ಕಾವ್ಯಯಾನ

ಹೊಸ ವರ್ಷದ ಹೊಸಿಲಲ್ಲಿ…. ಡಿ.ಎಸ್.ರಾಮಸ್ವಾಮಿ ಇವತ್ತು ಈ ವರ್ಷಕ್ಕೆ ಕಡೆಯ ಮೊಳೆ ಹೊಡೆದಾಯಿತು. ಮತ್ತಷ್ಟು ಬಿಳಿಯ ಕೂದಲು ಗಡ್ಡದಲ್ಲಿ ಹಣುಕಿವೆ ತೆಲೆ ಮತ್ತಷ್ಟು ಬೊಕ್ಕಾಗಿದೆ. ಇರುವ ಸಾಲದ ಕಂತುಗಳ ಲೆಕ್ಕ ಹಾಕಿದರೆ ಬರೀ ನಿಟ್ಟುಸಿರು ಆದಾಯ ತೆರಿಗೆಯ ಸ್ಲಾಬು ಏರಿದೆ. ಎದೆ ಎತ್ತರ ಬೆಳೆದು ನಿಂತಿದ್ದಾಳೆ ಮಗಳು, ಮುಂದೆ ಹೇಗೋ ಎಂದು ತಳಮಳಿಸುವುದು ಜೀವ, ಮದುವೆಯ ಮಾತೆತ್ತಿದರೆ ಸಿಡುಕುತ್ತಾಳೆ. ಚಿನ್ನದ ಸರ ಕೊಳ್ಳುವ ಇವಳ ಮಾತು, ಅಪಥ್ಯ. ಸ್ವರ್ಣ ಬಾಂಡಿನ ಕಂತು ಮುಗಿದು ಆಭರಣಗಳ ಆಯಬೇಕಿದೆ ಅಷ್ಟೆ. … Continue reading ಕಾವ್ಯಯಾನ