ದಾರಾವಾಹಿ ಆವರ್ತನ ಅದ್ಯಾಯ-27 ಗುರೂಜಿಯ ಮನೆಯಿಂದ ಹಿಂದಿರುಗಿದ ಸುಮಿತ್ರಮ್ಮ ಆತುರಾತುರವಾಗಿ ಮನೆಗೆ ಬಂದವರು ಕೈಕಾಲು ಮುಖ ತೊಳೆಯಲು ಬಚ್ಚಲಿಗೆ ಹೋದರು. ಆಹೊತ್ತು ಲಕ್ಷ್ಮಣಯ್ಯ ವರಾಂಡದಲ್ಲಿ ಕುಳಿತುಕೊಂಡು ಜೈಮಿನಿ ಭಾರತದ ಚಂದ್ರಹಾಸನ ಪ್ರಸಂಗವನ್ನು ಓದುತ್ತಿದ್ದರು. ಅದರಲ್ಲಿ, “ಮಂತ್ರಿ ದುಷ್ಟಬುದ್ಧಿಯು ಕುಳಿಂದನನ್ನು ಸೆರೆಯಲ್ಲಿಟ್ಟು ಕುಂತಳಪುರಕ್ಕೆ ಬರುವಾಗ ಹಾವೊಂದು ಅವನೆದುರು ಬಂದು, ನಿನ್ನ ಮನೆಯಲ್ಲಿದ್ದ ನಿಧಿಯನ್ನು ಕಾಯುತ್ತಿದ್ದೆ. ಆದರೆ ನಿನ್ನ ಮಗ ಅದೆಲ್ಲವನ್ನೂ ವೆಚ್ಚ ಮಾಡಿದ! ಎಂದು ಹೇಳಿ ಹೊರಟು ಹೋಯಿತು” ಎಂಬ ಕಥೆಯ ಕೊನೆಯಲ್ಲಿದ್ದರು. ಅಷ್ಟೊತ್ತಿಗೆ ಸುಮಿತ್ರಮ್ಮ ನಗುತ್ತ ಬಂದು … Continue reading