ಹೊತ್ತಾರೆ

ಅಮ್ಮನೂರಿನ ನೆನಪುಗಳು. ಅಮೇರಿಕಾದಿಂದ ಅಶ್ವಥ್ ಅಶ್ವಥ್ ಮೊದಲೇ ಹೇಳಿದಂತೆ, ರಂಗ ತಿಮ್ಮರ ಸಂತೆ ಪ್ರಯಾಣ ನಿಯಮಿತವಾಗಿರುತ್ತಿತ್ತು. ಮೂಟೆಯಲ್ಲಿ ಇರುವ ಪದಾರ್ಥದ ಆಧಾರದ ಮೇಲೆ ನಾಲ್ಕೈದು  ಮಂಡಿಗಳಿಗೆ ಗಾಡಿ ಸಾಗಬೇಕಾಗಿತ್ತು. ಅವುಗಳಲ್ಲಿ ಭತ್ತ, ರಾಗಿ, ತೆಂಗುಗಳದ್ದು ಒಂದೇ ಮಂಡಿ. ಅದು ರಂಗ ತಿಮ್ಮರ ಮೊದಲ ನಿಲ್ದಾಣ, ಆಮೇಲೆ ಬೆಲ್ಲದ ಮಂಡಿ, ನಂತರ ಅಪರೂಪಕ್ಕೊಮ್ಮೆ ಅಡಿಕೆ ಮಂಡಿ. ಇವಿಷ್ಟೂ ರೌಂಡ್ಸ್ ಆದ ಮೇಲೆ ಮನೆಯಿಂದ ತಂದಿರುತ್ತಿದ್ದ ಹುಲ್ಲು ತಿನ್ನುವುದು.  ಗಾಡಿಯ ಕೆಳಭಾಗದಲ್ಲಿ ನೇತುಹಾಕಿರುತ್ತಿದ್ದ ಬಕೆಟ್  ತೆಗೆದು ಸಂತೇಮಾಳದ ಕೈಪಂಪಿನಿಂದ ಹಿಡಿದ (ಕಡೆಗೆ ನಲ್ಲಿಯೂ ಬಂದಿತ್ತೋ … Continue reading ಹೊತ್ತಾರೆ