ಕಾವ್ಯಯಾನ

ಜೀವಾತ್ಮ ಕೊಟ್ರೇಶ್ ಅರಸೀಕೆರೆ ಯಾವುದೋ ಹಕ್ಕಿ ಹಾಕಿರುವ ಈ ಹಿಕ್ಕೆ ಈಗ ಸಸಿಯಾಗಿದೆ! ಉದರಾಂಬರದ ಕಾರಣ ನುಂಗಿ,ನೀರು ಕುಡಿದುದೆಲ್ಲಾ ಏನೆಲ್ಲಾ ಸಕಾರಣಗಳಿಗೆ ಕಾರಣ!! ಜಗಕ್ಕೆ ಬಿದ್ದ ಕಿರಣ,ಮೇಲಿಂದ ಬಿದ್ದ ನೀರ ಬಿಂದು,ಸುಯ್ಯನೇ ಬೀಸುವ ಗಾಳಿ…… ಯಾವ ಯಾವುದಕ್ಕೆ ಸಂಬಂಧ!! ಅಲ್ಲೊಂದು ಜೋಡಿ ಹಕ್ಕಿ, ಇಲ್ಲೊಂದು ಮಿಲನ, ನಳ ನಳಿಸುತ್ತಿರುವ ಹೂ… ಒಂಟಿಯಾಗಿ ಯಾವುದೋ ಶಿಖರ ತೇಲಿ ಹೋಗುತ್ತಿರುವ ಮೋಡಗಳು ಯಾವ ದಂಡಯಾತ್ರೆಗೆ……. ಜೀವ ಇರಲೇಬೇಕಿಲ್ಲ ಚಲನೆಗೆ ಸೃಷ್ಟಿಯ ಸಾರ ಯಾರು ಹೀರಿದ್ದಾರೆ? ಯಾರೋ ಮೇಲೋ ಯಾರ ವಿಜಯ? … Continue reading ಕಾವ್ಯಯಾನ