Category: ಗಝಲ್

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ಮನಸ್ಸೇಕೋ ಮತ್ತೆ ನೊಂದು ಮೌನದಿ ಕಮರಿಹೋಗಿದೆಯಾಕೋ ಸುಮ್ಮನೇ ಮನಸಲ್ಲೆ ಬೆಂದು ಲೀನವಾಗಿದೆ ಯಾಕೆ ಏನು ಯಾರಿಗಾಗಿ ಇದೆಲ್ಲ ಒಂದು ತಿಳಿಯದಾಗಿದೆಕಾರಣವಿಲ್ಲದೇ ಸಂಕಟ ಆಗುವದೇಕೋ ಅರಿಯದಾಗಿದೆ ಕೈಗೆ ಬಂದ ತುತ್ತು ಬಾಯಿಗೆ ಬಾರದೆ ರುಚಿ ಸಿಗದಾಗಿದೆಭರಪುರ ಬೆಳೆದ ರೈತನ ಫಸಲು ಹೊಲವೇ ಕದ್ದಂತಾಗಿದೆ ಬಿತ್ತುವದು ಅವನ ಧರ್ಮ ಬೆಳೆ ಪಡೆವುದು ಕರ್ಮವಾಗಿದೆಉಂಡು ಕೊಂಡು ಹೋದ ಲಂಡರದೇ ಬಲು ಹಿತವಾಗಿದೆ ಕೊಚ್ಚೆಯಲ್ಲಿ ಬಿದ್ದ ಮಾಣಿಕ್ಯಕ್ಕೆ ತನ್ನ ಬೆಲೆ ತಿಳಿಯದಾಗಿದೆಹೊನ್ನಸಿರಿ’ ಇರಲಿ ನೋಯಬೇಡ […]

ಲಂಕೇಶ-೭೮

ಲಂಕೇಶ-೭೮ ಸಿದ್ಧರಾಮ ಹೊನ್ಕಲ್ ಯಾರಿಗೂ ಏನನ್ನೂ ಬೇಡಲಿಲ್ಲ,ಬಯಸಲಿಲ್ಲ ಈ ಲಂಕೇಶಎಲ್ಲರಿಗೂ ಪಾಪಪ್ರಜ್ಞೆಯಾಗಿ ಕಾಡದೇ ಬಿಡಲಿಲ್ಲ ಈ ಲಂಕೇಶ ತಾನು ನಡೆದದ್ದು ಬರೀ ದಾರಿಯಲ್ಲ ಈ ಲಂಕೇಶನಿಗೆಅದು ರಾಜಮಾರ್ಗವೆಂದು ತೋರಿದನಲ್ಲ ಈ ಲಂಕೇಶ ಕನ್ನಡದ ಮೇರು ಲೇಖಕ ಮೇಲಾಗಿ ನಿರ್ಭೀತ ಪತ್ರಕರ್ತಶತಮಾನದ ದೃಷ್ಟಿಕೋನ ಬದಲಿಸಿದನಲ್ಲ ಈ ಲಂಕೇಶ ಕಥೆ,ಕವಿತೆ,ಪತ್ರಿಕೆ,ಸಿನೆಮಾ ನಿರ್ದೇಶನ ಹೀಗೆ ನಡೆದಂತೆಲ್ಲಾ ದಾರಿಗಳುನಡೆದ ದಾರಿಯಗುಂಟ ಬರೀ ಮುಳ್ಳುಗಳೇ ಹಸನಾದವಲ್ಲ ಈ ಲಂಕೇಶ ಯಾರಿಗೂ ಅಂಜಲಿಲ್ಲ ಅಳುಕಲಿಲ್ಲ ಯಾರ ಬಿಢೆಗೂ ಬೀಳಲಿಲ್ಲ“ಹೊನ್ನಸಿರಿ”ಕರ್ನಾಟಕಕ್ಕೆ ಹೊಸ ಮನ್ವಂತರ ಸೃಷ್ಟಿಸಿದರಲ್ಲ ಈ ಲಂಕೇಶ […]

