ಅಂಕಣ ಬರಹ ಒಂದು ಹಾವಿನ ಕಥೆ ಮತ್ತು ನಾವು ಕೆಲವು ಒತ್ತಡಗಳು ಹುಟ್ಟಿಕೊಳ್ಳುತ್ತವೆ. ಎಂಥದೋ ಅನಿವಾರ್ಯತೆ ಕಾಡುತ್ತದೆ. ಮಾಡಬೇಕೆಂದುಕೊಂಡದ್ದನ್ನು ಮಾಡಲಾಗುತ್ತಿಲ್ಲ ಎನ್ನುವ ಚಡಪಡಿಕೆ, ನೋವು, ಹತಾಶೆ… ಬೇಕಾದವರನ್ನು ಮನಸಿಗೆ ಹತ್ತಿರವಾದವರನ್ನು ನಾವಾಗೇ ಹಚ್ಚಿಕೊಂಡವರನ್ನು ಎದೆಗೆ ತಬ್ಬುವ ಮನಸಿದ್ದಾಗಲೂ ದೂರ ನಿಲ್ಲಬೇಕಾದ ಸಂಯಮದ ಪ೫ರೀಕ್ಷೆಗೆ ತಯಾರಾಗಬೇಕಾಗಿ ಬರುವ ಪರಿಸ್ಥಿತಿಯನ್ನು ಧ್ವನಿ ತೆಗೆಯದೇ ಬಯ್ದುಕೊಳ್ಳುತ್ತಾ ಒಳಗೊಳಗೇ ಹಟಕ್ಕೆ ಬೀಳುತ್ತೇವೆ. ಅದು ನಮ್ಮ ಮೇಲಿನ ನಮ್ಮ ಹಟ. ಚೌಕಟ್ಟನ್ನು ದಾಟಿದರೆ ನಮಗೆ ನಾವು ದಕ್ಕಿಬಿಡುತ್ತೇವೆಂದು ನಮಗೆ ಗೊತ್ತು. ಆದರೆ ನಮಗೆ ಅದಕ್ಕೆ … Continue reading