಿದ್ದು ಅನಿವಾರ್ಯವಾಗಿ ಕಥಾನಕವನ್ನು ಆಲಿಸುತ್ತ ನಮಗೆ ಅರಿವಿಲ್ಲದಂತೆ ಈ ಕಲೆಯ ಕುರಿತು ಆಸಕ್ತಿ ಅನುಭವ ಗಳಿಸಿಕೊಂಡದ್ದು ಮಾತ್ರ ತುಂಬ ವಿಚಿತ್ರವೇ ಅನ್ನಿಸುತ್ತದೆ.

ಹೀಗೆ ಗೇರು ಹಕ್ಕಲಿನಲ್ಲಿ ಹಾಕಿದ ಹೆಜ್ಜೆಗಳು ಮೆಲ್ಲಮೆಲ್ಲನೆ ತಾಳ ಗತಿಯ ಲಯಕ್ಕೆ ಹೊಂದಿಕೆಯಾಗುತ್ತಿದ್ದಂತೆಯೇ ಯಕ್ಷರಂಗದ ಆಸಕ್ತಿ ಹೆಚ್ಚುತ್ತ ಹೋಯಿತು. ಅದೇ ಸಮಯದಲ್ಲಿ ನಮ್ಮ ತಂದೆಯವರು ಸುತ್ತಲಿನ ಹಳ್ಳಿಯ ಹವ್ಯಾಸಿ ತಂಡಗಳಿಗೆ ಯಕ್ಷಗಾನ ಕಲಿಸಲು ಹೋಗುತ್ತಿದ್ದರು.

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-11 ಆತ್ಮಾನುಸಂಧಾನ ಗೇರು ಹಕ್ಕಲಿನಲ್ಲಿ ಅನುಭಾವ ಗೋಷ್ಠಿಗಳು (೧) ನಮ್ಮ ಕೇರಿಗೆ ಹೊಂದಿಕೊಂಡಂತೆ  ಪೇರುಮನೆ ನಾರಾಯಣ ನಾಯಕ ಎಂಬುವವರ ಒಂದು ವಿಶಾಲವಾದ ಗೇರು ಹಕ್ಕಲ’ವಿತ್ತು. ಅದನ್ನು ನಮ್ಮ ಜಾತಿಯವನೇ ಆದ ಗಣಪತಿ ಎಂಬುವನು ನೋಡಿಕೊಳ್ಳುತ್ತಿದ್ದ. ಗಣಪತಿ, ನಾರಾಯಣ ನಾಯಕರ ಮನೆಯ ಜೀತದ ಆಳು. ತನ್ನ ಹೆಂಡತಿ ಸಾವಿತ್ರಿಯೊಡನೆ ಒಡೆಯರ ಮನೆಯ ಕಸ ಮುಸುರೆ, ದನದ ಕೊಟ್ಟಿಗೆಯ ಕೆಲಸ ಮುಗಿದ ಬಳಿಕ ಅವನು ಗದ್ದೆ ಕೆಲಸದ ಮೇಲ್ವಿಚಾರಣೆ ಇತ್ಯಾದಿ ನೋಡಿಕೊಂಡು ಇರುತ್ತಿದ್ದ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-11 ಆತ್ಮಾನುಸಂಧಾನ ಕೇರಿ — ಕೊಪ್ಪಗಳ ನಡುವೆ…. ಬನವಾಸಿಯಿಂದ ಅಪ್ಪನಿಗೆ ಅಂಕೋಲಾ ತಾಲೂಕಿನ ಮಂಜಗುಣಿ ಎಂಬ ಊರಿನ ಶಾಲೆಗೆ ವರ್ಗವಾಯಿತು. ನಮ್ಮ ಪರಿವಾರ ನಾಡುಮಾಸ್ಕೇರಿಯಲ್ಲಿ ಮತ್ತೆ ನೆಲೆಸುವ ಅವಕಾಶ ಪಡೆಯಿತು. ಅಪ್ಪ ದಿನವೂ ಗಂಗಾವಳಿ ನದಿ ದಾಟಿ ಮಂಜಗುಣೆಯ ಶಾಲೆಗೆ ಹೋಗಿ ಬರುತ್ತಿದ್ದರೆ ನಾನು ಸಮೀಪದ ಜೋಗಣೆ ಗುಡ್ಡ’ ಎಂಬ ಭಾಗದಲ್ಲಿರುವ ಪೂರ್ಣ ಪ್ರಾಥಮಿಕ ಶಾಲೆಗೆ ಏಳನೆಯ ತರಗತಿಯ ಪ್ರವೇಶ ಪಡೆದುಕೊಂಡಿದ್ದೆ. ತಮ್ಮ, ತಂಗಿಯರು ಮನೆಯ ಸಮೀಪವೇ ಇರುವ ಕಿರಿಯ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-10 ಆತ್ಮಾನುಸಂಧಾನ ಬನವಾಸಿಯಲ್ಲಿ ನೋವಿನ ನೆನಪುಗಳು ಬಾಲ್ಯದ ನಾಲ್ಕು ವರ್ಷಗಳನ್ನು ಬನವಾಸಿಯಲ್ಲಿ ಕಳೆಯುವ ಅವಕಾಶ ದೊರೆತದ್ದು ನನ್ನ ಬದುಕಿನಲ್ಲಿ ಒದಗಿ ಬಂದ ಭಾಗ್ಯವೆಂದೇ ನಾನು ಭಾವಿಸಿದ್ದೇನೆ. ಅತ್ಯಂತ ಆಪ್ತ ಸ್ನೇಹಿತರಾಗಿ ದೊರೆತ ಮುಖೇಶ್ ಕುಚಿನಾಡ, ಸೊಮಶೇಖರ ಒಡಿಯರ್, ಅಶೋಕ ಪಾಳಾ, ಸೆಂಟ್ರಲ್ ಕೆಫೆಯ ಸದಾನಂದ ಶೆಟ್ಟಿ, ಕಿರಾಣಿ ಅಂಗಡಿಯ ಸಚ್ಚಿದಾನಂದ ಮೂಡ್ಲಗಿರಿ ಶೆಟ್ಟಿ ಮುಂತಾದ ಗೆಳೆಯರ ಒಡನಾಟದಲ್ಲಿ ಅತ್ಯಂತ ಮಧುರವಾದ ಅನುಭವಗಳು ನನಗೆ ದಕ್ಕಿವೆ. ಈ ಗೆಳೆಯರೆಲ್ಲ ಆಟ ಪಾಠ […]