ಗಝಲ್

ಗಝಲ್ ರತ್ನರಾಯ ಮಲ್ಲ ಅಸಹಾಯಕತೆಯ ಬೇರಿಗೆ ನೀರೆರೆಯಬೇಡಿಮನಸ್ಸಿನ ಆತ್ಮವಿಶ್ವಾಸವನ್ನು ಚಿವುಟಬೇಡಿ ಕರುಣೆ-ಕನಿಕರದಿಂದ ಒಡಲ ಹಸಿವು ನೀಗದುಸಹಾನುಭೂತಿಯ ಜಾಲದಲ್ಲಿ ಸಿಲುಕಬೇಡಿ ಪಾಪ ಎಂದು ಪಾಪಿ ಎನ್ನುವರು ಜಗದೊಳಗೆಸಾಧನೆಯ ಶಿಖರದಿಂದ ಜಾರಿ ಬೀಳಬೇಡಿ ಕಾರಣಗಳು ಇತಿಹಾಸವನ್ನು ನಿರ್ಮಿಸುವುದಿಲ್ಲನೋವನ್ನು ಪ್ರದರ್ಶನದ ವಸ್ತು ಮಾಡಬೇಡಿ ‘ಮಲ್ಲಿ’ ಮಲ್ಲಿಗೆಯ ಮೊಗ್ಗನ್ನು ಪ್ರೀತಿಸುವರೆಲ್ಲರುಅನ್ಯರ ಕೈಯಲ್ಲಿ ಆಡುವ ಗೊಂಬೆ ಆಗಬೇಡಿ ***************************************

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಮಾತನಾಡುವದೇ ಬಿಟ್ಟಿರುವೆ ನುಡಿಗಳು ತಿರುಚಲಾಗುತ್ತಿದೆ |ಕೇಳಿಸಿಕೊಳ್ಳುವುದೇ ಬಿಟ್ಟಿರುವೆ ಸುಳ್ಳುಗಳು, ವಿಜೃಂಭಿಸಲಾಗುತ್ತಿದೆ || ನೋಡುವುದೇ ಬಿಟ್ಟಿರುವೆ ಬೆಂಕಿ ಹಚ್ಚುವುದು ಚಿತ್ರಿಸಲಾಗುತ್ತಿದೆ |ಪ್ರಶ್ನಿಸುವುದೇ ಬಿಟ್ಟಿರುವೆ ನಾಲಿಗೆಗೆ ಬೀಗ ಹಾಕಲಾಗುತ್ತಿದೆ || ಪುಸ್ತಕ ಓದುವದೇ ಬಿಟ್ಟಿರುವೆ ಕಂದಕ ಉಂಟು ಮಾಡುವುದೇ ಮುನ್ನೆಲೆಗೆ |ತಿನ್ನುವದೇ ಆತಂಕ ಹೊಲಗಳಲ್ಲಿ ವಿಷವನ್ನು ಬಿತ್ತಿ ಬೆಳೆಯಲಾಗುತ್ತಿದೆ || ಕಲಾ ಲೋಕದಲ್ಲಿ ಬಣ್ಣದ,ಬಾಚಣಿಗೆಯ ಮಂದಿಯೇ ತುಂಬಿಕೊಂಡಿದ್ದಾರೆ |ಎಲ್ಲಾ ಉಚಿತವಾಗಿ ವಿತರಣೆ ಮನುಜ ಪ್ರೀತಿ ಪೇಟೆಯಲಿ ಬಿಕರಿಯಾಗುತ್ತಿದೆ || ಜೀವನ ಪುಷ್ಪ ಮೊಗ್ಗಾಗಿ ಅರಳುವ […]

