ಕಾವ್ಯಯಾನ

ಏಕೆ ಕಾಡುವೆ ಶಾಂತಾ ಜೆ ಅಳದಂಗಡಿ ಏಕೆ ಕಾಡುವೆ ಮಾರುದ್ದ ಒಲವಿನೋಲೆ ಬರೆದು ಹೃದಯದೊಳಗೆ ನನ್ನ ಸೆಳೆದು ತಡವಿಲ್ಲದೆ ತಾಳಿಯ ಬಿಗಿದು ದೂರವಾದೆ ಬಾಳಿಗಂತ್ಯ ಬರೆದು ಮುಗ್ಗರಿಸಿ ಸಾಗಿದೆ ನನ್ನ ಬದುಕಿಂದು ಗಾಲಿಕಳಚಿದ ಗಾಡಿ ಈ ಬಾಳು ಕಣ್ಣೆವೆಯಲೆ ಕುಳಿತು ಕಾಡುವೆ ನನ್ನ ಅಳಿಸಲಾಗದ ಪ್ರೇಮಬರಹ ಬರೆದು ಹೂ ದುಂಬಿಗಳ ಒಲವಿನಾಟದಿ ಕಾಣುವೆ ನನ್ನ ನಿನ್ನ ಅನುಬಂಧ ಏಕೆ ಸರಿದೆ ನೇಪಥ್ಯಕೆ ಅವಸರದೆ ಮನೋಮಂದಿರಕೆ ಒಡೆಯನಾಗಿದ್ದೆ ದಿಗಂತದಾಚೆಗಿರುವೆ ನನ್ನ ನಿರೀಕ್ಷೆಯಲ್ಲಿ ಬಂದೇ ಬರುವೆ ಅತಿಶೀಘ್ರದಲ್ಲಿ ರಕ್ತಧಮನಿಗಳೆ ಬಿರಿವಂಥ … Continue reading ಕಾವ್ಯಯಾನ