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-9 ಆತ್ಮಾನುಸಂಧಾನ ಪಂಪನ ಬನವಾಸಿಗೆ ಪಯಣ             ನಾನು ಎರಡನೆ ಇಯತ್ತೆ ಮುಗಿಸುವಾಗ ನಮ್ಮ ತಂದೆಯವರಿಗೆ ಶಿರ್ಶಿ ತಾಲೂಕಿನ ಬನವಾಸಿಗೆ ವರ್ಗವಾಯಿತು. ನಮ್ಮ ಕುಟುಂಬದಲ್ಲಿ ಮಾತ್ರವಲ್ಲ, ನಮ್ಮ ಇಡಿಯ ಕೇರಿಯೇ ದಿಗಿಲುಗೊಂಡಿತು. ಅಂದಿನ ದಿನಮಾನಗಳಲ್ಲಿ ನಮಗೆಲ್ಲ ಬನವಾಸಿಯೆಂಬುದು ವಿದೇಶ ಪ್ರವಾಸದಷ್ಟೇ ದೂರದ ಅನುಭವವನ್ನುಂಟು ಮಾಡುವಂತಿತ್ತು. ಭಯಾನಕವಾದ ಪರ್ವತ ಶ್ರೇಣಿಗಳ ಆಚೆಗಿನ ಘಟ್ಟ ಪ್ರದೇಶ ಎಂಬುದು ಒಂದು ಕಾರಣವಾದರೆ, ನಮ್ಮೂರ ಪಕ್ಕದ ಹನೇಹಳ್ಳಿಯಿಂದ ಶಿರ್ಶಿಗೆ ಹೊರಡುವ ಒಂದೇ ಒಂದು ಬಸ್ಸು ನಸುಕಿನಲ್ಲಿ […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….8 ನಾನೂ ಶಾಲೆಗೆ ಸೇರಿದೆ… ಅಪ್ಪನಿಗೆ ಅಲಗೇರಿಯಿಂದ ಕುಮಟಾ ತಾಲೂಕಿನ ಹನೇಹಳ್ಳಿ ಶಾಲೆಗೆ ವರ್ಗವಾಯಿತು. ಮತ್ತೆ ನಾವು ನಮ್ಮ ತಾಯಿಯ ತೌರೂರು ನಾಡುಮಾಸ್ಕೇರಿಗೆ ಬಂದು ನೆಲೆಸಬೇಕಾಯಿತು. ನಾಡು ಮಾಸ್ಕೇರಿಯಲ್ಲಿ ಆಗ ನಮ್ಮ ಜಾತಿಯ ಜನಕ್ಕೆ ಸ್ವಂತ ಭೂಮಿಯೆಂಬುದೇ ಇರಲಿಲ್ಲ. ಕೆಲವು ಕುಟುಂಬಗಳು ನಾಡವರ ಜಮೀನಿನ ಒಂದು ಮೂಲೆಯಲ್ಲಿ ಆಶ್ರಯ ಪಡೆದು ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ನಾಡುಮಾಸ್ಕೇರಿಯಲ್ಲಿ ನಾಡವರು ಇದ್ದುದರಲ್ಲಿಯೇ ಸ್ಥಿತಿವಂತರಾಗಿದ್ದರು. ಎಲ್ಲ ಕುಟುಂಬಗಳಿಗೂ ಅಲ್ಪಸ್ವಲ್ಪ ಬೇಸಾಯದ ಭೂಮಿಯೂ […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….7 ಅಲಗೇರಿಯಲ್ಲಿ ಬೆಂಕಿ ಮತ್ತು ಮೊಲ             ನಾಗಮ್ಮಜ್ಜಿಯ ಅಂತ್ಯಸಂಸ್ಕಾರ ಅನಿವಾರ್ಯವಾಗಿ ಕಾರವಾರದಲ್ಲಿ ನಡೆದುಹೋಯಿತು. ಕ್ರಿಯಾ ಕರ್ಮಗಳನ್ನು ಪೂರ್ಣಗೊಳಿಸುವವರೆಗೆ ಊರಿಗೆ ಮರಳುವ ಹಾಗೆಯೂ ಇರಲಿಲ್ಲ. ತಾತ್ಕಾಲಿಕವಾಗಿ ನಮ್ಮ ಪರಿವಾರ ಕಾರವಾರ ತಾಲೂಕಿನ ಅರಗಾ ಎಂಬಲ್ಲಿ ಶಾನುಭೋಗಿಕೆಯಲ್ಲಿರುವ ನಾರಾಯಣ ಆಗೇರ ಎಂಬ ಜಾತಿ ಬಂಧುವೊಬ್ಬರ ಮನೆಯಲ್ಲಿ ವಾಸ್ತವ್ಯ ಮಾಡಬೇಕಾಯಿತು. ಶಾನುಭೋಗರ ಪತ್ನಿ (ಅವಳ ಹೆಸರೂ ನಾಗಮ್ಮ) ನನ್ನ ಯೋಗಕ್ಷೇಮಕ್ಕೆ ನಿಂತಳು. ತಬ್ಬಲಿ ತನದಲ್ಲಿ ನೊಂದು ಹಾಸಿಗೆ ಹಿಡಿದ ಅವ್ವ, […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….6 ನಾಗಮ್ಮಜ್ಜಿಯ ಅಂತಿಮಯಾತ್ರೆ                 ನಮ್ಮ ತಂದೆಯವರಿಗೆ ಶಿಕ್ಷಕ ವೃತ್ತಿ ದೊರೆಯಿತಾದರೂ ಇಲಾಖೆಯ ನಿಯಮದಂತೆ ಶಿಕ್ಷಕ ತರಬೇತಿ ಮುಗಿಸುವುದು ಅನಿವಾರ್ಯವಾಗಿತ್ತು. ತರಬೇತಿಗಾಗಿ ಆಯ್ಕೆಗೊಂಡು ಅವರು ಕಾರವಾರದ ಟ್ರೇನಿಂಗ್ ಕಾಲೇಜ್ ಸೇರುವಾಗ ಅವ್ವನ ಗರ್ಭದಲ್ಲಿ ನಾನು ಆಡಲಾರಂಭಿಸಿದ್ದೆನಂತೆ. ನಾಗಮ್ಮಜ್ಜಿಯ ಉತ್ಸಾಹಕ್ಕೆ ಮೇರೆಯೇ ಇರಲಿಲ್ಲ. ಅವ್ವನ ಸೀಮಂತ ಇತ್ಯಾದಿ ಸಡಗರದಲ್ಲಿ ಸಂಭ್ರಮಿಸುತ್ತ ತನ್ನ ಕಣ್ಗಾವಲಿನಲ್ಲಿ ಮಗಳ ಬಾಣಂತನಕ್ಕೆ ಬೇಕು ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಊರ ಸುತ್ತಲಿನ ಎಲ್ಲಾ ಗ್ರಾಮದೇವತೆಗಳಿಗೆ ಹಣ್ಣು […]

