ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—49 ಯಕ್ಷಗಾನ-ನಾಟಕ ರಂಗಭೂಮಿಯಲ್ಲಿ. ನನ್ನ ಕಾಲೇಜು ಅಧ್ಯಾಪಕರ ವೃತ್ತಿಯೊಡನೆ ನಾನು ಪ್ರೀತಿಯಿಂದ ಎದೆಗೆ ಹಚ್ಚಿಕೊಂಡ ಯಕ್ಷಗಾನ ಮತ್ತು ನಾಟಕ ರಂಗಭೂಮಿಯ ಹವ್ಯಾಸಗಳು ನನ್ನ ವ್ಯಕ್ತಿತ್ವದ ಇನ್ನೊಂದು ಮುಖದ ಬೆಳವಣಿಗೆಗೆ ಕಾರಣವಾದವು. ಈ ನಂಟಿನಿಂದಲೇ ಕಾಲೇಜು ಕ್ಯಾಂಪಸ್ಸಿನ ಆಚೆಯೂ ನನಗೊಂದು ಜನಪ್ರಿಯ ವಲಯ ಸೃಷ್ಟಿಯಾಯಿತು. ಹಾಗೆಂದು ನಾನು ಕ್ರಮಿಸಿದ ಯಕ್ಷಗಾನ ಮತ್ತು ರಂಗಭೂಮಿಯ ದಾರಿ ಕೇವಲ ಸುಗಂಧಯುಕ್ತ ಹೂವಿನ ಹಾಸಿಗೆಯಷ್ಟೇ ಆಗಿರಲಿಲ್ಲ. ಅಲ್ಲಿ ಶ್ಲಾಘನೆಯ ಪರಿಮಳದೊಡನೆ ವಿಮರ್ಶೆಯ ಟೀಕೆ ಟಿಪ್ಪಣಿಗಳ ಕಲ್ಲು … Continue reading