Category: ಲಹರಿ

ಎದಿಹಿಗ್ಗು ಕಡೆತನಕ.

ಭಾವಲಹರಿ. ಎದಿಹಿಗ್ಗು ಕಡೆತನಕ. ರಶ್ಮಿ .ಎಸ್. ಅಳಬಾರ್ದು ಅಂತ ನಿರ್ಧಾರ ಮಾಡೇನಿ ಅಕ್ಕ. ಆಮ್ಯಾಲೆ ಕಣ್ಣೀರು ತಂದಿಲ್ಲ. ಕಂಠ ಮೀರಿ ದುಖ್ಖಿಸಿಲ್ಲ. ಬಿಕ್ಕಿಲ್ಲ’. ‘ತ್ರಾಸು ಆಗ್ತದ. ಆದ್ರ ಅಳೂದ್ರಿಂದ ಸಂದರ್ಭ ಇರೂದಕ್ಕಿಂತ ಬ್ಯಾರೆ ಏನಾಗೂದಿಲ್ಲ. ಇಡೀ ಪರಿಸ್ಥಿತಿಯನ್ನಂತೂ ಬದಲಸಾಕ ಆಗೂದಿಲ್ಲ. ಅದಕ್ಕೆ ಅಳಬಾರ್ದು ಅಂತ ಮಾಡೇನಿ’. ನಮ್ಮ ಚಿಗವ್ವ ನಮ್ಮಮ್ಮಗ ಹೇಳ್ತಿದ್ಲು. ಮನಿ ಹಿತ್ತಲದಾಗ ಬೇವಿನ ಮರಕ್ಕ ಕಟ್ಟಿದ್ದ ಜೋಕಾಲಿಯೊಳಗ ತೂಗಕೊಂತ ಕುಂತ ಚಿಕ್ಕಮ್ಮ ಆಗಲೇ ೫ ದಶಕ ನೋಡ್ದಕ್ಕಿ. ನಮ್ಮಮ್ಮ ೬. ಬ್ಯಾಸಗಿ ಝಳ ತಾಕಲಾರ್ದ […]

ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್

ಕವಿತೆ ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್ ಸ್ಮಿತಾ ಭಟ್ ವರ್ಷವೊಂದು ಗತಿಸಿ ಹೋಯಿತಲ್ಲ, ಎಂದು ಅಂತರ್ಮುಖಿಯಾಗಿ ಯೋಚಿಸುತ್ತಾ ಖಾಲಿ ಗೋಡೆಯತ್ತ ತದೇಕಚಿತ್ತದಿಂದ ನೋಡುತ್ತಿದ್ದೆ. ತನ್ನ ಅಸ್ತಿತ್ವವನ್ನು ನೆನಪಿಸುವಂತೆ, ತೂಗುಹಾಕಿದ ಕ್ಯಾಲೆಂಡರ್ ಗಾಳಿಗೆ ಹಾರುತ್ತಾ ಪರ ಪರ ಸದ್ದು ಮಾಡಿತು ಅದು ಏನನ್ನೋ ಹೇಳುತ್ತಿರುವಂತೆ ಭಾಸವಾಗುತ್ತಿತ್ತು. ಬೀಸುವ ಗಾಳಿಗೆ ಉದುರಿ ಬಿದ್ದಾವು ಎಂದು,ಬರುತ್ತಿದ್ದ ಗಾಳಿಯನ್ನು ತಡೆಯಲು ಎದ್ದು ಕಿಟಕಿಯ ಕದವನ್ನು ಎಳೆದೆ. ಆಗಲೂ ಕ್ಯಾಲೆಂಡರ್ ನದು ಮತ್ತದೇ ಸದ್ದು. ಆಗಲೇ ನಾನು ಗಮನಿಸಿದ್ದು ನವೆಂಬರ್ ತಿಂಗಳಿನಲ್ಲಿಯೇ ನಿಂತು ತನ್ನ ದಯನೀಯ […]