ಗಝಲ್

ಗಝಲ್ ಪ್ರತಿಮಾ ಕೋಮಾರ ನೆನಪುಗಳನ್ನೆಲ್ಲ ಕಣ್ರೆಪ್ಪೆಯಲಿ ಸೆರೆಯಾಗಿಸಿದ್ದೇನೆ ಕುಕ್ಕಬೇಡ ನೋಡುನಿರೀಕ್ಷೆಗಳನ್ನೆಲ್ಲ ಅಟ್ಟ ಏರಿಸಿದ್ದೇನೆ ಇಳಿಸಬೇಡ ನೋಡು ಒಳಗುದಿಯ ಒಳಗೇ ಇಟ್ಟು ಕುದಿಯುವುದೇಕೆ? ಹೇಳಿಬಿಡುಕೇಳಲೆಂದೆ ಎದೆಗಿವಿಯನ್ನು ತೆರೆದಿದ್ದೇನೆ ಮುಚ್ಚಿಡಬೇಡ ನೋಡು ಎನ್ನೆಲ್ಲ ಭಾವಗಳ ಚಿತ್ರ ಶಾಲೆಗೆ ಚಿತ್ತಾರಿಗನಾದವನು ನೀನುನಿನ್ನಾಸರೆಯಲಿ ನಲಿವ ರಾಶಿ ಹಾಕಿದ್ದೇನೆ ತೂರಬೇಡ ನೋಡು ತಪ್ಪನ್ನು ಕ್ಷಮಿಸಿ ಮುಂದಡಿ ಇಟ್ಟಾಗಲೇ ಸಾಗುವುದು ಪಯಣಘಾತದ ಭೂತವನ್ನೆಲ್ಲ ಮರೆತು ಬಿಟ್ಟಿದ್ದೇನೆ ಕೆದಕಬೇಡ ನೋಡು “ಪ್ರತಿ” ಯ ನಿಗ೯೦ಧ ಬಾಳು ಬಂಜರು ಭೂಮಿಗೆ ಸಮಾನಕನಸಗನ್ನಡಿಯ ಜೋಪಾನ ಮಾಡಿದ್ದೇನೆ ಒಡೆಯಬೇಡ ನೋಡು ********************************

ಗಝಲ್

ಮಕ್ಕಳಿಗಾಗಿ ಗಝಲ್ ಲಕ್ಷ್ಮೀದೇವಿ ಪತ್ತಾರ ಜೇಡ ತುಂಬಿದ ನಿಮ್ಮ ಮನದ ಮನೆಯ ಜಾಡಿಸಿ ಶುಭ್ರವಾಗಿಸುವ ಜಾಡು ನಾನಾಗುವೆ ಮಕ್ಕಳೆಪದೇಪದೇ ದೂಳು ತುಂಬಿದ ಜೀವನ ನಿಮ್ಮದಾಗಿಸಿ ಕೊಳ್ಳಬೇಡಿ ಮಕ್ಕಳೆ ನಿಮ್ಮ ಮಬ್ಬಾದ ಬಾಳ ಬಾನಿನಲ್ಲಿ ಬಣ್ಣ ಬಣ್ಣದ ತಾರೆಗಳನ್ನು ಇರಿಸಿ ಬೆಳಗಿಸುವೆ ಮತ್ತೆ ಮತ್ತೆ ಕಾರ್ಮೋಡಗಳ ಮುಂದಿರಿಸಿ ಕತ್ತಲಲ್ಲಿ ಮೂಳಗಬೇಡಿ ಮಕ್ಕಳೇ ನಿಂತ ನೀರಾಗಿ ಕೊಳೆಯುತ್ತಿರುವ ನಿಮ್ಮ ಬಾಳ ಹೊಳೆಗೆ ಮಳೆ ನಾನಾಗಿ ಚೈತನ್ಯ ಚಿಲುಮೆಯಾಗಿ ಹರಿವಂತೆ ಮಾಡುವೆಮತ್ತೆ ಜಡತೆಯ ಬಂಡೆ ಅಡ್ಡವಿರಿಸಿ ನಿಸ್ತೇಜರಾಗಿ ಕೂಡಬೇಡ ಮಕ್ಕಳೆ ಹಸಿರಾಡದ […]

