ಧಾರಾವಾಹಿ ಆವರ್ತನ ಅದ್ಯಾಯ-41 ಸುಮಿತ್ರಮ್ಮ ಕೋಪದಿಂದ ಕೇಳಿದ ಪ್ರಶ್ನೆಗೆ ನರಹರಿ ತಾನು ಉತ್ತರಿಸಬೇಕೋ, ಬೇಡವೋ ಎಂಬ ಉಭಯಸಂಕಟಕ್ಕೆ ಸಿಲುಕಿದ. ಆದರೆ ಮರುಕ್ಷಣ,‘ನೀನೊಬ್ಬ ಜವಾಬ್ದಾರಿಯುತ ವೈದ್ಯನು ಹೇಗೋ ಹಾಗೆಯೇ ಪ್ರಜ್ಞಾವಂತ ನಾಗರೀಕನೂ ಹೌದು! ಆದ್ದರಿಂದ ನಿನ್ನ ಸುತ್ತಮುತ್ತದ ಅಮಾಯಕ ಜನರಲ್ಲಿ ನಿನ್ನ ಗಮನಕ್ಕೆ ಬರುವಂಥ ತಪ್ಪು ತಿಳುವಳಿಕೆಗಳನ್ನು ನಿವಾರಿಸುವುದೂ ನಿನ್ನ ಕರ್ತವ್ಯ ಎಂಬುದನ್ನು ಮರೆಯಬೇಡ!’ಎಂದು ಅವನ ವಿವೇಕವು ಎಚ್ಚರಿಸಿತು. ಹಾಗಾಗಿ ಕೂಡಲೇ ಚುರುಕಾದ. ‘ಸುಮಿತ್ರಮ್ಮ ನಿಮ್ಮ ಮತ್ತು ಊರಿನವರ ನಂಬಿಕೆಗಳು ಹಾಗೂ ಆ ಗುರೂಜಿಯವರ ಮಾತುಗಳು ಎಷ್ಟು ಸತ್ಯವೋ … Continue reading