ಚಂದಿರನ ಬೆಳದಿಂಗಳಲ್ಲಿ

ಭಾವಲಹರಿ… ಭಾವಲಹರಿ… ರಶ್ಮಿ.ಎಸ್. ಒಬ್ಬಂಟಿಯೆನಿಸಿದಾಗಲೆಲ್ಲ ಬಾಲ್ಕನಿಗೆ ಬಂದು ನಿಲ್ತೇನಿ. ಅದೆಷ್ಟು ದೂರದ ಗೊತ್ತಿಲ್ಲ.. ಅಷ್ಟೂ ದೂರದಿಂದ ನಕ್ಷತ್ರವೊಂದು ಮಿಣಮಿಣ ಅಂತ ಮಿಣುಕ್ತದ. ಕಣ್ಣುಪಿಳುಕಿಸಿ, ಕಣ್ಣಾಗ ನಗ್ತದ. ನನ್ನ ಮನಿ ಮುಂದಿನ ಬೇವಿನ ಮರದ ಎಲೆಗಳು ತಣ್ಣಗ ಗಾಳಿ ಸೂಸ್ತದ. ಅದರೊಳಗೊಂದು ಕಹಿಯ ಕಂಪೂ ಇರ್ತದ. ಇರುಳಿನ ತಂಪೂ ಇರ್ತದ. ಅಪಾರ್ಟ್‌ಮೆಂಟಿನಾಗ ಸಾಕಿದ್ದ ನಾಯಿ ಚೂರಿ ಬಂದು ಬೊಗಳ್ತದ. ‘ಚೂರಿ ಮಲಗೂದು ಬ್ಯಾಡೇನು.. ಅಂದ್ರ ಸಾಕು..’ ಪಾಪ ತನಗೆ ಅನ್ಕೊಂಡು ಸುಮ್ನಾಗಿ ಒಳಗ ಹೋಗ್ತದ. ಮತ್ತದೆ ರಾತ್ರಿ, ಮತ್ತದೆ […]

ಒಲವಿನೋಲೆ..

ಒಲವಿನೋಲೆ.. ಜಯಶ್ರೀ.ಭ. ಭಂಡಾರಿ ಓ ಒಲವೇ ನೀ ಎಲ್ಲಿರುವೆ…. ನೀ ನನ್ನ ಹುಡುಕಿಕೊಂಡು ಬಂದು ಆಗಲೇ ೨ ವರ್ಷ ಕಳೆಯಿತು. ನೀ ಬಂದಾಗ ನನಗೆ ನಿನ್ನ ಮೇಲೆ ಅದ್ಯಾವ ಭಾವನೆ ಗಳೇ ಇರಲಿಲ್ಲ. ಈಗ ನಾನು ಈ ಭೂಮಂಡಲಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ.  ಪ್ರತಿಕ್ಷಣ ನಿನ್ನ ಬಿಟ್ಟರೆ ಹರಿದಾಡುವ ಗಾಳಿಗೂ ಜಾಗವಿಲ್ಲ. ನನ್ನ ಬಾಳಿನ ಕಗ್ಗತ್ತಲು ಬೆಳಗಲು ನೀನೇ ಬೇಕು. ಅತಿಯಾದ ಪ್ರೀತಿಯಲ್ಲಿ ನನ್ನ ನಾ ಮರೆತಿಹೆ.ನೀನಿಲ್ಲದ ಹೊತ್ತು ನೆನೆಯಲು ಸಾಧ್ಯವಿಲ್ಲ. ನಿನ್ನಲ್ಲಿ ಒಂದು ಕೆಟ್ಟ ಹಾಬಿ ಇದೆ.ಡ್ಯೂಟಿಯಲಿ […]

ನಾದಬೇಕು …ನಾದ ಬೇಕು !!

ರಶ್ಮಿ ಬರೆಯುತ್ತಾರೆ
ಈಗ ಅಡಗಿ ಮಾಡೂದೆ ಒಂದು ಸಮಯ ನಿರ್ವಹಣೆಯ ತಂತ್ರ ಆಗಿ ಬದಲಾಗೇದ. ಅಡಗಿ ಮಾಡೋರಿಗೂ ವ್ಯವಧಾನ ಇಲ್ಲ. ಊಟ ಅಸ್ವಾದಿಸೋರಿಗೂ ಇಲ್ಲ. ಅಡಗಿ ಮಾಡೂದು ಬರೂದಿಲ್ಲ ಅಂತ ಹೇಳೂದೆ ನಾಜೂಕಿನ ಮಾತಾಗೇದ

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು”

