ಕಾವ್ಯಯಾನ

ಗಜಲ್ ಡಾ.ಗೋವಿಂದ ಹೆಗಡೆ ಮದಿರೆಬಟ್ಟಲು ಖಾಲಿಯಾಗಿದ್ದಕ್ಕೆ ಅವಳು ಅಳುತ್ತಿದ್ದಾಳೆಎಲ್ಲಿ ಹೇಗೆ ಯಾವಾಗ ಸೋರಿಹೋಯಿತೆಂದು ಹುಡುಕುತ್ತಿದ್ದಾಳೆ ಜನ್ಮ ಜನ್ಮಾಂತರಕ್ಕೂ ತುಂಬಿರುವುದೆಂದು ಎಣಿಕೆಯಿತ್ತುಇಷ್ಟು ಬೇಗ ಎಲ್ಲ ಖಾಲಿ ಆಗಿದ್ದನ್ನು ನಂಬದಂತಿದ್ದಾಳೆ ಕನಸುಗಣ್ಣುಗಳಲ್ಲಿ ಎಷ್ಟೊಂದು ಸುರೆಯ ಸಂಗ್ರಹವಿತ್ತುಪತ್ತೆಯೇ ಇರದೆ ಸೂರೆಯಾಗಿದ್ದಕ್ಕೆ ತಳಮಳಿಸುತ್ತಿದ್ದಾಳೆ ಮಧುಬಟ್ಟಲಲ್ಲೇ ಐಬಿತ್ತೋ ಅಥವಾ ಮಧುವಿನಲೋಬಟ್ಟಲನೆತ್ತಿ ಹಿಂದೆ-ಮುಂದೆ ತಿರುತಿರುಗಿಸಿ ನೋಡುತ್ತಿದ್ದಾಳೆ ಮರಳೇ ಹಾಗೆ ಕಣಕಣವಾಗಿ ಸುರಿದು ಖಾಲಿಯಾಗುತ್ತದೆಗಡಿಯಾರ ತಿರುಗಿಸಬಹುದು, ಕಾಲವನಲ್ಲ ಮರುಳಿಯಾಗಿದ್ದಾಳೆ ಎದೆಯೊಡೆದ ಹುಚ್ಚಿ ಅವಳನ್ನು ಹೇಗೆ ಸಂತೈಸಲಿ ಸಾಕಿಹೇಗೋ ಒಂದು ಮುಕ್ಕೆರೆದು ಬಿಡು,ಚೇತರಿಸುತ್ತಾಳೆ..