ಅಂಕಣ ಬರಹ ಊರೊಳಗೆ ಪಂಥ ರಣದೊಳಗೆ ಓಟವೆ ವಚನಕಾರರಲ್ಲಿ ಎಂಟು ಜನ ಮಾರಿತಂದೆ ಹೆಸರಿನವರು ಇದ್ದಾರೆ. ಅವರಲ್ಲಿ ಅರಿವಿನ ಮಾರಿತಂದೆಯೂ ಒಬ್ಬ. ಈತ ಹಿರಿಯ ವಚನಕಾರ. ಫ. ಗು. ಹಳಕಟ್ಟಿಯವರು “ಈತನು ಬಸವೇಶ್ವರರ ಕಾಲದಲ್ಲಿ ಶಿವಾನುಭವ ಮಂಟಪದಲ್ಲಿದ್ದನೆಂದು ವೀರಶೈವರಲ್ಲಿ ಐತಿಹ್ಯವಿರುವುದಿಲ್ಲ. ಆದ್ದರಿಂದ ಬಸವೇಶ್ವರನ ಕಾಲಕ್ಕಿಂತಲೂ ಈಚಿನವನಿರಬೇಕು. ಆದರೆ ೧೫ ನೇ ಶತಮಾನದ ಅಂತ್ಯಭಾಗದಲ್ಲಿದ್ದ ಪ್ರಸಿದ್ಧಿ ಹೊಂದಿದ ಗುಬ್ಬಿಯ ಮಲುಹಣನು ಈ ಅರಿವಿನ ಮಾರಿತಂದೆಯ ಉಕ್ತಿಗಳನ್ನು ತನ್ನ ‘ಗಣಭಾಷ್ಯ ರತ್ನಮಾಲೆ’ ಯಲ್ಲಿ ಉದಾಹರಿಸಿದ್ದಾನೆ. ಅಲ್ಲದೇ ಅನೇಕ ವಚನ ಸಂಗ್ರಹಗಳಲ್ಲಿ … Continue reading