ಅಂಕಣ ಬರಹ ಹೊಸ್ತಿಲಾಚೆಗಿನ ರಂಗಜೀವಿ ಬದುಕ ರಂಗವನ್ನು ಆತ್ಮ ತೊರೆದಿತ್ತು. ಮನೆಯ ಉದ್ದದ ಚಾವಡಿಯಲ್ಲಿ ಅತ್ತೆಯ ಶರೀರ  ಮಲಗಿತ್ತು. ತಲೆಯ ಬದಿಯಲ್ಲಿ ತೆಂಗಿನ ಕಾಯಿಯ ಒಂದು ಭಾಗದೊಳಗೆ ದೀಪ ಮೌನವಾಗಿ ಉರಿಯುತ್ತಿತ್ತು. ರಾಶಿ ಮೌನಗಳನ್ನು ದರದರನೆ ಎಳೆತಂದು ಕಟ್ಟಿ ಹಾಕಿದ ರಾಕ್ಷಸ ಮೌನ ಘೀಳಿಡುತ್ತಿತ್ತು. ಎದೆ ಒತ್ತುವ, ಕುತ್ತಿಗೆ ಒತ್ತುವ ನಿರ್ವಾತಕ್ಕೆ ಅಂಜಿ ಮುಂಬಾಗಿಲಿಗೆ ಬಂದೆ. ಶರೀರವನ್ನು ಉದ್ದಕ್ಕೆ ನೆಲಕಂಟಿಸಿ ಮುಖವನ್ನು ಅಡ್ಡಕ್ಕೆ ಬಾಗಿಸಿ ‘ಪೀಕು’ ಮಲಗಿದ್ದಾಳೆ. ನಾನು ಅಲ್ಲಿರುವುದು ತಿಳಿದಿಲ್ಲವೇ? ಯಾವಾಗಲೂ ನಡಿಗೆಯ ಪದತರಂಗವನ್ನು ಗಬಕ್ಕೆಂದು … Continue reading