ಅನುವಾದ ಸಂಗಾತಿ

ಮೂಲ-ಜಯಂತ ಮಹಾಪಾತ್ರ ಒರಿಸ್ಸಾದ ಭಾರತೀಯ ಆಂಗ್ಲ ಕವಿ ಅನುವಾದ–ಕಮಲಾಕರ ಕಡವೆ “ಪುರಿಯಲ್ಲಿ ಬೆಳಗು” ಕೊನೆಯಿರದ ಕಾಗೆಗಲಭೆಪವಿತ್ರ ಮರಳಲ್ಲಿ ತಲೆಬುರುಡೆಯೊಂದುಹಸಿವಿನೆಡೆಗೆ ವಾಲಿಸುತ್ತದೆ ಖಾಲಿ ದೇಶವನ್ನು. ಬಿಳಿತಳೆದ ವಿಧವೆಯರುತಮ್ಮ ಬಾಳಿನ ಮಧ್ಯದಾಚೆಮಹಾಮಂದಿರದೊಳಗೆ ಹೊಗಲು ಕಾದಿದ್ದಾರೆ. ಅವರ ವಿರಕ್ತ ಕಣ್ಣುಗಳುಬಲೆಯಲ್ಲಿ ಸಿಕ್ಕಿಬಿದ್ದವರಂತೆ ದಿಟ್ಟಿಸುತ್ತವೆ,ಬೆಳಬೆಳಗ್ಗೆ ಶ್ರದ್ಧೆಯ ಬೆಳಗಿನೆಳೆಗೆ ಜೋತುಬಿದ್ದು. ನಿತ್ರಾಣ ಮುಂಜಾನೆ ಬೆಳಕಿಗೆ ಬಿದ್ದಿವೆಒಂದನಿನ್ನೊಂದು ಆತಿರುವ ಪಾಳು ತೊನ್ನುಭರಿತ ಚಿಪ್ಪುಗಳು,ಹೆಸರಿರದೆ ಕುಗ್ಗಿಹೋದ ಮುಖಗಳ ಮುಂದೆ, ತಟ್ಟನೆ ನನ್ನ ತೊಗಲೊಳಗಿಂದ ಹೊರಬೀಳುವ ಬಿಕ್ಕುಸೇರುತ್ತದೆ ಏಕಾಕಿ ಮಂಕು ಚಿತೆಯೊಂದರ ಹೊಗೆಯನನ್ನ ಮುದಿ ಅಮ್ಮನ ಕವಿಯುವ ಧಗೆಯ: … Continue reading ಅನುವಾದ ಸಂಗಾತಿ