ಗಝಲ್

ಗಝಲ್ ವತ್ಸಲಾ ಶ್ರೀಶ ಹೃದಯ ಶ್ರೀಮಂತನಲ್ಲ ಪ್ರೀತಿಯ ಮರಳಿಸದ ಸಾಲಗಾರನಾಗಿದ್ದೆ ನೀನುಕಾರಣಗಳ ಓರಣದಿ ಜೋಡಿಸುತ್ತಲೇ ದಾರಿ ಬದಲಿಸಿದ್ದೆ ನೀನು ತಾರೆಗಳನೇ ತಂದಿರಿಸಿದೆಯೆಂಬ ಭ್ರಮೆಯ ಬಾನಲಿ ವಿಹರಿಸುತಲಿದ್ದೆಕಲ್ಲು ಮುಳ್ಳಿನ ಬಯಲಲಿ ನಿಂತ ಸತ್ಯವನು ಕೊನೆಗೂ ತೋರಿಸಿದ್ದೆ ನೀನು ಕಲ್ಪನೆಯ ಕಣ್ಣಲ್ಲಿನ ಸುಂದರ ಚಿತ್ರಗಳು ಬದುಕ ರಂಗೋಲಿಯಾಗಲಿಲ್ಲರಂಗು ರಂಗಿನ ಕನಸುಗಳಿಗೆ ಕಪ್ಪುರಂಗನು ಎರಚಿ ಕೆಡಿಸಿದ್ದೆ ನೀನು ಪ್ರೇಮದ ಪರಿಚಯವಿರದ ಹೃದಯ ಮಧುರ ಭಾವಕ್ಕೆ ಸಿಲುಕಿ ಮಗುವಂತಾಗಿತ್ತಂದುಮುಗ್ಧ ಮನಕೆ ಪ್ರೀತಿಯನು ಬಣ್ಣದಾಟಿಕೆ ಮಾಡಿ ಮರುಳುಗೊಳಿಸಿದ್ದೆ ನೀನು ಮೋಸವ ಅಸಹಾಯಕತೆಯೆಂಬ ನೆಪದಿ ಶೃಂಗರಿಸಿ […]

ಗಝಲ್

ಗಝಲ್ ರತ್ನರಾಯ ಮಲ್ಲ ದೇವರ ಮಂದಿರಗಳಿಗಿಂತ ಮಸಣವೇ ಲೇಸುಆಡಂಬರದ ಪ್ರದರ್ಶನಕ್ಕಿಂತ ಮೌನವೇ ಲೇಸು ಬಜಾರ ಎಂದರೆ ಎಲ್ಲರೂ ಬೆನ್ನು ಹತ್ತುವವರೆಯಾರೂ ಬರದ ಸ್ಮಶಾನದ ಪ್ರಯಾಣವೇ ಲೇಸು ಬಂಧಗಳು ನರಳುತಿವೆ ಬಾಡಿದ ಬಾಂಧವ್ಯದಲ್ಲಿತಬ್ಬಲಿಯಲ್ಲಿ ಅರಳಿದ ಈ ಒಂಟಿತನವೇ ಲೇಸು ಶ್ರೀಮಂತಿಕೆಯು ಆಟವಾಡುತಿದೆ ಜಗದೊಳಗೆಜೊತೆ ಜೊತೆಗೆ ಹೆಜ್ಜೆ ಹಾಕುವ ಬಡತನವೇ ಲೇಸು ಅನುದಿನವೂ ಸಾಯಿಸುತಿವೆ ಮೌಲ್ಯಗಳು ನನ್ನ‘ಮಲ್ಲಿ’ಯ ಹೃದಯದಲ್ಲಿರುವ ಮರಣವೇ ಲೇಸು **********************

