ಅಂಕಣ ಬರಹ ರಂಗ ರಂಗೋಲಿ-06 ಅಜ್ಜಿಯ ಗೂಡಲಿ ಹಾರಲು ಕಲಿತ ಗುಬ್ಬಿ ಮರಿ ಆ ಹಳೇ ಮನೆಯಲ್ಲಿ ತೆಂಗಿನ ಹಸಿ ಮಡಲಿನಿಂದ ಒಂದೊಂದು ಒಲಿಯನ್ನು ತನ್ನ ಚಿಕ್ಕಕತ್ತಿಯಿಂದ ಸರ್ರೆಂದು ಎಳೆದು ನನ್ನ ಆಟಕ್ಕೆ ಹಾವು ,ಬುಟ್ಟಿ, ವಾಚ್,ಕಾಲ್ಗೆಜ್ಜೆ, ಕನ್ನಡಕ ಎಷ್ಟು ಪರಿಕರಗಳು ತಯಾರಾಗುತ್ತಿದ್ದವು. ಮಿದುಳಲ್ಲಿ ಚಿತ್ರವಾದ ಕಲ್ಪನೆಗಳೆಲ್ಲಾ, ಅದ್ಭುತ ಆಟಿಗೆಯಾಗಿ, ಕಲಾಪರಿಕರಗಳಾಗಿ ತಯಾರಾಗುವ ಕಲೆಯ ಕುಲುಮೆಯೇ ಅವರಾಗಿದ್ದರು. ಕಾಡಿಗೆ ಹೋಗಿ ಅದೆಂತದೋ ಕಡ್ಡಿಯಂತಹ ಬಳ್ಳಿ ಎಳಕೊಂಡು ಬರುತ್ತಿದ್ದಳು. ಅದರ ಸಿಪ್ಪೆ ತೆಗೆದು ಹೂ ಬುಟ್ಟಿ,ಅನ್ನ ಬಸಿಯುವ ತಟ್ಟೆ, … Continue reading