ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—28 ಆತ್ಮಾನುಸಂಧಾನ ಬಹುಮುಖೀ ವ್ಯಕ್ತಿತ್ವದ ರಾಕಜ್ಜ ನಮ್ಮ ತಾಯಿಯ ಚಿಕಪ್ಪ ರಾಕು. ಬಾಲ್ಯದಲ್ಲಿಯೇ ತಂದೆ, ಅವಳ ವಿವಾಹದ ಬಳಿಕ ತಾಯಿಯನ್ನು ಕಳೆದುಕೊಂಡ ಅವ್ವನಿಗೆ ತೌರುಮನೆಯ ಕಡೆಯಿಂದ ಕೊನೆಯವರೆಗೂ ಹತ್ತಿರದಲ್ಲಿ ಕುಟುಂಬದ ಸದಸ್ಯನೇ ಎಂಬಂತೆ ಆಧಾರವಾಗಿದ್ದವನು ಚಿಕ್ಕಪ್ಪ ರಾಕು. ನಮಗೆಲ್ಲ ಅಕ್ಕರೆಯ ರಾಕಜ್ಜ. ವಿಶೇಷವೆಂದರೆ ಬಾಲ್ಯದಿಂದಲೂ ನನ್ನನ್ನು ವಿಶೇಷವಾಗಿ ಎದೆಗೆ ಹಚ್ಚಿಕೊಂಡು ಅಕ್ಕರೆ ತೋರಿದವನು ರಾಕಜ್ಜನೇ. ಜಾತ್ರೆಗೋ, ಯಕ್ಷಗಾನ ಬಯಲಾಟ ನೋಡುವುದಕ್ಕೋ ನನ್ನನ್ನು ಹೆಗಲೇರಿಸಿಕೊಂಡು ಹೊರಡುವ ರಾಕಜ್ಜ ನಾನು ಬೇಡಿದುದನ್ನು ಕೊಡಿಸುತ್ತ … Continue reading