” ನಮ್ಮೊಳಗಿನ ಸತ್ಯ ನಾವ ಹುಡುಕಬೇಕು” ರಶ್ಮಿ ಎಸ್. ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ ಡಿ. 6,7,8 ಬಾಬರಿ ಮಸೀದಿ ಪ್ರಕರಣ ಆದಾಗ ಇಡೀ ದೇಶ ಕೋಮು ದಳ್ಳುರಿಯೊಳಗ ಧಗಧಗಿಸುತ್ತಿತ್ತು… ನಮ್ಮನ್ಯಾಗ ಮಾತ್ರ ಪ್ರೀತಿಯ ದೀಪ ಜಗಮಗಸಾತಿತ್ತು… ಕಾರಣ … ಮುಗಲ ಮಾರಿಯೊಳಗ ದೇವರ ನಗಿ ನೋಡ್ಕೊಂತ… ನನ್ನ ತಾಯಾ, (ದೊಡ್ಡಪ್ಪ) ಅಂಗಳದೊಳಗ ಅರಾಮ ಕುರ್ಚಿ ಹಾಕ್ಕೊಂಡು ಆಕಾಶ ನೋಡ್ಕೊಂತ ಕುಂತಾರ ಅಂದ್ರ ಏನೋ ಚಿಂತಿ ಕಾಡ್ತದ ಅಂತನೇ ಅರ್ಥ. ಅವಾಗ ನಾವು ಯಾರೂ […]

ಭಾವಲಹರಿ

ಲಹರಿ ಭಾವಲಹರಿ ರಶ್ಮಿ.ಎಸ್. ಸೌಹಾರ್ದ, ಸಹಬಾಳ್ವೆ ಮುಂತಾದ ಪದಗಳನ್ನು ನಾವೆಲ್ಲಿಯೂ ಓದಲಿಲ್ಲ. ವಿಶ್ಲೇಷಿಸಲಿಲ್ಲ. ಆದರೆ ಬಾಳಿದೆವು. ಆ ಬದುಕಿನ ಜೀವದ್ರವ್ಯ ಮೊಮ್ಮಾ.. ಜಿಯಾ ಸುಲ್ತಾನಾ. ಅವರ ನೆನಪಿನಲ್ಲಿ ಬರೆದ ಬರಹವಿದು.. ನಿಮ್ಮ ಉಡಿಗೆ.. ನೀವಷ್ಟು ಅವರ ಪ್ರೀತಿ ಉಣ್ಣಲಿ ಎಂದು… …………………………….. ಗಾಬರಿಯಾಗ್ತದ. ನಾವೆಲ್ಲ ಮೊಮ್ಮ ಇಲ್ಲದೇ ಬದುಕುತ್ತ್ದಿದೇವೆ. ಇನಿದನಿಯ, ವಾತ್ಸಲ್ಯ ತುಂಬಿ ಕರೆಯುವ ಮೊಮ್ಮ . ಸಾಯಿರಾಬಾನುವಿನ ಅಕ್ಕನಂತೆ ಕಾಣಿಸುತ್ತ್ದಿದ್ದ… ನಡೆದರೆ ದೇಹವೇ ಭಾರವೆಂದೆನಿಸುತ್ತ್ದಿದ ದೀರ್ಘದೇಹಿ. ಮುಟ್ಟಿದರೆಲ್ಲಿ ಕೊಳೆಯಗುವರೋ ಎಂಬ ದಂತವರ್ಣದವರು. ಮೊಮ್ಮ  ಇಲ್ಲ..!  ನಮ್ಮ […]

ಲಹರಿ ಅಕ್ಕ , ನೀನು ಯಾರಿಗೆ ಮಗಳಾಗಿದ್ದೆ ? ವೀಣಾ ದೇವರಾಜ್   ಮಗಳೇ ನೀನು ಯಾರಿಗೆ ಮಗಳಾಗಿದ್ದೆ. ಮಗಳ ಪ್ರೀತಿ ನಿನಗೆ ಗೊತ್ತೇ. ಅದನ್ನು ಎಂದಾದರೂ ಅನುಭವಿಸಿದ್ದೀಯಾ. ಹೇಗಿರಬಹುದೆಂದು ಯೋಚಿಸಿದ್ದೀಯ ಅಥವಾ ಬಯಸಿದ್ದೆಯ? ಒಮ್ಮೆ ಯೋಚಿಸಿ ನೋಡೋಣ… ಹಾಂ,ಸಿನೆಮಾದಲ್ಲಿ,, ಪುಟಾಣಿ ಪಾಪು , ಅದೇನು ಚೆಂದ,ಅಪ್ಪ ಅಮ್ಮನ ಮುದ್ದು ಮಗು ತಮ್ಮಿಷ್ಟದಂತೆ  ಅದನ್ನು ಸಿಂಗರಿಸಿದ್ದಾರೆ ನೋಡಿದವರೆಲ್ಲಿ ಕಣ್ಣುಬಿಟ್ಟು ದೃಷ್ಟಿ ತಾಗುವುದೋ ಎಂದು ದೃಷ್ಟಿಬೊಟ್ಟನ್ನೂ  ಇಟ್ಟಿದ್ದಾರೆ. ಒಂದು ನಿಮಿಷವೂ ಒಂಟಿಯಾಗಿ ಬಿಟ್ಟಿಲ್ಲ. ಇನ್ನೇನು ಶಾಲೆಗೆ ಸೇರಿಸುವ ವಯಸ್ಸು […]