ಮತ್ಲಾ ಗಜಲ್

ಮತ್ಲಾ ಗಜಲ್ ತೇಜಾವತಿ ಹೆಚ್.ಡಿ. ನೀನಿರದ ವಿರಾಮವು ಬೇಡವಾಗಿವೆ ಈಗಮಾಯಾ ಮನಸ್ಸು ಖಿನ್ನತೆಗೆ ಜಾರುತಿವೆ ಈಗ ನೀ ನೋಡದ ಅಲಂಕಾರವು ಮಂಕಾಗಿವೆ ಈಗತೊಟ್ಟ ಆಭರಣಗಳೇ ಭಾರವಾಗಿವೆ ಈಗ ನಿನ್ನಗಲಿದ ಇರುಳೆಲ್ಲವೂ ಘೋರವಾಗಿವೆ ಈಗದೇವಾ ಕಂಡ ಕನಸೆಲ್ಲವೂ ದುಃಸ್ವಪ್ನವಾಗಿವೆ ಈಗ ನೀನಾಡದ ಮಾತುಗಳು ಕರಗಿ ಹೋಗಿವೆ ಈಗಅಳಿದುಳಿದ ಭಾವನೆಗಳು ಹೆಪ್ಪುಗಟ್ಟಿವೆ ಈಗ ನೀನಿಲ್ಲದ ನಂದನವನ ಬರಡಾಗಿವೆ ಈಗಬೀಸುವ ತಂಗಾಳಿಯೂ ಬತ್ತಿಹೋಗಿವೆ ಈಗ ‘ತೇಜ’ ನೀ ಬಾರದ ದಿನಗಳು ಸ್ತಬ್ಧವಾಗಿವೆ ಈಗಹಗಲು ರಾತ್ರಿಯ ವ್ಯತ್ಯಾಸವೇ ತಿಳಿಯದಾಗಿವೆ ಈಗ *

ಗಝಲ್

ಗಝಲ್ ಸುಜಾತಾ ರವೀಶ್ ಅಕ್ಷರದ ಪಯಣಕ್ಕೆ ಒಂದಾಗಿ ಹೊರಡೋಣ  ಬರುವೆಯಾ ಸಂಗಾತಿ ಅಕ್ಷಯದ ಒಲವಿನ ಸುಗಮ ಸಂಪ್ರೀತಿಯನು ತರುವೆಯಾ ಸಂಗಾತಿ  ಶಬ್ದಗಳ ಮಾಲೆಯನ್ನು ಕಟ್ಟುತಾ ಹಾಕೋಣವೇ ಕನ್ನಡಮ್ಮನಿಗೆ ಹಾರ?  ಪದಗಳ ಅಡಿಪಾಯ ನೆಡಲು ಶ್ರಮದಕಲ್ಲ ಹೊರುವೆಯಾ ಸಂಗಾತಿ ಸಾಹಿತ್ಯದ ತೇರನೆಳೆಯುತ ಮುಂದಡಿ ಇಡುತಲಿ ಸಾಗೋಣವೇ?  ಸಾಂಗತ್ಯದ ಭರವಸೆ ಕೊಡುತ ಬಾಳಗಮ್ಯ ಸೇರುವೆಯಾ ಸಂಗಾತಿ    ಕುಶಲ ಕರ್ಮಿಯಂತೆ ಮಾಡೋಣ ಚಿತ್ತಾರದ  ಕುಸುರಿ ಕೆಲಸ ವಿಶಾಲ ಪುಸ್ತಕಗಳ ಆಗಸದಿ ನನ್ನೊಡನೆಯೇ  ಹಾರುವೆಯಾ ಸಂಗಾತಿ  ಅನನ್ಯವು ಕಾವ್ಯಪ್ರಪಂಚ ವಿಸ್ಮಯ ವಿನೂತನ ವಿಹಾರವಿದು ಅಮೂಲ್ಯವು ಸುಜಿಗೆ ಓದುವಿಕೆ ಕಡೆವರೆಗೂ ಇರುವೆಯಾ ಸಂಗಾತಿ  *****************************

Back To Top