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….5 ಅಪ್ಪ ಅವ್ವನ ಅದ್ಧೂರಿ ಮದುವೆ             ಜೋಯ್ಡಾದಲ್ಲಿ ಶಾನುಭೋಗಿಕೆಯ ಕೆಲಸ ತುಂಬಾ ಅನುಕೂಲಕರವಾಗಿತ್ತು. ತಿಂಗಳ ಸಂಬಳದಲ್ಲಿ ಒಂದು ಪೈಸೆಯನ್ನೂ ಖರ್ಚುಮಾಡಗೊಡದೆ ಹಳ್ಳಿಯ ರೈತಾಪಿ ಜನ ದವಸ-ಧಾನ್ಯ ತರಕಾರಿಗಳನ್ನೆಲ್ಲ ತಂದುಕೊಟ್ಟು ಸಹಕರಿಸುತ್ತಿದ್ದರಂತೆ. ಚಾವಡಿಯ ಒಂದು ಮೂಲೆಯಲ್ಲಿಯೇ ವಾಸ್ತವ್ಯಕ್ಕೆ ಅವಕಾಶವೂ ಇತ್ತು. ಬೆಟ್ಟದ ಹಳ್ಳಿಗಾಡಿನ ಹಳೆಯ ಕಟ್ಟಡವಾದ್ದರಿಂದ ಸಹಜವಾಗಿಯೇ ಕೋಣೆ ತುಂಬಾ ಬಿಲಗಳಿದ್ದವು. ಆ ಬಿಲಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಇಲಿ ಹೆಗ್ಗಣ ಮತ್ತು ಅವುಗಳ ವಾಸನೆ ಹಿಡಿದು ಅಲ್ಲಿಗೆ […]

Back To Top