ಪ್ರತಿಮೆಯೂ ಕನ್ನಡಿಯೂ..

ಸ್ವಗತ ಪ್ರತಿಮೆಯೂ ಕನ್ನಡಿಯೂ.. ಚಂದ್ರಪ್ರಭ.ಬಿ. ಪ್ರತಿಮೆಯೂ ಕನ್ನಡಿಯೂ “ತೋರಾ ಮನ ದರಪನ ಕೆಹಲಾಯೆಭಲೆ ಬುರೆ ಸಾರೆ ಕರಮೊಂ ಕೊ ದೇಖೆ ಔರ ದಿಖಾಯೆ..………….. ………… ……….. …………… ………… ಸುಖ ಕಿ ಕಲಿಯಾಂ ದುಃಖ ಕಿ ಕಾಟೇಂ ಮನ ಸಬ್ ಕಾ ಆಧಾರ / ಮನ ಸೆ ಕೋಯಿ ಬಾತ ಛುಪೆ ನಾ ಮನ ಕೆ ನೈನ ಹಜಾರ/ ಜಗ ಸೆ ಚಾಹೆ ಭಾಗ ಲೆ ಕೋಯಿ ಮನ ಸೆ ಭಾಗ ನ ಪಾಯೆ…..” “ಕಾಜಲ್” ಹಿಂದಿ […]

ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ

ಲಹರಿ ಪಾರ್ವತಿಯ ಖುಷಿ ಪ್ರತೀ ಹೆಣ್ಣಿಗೂ ಸಿಗಲಿ ಸ್ಮಿತಾ ಭಟ್ ತವರು ಎನ್ನುವದು ಮುಗಿಯಲಾರದ ಸೆಳೆತ ಮತ್ತದು ಹೆಣ್ಮಕ್ಕಳಿಗೆ ಮಾತ್ರ ಸೀಮಿತ. ತಲೆ ತಲಾಂತರಗಳಿಂದಲೂ ತವರು ಮತ್ತು ಹೆಣ್ಣು ಸಯಾಮಿಯಂತೆ ಬದುಕುತ್ತ ಬಂದಿದ್ದಾರೆ. ಹೆಣ್ಣಿನೊಳಗೆ ತವರಿನ ಸೆಳೆತ,ಪುಳಕ,ಅಪ್ಯಾಯ ಭಾವಗಳು ಶುರುವಾಗುವದೇ ಮದುವೆಯೆಂಬ ಬಂಧನದಲಿ,ಭಾವದಲಿ,ಸಿಲುಕಿ ತವರ ತೊರೆದು ಹೊರನಡೆದಾಗಲೇ. ಅಲ್ಲಿಯವರೆಗೆ ಸುಪ್ತವಾಗಿದ್ದ ನಯ ನಾಜೂಕಿನ ಭಾವನೆಗಳೆಲ್ಲ ಕಟ್ಟೆಯೊಡೆದು ಹೃದಯವನ್ನು ತಲ್ಲಣಗೊಳಿಸಿಬಿಡುತ್ತವೆ. ಎಂತಹ ಐಶಾರಾಮಿ ಗಂಡನಮನೆಯೇ ಸಿಗಲಿ ತವರಿನಿಂದ ಬರುವ ಪುಟ್ಟ ಉಡುಗೊರೆಗಾಗಿ  ಹೆಣ್ಣು ಕಾತರದಿಂದ ಕಾಯುತ್ತಾಳೆ. ತವರೂರಿನ ಹೆಸರು […]

Back To Top